Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 4

IRV · ಅಧ್ಯಾಯ 4 / 150

ಕೀರ್ತನೆಗಳು 4

1ಪ್ರಧಾನ ಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು; ತಂತಿವಾದ್ಯದೊಡನೆ ಹಾಡತಕ್ಕದ್ದು; ದಾವೀದನ ಕೀರ್ತನೆ. ನ್ಯಾಯವನ್ನು ಸ್ಥಾಪಿಸುವ ನನ್ನ ದೇವರೇ, ನಿನಗೆ ಮೊರೆಯಿಡುತ್ತೇನೆ; ಸದುತ್ತರವನ್ನು ದಯಪಾಲಿಸು. ನನ್ನನ್ನು ಅಪತ್ತಿನಿಂದ ಬಿಡಿಸಿ, ಸುರಕ್ಷಿತ ಸ್ಥಳದಲ್ಲಿ ಸೇರಿಸಿದಾತನೇ, ನನ್ನನ್ನು ಕರುಣಿಸಿ ನನ್ನ ಪ್ರಾರ್ಥನೆಯನ್ನು ಆಲಿಸು.

2ಜನರೇ, ನೀವು ಎಷ್ಟರವರೆಗೆ ನನ್ನ ಗೌರವವನ್ನು ಕೆಡಿಸುವಿರಿ, ಎಷ್ಟರವರೆಗೆ ನನ್ನನ್ನು ಅವಮಾನಪಡಿಸುವಿರಿ? ಎಷ್ಟರವರೆಗೆ ವ್ಯರ್ಥವಾದದ್ದನ್ನು ಪ್ರೀತಿಸಿ ಸುಳ್ಳನ್ನು ಹಿಂಬಾಲಿಸುವಿರಿ? ಸೆಲಾ

3ಯೆಹೋವನು ತನ್ನ ಭಕ್ತನನ್ನು ತನಗೋಸ್ಕರ ಪ್ರತ್ಯೇಕಿಸಿಕೊಂಡಿದ್ದಾನೆ ಎಂದು ತಿಳಿದುಕೊಳ್ಳಿರಿ. ನಾನು ಆತನಿಗೆ ಮೊರೆಯಿಡುವಾಗೆಲ್ಲಾ ಆತನು ಕೇಳುತ್ತಾನೆ.

4ಭಯಪಡಿರಿ, ಪಾಪಮಾಡಬೇಡಿರಿ; ಹಾಸಿಗೆಯ ಮೇಲೆ ಇರುವಾಗ ಹೃದಯದಲ್ಲೇ ಆಲೋಚಿಸಿಕೊಳ್ಳಿರಿ ಮತ್ತು ಮೌನವಾಗಿರಿ. ಸೆಲಾ

5ನ್ಯಾಯವಾದ ಯಜ್ಞಗಳನ್ನು ಸಮರ್ಪಿಸಿರಿ; ಯೆಹೋವನಲ್ಲಿಯೇ ಭರವಸವಿಡಿರಿ.

6“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.

7ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

8ನಾನು ನಿರ್ಭಯವಾಗಿರುವುದರಿಂದ ಮಲಗಿಕೊಂಡು ಕೂಡಲೆ ನಿದ್ದೆಮಾಡುವೆನು. ಏಕೆಂದರೆ ಯೆಹೋವನೇ, ನನಗೆ ಯಾವ ಅಪಾಯವೂ ಬಾರದಂತೆ ನೀನು ನನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೀ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org