Bible Explorer ಆ್ಯಪ್ ಪಡೆಯಿರಿ

ಬೈಬಲ್ › ಕೀರ್ತನೆಗಳು › 67

IRV · ಅಧ್ಯಾಯ 67 / 150

ಕೀರ್ತನೆಗಳು 67

1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು ತಂತಿವಾದ್ಯದೊಡನೆ ಹಾಡತಕ್ಕದ್ದು; ಕೀರ್ತನೆ; ಹಾಡು. ದೇವರು ನಮ್ಮನ್ನು ಕಟಾಕ್ಷಿಸಿ ಆಶೀರ್ವದಿಸಲಿ; ಪ್ರಸನ್ನ ಮುಖದಿಂದ ನಮ್ಮನ್ನು ನೋಡಲಿ. ಸೆಲಾ

2ಇದರಿಂದ ಭೂಲೋಕದಲ್ಲಿ ನಿನ್ನ ಪರಿಪಾಲನ ಮಾರ್ಗವೂ, ಎಲ್ಲಾ ಜನಾಂಗಗಳಲ್ಲಿ ನಿನ್ನ ರಕ್ಷಣೆಯೂ ಪ್ರಸಿದ್ಧವಾಗುವವು.

3ದೇವರೇ, ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

4ನೀನು ಸಮಸ್ತ ದೇಶಗಳವರನ್ನು ನೀತಿಯಿಂದ ಪಾಲಿಸಿ, ಭೂಪ್ರಜೆಗಳನ್ನೆಲ್ಲಾ ನಡೆಸುವಾತನಾಗಿರುವುದರಿಂದ ಜನಾಂಗಗಳು ಹರ್ಷಿಸಿ ಆನಂದಘೋಷ ಮಾಡಲಿ. ಸೆಲಾ

5ದೇವರೇ, ಜನಾಂಗಗಳು ನಿನ್ನನ್ನು ಕೀರ್ತಿಸಲಿ; ಸರ್ವಜನಾಂಗಗಳು ನಿನ್ನನ್ನು ಕೀರ್ತಿಸಲಿ.

6ಭೂಮಿಯು ಒಳ್ಳೆಯ ಬೆಳೆಯನ್ನು ಕೊಟ್ಟಿರುತ್ತದೆ. ದೇವರೇ, ನಮ್ಮ ದೇವರೇ ನಮ್ಮನ್ನು ಆಶೀರ್ವದಿಸಿದ್ದಾನೆ;

7ಆತನು ನಮ್ಮನ್ನು ಆಶೀರ್ವದಿಸುವವನಾಗಿದ್ದಾನೆ. ಭೂಮಂಡಲದವರೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರುವರು.

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org