ಬೈಬಲ್ › ಕೀರ್ತನೆಗಳು › 82
IRV · ಅಧ್ಯಾಯ 82 / 150
ಕೀರ್ತನೆಗಳು 82
1ಆಸಾಫನ ಕೀರ್ತನೆ. ದೇವರು ತನ್ನ ಸಭೆಯಲ್ಲಿ ನಿಂತುಕೊಂಡವನಾಗಿ, ದೇವರುಗಳೆಂದು ಕರೆಯಲ್ಪಡುವವರೊಳಗೆ ನ್ಯಾಯವಿಧಿಸುತ್ತಾನೆ.
2“ನೀವು ಅನ್ಯಾಯವಾಗಿ ತೀರ್ಪುಕೊಡುವುದೂ, ದುಷ್ಟರಿಗೆ ಮುಖದಾಕ್ಷಿಣ್ಯ ತೋರಿಸುವುದೂ ಇನ್ನೆಷ್ಟರವರೆಗೆ? ಸೆಲಾ.
3ಕುಗ್ಗಿದವರ ಮತ್ತು ಅನಾಥರ ನ್ಯಾಯವನ್ನು ಸ್ಥಾಪಿಸಿರಿ, ದುಃಖಿತರ ಮತ್ತು ದರಿದ್ರರ ನೀತಿಯನ್ನು ಉಳಿಸಿರಿ.
4ಕುಗ್ಗಿದವರನ್ನು, ಬಡವರನ್ನು ದುಷ್ಟರ ಕೈಯಿಂದ ಬಿಡಿಸಿ ರಕ್ಷಿಸಿರಿ.”
5ಇವರು ಬುದ್ಧಿಹೀನರೂ, ವಿವೇಕಶೂನ್ಯರೂ ಆಗಿ ಅಂಧಕಾರದಲ್ಲಿ ಅಲೆಯುತ್ತಾರೆ. ಭೂಮಿಯ ಅಸ್ತಿವಾರಗಳೆಲ್ಲಾ ಕದಲುತ್ತವೆ.
6“ನೀವು ದೇವರುಗಳು, ಎಲ್ಲರೂ ಪರಾತ್ಪರನಾದ ದೇವರ ಮಕ್ಕಳು,
7ಆದರೂ ನರರಂತೆ ಸತ್ತೇ ಹೋಗುವಿರಿ, ಪ್ರತಿಯೊಬ್ಬ ಪ್ರಭುವಿನಂತೆ ನೀವೆಲ್ಲರೂ ಬಿದ್ದು ಹೋಗುವಿರಿ” ಎಂದು ನಾನು ಹೇಳಿದೆನು.
8ದೇವರೇ, ಏಳು; ಭೂಲೋಕದಲ್ಲಿ ನ್ಯಾಯವನ್ನು ಸ್ಥಾಪಿಸು. ನೀನು ಎಲ್ಲಾ ಜನಾಂಗಗಳ ಒಡೆಯನು ಅಲ್ಲವೋ?
ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ (IRV, 2019) · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. (ಪಠ್ಯ ಬದಲಾಗಿಲ್ಲ; ಅಡಿಟಿಪ್ಪಣಿಗಳು ಮತ್ತು ಶೀರ್ಷಿಕೆಗಳನ್ನು ಬಿಡಲಾಗಿದೆ) · eBible.org