ಮುಖಪುಟ › ಸಭಾ ವರ್ಷದ ಹಬ್ಬಗಳು › ಕ್ರಿಸ್ಮಸ್
ಸಭಾ ವರ್ಷದ ಹಬ್ಬಗಳು
ಕ್ರಿಸ್ಮಸ್
ಮತ್ತಾಯ ಮತ್ತು ಲೂಕರು ಹೇಳುವಂತೆ ಯೇಸುವಿನ ಜನನ, ಯೆಶಾಯನ ಪ್ರವಾದನೆ ಮತ್ತು ಯೋಹಾನನ ಸುವಾರ್ತೆಯ ಆರಂಭದೊಂದಿಗೆ, ಪೂರ್ಣವಾಗಿ. ಪಾಶ್ಚಾತ್ಯ ಸಭೆಗಳು ಕ್ರಿಸ್ಮಸ್ ಅನ್ನು 25 ಡಿಸೆಂಬರ್ನಂದು ಆಚರಿಸುತ್ತವೆ; ಜೂಲಿಯನ್ ಪಂಚಾಂಗದ ಆರ್ಥೊಡಾಕ್ಸ್ ಸಭೆಗಳು 7 ಜನವರಿಯಂದು.
ದಿನಾಂಕಗಳು
| ವರ್ಷ | ಪಾಶ್ಚಾತ್ಯ ಸಭೆಗಳುಕ್ರಿಸ್ಮಸ್ | ಆರ್ಥೊಡಾಕ್ಸ್ ಸಭೆಕ್ರಿಸ್ತನ ಜನನೋತ್ಸವ |
|---|---|---|
| 2026 | 25 ಡಿಸೆಂಬರ್ 2026ಶುಕ್ರವಾರ | 7 ಜನವರಿ 2027ಗುರುವಾರ |
| 2027 | 25 ಡಿಸೆಂಬರ್ 2027ಶನಿವಾರ | 7 ಜನವರಿ 2028ಶುಕ್ರವಾರ |
| 2028 | 25 ಡಿಸೆಂಬರ್ 2028ಸೋಮವಾರ | 7 ಜನವರಿ 2029ಭಾನುವಾರ |
| 2029 | 25 ಡಿಸೆಂಬರ್ 2029ಮಂಗಳವಾರ | 7 ಜನವರಿ 2030ಸೋಮವಾರ |
| 2030 | 25 ಡಿಸೆಂಬರ್ 2030ಬುಧವಾರ | 7 ಜನವರಿ 2031ಮಂಗಳವಾರ |
ಒಂದು ದಿನಾಂಕವು ಆರ್ಥೊಡಾಕ್ಸ್ ಅಥವಾ ಕಥೋಲಿಕ ಪಂಚಾಂಗದಲ್ಲಿ ಆ ದಿನದ ವಾಚನಗಳನ್ನು ತೆರೆಯುತ್ತದೆ.
ಆರ್ಥೊಡಾಕ್ಸ್ ದಿನಾಂಕಗಳು ಜೂಲಿಯನ್ ಪಂಚಾಂಗದ ಪ್ರಕಾರ; ಅದನ್ನು ರಷ್ಯನ್, ಸರ್ಬಿಯನ್ ಮತ್ತು ಜಾರ್ಜಿಯನ್ ಸಭೆಗಳು ಮತ್ತು ಅಥೋಸ್ ಪರ್ವತ ಪಾಲಿಸುತ್ತವೆ: ಅವುಗಳ ನಿಗದಿತ ದಿನಾಂಕದ ಹಬ್ಬಗಳು ನಾಗರಿಕ ಪಂಚಾಂಗದಲ್ಲಿ 13 ದಿನಗಳ ನಂತರ ಬರುತ್ತವೆ. ಹೊಸ ಪಂಚಾಂಗದ ಸಭೆಗಳು (ಗ್ರೀಸ್, ರೊಮೇನಿಯಾ, ಬಲ್ಗೇರಿಯಾ ಮತ್ತು ಇತರರು) ಕ್ರಿಸ್ಮಸ್ ಅನ್ನು 25 ಡಿಸೆಂಬರ್ನಂದು ಆಚರಿಸುತ್ತವೆ; ಪಾಸ್ಕ ಮತ್ತು ಅದನ್ನು ಅವಲಂಬಿಸಿರುವ ದಿನಗಳನ್ನು ಹೆಚ್ಚುಕಡಿಮೆ ಎಲ್ಲಾ ಆರ್ಥೊಡಾಕ್ಸ್ ಸಭೆಗಳಲ್ಲಿ ಒಂದೇ ರೀತಿ ಎಣಿಸಲಾಗುತ್ತದೆ.
ಬೈಬಲ್ ವಾಕ್ಯಭಾಗಗಳು
ಯೆಶಾಯನು
2ಕತ್ತಲಲ್ಲಿ ಸಂಚರಿಸಿದ ಜನರಿಗೆ ದೊಡ್ಡ ಬೆಳಕು ಕಾಣಿಸಿತು. ಕಾರ್ಗತ್ತಲಾದ ದೇಶದಲ್ಲಿದ್ದವರಿಗೆ ಪ್ರಕಾಶವು ಹೊಳೆಯಿತು. 3ನೀನು ಪ್ರಜೆಗಳನ್ನು ವೃದ್ಧಿಗೊಳಿಸಿದ್ದೀ. ಅವರಿಗೆ ಸಂತೋಷವನ್ನು ಹೆಚ್ಚಿಸಿದ್ದೀ. ಸುಗ್ಗಿ ಕಾಲದಲ್ಲಿ ಜನರು ಹರ್ಷಿಸುವ ಹಾಗೂ, ಕೊಳ್ಳೆಯನ್ನು ಹಂಚಿಕೊಳ್ಳುವವರು, ಹೆಚ್ಚಳಪಡುವವರು ನಿನ್ನ ಮುಂದೆ ಆನಂದಿಸುತ್ತಾರೆ. 4ಅವರಿಗೆ ಭಾರವಾದ ನೊಗವನ್ನೂ, ಬೆನ್ನನ್ನು ಹೊಡೆದ ಕೋಲನ್ನೂ, ಬಿಟ್ಟೀ ಹಿಡಿದವನ ದೊಣ್ಣೆಯನ್ನೂ ಮಿದ್ಯಾನಿನ ನಾಶನದ ದಿನದಲ್ಲಿ ಮುರಿದುಬಿಟ್ಟಂತೆ ಮುರಿದು ಬಿಟ್ಟಿದ್ದೀ. 5ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು. 6ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು. 7ಆತನ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ದಿಯಾಗುವುದು. ದಾವೀದನ ರಾಜ್ಯದಲ್ಲಿ ನಿತ್ಯ ಸಮಾಧಾನವಿರುವುದು. ಆ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು. ಸೇನಾಧೀಶ್ವರನಾದ ಯೆಹೋವನ ಅನುಗ್ರಹವು ಇದನ್ನು ನೆರವೇರಿಸುವುದು.
ಮತ್ತಾಯನು
18ಯೇಸು ಕ್ರಿಸ್ತನ ಜನನವು ಹೇಗಾಯಿತಂದರೆ, ಆತನ ತಾಯಿಯಾದ ಮರಿಯಳಿಗೂ ಯೋಸೇಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಮದುವೆಯಾಗಿ ಕೂಡಿಬಾಳುವುದಕ್ಕಿಂತ ಮೊದಲೇ ಮರಿಯಳು ಪವಿತ್ರಾತ್ಮನ ಶಕ್ತಿಯಿಂದ ಗರ್ಭಧರಿಸಿದ್ದು ತಿಳಿದುಬಂತು. 19ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು. 20ಅವನು ಇದನ್ನು ಕುರಿತು ಆಲೋಚಿಸುತ್ತಿರುವಾಗ, ದೇವದೂತನು ಅವನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ದಾವೀದನ ಮಗನಾದ ಯೋಸೇಫನೇ, ನೀನು ಮರಿಯಳನ್ನು ಹೆಂಡತಿಯಾಗಿ ಸೇರಿಸಿಕೊಳ್ಳುವುದಕ್ಕೆ ಅಂಜಬೇಡ. ಆಕೆ ಗರ್ಭವತಿಯಾದದ್ದು ಪವಿತ್ರಾತ್ಮನಿಂದಲೇ. 21ಆಕೆಯು ಒಬ್ಬ ಮಗನನ್ನು ಹೆರುವಳು; ನೀನು ಆತನಿಗೆ ‘ಯೇಸು’ ಎಂದು ಹೆಸರಿಡಬೇಕು; ಏಕೆಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ರಕ್ಷಿಸುವನು,” ಅಂದನು. 22ಕರ್ತನು ಪ್ರವಾದಿಯ ಮುಖಾಂತರ ಹೇಳಿದ ಮಾತು ನೆರವೇರುವಂತೆ ಇದೆಲ್ಲಾ ನಡೆಯಿತು; ಆ ಮಾತು ಏನೆಂದರೆ, 23“ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು; ಆತನಿಗೆ ಇಮ್ಮಾನುವೇಲ್ ಎಂದು ಹೆಸರಿಡುವರು. ‘ದೇವರು ನಮ್ಮ ಕೂಡ ಇದ್ದಾನೆಂದು’ ಈ ಹೆಸರಿನ ಅರ್ಥ.” 24ಆಗ ಯೋಸೇಫನು ಎಚ್ಚೆತ್ತು ದೇವದೂತನು ಅಪ್ಪಣೆಕೊಟ್ಟ ಪ್ರಕಾರ ಮರಿಯಳನ್ನು ಹೆಂಡತಿಯನ್ನಾಗಿ ಸ್ವೀಕರಿಸಿಕೊಂಡನು. 25ಆದರೆ ಆಕೆಯು ಗಂಡು ಮಗುವಿಗೆ ಜನ್ಮನೀಡುವವರೆಗೂ ಆಕೆಯೊಡನೆ ಶರೀರ ಸಂಬಂಧವಿಲ್ಲದೆ ಇದ್ದನು. ಮತ್ತು ಯೋಸೇಫನು ಆ ಮಗುವಿಗೆ ‘ಯೇಸು’ ಎಂದು ಹೆಸರಿಟ್ಟನು.
ಲೂಕನು
1ಆ ಕಾಲದಲ್ಲಿ ತನ್ನ ರಾಜ್ಯದ ಜನರೆಲ್ಲಾ ಜನಗಣತಿಯನ್ನು ಮಾಡಿಸಿಕೊಳ್ಳಬೇಕೆಂಬ ಆಜ್ಞೆಯು ಚಕ್ರವರ್ತಿಯಾದ ಔಗುಸ್ತನಿಂದ ಹೊರಟಿತು. 2ಇದು ಕುರೇನ್ಯನು ಸಿರಿಯಕ್ಕೆ ಅಧಿಪತಿಯಾಗಿದ್ದಾಗ ನಡೆದ ಮೊದಲನೆಯ ಜನಗಣತಿ. 3ಆಗ ಎಲ್ಲರೂ ಜನಗಣತಿ ಮಾಡಿಸಿಕೊಳ್ಳುವುದಕ್ಕಾಗಿ ತಮ್ಮತಮ್ಮ ಊರುಗಳಿಗೆ ಹೊರಟರು. 4ಯೋಸೇಫನು ಸಹ ತಾನು ದಾವೀದನ ಮನೆತನದವನೂ, ಗೋತ್ರದವನೂ ಆಗಿದ್ದದರಿಂದ ಹೆಸರು ನೊಂದಾಯಿಸಿಕೊಳ್ಳುವುದಕ್ಕಾಗಿ ತನಗೆ ನಿಶ್ಚಿತಾರ್ಥವಾಗಿದ್ದ ಹಾಗೂ ಗರ್ಭವತಿಯಾಗಿದ್ದ ಮರಿಯಳ ಸಂಗಡ ಗಲಿಲಾಯ ಸೀಮೆಯ ನಜರೇತ್ ಎಂಬ ಊರಿನಿಂದ ಹೊರಟು ಯೂದಾಯದಲ್ಲಿರುವ ಬೇತ್ಲೆಹೇಮೆಂಬ ದಾವೀದನೂರಿಗೆ ಹೋದರು. 6ಅವರು ಅಲ್ಲಿದ್ದಾಗ ಆಕೆಗೆ ಪ್ರಸವಕ್ಕೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲು ಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಛತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. 8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರಿಹಿಂಡನ್ನು ಕಾಯುತ್ತಿರಲಾಗಿ, 9ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. 10ಆ ದೂತನು ಅವರಿಗೆ, “ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭವಾರ್ತೆಯನ್ನು ನಿಮಗೆ ತಿಳಿಸುತ್ತೇನೆ. 11ಅದೇನೆಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. 12ಅದರ ಗುರುತೇನಂದರೆ, ಬಟ್ಟೆಯಿಂದ ಸುತ್ತಿರುವ ಒಂದು ಕೂಸು ಗೋದಲಿಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ” ಎಂದು ಹೇಳಿದನು. 13ಫಕ್ಕನೆ ಆ ದೂತನ ಸಂಗಡ ಸ್ವರ್ಗೀಯ ಸೈನ್ಯದವರ ಒಂದು ದೊಡ್ಡ ಗುಂಪು ಕಾಣಿಸಿಕೊಂಡು, “ಮೇಲಣ ಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ದೇವರೊಲಿದ ಮನುಷ್ಯರೊಳಗೆ ಸಮಾಧಾನ” ಎಂದು ದೇವರನ್ನು ಕೊಂಡಾಡುತ್ತಾ ಹೇಳಿದರು. 15ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೊರಟುಹೋದ ಮೇಲೆ ಆ ಕುರುಬರು, “ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ಕರ್ತನು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನೋಡಲು ಹೋಗೋಣ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡು, 16ತ್ವರೆಯಾಗಿ ಹೋಗಿ ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. 17ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ದೇವದೂತನು ತಮಗೆ ಹೇಳಿದ್ದ ಮಾತನ್ನು ಅವರಿಗೆ ತಿಳಿಸಿದರು. 18ಅದನ್ನು ಕೇಳಿದವರೆಲ್ಲರೂ, ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. 19ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು. 20ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗಾಗಿ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು.
ಮತ್ತಾಯನು
1ಅರಸನಾದ ಹೆರೋದನ ಕಾಲದಲ್ಲಿ; ಯೂದಾಯ ಸೀಮೆಯ ಬೇತ್ಲೆಹೇಮ್ ಎಂಬ ಊರಿನಲ್ಲಿ ಯೇಸು ಹುಟ್ಟಿದಾಗ ಪೂರ್ವದೇಶದ ಜ್ಞಾನಿಗಳು ಯೆರೂಸಲೇಮಿಗೆ ಬಂದು, 2“ಯೆಹೂದ್ಯರ ಅರಸನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಪೂರ್ವದಿಕ್ಕಿನಲ್ಲಿ ಕಂಡು ಆತನಿಗೆ ಅಡ್ಡಬಿದ್ದು ನಮಸ್ಕರಿಸುವುದಕ್ಕಾಗಿ ಬಂದೆವು” ಎಂದರು. 3ಇದನ್ನು ಕೇಳಿ ಅರಸನಾದ ಹೆರೋದನು ತಳಮಳಪಟ್ಟನು ಮತ್ತು ಅವನೊಂದಿಗೆ ಯೆರೂಸಲೇಮಿನವರೆಲ್ಲರೂ ಕಳವಳಪಟ್ಟರು. 4ಅವನು ಯೆಹೂದ್ಯರ ಎಲ್ಲಾ ಮುಖ್ಯಯಾಜಕರನ್ನೂ ಶಾಸ್ತ್ರಿಗಳನ್ನೂ ಕೂಡಿಸಿ, “ಕ್ರಿಸ್ತನು ಹುಟ್ಟಬೇಕಾದದ್ದು ಎಲ್ಲಿ” ಎಂದು ಅವರನ್ನು ಕೇಳಿದನು. 5ಅವರು ಅವನಿಗೆ, “ಯೂದಾಯದ ಬೇತ್ಲೆಹೇಮಿನಲ್ಲಿಯೇ; ಏಕೆಂದರೆ, 6“‘ಯೆಹೂದ ಸೀಮೆಯ ಬೇತ್ಲೆಹೇಮೇ, ಯೆಹೂದದ ಮುಖ್ಯಪಟ್ಟಣಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಸಣ್ಣದಲ್ಲ. ಏಕೆಂದರೆ ನನ್ನ ಪ್ರಜೆಯಾದ ಇಸ್ರಾಯೇಲನ್ನು ಆಳತಕ್ಕ ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಉದಯಿಸುವನು.’ ಎಂಬುದಾಗಿ ಪ್ರವಾದಿಯ ಮುಖಾಂತರ ಬರೆಯಲ್ಪಟಿದೆ” ಎಂದು ಹೇಳಿದರು. 7ಆಗ ಹೆರೋದನು ಯಾರಿಗೂ ತಿಳಿಯದಂತೆ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಕಾಣಿಸಿದ ಗಳಿಗೆಯನ್ನು ಅವರಿಂದ ನಿಖರವಾಗಿ ತಿಳಿದುಕೊಂಡು, 8“ನೀವು ಹೋಗಿ ಆ ಕೂಸಿನ ವಿಷಯದಲ್ಲಿ ಚೆನ್ನಾಗಿ ವಿಚಾರಣೆ ಮಾಡಿರಿ; ಅದು ಸಿಕ್ಕಿದ ಮೇಲೆ ನನಗೆ ತಿಳಿಸಿರಿ; ನಾನು ಸಹ ಬಂದು ಆ ಕೂಸಿಗೆ ಅಡ್ಡಬಿದ್ದು ನಮಸ್ಕರಿಸುವೆನು” ಎಂದು ಹೇಳಿ ಜ್ಞಾನಿಗಳನ್ನು ಬೇತ್ಲೆಹೇಮಿಗೆ ಕಳುಹಿಸಿಕೊಟ್ಟನು. 9ಅವರು ಅರಸನ ಮಾತನ್ನು ಕೇಳಿ ಹೊರಟಾಗ ಪೂರ್ವದಿಕ್ಕಿನಲ್ಲಿ ಕಂಡ ನಕ್ಷತ್ರವು ಪುನಃ ಕಾಣಿಸಿಕೊಂಡು ಆ ಕೂಸು ಇದ್ದ ಸ್ಥಳದ ಮೇಲೆ ಬಂದು ನಿಲ್ಲುವ ತನಕ ಅವರ ಮುಂದಾಗಿ ಹೋಗುತಿತ್ತು. 10ಅವರು ನಕ್ಷತ್ರವನ್ನು ಕಂಡು ಪರಮಾನಂದದಿಂದ ಸಂತೋಷಿಸಿದರು. 11ಅವರು ಆ ಮನೆಯೊಳಕ್ಕೆ ಹೋಗಿ ಆ ಕೂಸನ್ನು ಅದರ ತಾಯಿಯಾದ ಮರಿಯಳ ಬಳಿಯಲ್ಲಿ ಕಂಡು ಅದಕ್ಕೆ ಸಾಷ್ಟಾಂಗನಮಸ್ಕಾರ ಮಾಡಿ ತಮ್ಮ ನಿಕ್ಷೇಪದ ಗಂಟುಗಳನ್ನು ಬಿಚ್ಚಿ ಅದಕ್ಕೆ ಚಿನ್ನ, ಪರಿಮಳದ್ರವ್ಯ ಮತ್ತು ರಕ್ತಬೋಳಗಳನ್ನು ಮಗುವಿಗೆ ಕಾಣಿಕೆಯಾಗಿ ಅರ್ಪಿಸಿದರು. 12ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
ಯೋಹಾನನು
1ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರೊಂದಿಗಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬಾತನು ಆದಿಯಲ್ಲಿ ದೇವರೊಂದಿಗಿದ್ದನು. 3ಸಮಸ್ತವೂ ಆತನ ಮೂಲಕವಾಗಿ ಸೃಷ್ಟಿಯಾಯಿತು. ಸೃಷ್ಟಿಯಾದ ಎಲ್ಲವುಗಳಲ್ಲಿ ಆತನಿಲ್ಲದೆ ಒಂದಾದರೂ ಸೃಷ್ಟಿಯಾಗಲಿಲ್ಲ. 4ಆತನಲ್ಲಿ ಜೀವವಿತ್ತು. ಆ ಜೀವವು ಮನುಷ್ಯರಿಗೆ ಬೆಳಕಾಗಿತ್ತು. 5ಆ ಬೆಳಕು ಕತ್ತಲಲ್ಲಿ ಪ್ರಕಾಶಿಸುತ್ತದೆ. ಕತ್ತಲು ಆ ಬೆಳಕನ್ನು ಮುಸುಕಲಿಲ್ಲ. 6ದೇವರು ಕಳುಹಿಸಿದ ಒಬ್ಬ ಮನುಷ್ಯನು ಬಂದನು. ಅವನ ಹೆಸರು ಯೋಹಾನನು. 7ಆ ಯೋಹಾನನು ಸಾಕ್ಷಿಗಾಗಿ ಬಂದನು. ತನ್ನ ಮೂಲಕವಾಗಿ ಎಲ್ಲರೂ ನಂಬುವಂತೆ ಅವನು ಬೆಳಕಿನ ವಿಷಯದಲ್ಲಿ ಸಾಕ್ಷಿಕೊಡಲು ಬಂದನು. 8ಅವನೇ ಆ ಬೆಳಕಲ್ಲ; ಆದರೆ ಆ ಬೆಳಕಿನ ವಿಷಯದಲ್ಲಿ ಸಾಕ್ಷಿ ನೀಡಲೆಂದೇ ಬಂದವನು. 9ನಿಜವಾದ ಬೆಳಕು ಲೋಕಕ್ಕೆ ಬರುವುದಾಗಿತ್ತು; ಆ ಬೆಳಕೇ ಪ್ರತಿ ಮನುಷ್ಯನಿಗೂ ಬೆಳಕನ್ನು ಕೊಡುವಂಥದು. 10ಆತನು ಲೋಕದಲ್ಲಿ ಇದ್ದನು ಮತ್ತು ಲೋಕವು ಆತನ ಮೂಲಕ ಉಂಟಾಯಿತು, ಆದರೂ ಲೋಕವು ಆತನನ್ನು ಅರಿತುಕೊಳ್ಳಲಿಲ್ಲ. 11ಆತನು ತನ್ನ ಸ್ವಂತ ಜನರ ಬಳಿಗೆ ಬಂದನು; ಆದರೆ ಸ್ವಂತ ಜನರು ಆತನನ್ನು ಸ್ವೀಕರಿಸಲಿಲ್ಲ. 12ಆದರೂ ಯಾರಾರು ಆತನನ್ನು ಸ್ವೀಕರಿಸಿದರೋ, ಅಂದರೆ ಆತನ ಹೆಸರಿನಲ್ಲಿ ನಂಬಿಕೆಯಿಟ್ಟರೋ ಅವರಿಗೆ ದೇವರ ಮಕ್ಕಳಾಗುವ ಅಧಿಕಾರವನ್ನು ಆತನು ಕೊಟ್ಟನು. 13ಇವರು ರಕ್ತಸಂಬಂಧದಿಂದಾಗಲಿ, ಶರೀರದ ಇಚ್ಛೆಯಿಂದಾಗಲಿ, ಪುರುಷ ಸಂಕಲ್ಪದಿಂದಾಗಲಿ ಹುಟ್ಟಿದವರಲ್ಲ; ದೇವರಿಂದಲೇ ಹುಟ್ಟಿದವರು. 14ಆ ವಾಕ್ಯವೆಂಬುವವನು ಮನುಷ್ಯನಾಗಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು. ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ, ಸತ್ಯದಿಂದಲೂ ತುಂಬಿದವನಾಗಿದ್ದನು.
ಕಲೆಯಲ್ಲಿ
ಕುರುಬರ ಆರಾಧನೆಜಾರ್ಜೊನೆ · 1505/1510
ಜ್ಞಾನಿಗಳ ಆರಾಧನೆಫ್ರಾ ಆಂಜೆಲಿಕೊ ಮತ್ತು ಫ್ರಾ ಫಿಲಿಪ್ಪೊ ಲಿಪ್ಪಿ · c. 1440/1460
ನಕ್ಷತ್ರವು ಜ್ಞಾನಿಗಳಿಗೆ ದಾರಿ ತೋರಿಸುವುದುಗುಸ್ತಾವ್ ಡೋರೆ · 1866
ಯೇಸುವಿನ ಜನನಡ್ಯೂರರ್ · c. 1502–3
ಜ್ಞಾನಿಗಳ ಆರಾಧನೆಡ್ಯೂರರ್ · c. 1501–1503
ಯೇಸುವಿನ ಜನನಡ್ಯೂರರ್ · 1504
ಜ್ಞಾನಿಗಳ ಆರಾಧನೆಲೂಕಾಸ್ ವಾನ್ ಲೇಡೆನ್ · 1513
ಸುವಾರ್ತೆಗಳ ಪುಸ್ತಕದಿಂದ ಕತ್ತರಿಸಿ ತೆಗೆದ ಒಂದು ಹಾಳೆ: ಯೇಸುವಿನ ಜನನ (recto)ಅಜ್ಞಾತ ಚಿತ್ರಕಾರ, ಹೆಲ್ಮಾರ್ಸ್ಹೌಸನ್ · c. 1190
ಕುರುಬರಿಗೆ ಶುಭವರ್ತಮಾನ (Ms. 125, fol. 7, “ಇರ್ಮೆನ್ಗಾರ್ಡ್ ಕೋಡೆಕ್ಸ್”ನಿಂದ)ಅಜ್ಞಾತ ಜರ್ಮನ್ ಚಿತ್ರಕಾರ · after 1053
ಜ್ಞಾನಿಗಳ ಆರಾಧನೆ (Ms. Ludwig VII 1, fol. 25v, “ಬೆನೆಡಿಕ್ಷನಲ್”ನಿಂದ)ಅಜ್ಞಾತ ಚಿತ್ರಕಾರ, ರೆಗೆನ್ಸ್ಬರ್ಗ್ · c. 1030–1040
ಕುರುಬರಿಗೆ ಕಾಣಿಸಿಕೊಂಡ ದೂತನುರೆಂಬ್ರಾಂಟ್ · 1634
ಕುರುಬರ ಆರಾಧನೆ: ದೀಪದೊಂದಿಗೆರೆಂಬ್ರಾಂಟ್ · c. 1654
ಇನ್ನಷ್ಟು ಹಬ್ಬಗಳು
ಮೂಲಗಳು: ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು