Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 46

IRV · ಅಧ್ಯಾಯ 46 / 150

ಕೀರ್ತನೆಗಳು 46

11 ಪ್ರಧಾನಗಾಯಕನ ಕೀರ್ತನಸಂಗ್ರಹದಿಂದ ಆರಿಸಿಕೊಂಡದ್ದು; ಕೋರಹೀಯರ ಗೀತೆ; ತಾರಕಸ್ಥಾಯಿಯಲ್ಲಿ ಹಾಡತಕ್ಕದ್ದು. ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

2ಆದುದರಿಂದ ಭೂಮಿಯು ಮಾರ್ಪಟ್ಟರೂ, ಬೆಟ್ಟಗಳು ಸಮುದ್ರದಲ್ಲಿ ಮುಳುಗಿಹೋದರೂ, ನಮಗೇನೂ ಭಯವಿಲ್ಲ.

3ಸಮುದ್ರವು ಬೋರ್ಗರೆಯುತ್ತಾ ನೊರೆಯನ್ನು ಕಾರಿದರೇನು? ಅದರ ಅಲ್ಲಕಲ್ಲೋಲಗಳಿಂದ ಪರ್ವತಗಳು ಚಲಿಸಿದರು ಭಯವಿಲ್ಲ? ಸೆಲಾ

4ಒಂದು ನದಿ ಇದೆ; ಅದರ ಕಾಲುವೆಗಳು, ಪರಾತ್ಪರನಾದ ದೇವರ ಪರಿಶುದ್ಧ ನಿವಾಸಸ್ಥಾನವಾಗಿರುವ, ದೇವರ ನಗರವನ್ನು ಸಂತೋಷಪಡಿಸುತ್ತವೆ.

5ದೇವರು ಇದರಲ್ಲಿದ್ದಾನೆ; ಇದಕ್ಕೆ ಚಲನವೇ ಇಲ್ಲ. ಉದಯಕಾಲದಲ್ಲಿಯೇ ದೇವರು ಇದರ ಸಹಾಯಕ್ಕೆ ಬರುವನು.

6ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿ ಹೋಯಿತು.

7ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬ ವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ

8ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ವಿನಾಶವನ್ನು ಉಂಟುಮಾಡಿದ್ದಾನೆ.

9ಲೋಕದ ಎಲ್ಲಾ ಭಾಗದಲ್ಲೂ ಯುದ್ಧವನ್ನು ಸ್ಥಗಿತಗೊಳಿಸಿದ್ದಾನೆ; ಬಿಲ್ಲುಗಳನ್ನೂ, ಭಲ್ಲೆಯಗಳನ್ನೂ ಮುರಿದುಹಾಕಿದ್ದಾನೆ; ರಥಗಳನ್ನು ದಹಿಸಿಬಿಟ್ಟಿದ್ದಾನೆ.

10“ಕಾದಾಡುವುದನ್ನು ನಿಲ್ಲಿಸಿರಿ, ನಾನೇ ದೇವರು; ಲೋಕದ ಸಮಸ್ತ ಜನಗಳಿಗೂ ಸರ್ವಾಧಿಪತಿಯು ನಾನೇ ಎಂದು ತಿಳಿಯಿರಿ” ಎಂದು ಹೇಳಿದ್ದಾನೆ.

11ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯ ದುರ್ಗವಾಗಿದ್ದಾನೆ. ಸೆಲಾ.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org