ಬೈಬಲ್ › ಕೀರ್ತನೆಗಳು › 126
IRV · ಅಧ್ಯಾಯ 126 / 150
ಕೀರ್ತನೆಗಳು 126
1ಯಾತ್ರಾಗೀತೆ. ಸೆರೆಯಲ್ಲಿದ್ದ ನಮ್ಮನ್ನು ಯೆಹೋವನು ತಿರುಗಿ ಚೀಯೋನಿಗೆ ಬರಮಾಡಿದಾಗ, ನಾವು ಕನಸು ಕಂಡವರಂತೆ ಇದ್ದೆವು.
2ಆಗ ನಮ್ಮ ಬಾಯಿ ಬಲು ನಗೆಯಿಂದಲೂ, ನಮ್ಮ ನಾಲಿಗೆ ಹರ್ಷಗೀತದಿಂದಲೂ ತುಂಬಿದವು. ಅನ್ಯಜನರು, “ಯೆಹೋವನು ಇವರಿಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದಾನೆ” ಎಂದು ತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.
3ಯೆಹೋವನು ನಮಗೋಸ್ಕರ ಮಹತ್ಕಾರ್ಯಗಳನ್ನು ಮಾಡಿದ್ದು ನಿಜ; ಆದುದರಿಂದ ನಾವು ಸಂತೋಷವುಳ್ಳವರಾಗಿದ್ದೇವೆ.
4ಯೆಹೋವನೇ, ನೀನು ದಕ್ಷಿಣದೇಶದ ಹಳ್ಳಗಳನ್ನೋ ಎಂಬಂತೆ, ಸೆರೆಯಲ್ಲಿ ಉಳಿದಿರುವ ನಮ್ಮವರನ್ನೂ ತಿರುಗಿ ಬರಮಾಡು.
5ಅಳುತ್ತಾ ಬಿತ್ತುವವರು, ಹಾಡುತ್ತಾ ಕೊಯ್ಯುವರು,
6ದುಃಖಿಸುತ್ತಾ ಬೀಜವನ್ನು ತೆಗೆದುಕೊಂಡು ಹೋಗುವವನು, ಹರ್ಷಿಸುತ್ತಾ ಸಿವುಡುಗಳನ್ನು ಹೊತ್ತುಕೊಂಡು ಬರುವನು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org