Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 1

IRV · ಅಧ್ಯಾಯ 1 / 150

ಕೀರ್ತನೆಗಳು 1

1ಯಾರು ದುಷ್ಟರ ಆಲೋಚನೆಯಂತೆ ನಡೆಯದೆ, ಪಾಪಾತ್ಮರ ಮಾರ್ಗದಲ್ಲಿ ನಿಂತುಕೊಳ್ಳದೆ, ಧರ್ಮನಿಂದಕರೊಡನೆ ಕುಳಿತುಕೊಳ್ಳದೆ,

2ಯೆಹೋವನ ಧರ್ಮಶಾಸ್ತ್ರದಲ್ಲಿ ಸಂತೋಷಿಸುತ್ತಾ, ಅದನ್ನೇ ಹಗಲಿರುಳು ಧ್ಯಾನಿಸುತ್ತಿರುವವನು ಎಷ್ಟೋ ಧನ್ಯನು.

3ನೀರಿನ ಕಾಲುವೆಗಳ ಬಳಿಯಲ್ಲಿ ಬೆಳೆದಿರುವ ಮರದ ಹಾಗೆ ಅವನಿರುವನು. ಅಂಥ ಮರವು ಸೂಕ್ತಕಾಲದಲ್ಲಿ ಫಲಕೊಡುತ್ತದಲ್ಲಾ. ಅದರ ಎಲೆ ಬಾಡುವುದೇ ಇಲ್ಲ. ಅದರಂತೆ ಅವನ ಕಾರ್ಯವೆಲ್ಲವೂ ಸಫಲವಾಗುವುದು.

4ದುಷ್ಟರೋ ಹಾಗಲ್ಲ; ಅವರು ಗಾಳಿ ಬಡಿದುಕೊಂಡು ಹೋಗುವ ಹೊಟ್ಟಿನಂತೆ ಇದ್ದಾರೆ.

5ಆದುದರಿಂದ ದುಷ್ಟರು ನ್ಯಾಯವಿಚಾರಣೆಯಲ್ಲಿಯೂ, ಪಾಪಾತ್ಮರು ನೀತಿವಂತರ ಸಭೆಯಲ್ಲಿಯೂ ನಿಲ್ಲುವುದಿಲ್ಲ.

6ಯೆಹೋವನು ನೀತಿವಂತರ ಮಾರ್ಗವನ್ನು ಲಕ್ಷಿಸುವನು; ದುಷ್ಟರ ಮಾರ್ಗವೋ ನಾಶವಾಗುವುದು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org