Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 110

IRV · ಅಧ್ಯಾಯ 110 / 150

ಕೀರ್ತನೆಗಳು 110

1ದಾವೀದನ ಕೀರ್ತನೆ. ಯೆಹೋವನು ನನ್ನ ಒಡೆಯನಿಗೆ, “ನಾನು ನಿನ್ನ ವಿರೋಧಿಗಳನ್ನು ನಿನ್ನ ಪಾದಪೀಠವಾಗುವಂತೆ ಮಾಡುವ ತನಕ, ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು” ಎಂದು ನುಡಿದನು.

2ಯೆಹೋವನು ನಿನ್ನ ರಾಜದಂಡದ ಆಳ್ವಿಕೆಯನ್ನು ಚೀಯೋನಿನ ಹೊರಗೂ ಹಬ್ಬಿಸುವನು; ನಿನ್ನ ವೈರಿಗಳ ಮಧ್ಯದಲ್ಲಿ ದೊರೆತನ ಮಾಡು.

3ನೀನು ಸೈನ್ಯವನ್ನು ಕೂಡಿಸುವ ದಿನದಲ್ಲಿ, ನಿನ್ನ ಪ್ರಜೆಗಳು ಸಂತೋಷದಿಂದ ತಾವಾಗಿಯೇ ಸೇರಿಕೊಳ್ಳುವರು. ಪರಿಶುದ್ಧ ವಸ್ತ್ರಭೂಷಿತರಾದ ನಿನ್ನ ಯುವ ಸೈನಿಕರು, ಉದಯಕಾಲದ ಇಬ್ಬನಿಯಂತಿರುವರು.

4“ನೀನು ಸದಾಕಾಲವೂ ಮೆಲ್ಕಿಜೆದೇಕನ ತರಹ ಯಾಜಕನಾಗಿರುವೆ” ಎಂದು ಯೆಹೋವನು ಆಣೆಯಿಟ್ಟು ನುಡಿದಿದ್ದಾನೆ; ಪಶ್ಚಾತ್ತಾಪಡುವುದಿಲ್ಲ.

5ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.

6ಆತನು ಜನಾಂಗಗಳಲ್ಲಿ ನ್ಯಾಯಸ್ಥಾಪಿಸುವಾಗ, ವಿಸ್ತಾರವಾದ ರಣರಂಗದಲ್ಲಿ ಶತ್ರುಗಳ ಶಿರಸ್ಸನ್ನು ಛೇದಿಸಿ, ಹೆಣಗಳಿಂದ ಅದನ್ನು ತುಂಬಿಸುವನು.

7ಒಡೆಯನು ದಾರಿಯಲ್ಲಿ ಹಳ್ಳದ ನೀರನ್ನು ಕುಡಿದು ತಲೆಯೆತ್ತುವನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org