Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 121

IRV · ಅಧ್ಯಾಯ 121 / 150

ಕೀರ್ತನೆಗಳು 121

1ಯಾತ್ರಾಗೀತೆ. ನಾನು ಕಣ್ಣೆತ್ತಿ ಪರ್ವತಗಳ ಕಡೆಗೆ ನೋಡುತ್ತೇನೆ; ನನ್ನ ಸಹಾಯವು ಎಲ್ಲಿಂದ ಬರುವುದು?

2ಭೂಮಿ, ಆಕಾಶಗಳನ್ನು ನಿರ್ಮಿಸಿದ ಯೆಹೋವನಿಂದಲೇ, ನನ್ನ ಸಹಾಯವು ಬರುತ್ತದೆ.

3ಆತನು ನಿನ್ನ ಪಾದಗಳನ್ನು ಕದಲಗೊಡಿಸುವುದಿಲ್ಲ; ನಿನ್ನನ್ನು ಕಾಯುವವನು ತೂಕಡಿಸದಿರಲಿ.

4ಇಗೋ, ಇಸ್ರಾಯೇಲರನ್ನು ಕಾಯುವಾತನು, ತೂಕಡಿಸುವುದೂ ಇಲ್ಲ, ನಿದ್ರಿಸುವುದೂ ಇಲ್ಲ.

5ನಿನ್ನನ್ನು ಕಾಯುವವನು ಯೆಹೋವನೇ; ನಿನ್ನ ಬಲಗಡೆಯಲ್ಲಿ ನೆರಳಿನಂತೆ ನಿಂತಿರುವಾತನು ಯೆಹೋವನೇ.

6ಹಗಲಿನಲ್ಲಿ ಸೂರ್ಯನೂ, ಇರುಳಿನಲ್ಲಿ ಚಂದ್ರನೂ, ನಿನ್ನನ್ನು ಬಾಧಿಸುವುದಿಲ್ಲ.

7ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು.

8ನೀನು ಹೋಗುವಾಗಲೂ, ಬರುವಾಗಲೂ, ಈಗಿನಿಂದ ಸದಾಕಾಲವೂ ಯೆಹೋವನು ನಿನ್ನನ್ನು ಕಾಪಾಡುವನು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org