ಬೈಬಲ್ › ಕೀರ್ತನೆಗಳು › 122
IRV · ಅಧ್ಯಾಯ 122 / 150
ಕೀರ್ತನೆಗಳು 122
1ಯಾತ್ರಾಗೀತೆ; ದಾವೀದನ ಕೀರ್ತನೆ. “ಯೆಹೋವನ ಮಂದಿರಕ್ಕೆ ಹೋಗೋಣ ಬಾ!” ಎಂದು ಜನರು ನನ್ನನ್ನು ಕರೆದಾಗ ನನಗೆ ಸಂತೋಷವಾಯಿತು.
2ಯೆರೂಸಲೇಮೇ! ನಮ್ಮ ಕಾಲುಗಳು, ನಿನ್ನ ಬಾಗಿಲುಗಳಲ್ಲಿ ಸೇರಿರುತ್ತವಲ್ಲಾ.
3ಯೆರೂಸಲೇಮೇ! ನೀನು ಸರಿಯಾದ ಹೊಂದಿಕೆಯಿಂದ, ಕಟ್ಟಲ್ಪಟ್ಟ ನಗರವಾಗಿದ್ದಿ.
4ಕುಲಗಳು ಅಂದರೆ ಯೆಹೋವನ ಕುಲದವರು, ಯೆಹೋವನ ನಾಮದ ಕೀರ್ತನೆಗೋಸ್ಕರ, ಇಲ್ಲಿಗೆ ಯಾತ್ರೆ ಮಾಡುತ್ತಿದ್ದರು. ಇದು ಇಸ್ರಾಯೇಲರಲ್ಲಿದ್ದ ಕಟ್ಟಳೆಯಷ್ಟೆ.
5ನ್ಯಾಯಪೀಠಗಳಾಗಿರುವ ದಾವೀದನ ಮನೆತನದವರ, ಸಿಂಹಾಸನಗಳು ಇಲ್ಲಿಯೇ ಇದ್ದವಲ್ಲಾ.
6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. “ಯೆರೂಸಲೇಮೇ, ನಿನ್ನನ್ನು ಪ್ರೀತಿಸುವವರಿಗೆ ಸೌಭಾಗ್ಯವುಂಟಾಗಲಿ.
7ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”
8ನನ್ನ ಬಂಧುಮಿತ್ರರ ನಿಮಿತ್ತವಾಗಿ, “ನಿನಗೆ ಸಮಾಧಾನವಾಗಲಿ” ಎಂದು ಹೇಳುತ್ತೇನೆ.
9ನಮ್ಮ ದೇವರಾದ ಯೆಹೋವನ ಮಂದಿರದ ನಿಮಿತ್ತವಾಗಿ, ನಿನ್ನ ಸುಕ್ಷೇಮಕ್ಕಾಗಿ ಪ್ರಾರ್ಥಿಸುತ್ತೇನೆ.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org