ಬೈಬಲ್ › ಕೀರ್ತನೆಗಳು › 70
IRV · ಅಧ್ಯಾಯ 70 / 150
ಕೀರ್ತನೆಗಳು 70
1ಪ್ರಧಾನಗಾಯಕನ ಕೀರ್ತನ ಸಂಗ್ರಹದಿಂದ ಆರಿಸಿಕೊಂಡದ್ದು, ದಾವೀದನ ಕೀರ್ತನೆ; ಜ್ಞಾಪಕಾರ್ಥ ನೈವೇದ್ಯಸಮರ್ಪಣೆಯಲ್ಲಿ ಹಾಡತಕ್ಕದ್ದು. ದೇವರೇ, ದಯವಿಟ್ಟು ನನ್ನನ್ನು ರಕ್ಷಿಸು. ಯೆಹೋವನೇ, ಬೇಗನೆ ಬಂದು ಸಹಾಯ ಮಾಡು.
2ನನ್ನ ಪ್ರಾಣಕ್ಕಾಗಿ ಸಮಯನೋಡುವವರು ಆಶಾಭಂಗಪಟ್ಟು ಅಪಮಾನಹೊಂದಲಿ; ನನ್ನ ಆಪತ್ತಿನಲ್ಲಿ ಸಂತೋಷಿಸುವವರು ಕಳವಳದಿಂದ ಹಿಂದಿರುಗಿ ಓಡಲಿ.
3ಆಹಾ, ಆಹಾ ಎಂದು ಪರಿಹಾಸ್ಯಮಾಡುವವರು ತಮಗಾಗುವ ಅಪಮಾನದಿಂದ ಬೆನ್ನು ಕೊಟ್ಟು ಓಡಿಹೋಗಲಿ.
4ನಿನ್ನ ದರ್ಶನವನ್ನು ಕೋರುವವರೆಲ್ಲರು ನಿನ್ನಲ್ಲಿ ಉಲ್ಲಾಸದಿಂದ ಸಂತೋಷಿಸಲಿ; ನಿನ್ನ ಜಯದಲ್ಲಿ ಆನಂದಿಸುವವರು, “ದೇವರು ಮಹೋನ್ನತನು” ಎಂದು ಯಾವಾಗಲೂ ಹೇಳಲಿ.
5ನಾನಾದರೋ ಕುಗ್ಗಿದವನೂ, ದಿಕ್ಕಿಲ್ಲದವನೂ ಆಗಿದ್ದೇನೆ; ದೇವರೇ, ಬೇಗನೆ ಬಾ. ಯೆಹೋವನೇ, ನೀನೇ ನನಗೆ ಸಹಾಯಕನೂ, ರಕ್ಷಕನೂ ಆಗಿದ್ದೀ; ತಡಮಾಡಬೇಡ.
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org