ಉಡುಪು ಮತ್ತು ಅಲಂಕಾರ
ನೇರಳೆ ಮತ್ತು ಕಡುಗೆಂಪು
ಹೀಬ್ರೂ argaman (ನೇರಳೆ), shani (ಕಡುಗೆಂಪು) · ಗ್ರೀಕ್ porphyra · ಕಡಲ ಬಸವನಹುಳು ಮತ್ತು ಕೀಟಗಳಿಂದ ಬಣ್ಣಗಳು
ಪ್ರಾಚೀನ ಲೋಕದ ಅತ್ಯಂತ ದುಬಾರಿ ಬಣ್ಣವು ಪೂರ್ವ ಮೆಡಿಟರೇನಿಯನ್ ಸಮುದ್ರದ murex ಕಡಲ ಬಸವನಹುಳುಗಳಿಂದ ಬರುತ್ತಿತ್ತು. ಬಸವನಹುಳುವಿನ ಒಂದು ಗ್ರಂಥಿಯಿಂದ ಬರುವ ದ್ರವವು ಗಾಳಿಯಲ್ಲಿ ಹಳದಿಮಿಶ್ರಿತ ಬಿಳುಪಿನಿಂದ ಕೆಂಪು, ಊದಾ ಅಥವಾ ನೇರಳೆಯಾಗಿ ಬದಲಾಗುತ್ತಿತ್ತು; ಬೈಬಲಿನ “ನೀಲಿ” ಅದೇ ಬಣ್ಣದ ಒಂದು ಊದಾ ಛಾಯೆ. ತೂರ್ ಮತ್ತು ಸೀದೋನ್ ಮಹಾ ಕೇಂದ್ರಗಳಾಗಿದ್ದವು, ಮತ್ತು ಕರಾವಳಿಯುದ್ದಕ್ಕೂ ಜಜ್ಜಿದ ಚಿಪ್ಪುಗಳ ದೊಡ್ಡ ರಾಶಿಗಳು ದೊರೆತಿವೆ. ಇಷ್ಟು ದುಬಾರಿಯಾದ್ದರಿಂದ ನೇರಳೆಯನ್ನು ಅರಸರೂ ಶ್ರೀಮಂತರೂ ಧರಿಸುತ್ತಿದ್ದರು — ಮಿದ್ಯಾನ್ ರಾಜರು (ನ್ಯಾಯಸ್ಥಾಪಕರು 8:26) ಮತ್ತು ನೇರಳೆ ಬಟ್ಟೆಯನ್ನೂ ನಯವಾದ ನಾರುಮಡಿಯನ್ನೂ ಧರಿಸಿದ್ದ ಐಶ್ವರ್ಯವಂತನು (ಲೂಕನು 16:19).
ಕಡುಗೆಂಪು ಮತ್ತು ರಕ್ತವರ್ಣ ಒಂದು ಬಗೆಯ ಓಕ್ ಮರದ ಮೇಲೆ ವಾಸಿಸುವ ಕೆರ್ಮೆಸ್ ಎಂಬ ಚಿಕ್ಕ ಕೀಟದಿಂದ ಬರುತ್ತಿತ್ತು. ಹೊಸದಾಗಿ ಹುಟ್ಟಿದ ಜೆರಹನ ಕೈಗೆ ಸೂಲಗಿತ್ತಿ ಕೆಂಪು ದಾರವನ್ನು ಕಟ್ಟಿದಳು (ಆದಿಕಾಂಡ 38:28). ಹಳದಿ ಕುಸುಬೆಯಿಂದ, ಕಿತ್ತಳೆ-ಹಳದಿ ಕೇಸರಿ ಕ್ರೋಕಸ್ ಹೂವುಗಳಿಂದ, ಮತ್ತು ಹಸಿರು ಸಾಮಾನ್ಯವಾಗಿ ಬಣ್ಣಗಳ ಮಿಶ್ರಣದಿಂದ ಬರುತ್ತಿತ್ತು; ಬಟ್ಟೆಯನ್ನು ದೊಡ್ಡ ತೊಟ್ಟಿಗಳಲ್ಲಿ ಬಣ್ಣ ಹಾಕುತ್ತಿದ್ದರು. ಫಿಲಿಪ್ಪಿಯಲ್ಲಿ ಪೌಲನು ಲುದ್ಯಳನ್ನು ಭೇಟಿಯಾದನು — “ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ” (ಅಪೊಸ್ತಲರ ಕೃತ್ಯಗಳು 16:14) — ಆ ಊರಿನಲ್ಲಿ ಬಣ್ಣಗಾರರ ಸಂಘವಿತ್ತು. ಒಂದು ಅಭಿಪ್ರಾಯದ ಪ್ರಕಾರ ಆಕೆ ನಿಜವಾದ murex ನೇರಳೆಯನ್ನು ಮಾರುತ್ತಿದ್ದಳು; ಇನ್ನೊಂದರ ಪ್ರಕಾರ ಮಂಜಿಷ್ಠದ ಬೇರಿನಿಂದ ಬಣ್ಣ ಹಾಕಿದ ಅಗ್ಗದ ಕೆಂಪು ಬಟ್ಟೆಯನ್ನು.
ಮುಖ್ಯ ವಚನಗಳು
ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.ಇದನ್ನು ಹೆಸರಿಸುವ ಎಲ್ಲಾ ವಚನಗಳು (88)
ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.
ಆದಿಕಾಂಡ2
ಆಕೆಯು ಹೆರುವಾಗ ಒಂದು ಮಗುವು ಮುಂದಕ್ಕೆ ಕೈಚಾಚಲು ಸೂಲಗಿತ್ತಿಯು, “ಇದು ಮೊದಲು ಹೊರಗೆ ಬಂದದ್ದು” ಎಂದು ಹೇಳಿ ಅದರ ಕೈಗೆ ಕೆಂಪು ದಾರವನ್ನು ಕಟ್ಟಿದಳು.ತರುವಾಯ ಕೈಗೆ ಕೆಂಪು ನೂಲು ಕಟ್ಟಿಸಿಕೊಂಡ ಶಿಶುವು ಹೊರಗೆ ಬಂದಿತು. ಅದಕ್ಕೆ “ಜೆರಹ” ಎಂದು ಹೆಸರಾಯಿತು.ವಿಮೋಚನಕಾಂಡ34
ನೀಲಿ, ನೇರಳೆ, ರಕ್ತಗೆಂಪು ವರ್ಣಗಳುಳ್ಳ ದಾರಗಳೂ, ನಾರುಬಟ್ಟೆಗಳೂ, ಆಡು ಕೂದಲಿನ ಉಣ್ಣೆಯ ಬಟ್ಟೆಗಳೂ,ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳೂ, ಜಾಲೀಮರವೂ,ನನ್ನ ನಿವಾಸಕ್ಕಾಗಿ ಒಂದು ಗುಡಾರವನ್ನು ಹತ್ತು ಪರದೆಗಳಿಂದ ಮಾಡಿಸಬೇಕು. ಅವು ನಯವಾಗಿ ಹೊಸೆದ ನಾರಿನ ಬಟ್ಟೆಗಳಾಗಿರಬೇಕು. ಅವುಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರದಿಂದ ಕೆರೂಬಿಗಳನ್ನು ನೇಯ್ಗೆಯಿಂದ ಕಸೂತಿ ಹಾಕಿಸಬೇಕು.ಈ ಎರಡು ಜೋಡಣೆಗಳಲ್ಲಿ ಒಂದೊಂದರ ಕೊನೆಯ ಪರದೆಯ ಅಂಚಿನಲ್ಲಿ ನೀಲಿ ದಾರದಿಂದ ಕುಣಿಕೆಗಳನ್ನು ಮಾಡಿಸಬೇಕು.ಈ ಹೊದಿಕೆಗೆ ಹೊದಿಸುವುದಕ್ಕಾಗಿ ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನು ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನು ಮಾಡಿಸಬೇಕು.ನೀಲಿ, ನೆರಳೆ, ಕಡುಗೆಂಪು ವರ್ಣಗಳು ಹಾಗೂ ನಯವಾಗಿ ಹೊಸೆದ ಹತ್ತಿಯ ನೂಲಿನಿಂದ ಪರದೆಯನ್ನು ಮಾಡಿಸಿ, ಅದಕ್ಕೆ ಕೆರೂಬಿಗಳಿಗಾಗಿ ಕೌಶಲ್ಯಪೂರ್ಣವಾಗಿ ಕಸೂತಿ ಹಾಕಿಸಬೇಕು.ಗುಡಾರದ ಬಾಗಿಲಿಗೆ ಮರೆಯಾಗಿ ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೆರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕಸೂತಿ ಹಾಕಿಸಬೇಕು.ಅಂಗಳದ ಬಾಗಿಲಲ್ಲೇ ಇಪ್ಪತ್ತು ಮೊಳದ ಪರದೆಯೂ ಇರಬೇಕು. ಅದನ್ನು ನಯವಾಗಿ ಹೊಸೆದ ನಾರಿನ ನೂಲು, ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿ ಕೆಲಸದವರ ಕೈಯಿಂದ ಮಾಡಿಸಬೇಕು. ಬಾಗಿಲಿಗೆ ನಾಲ್ಕು ಕಂಬಗಳೂ ನಾಲ್ಕು ಗದ್ದಿಗೆ ಕಲ್ಲುಗಳು ಇರಬೇಕು.ಏಫೋದೆಂಬ ಕವಚವನ್ನು ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಿ ಅದನ್ನು ಚಿನ್ನ, ನೀಲಿ, ನೇರಳೆ ಹಾಗೂ ಕಡುಗೆಂಪು ದಾರಗಳಿಂದಲೂ ಕಸೂತಿ ಹಾಕಿಸಿ ಅಲಂಕರಿಸಬೇಕು.ಕವಚದ ಮೇಲಿರುವ ಕಸೂತಿ ಕೆಲಸದ ನಡುಕಟ್ಟು ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಲ್ಪಟ್ಟು ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಅಲಂಕೃತವಾಗಿರಬೇಕು.ನ್ಯಾಯತೀರ್ಪಿನ ಎದೆಯ ಪದಕದ ಕವಚವನ್ನು ಕಸೂತಿ ಕೆಲಸದಿಂದ ಮಾಡಿಸಬೇಕು. ಅದನ್ನು ಏಫೋದ್ ಅನ್ನು ಮಾಡಿಸಿದ ಹಾಗೆಯೇ ಚಿನ್ನದ ದಾರದಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ನಯವಾಗಿ ಹೊಸೆದ ಹತ್ತಿಯ ದಾರದಿಂದ ಮಾಡಿಸಬೇಕು.ಎದೆಯ ಪದಕವು ಕಸೂತಿಹಾಕಿದ ನಡುಕಟ್ಟಿನ ಮೇಲ್ಗಡೆಯಲ್ಲಿ ಬಿಗಿಯಾಗಿರುವಂತೆಯೂ, ಏಫೋದ್ ಕವಚದಿಂದ ಕಳಚಿಬೀಳದಂತೆಯೂ ಅದರ ಕೊಂಡಿಗಳನ್ನು ಏಫೋದ್ ಕವಚದ ಕೊಂಡಿಗಳಿಗೆ ನೀಲಿ ದಾರದಿಂದ ಕಟ್ಟಿಸಬೇಕು.ಮಹಾಯಾಜಕನು ಏಫೋದ್ ಕವಚದ ಸಂಗಡ ಧರಿಸಿಕೊಳ್ಳಬೇಕಾದ ಮೇಲಂಗಿಯನ್ನು ನೀನು ನೀಲಿಬಣ್ಣದ ಬಟ್ಟೆಯಿಂದಲೇ ಮಾಡಿಸಬೇಕು.ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.ಅದನ್ನು ಮುಂಡಾಸಕ್ಕೆ ಬಿಗಿಯುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿಸಬೇಕು. ಅದು ಮುಂಡಾಸದ ಮುಂಭಾಗದಲ್ಲಿ ಇರಬೇಕು.ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಗಳು, ಉಣ್ಣೆಯ ಬಟ್ಟೆಗಳು,ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳು, ಕಡಲಪ್ರಾಣಿಯ ತೊಗಲುಗಳು, ಜಾಲೀಮರವು, ದೀಪಕ್ಕೆ ಬೇಕಾದ ಎಣ್ಣೆಯು,ಯಾರಲ್ಲಿ ನೀಲಿ, ನೇರಳೆ ಹಾಗು ಕಡುಗೆಂಪು ವರ್ಣಗಳುಳ್ಳ ದಾರಗಳು, ನಾರುಬಟ್ಟೆಯು, ಉಣ್ಣೆ ಬಟ್ಟೆಯು, ಹದಮಾಡಿದ ಕೆಂಪುಬಣ್ಣದ ಟಗರಿನ ತೊಗಲುಗಳು ಹಾಗು ಕಡಲಪ್ರಾಣಿಯ ತೊಗಲುಗಳು ಇದ್ದವೋ ಅವರು ಅವುಗಳನ್ನು ತಂದುಕೊಟ್ಟರು.ನಿಪುಣೆಯರಾದ ಸ್ತ್ರೀಯರು ತಮ್ಮ ಕೈಗಳಿಂದ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲನ್ನೂ, ಹತ್ತಿಯ ನೂಲನ್ನೂ ನೇಯ್ದು ಆ ನೂಲನ್ನು ತಂದುಕೊಟ್ಟರು.ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.”ಆ ಕೆಲಸ ಮಾಡುತ್ತಿದ್ದ ಜ್ಞಾನಿಗಳೆಲ್ಲರು ಹೊಸೆದ ನಾರಿನ ಹತ್ತು ಪರದೆಗಳಿಂದ ಗುಡಾರವನ್ನು ಮಾಡಿ ಆ ಪರದೆಗಳಲ್ಲಿ ನೀಲಿ, ನೇರಳೆ ಮತ್ತು ಕಡುಗೆಂಪು ವರ್ಣಗಳ ದಾರಗಳಿಂದ ನೇಯ್ಗೆಯವರಂತೆ ಕೆರೂಬಿಗಳನ್ನು ಮಾಡಿ ಅದಕ್ಕೆ ಚಮತ್ಕಾರವಾಗಿ ಕಸೂತಿ ಹಾಕಿ ಮಾಡಿದರು.ಅದಲ್ಲದೆ ಹದಮಾಡಿರುವ ಟಗರಿನ ತೊಗಲುಗಳಿಂದ ಒಂದು ಮೇಲ್ಹೊದಿಕೆಯನ್ನೂ, ಕಡಲಪ್ರಾಣಿಯ ತೊಗಲುಗಳಿಂದ ಮತ್ತೊಂದು ಮೇಲ್ಹೊದಿಕೆಯನ್ನೂ ಮಾಡಿದರು.ನಯವಾಗಿ ಹೊಸೆದ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ಕೆರೂಬಿಗಳಿಗೆ ಚಮತ್ಕಾರವಾಗಿ ಕಸೂತಿಹಾಕಿ ಒಂದು ತೆರೆಯನ್ನು ಮಾಡಿದರು.ಡೇರೆಯ ಬಾಗಿಲಿಗೆ ಹುರಿ ನಾರಿನ ಪರದೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ಕಸೂತಿಹಾಕಿ ಪರದೆಯನ್ನು ಮಾಡಿದರು.ಅಂಗಳದ ಬಾಗಿಲಲ್ಲಿದ್ದ ಪರದೆಯು ನಯವಾದ ಹತ್ತಿಯ ಬಟ್ಟೆಯಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ಕಸೂತಿ ಕೆಲಸದವರ ಕೈಯಿಂದ ಮಾಡಿದ ಹಾಗೆಯೇ ಮಾಡಲ್ಪಟ್ಟಿದ್ದವು. ಅದರ ಉದ್ದವು ಇಪ್ಪತ್ತು ಮೊಳವಾಗಿತ್ತು; ಅದರ ಅಗಲವು ಅಂಗಳದ ಮಿಕ್ಕ ಪರದೆಗಳಂತೆ ಐದು ಮೊಳ.ಅವನ ಜೊತೆಯಲ್ಲಿ ದಾನ್ ಕುಲದ ಅಹೀಸಾಮಾಕನ ಮಗನಾದ ಒಹೋಲೀಯಾಬನು ಸೇರಿದ್ದನು; ಇವನು ಶಿಲ್ಪವಿದ್ಯೆಬಲ್ಲವನಾಗಿದ್ದನು, ಕಲಾತ್ಮಕ ಕೆಲಸವನ್ನು ಮಾಡಿಸುವವನು ಹಾಗು ಹತ್ತಿಯ ಬಟ್ಟೆಯಲ್ಲಿ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ನೂಲಿನಿಂದ ಕಸೂತಿ ಕೆಲಸ ಮಾಡುವವನು ಆಗಿದ್ದನು.ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದೊಡನೆಯೂ ಹತ್ತಿಯ ಬಟ್ಟೆಯೊಡನೆಯೂ ಕಸೂತಿ ಕೆಲಸದವರ ಪದ್ಧತಿಯ ಮೇರೆಗೆ ಕಸೂತಿ ಕೆಲಸವನ್ನು ಮಾಡುವುದಕ್ಕಾಗಿ ಬಂಗಾರವನ್ನು ಬಡಿದು ಹಗುರವಾದ ತಗಡುಗಳನ್ನು ಮಾಡಿ ಸಣ್ಣ ಸಣ್ಣ ಎಳೆಗಳಾಗಿ ಕತ್ತರಿಸಿದರು.ಕವಚದ ಮೇಲಿರುವ ಕಸೂತಿ ನಡುಕಟ್ಟು ಕವಚಕ್ಕೆ ಏಕವಾಗಿದ್ದು ಅದರಂತೆಯೇ ನಯವಾಗಿ ಹೊಸೆದ ಹತ್ತಿಯ ಬಟ್ಟೆಯಿಂದಲು, ಚಿನ್ನದ ದಾರಗಳಿಂದಲು ಹಾಗೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಮಾಡಲ್ಪಟ್ಟಿತ್ತು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.ಏಫೋದ್ ಕವಚದಂತೆಯೇ ಕಸೂತಿಯಿಂದಲೂ ಕೆಲಸದಿಂದ ಚಿನ್ನದ ದಾರಗಳಿಂದಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದಲೂ ನಯವಾದ ನಾರಿನ ಬಟ್ಟೆಯಲ್ಲಿ ಎದೆಯಪದಕವನ್ನು ಮಾಡಿದನು.ಬೆಚಲೇಲನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳಬೇಕಾದ ನಿಲುವಂಗಿಯನ್ನು ನೀಲಿಬಣ್ಣದ ಬಟ್ಟೆಯಿಂದಲೇ ನೇಕಾರನ ಕೆಲಸದಿಂದ ಮಾಡಿದನು.ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.ಮತ್ತು ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದಲೂ ಕಸೂತಿ ಕೆಲಸದ ರೀತಿಯಲ್ಲಿ ನಡುಕಟ್ಟನ್ನೂ ಮಾಡಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.ಅದನ್ನು ಮುಂಡಾಸಕ್ಕೆ ಜೋಡಿಸುವುದಕ್ಕಾಗಿ ನೀಲಿ ದಾರವನ್ನು ಅದಕ್ಕೆ ಕಟ್ಟಿದರು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದರು.ಹದಮಾಡಿರುವ ಕೆಂಪುಬಣ್ಣದ ಟಗರಿನ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು, ಕಡಲಪ್ರಾಣಿಯ ತೊಗಲುಗಳಿಂದ ಮಾಡಿದ ಮೇಲ್ಹೊದಿಕೆಯನ್ನು ಹಾಗೂ ಗರ್ಭಗುಡಿಯನ್ನು ಮರೆಮಾಡುವ ಪರದೆಯನ್ನು,ಯಾಜಕಕಾಂಡ5
ವಾಸಿಯಾಗಿದೆ ಎಂದು ಕಂಡು ಬಂದರೆ ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಸಜೀವವಾದ ಮತ್ತು ಶುದ್ಧವಾದ ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.“ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.ಆ ಮನೆಯ ಶುದ್ಧೀಕರಣಕ್ಕಾಗಿ ಅವನು ಎರಡು ಪಕ್ಷಿಗಳನ್ನು, ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಳ್ಳಬೇಕು.ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಅವನು ಶುದ್ಧಿಮಾಡುವನು.ಅರಣ್ಯಕಾಂಡ8
ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.ಇವೆಲ್ಲವುಗಳ ಮೇಲೆ ಅವರು ಕಡುಗೆಂಪಾದ ಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಸೇರಿಸಬೇಕು.ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂತರುವಾಯ ಅವರು ಬಂಗಾರದ ಯಜ್ಞವೇದಿಯ ಮೇಲೆ ನೀಲಿಬಟ್ಟೆಯನ್ನು ಹಾಸಿ, ಹಸನಾದ ತೊಗಲನ್ನು ಹೊದಿಸಿ ಹೊರುವ ಕೋಲುಗಳನ್ನು ಅಡ್ಡ ದಂಡಕ್ಕೆ ಕಟ್ಟಬೇಕು.ದೇವಸ್ಥಾನದ ಸರ್ವ ಉಪಕರಣಗಳನ್ನೆಲ್ಲಾ ನೀಲಿಬಟ್ಟೆಯಲ್ಲಿ ಇಟ್ಟು, ಹಸನಾದ ತೊಗಲನ್ನು ಹೊದಿಸಿ ಅಡ್ಡ ದಂಡಕ್ಕೆ ಕಟ್ಟಬೇಕು.ಅವರು ಯಜ್ಞವೇದಿಯ ಬೂದಿಯನ್ನು ತೆಗೆದುಬಿಟ್ಟು ಆ ಯಜ್ಞವೇದಿಯ ಮೇಲೆ ನೇರಳೆ ವರ್ಣದ ಬಟ್ಟೆಯನ್ನು ಹಾಸಿದರು.“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.ಯಾಜಕನು ದೇವದಾರುಮರದ ಕಟ್ಟಿಗೆಯನ್ನೂ, ಹಿಸ್ಸೋಪ್ ಗಿಡದ ಬರಲನ್ನೂ, ರಕ್ತವರ್ಣವುಳ್ಳ ದಾರವನ್ನೂ ತೆಗೆದುಕೊಂಡು ಆ ಆಕಳನ್ನು ಸುಡುವ ಬೆಂಕಿಯಲ್ಲಿ ಹಾಕಬೇಕು.ಯೆಹೋಶುವನು2
ನಾವು ಈ ದೇಶದಲ್ಲಿ ಪ್ರವೇಶಿಸುವಾಗ ನೀನು ನಮ್ಮನ್ನು ಇಳಿಸಿದ ಕಿಟಿಕಿಗೆ ಈ ಕೆಂಪು ದಾರವನ್ನು ಕಟ್ಟಬೇಕು ಮತ್ತು ನಿನ್ನ ತಂದೆತಾಯಿಗಳನ್ನೂ ಅಣ್ಣತಮ್ಮಂದಿರನ್ನೂ ಎಲ್ಲಾ ಬಂಧುಬಳಗದವರನ್ನೂ ನಿನ್ನ ಮನೆಯಲ್ಲಿ ಸೇರಿಸಿಕೊಂಡಿರಬೇಕು.ಅದಕ್ಕೆ ಅವಳು “ನಿಮ್ಮ ಮಾತಿನಂತೆಯೇ ಆಗಲಿ” ಎಂದು ಹೇಳಿ ಅವರನ್ನು ಕಳುಹಿಸಿದಳು; ಅವರು ಹೊರಟು ಹೋದ ಮೇಲೆ ಆ ಕೆಂಪು ದಾರವನ್ನು ಕಿಟಿಕಿಗೆ ಕಟ್ಟಿದಳು.ನ್ಯಾಯಸ್ಥಾಪಕರು2
‘ನಿಶ್ಚಯವಾಗಿ ಅವರಿಗೆ ಕೊಳ್ಳೆ ಸಿಕ್ಕಿರುತ್ತದೆ; ಅದನ್ನು ಹಂಚಿಕೊಳ್ಳುತ್ತಿದ್ದಾರಲ್ಲವೋ?. ಪ್ರತಿಯೊಬ್ಬ ಪುರುಷನಿಗೆ ಒಬ್ಬಿಬ್ಬರು ಹೆಂಗಸರೂ, ಸೀಸೆರನಿಗೆ ನಾನಾ ವರ್ಣಗಳುಳ್ಳ ಬಟ್ಟೆಗಳೂ, ವಿಚಿತ್ರವಾಗಿ ಕಸೂತಿಹಾಕಿದ ಎರಡು ವಸ್ತ್ರಗಳೂ, ಕಂಠಮಾಲೆಯೂ ದೊರಕಿರುತ್ತವೆ.’ಗಿದ್ಯೋನನಿಗೆ ಮೊದಲೇ ದೊರಕಿದ್ದ ಅರ್ಧಚಂದ್ರಾಕಾರದ ಆಭರಣ, ಕುಂಡಲ, ಮಿದ್ಯಾನ್ ರಾಜರು ಹೊದ್ದುಕೊಂಡಿದ್ದ ರಕ್ತಾಂಬರ, ಅವರ ಒಂಟೆಗಳ ಕಂಠಮಾಲೆ, ಇವುಗಳ ಹೊರತಾಗಿ ಅವನು ಇಸ್ರಾಯೇಲ್ಯರಿಂದ ಕೇಳಿ ತೆಗೆದುಕೊಂಡ ಓಲೆಗಳ ಬಂಗಾರವೇ ಸಾವಿರದ ಏಳುನೂರು ತೊಲೆ ತೂಕವಾಗಿತ್ತು.2 ಸಮುವೇಲನು1
ಇಸ್ರಾಯೇಲ್ ಸ್ತ್ರೀಯರೇ, ಸೌಲನಿಗಾಗಿ ಗೋಳಾಡಿರಿ, ನಿಮಗೆ ಉಲ್ಲಾಸಕರವಾದ ರಕ್ತಾಂಬರಗಳನ್ನು ಉಡಿಸಿ, ಅವುಗಳ ಮೇಲೆ ಸುವರ್ಣಾಭರಣಗಳನ್ನು ತೊಡಿಸಿದವನು ಆತನೇ ಅಲ್ಲವೋ?2 ಪೂರ್ವಕಾಲವೃತ್ತಾಂತ3
ಹೀಗಿರಲು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಇವುಗಳ ಕೆಲಸ ಮಾಡುವುದರಲ್ಲಿಯೂ, ರಕ್ತವರ್ಣ, ಕಡುಗೆಂಪುವರ್ಣ, ನೀಲವರ್ಣಗಳ ಬಟ್ಟೆಯನ್ನು ನೇಯುವುದರಲ್ಲಿಯೂ ಚಿತ್ರ ಕೆತ್ತುವುದರಲ್ಲಿಯೂ ನಿಪುಣನಾದ ಒಬ್ಬ ವ್ಯಕ್ತಿಯನ್ನು ನನ್ನ ಬಳಿಗೆ ಕಳುಹಿಸು; ನನ್ನ ತಂದೆಯಾದ ದಾವೀದನು ಗೊತ್ತುಮಾಡಿದಂಥ ಮತ್ತು ನನ್ನೊಡನೆ ಯೆಹೂದದಲ್ಲಿಯೂ, ಯೆರೂಸಲೇಮಿನಲ್ಲಿಯೂ, ಇರುವಂಥ ಕುಶಲಕರ್ಮಿಗಳೊಂದಿಗೆ ಅವನು ಕೆಲಸ ಮಾಡಲಿ.ಅವನು ದಾನ್ ಕುಲದ ಸ್ತ್ರೀಯರಲ್ಲಿ ಒಬ್ಬಳ ಮಗನಾಗಿದ್ದಾನೆ. ಅವನ ತಂದೆ ತೂರಿನವನು. ಅವನು ಬಂಗಾರ, ಬೆಳ್ಳಿ, ತಾಮ್ರ, ಕಬ್ಬಿಣ, ಕಲ್ಲು, ಮರ ಇವುಗಳ ಕೆಲಸವನ್ನು ಮಾಡುವುದಕ್ಕೂ, ಕಡುಗೆಂಪುವರ್ಣ ನೀಲರಕ್ತವರ್ಣಗಳುಳ್ಳ ಅಮೂಲ್ಯರತ್ನಗಳನ್ನು ಕೆತ್ತುವುದಕ್ಕೂ, ನಯವಾದ ನಾರು ವಸ್ತ್ರಗಳನ್ನು ನೇಯುವುದಕ್ಕೂ, ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಕೆಲಸಗಳನ್ನು ನಡಿಸುವುದಕ್ಕೂ, ಎಲ್ಲಾ ತರದ ಕೆತ್ತನೆಯ ಕೆಲಸವನ್ನು ಮಾಡುವುದಕ್ಕೂ ತನಗೆ ಒಪ್ಪಿಸಲ್ಪಟ್ಟ ಎಲ್ಲಾ ಚಮತ್ಕಾರವಾದ ಕೆಲಸಗಳನ್ನು ನಡಿಸುವುದಕ್ಕೂ ಸಮರ್ಥನು, ನೀನೂ ನಿನ್ನ ತಂದೆಯು, ನನ್ನ ಒಡೆಯನು ಆದ ದಾವೀದನೂ ಗೊತ್ತುಮಾಡಿದ ಕುಶಲಕರ್ಮಿಗಳೊಡನೆ ಅವನು ಕೆಲಸ ಮಾಡಲಿಸೊಲೊಮೋನನು ಪರದೆಯನ್ನು ನೀಲ, ಧೂಮ್ರ, ರಕ್ತವರ್ಣಗಳುಳ್ಳ ನಯವಾದ ನಾರಿನಿಂದ ಮಾಡಿಸಿದನು. ಅದರಲ್ಲಿ ಕೆರೂಬಿಗಳ ಕಸೂತಿಯನ್ನು ಹಾಕಿಸಿದನು.ಎಸ್ತೇರಳು2
ಆ ತೋಟದ ಆವರಣವು ಬಿಳೀ ನೂಲಿನ ಬಟ್ಟೆಗಳೂ, ನೀಲಿಬಟ್ಟೆಗಳೂ, ಧೂಮ್ರವರ್ಣವುಳ್ಳ ನಾರಿನ ದಾರಗಳು ಮತ್ತು ಅಮೃತಶಿಲೆಯ ಕಲ್ಲುಕಂಬಗಳಿಗೆ ಕಟ್ಟಲಾದ ಬೆಳ್ಳಿಯ ಉಂಗುರ ಇವುಗಳಿಂದ ಅಲಂಕೃತವಾಗಿತ್ತು. ಜರತಾರಿ ಕಸೂತಿ ಹಾಕಿರುವ ಬೆಳ್ಳಿ ಬಂಗಾರದ ಸುಖಾಸನಗಳು, ಅವುಗಳನ್ನು ಕೆಂಪು, ಬಿಳಿ, ಹಳದಿ ಮತ್ತು ಕಪ್ಪು ಬಣ್ಣಗಳುಳ್ಳ ಅಮೃತಶಿಲೆಗಳ ಕಲ್ಲುಗಳಿಂದ ರಚಿತವಾದ ನೆಲಗಟ್ಟಿನ ಮೇಲೆ ಇಡಲಾಗಿತ್ತು.ಮೊರ್ದೆಕೈಯಾದರೋ ನೀಲಿ ಮತ್ತು ಶುಭ್ರವರ್ಣಗಳುಳ್ಳ ರಾಜವಸ್ತ್ರಗಳನ್ನು ಧರಿಸಿಕೊಂಡು, ಬಂಗಾರದ ದೊಡ್ಡ ಕಿರೀಟವನ್ನು ಇಟ್ಟುಕೊಂಡು, ರಕ್ತವರ್ಣದ ನಾರಿನ ನಿಲುವಂಗಿಯನ್ನು ಹೊದ್ದುಕೊಂಡು ರಾಜಸನ್ನಿಧಿಯಿಂದ ಹೊರಟನು. ಶೂಷನ್ ಪಟ್ಟಣದಲ್ಲಿ ಸಂತೋಷದ ಆರ್ಭಟವು ಕೇಳಿಸಿತು.ಜ್ಞಾನೋಕ್ತಿಗಳು2
ಮನೆಯವರೆಲ್ಲರಿಗೂ ಸಕಲಾತಿಯನ್ನು ಹೊದಿಸಿರುವುದರಿಂದ, ಅವರ ವಿಷಯವಾಗಿ ಆಕೆಗೆ ಹಿಮದ ಭಯವಿಲ್ಲ.ತನಗಾಗಿ ರತ್ನಗಂಬಳಿಗಳನ್ನು ಮಾಡುವಳು, ಆಕೆಯ ಉಡುಪು ನಾರುಮಡಿ, ರಕ್ತಾಂಬರ.ಪರಮಗೀತೆ3
ಅದರ ಕಂಬಗಳನ್ನು ಬೆಳ್ಳಿಯಿಂದಲೂ, ಕುಳಿತು ಒರಗಿಕೊಳ್ಳುವ ಆಸನವನ್ನು ಬಂಗಾರದಿಂದಲೂ, ಆಸನವನ್ನು ಧೂಮ್ರವರ್ಣದ ವಸ್ತ್ರದಿಂದ ಮಾಡಿಸಿದನು. ಅದರ ಮಧ್ಯಭಾಗವನ್ನು ಯೆರೂಸಲೇಮಿನ ಪುತ್ರಿಯರು ತಮ್ಮ ಪ್ರೀತಿಗೆ ಗುರುತಾಗಿ ಕಸೂತಿಯಿಂದ ಅಲಂಕರಿಸಿದರು.ನಿನ್ನ ತುಟಿಗಳು ಕೆಂಪು ದಾರದಂತಿವೆ. ನಿನ್ನ ಬಾಯಿ ರಮ್ಯ. ಮುಸುಕಿನೊಳಗಿನ ನಿನ್ನ ಕೆನ್ನೆಯು ಹೋಳು ಮಾಡಿದ ದಾಳಿಂಬೆಯ ತಿರುಳಿನಂತಿದೆ.ಕರ್ಮೆಲ್ ಬೆಟ್ಟದಂತೆ ಗಂಭೀರವಾಗಿದೆ ನಿನ್ನ ಶಿರಸ್ಸು, ನಿನ್ನ ತಲೆಗೂದಲಿಗಿದೆ ಥಳಥಳಿಸುವ ನುಣುಪುಹೊಳಪಿನ ಬಣ್ಣ, ಅದರಲ್ಲಿದೆ ಅರಸನನ್ನೇ ಸೆರೆಹಿಡಿಯುವಂಥ ಆಕರ್ಷಣೆ.ಯೆಶಾಯನು2
“ಬನ್ನಿರಿ ವಾದಿಸುವ” ಎಂದು ಯೆಹೋವನು ಅನ್ನುತ್ತಾನೆ. “ನಿಮ್ಮ ಪಾಪಗಳು ಕಡುಕೆಂಪಾಗಿದ್ದರೂ, ಹಿಮದ ಹಾಗೆ ಬಿಳುಪಾಗುವವು. ಕಿರಮಂಜಿ ಬಣ್ಣವಾಗಿದ್ದರೂ ಉಣ್ಣೆಯಂತೆ ಬೆಳ್ಳಗಾಗುವವು.ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, ಎದೋಮಿನ ಬೊಚ್ರದಿಂದ ಬರುವ ಇವನು ಯಾರು? ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ.ಯೆರೆಮೀಯನು2
ಎಲೈ, ನಗರವೇ, ನೀನು ಸೂರೆಯಾಗುವಾಗ ಏನು ಮಾಡುವಿ? ನೀನು ರಕ್ತಾಂಬರವನ್ನು ಹೊದ್ದು ಸುವರ್ಣಾಭರಣಗಳಿಂದ ನಿನ್ನನ್ನು ಅಲಂಕರಿಸಿಕೊಂಡು, ನೀಲಾಂಜನ ಕಾಡಿಗೆಯಿಂದ ಕಣ್ಣುಗಳನ್ನು ಅಗಲಿಸಿಕೊಂಡು ಶೃಂಗರಿಸಿಕೊಂಡರೇನು, ನಿನ್ನನ್ನು ಶೃಂಗಾರಿಸಿಕೊಳ್ಳುವುದು ವ್ಯರ್ಥ. ನಿನ್ನೊಂದಿಗೆ ವ್ಯಭಿಚಾರ ಮಾಡಿದವರೇ ನಿನ್ನನ್ನು ಧಿಕ್ಕರಿಸಿ ನಿನ್ನ ಪ್ರಾಣವನ್ನೇ ಹುಡುಕುತ್ತಾರೆ.ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ.ಪ್ರಲಾಪಗಳು1
ಮೃಷ್ಟಾನ್ನವನ್ನು ಉಣ್ಣುತ್ತಿದ್ದವರು ಬೀದಿಗಳಲ್ಲಿ ದಿಕ್ಕುಗೆಟ್ಟು ಅಲೆಯುತ್ತಾರೆ; ಚಿಕ್ಕಂದಿನಿಂದಲೂ ಶ್ರೇಷ್ಠ ವಸ್ತ್ರವನ್ನು ಹೊದ್ದುಕೊಳ್ಳುತ್ತಿದ್ದವರಿಗೆ ತಿಪ್ಪೆಗಳನ್ನು ಅಪ್ಪಿಕೊಳ್ಳುವ ಗತಿ ಬಂತು.ಯೆಹೆಜ್ಕೇಲನು4
ಅವರೆಲ್ಲರೂ ನೇರಳೆ ಬಣ್ಣದಿಂದ ಹೊದಿಸಲ್ಪಟ್ಟ ಯೋಧರೂ, ಅಧಿಕಾರಸ್ಥರೂ, ಅಪೇಕ್ಷಿಸತಕ್ಕ ಎಲ್ಲಾ ಯುವಕರೂ, ಕುದರೆಗಳ ಮೇಲೆ ಸವಾರಿಮಾಡುವ ರಾಹುತರೂ ಆಗಿರುವವರನ್ನು ಮೋಹಿಸಿದಳು.ನಿನ್ನ ಹಾಯಿಯು ನಿನಗೆ ಧ್ವಜವಾಗಲೆಂದು ಅದನ್ನು ಐಗುಪ್ತದ ಕಸೂತಿಯ ನಾರು ಬಟ್ಟೆಯಿಂದ ಮಾಡಿದರು. ನಿನ್ನ ಮೇಲ್ಕಟ್ಟನ್ನು ಎಲೀಷ ಕರಾವಳಿಯ ಧೂಮ್ರ ರಕ್ತವರ್ಣಗಳಿಂದ ಚಿತ್ರಿತವಾಗಿದೆ.“ನಿನ್ನ ಕೈಕೆಲಸದ ವಸ್ತುಗಳು ಅಪಾರವಾಗಿದ್ದುದರಿಂದ ಅರಾಮಿನವರೂ ನಿನ್ನವರಾಗಿ ವ್ಯಾಪಾರಮಾಡಿ, ಕೆಂಪರಲು, ರಕ್ತಾಂಬರ, ಕಸೂತಿಯ ವಸ್ತ್ರ, ನಾರುಬಟ್ಟೆ, ಹವಳ, ಮಾಣಿಕ್ಯ ಮೊದಲಾದ ಸರಕುಗಳನ್ನು ನಿನಗೆ ತಂದು ಸುರಿದರು.ಅವರು ನಿನ್ನ ವ್ಯಾಪಾರಿಗಳಾಗಿ, ಉತ್ತಮ ಕಸೂತಿಯ ಧೂಮ್ರ ವರ್ಣದ ನಿಲುವಂಗಿ ಮೊದಲಾದ ಸರಕುಗಳನ್ನೂ, ಹಗ್ಗಗಳಿಂದ ಬಲವಾಗಿ ಬಿಗಿದ ವಿಚಿತ್ರ ವಸ್ತ್ರಗಳ ಪೆಟ್ಟಿಗೆಗಳನ್ನೂ ತಂದರು.ದಾನಿಯೇಲನು3
ಹೀಗಿರಲು ರಾಜನು ಗಟ್ಟಿಯಾಗಿ ಕೂಗಿಕೊಂಡು ಮಂತ್ರವಾದಿ, ಪಂಡಿತ, ಶಾಕುನಿಕರನ್ನು ಕರೆಯಿಸಿ ಬಾಬೆಲಿನ ಆ ವಿದ್ವಾಂಸರಿಗೆ, “ಯಾರು ಈ ಬರಹವನ್ನು ಓದಿ, ಇದರ ಅರ್ಥವನ್ನು ನನಗೆ ತಿಳಿಸುತ್ತಾನೋ ಅವನಿಗೆ ನಾನು ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ಅವನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.ನೀನು, ಗೂಢಾರ್ಥಗಳನ್ನು ವಿವರಿಸಿ ಕಠಿಣವಾದ ಸಂಗತಿಗಳನ್ನು ಬಿಡಿಸಿ ತಿಳಿಸುವವನಾಗಿದ್ದೀ ಎಂಬ ಸಮಾಚಾರವು ನನಗೆ ಮುಟ್ಟಿದೆ; ಈ ಬರಹವನ್ನು ಓದಿ ಇದರ ಅಭಿಪ್ರಾಯವನ್ನು ನನಗೆ ತಿಳಿಸಲು ನಿನ್ನಿಂದಾದರೆ ನಾನೀಗ ನಿನಗೆ ಧೂಮ್ರವಸ್ತ್ರವನ್ನು ಹೊದಿಸಿ, ನಿನ್ನ ಕೊರಳಿಗೆ ಚಿನ್ನದ ಹಾರವನ್ನು ಹಾಕಿಸಿ, ನಿನ್ನನ್ನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನನ್ನಾಗಿ ನೇಮಿಸುವೆನು” ಎಂದು ಹೇಳಿದನು.ಆಗ ಬೇಲ್ಶಚ್ಚರನು ಆಜ್ಞಾಪಿಸಲು ದಾನಿಯೇಲನಿಗೆ ಧೂಮ್ರವಸ್ತ್ರವನ್ನು ಹೊದಿಸಿ, ಅವನ ಕೊರಳಿಗೆ ಚಿನ್ನದ ಹಾರವನ್ನು ಹಾಕಿ, ಈತನು ರಾಜ್ಯದ ಮೂವರು ಮುಖ್ಯಾಧಿಕಾರಿಗಳಲ್ಲಿ ಒಬ್ಬನಾದನು ಎಂದು ಪ್ರಕಟಿಸಿದರು.ನಹೂಮನು1
ಶತ್ರುವಿನ ಶೂರರ ಗುರಾಣಿಯು ರಕ್ತವರ್ಣವಾಗಿದೆ, ಪರಾಕ್ರಮಿಗಳ ಉಡುಪುಗಳು ಕಿರಿಮಂಜಿನಂತೆ; ಅವನ ಸಿದ್ಧತೆಯ ದಿನಗಳಲ್ಲಿ ಸೈಪ್ರಸ್ ಮರದದಿಂದ ಮಾಡಿದ ಈಟಿಗಳು ಝಳಪಿಸುತ್ತವೆ ಮತ್ತು ಪಟ್ಟಣದಲ್ಲಿ ಅವರು ನಡೆದು ಹೋಗುವಾಗ ಅವರ ರಥಗಳ ಉಕ್ಕು ಥಳಥಳಿಸುತ್ತದೆ.ಮತ್ತಾಯನು1
ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,ಮಾರ್ಕನು2
ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.ಲೂಕನು1
“ಐಶ್ವರ್ಯವಂತನಾದ ಒಬ್ಬ ಮನುಷ್ಯನಿದ್ದನು. ಅವನು ಬೆಲೆಬಾಳುವ ನಯವಾದ ನಾರುಮಡಿ ಮುಂತಾದ ವಸ್ತ್ರಗಳನ್ನು ಧರಿಸಿಕೊಂಡು, ಪ್ರತಿದಿನವು ಸುಖಸಂತೋಷಗಳಲ್ಲಿ ಜೀವಿಸುತ್ತಿದ್ದನು.ಯೋಹಾನನು2
ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.ಅಪೊಸ್ತಲರ ಕೃತ್ಯಗಳು1
ನಮ್ಮ ಮಾತುಗಳನ್ನು ಕೇಳಿದವರಲ್ಲಿ ಲುದ್ಯಳೆಂಬ ಒಬ್ಬ ಸ್ತ್ರೀಯು ಇದ್ದಳು. ಆಕೆ ಧೂಮ್ರ (ನೇರಳೆ) ಬಣ್ಣದ ವಸ್ತ್ರಗಳನ್ನು ಮಾರುವವಳೂ, ಥುವತೈರ ಎಂಬ ಊರಿನವಳೂ, ದೈವಭಕ್ತಳೂ ಆಗಿದ್ದಳು. ಪೌಲನು ಹೇಳುವ ಮಾತುಗಳಿಗೆ ಗಮನಕೊಡುವುದಕ್ಕಾಗಿ ಕರ್ತನು ಆಕೆಯ ಹೃದಯವನ್ನು ತೆರೆದನು.ಇಬ್ರಿಯರಿಗೆ1
ಮೋಶೆಯು ದೇವರ ಪ್ರತಿಯೊಂದು ಆಜ್ಞೆಯನ್ನು ಧರ್ಮಶಾಸ್ತ್ರದ ಪ್ರಕಾರ ಜನರೆಲ್ಲರಿಗೆ ತಿಳಿಸಿದ ಮೇಲೆ, ಅವನು ನೀರು, ಕೆಂಪು ಉಣ್ಣೆ, ಹಿಸ್ಸೋಪುಕಡ್ಡಿ ಇವುಗಳೊಂದಿಗೆ ಹೋರಿಕರುಗಳ ಮತ್ತು ಹೋತಗಳ ರಕ್ತವನ್ನು ತೆಗೆದುಕೊಂಡು ಸುರುಳಿಗಳ ಮೇಲೆಯೂ ಎಲ್ಲಾ ಜನರ ಮೇಲೆಯೂ ಪ್ರೋಕ್ಷಿಸಿದನು.ಪ್ರಕಟಣೆ3
ಆ ಸ್ತ್ರೀಯು ಧೂಮ್ರವರ್ಣದ ವಸ್ತ್ರಗಳನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ, ರತ್ನ, ಮುತ್ತುಗಳಿಂದ ಅಲಂಕರಿಸಿಕೊಂಡಿದ್ದಳು. ಆಕೆಯು ತನ್ನ ಕೈಯಲ್ಲಿ ಅಸಹ್ಯವಾದವುಗಳಿಂದಲೂ ಮತ್ತು ತನ್ನ ಅಶುದ್ಧ ಜಾರತ್ವಗಳಿಂದಲೂ ತುಂಬಿದ ಚಿನ್ನದ ಬಟ್ಟಲನ್ನು ಹಿಡಿದುಕೊಂಡಿದ್ದಳು.ಚಿನ್ನ, ಬೆಳ್ಳಿ, ರತ್ನ, ಮುತ್ತು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಷ್ಮೆ, ಕಡುಗೆಂಪು ಉಡುಪು ಸಕಲ ವಿಧವಾದ ಮರಮುಟ್ಟು ಮತ್ತು ದಂತದ ಸಾಮಾನುಗಳು, ಬೆಲೆಬಾಳುವ ಮರ, ತಾಮ್ರ, ಕಬ್ಬಿಣ, ಚಂದ್ರಕಾಂತ ಶಿಲೆ. ಸುಗಂಧ ಸರಕುಗಳಾದ‘ಅಯ್ಯೋ ಅಯ್ಯೋ ನಯವಾದ ನಾರುಮಡಿಯನ್ನೂ, ಧೂಮ್ರವರ್ಣದ ವಸ್ತ್ರಗಳನ್ನೂ, ಕಡುಗೆಂಪು ಉಡುಪನ್ನೂ ಧರಿಸಿಕೊಂಡು, ಚಿನ್ನ, ರತ್ನ, ಮುತ್ತು ಇವುಗಳಿಂದ ತನ್ನನ್ನು ಅಲಂಕರಿಸಿಕೊಂಡಿದ್ದ ಈ ಮಹಾಪಟ್ಟಣಕ್ಕೆ ಎಂಥ ದುರ್ಗತಿ ಸಂಭವಿಸಿತು.’ಇದನ್ನೂ ನೋಡಿ
ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Human-made Things in the Bible © United Bible Societies 2025, adapted from R. Pritz, The Works of Their Hands: Man-made Things in the Bible © 2009 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು