ಬೈಬಲ್ › ಕೀರ್ತನೆಗಳು › 131
IRV · ಅಧ್ಯಾಯ 131 / 150
ಕೀರ್ತನೆಗಳು 131
1ಯಾತ್ರಾಗೀತೆ; ದಾವೀದನದು. ಯೆಹೋವನೇ, ನನ್ನ ಹೃದಯದಲ್ಲಿ ಗರ್ವವಿಲ್ಲ; ನನಗೆ ಸೊಕ್ಕಿನ ಕಣ್ಣುಗಳಿಲ್ಲ; ಅಸಾಧ್ಯ ಕಾರ್ಯಗಳಿಗೆ ಕೈಹಾಕುವುದಿಲ್ಲ.
2ನಿಜವಾಗಿ ನನ್ನ ಮನಸ್ಸನ್ನು ಸಮಾಧಾನಪಡಿಸಿಕೊಂಡಿದ್ದೇನೆ; ತಾಯಿಯ ಮಡಿಲಲ್ಲಿರುವ ಮೊಲೆಬಿಡಿಸಿದ ಕೂಸಿನಂತೆ, ನನ್ನಲ್ಲಿ ನನ್ನ ಮನಸ್ಸು ಮೊಲೆಬಿಡಿಸಿದ ಕೂಸಿನಂತೆ ನೆಮ್ಮದಿಯಿಂದಿದೆ.
3ಇಸ್ರಾಯೇಲೇ, ಇಂದಿನಿಂದ ಯುಗಯುಗಕ್ಕೂ ಯೆಹೋವನನ್ನೇ ನಿರೀಕ್ಷಿಸಿಕೊಂಡಿರು.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org