Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 125

IRV · ಅಧ್ಯಾಯ 125 / 150

ಕೀರ್ತನೆಗಳು 125

1ಯಾತ್ರಾಗೀತೆ. ಯೆಹೋವನಲ್ಲಿ ಭರವಸೆ ಇಡುವವರು, ಚೀಯೋನ್ ಪರ್ವತದ ಹಾಗೆ ಇದ್ದಾರೆ; ಅದು ಕದಲುವುದಿಲ್ಲ, ಸದಾ ಸ್ಥಿರವಾಗಿರುತ್ತದೆ.

2ಪರ್ವತಗಳು ಯೆರೂಸಲೇಮಿನ ಸುತ್ತಲೂ ಹೇಗೋ ಹಾಗೆಯೇ, ಯೆಹೋವನು ಈಗಿನಿಂದ ಸದಾಕಾಲವೂ ತನ್ನ ಜನರ ಸುತ್ತಲೂ ಇರುವನು.

3ದುಷ್ಟರ ದಂಡಾಧಿಕಾರವು ನೀತಿವಂತರ ಸ್ವತ್ತಿನಲ್ಲಿ ಉಳಿಯುವುದೇ ಇಲ್ಲ; ಉಳಿದರೆ ನೀತಿವಂತರೂ ಅಕ್ರಮಕ್ಕೆ ಕೈ ಹಾಕಬಹುದು.

4ಯೆಹೋವನೇ, ಒಳ್ಳೆಯವರೂ, ಯಥಾರ್ಥಚಿತ್ತರೂ, ಆಗಿರುವವರಿಗೆ ಉಪಕಾರಮಾಡು.

5ಯೆಹೋವನು ಡೊಂಕುದಾರಿ ಹಿಡಿದವರನ್ನು, ಪಾತಕಿಗಳು ಹೋಗುವ ಸ್ಥಳಕ್ಕೆ ನಡೆಸುವನು. ಇಸ್ರಾಯೇಲರಿಗೆ ಶುಭವುಂಟಾಗಲಿ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org