ಉಡುಪು ಮತ್ತು ಅಲಂಕಾರ
ಒಳಂಗಿ ಮತ್ತು ಮೇಲಂಗಿ
ಹೀಬ್ರೂ kuttonet (ಒಳಂಗಿ), simlah (ಮೇಲಂಗಿ) · ಗ್ರೀಕ್ chitōn, himation · ಎರಡು ಮೂಲ ಉಡುಪುಗಳು
ಹೆಚ್ಚಿನ ಜನರು ಎರಡು ಮುಖ್ಯ ಉಡುಪುಗಳನ್ನು ಧರಿಸುತ್ತಿದ್ದರು. ಚರ್ಮಕ್ಕೆ ಅಂಟಿಕೊಂಡು ಒಳಂಗಿ — ಮೊಣಕಾಲಿನವರೆಗೆ ಅಥವಾ, ಹೆಚ್ಚಾಗಿ, ಹರಡಿನವರೆಗೆ ಬರುವ ಉಣ್ಣೆಯ ಅಥವಾ ನಾರಿನ ಅಂಗಿ, ಸಾಮಾನ್ಯವಾಗಿ ಸೊಂಟಕ್ಕೆ ನಡುಕಟ್ಟಿನಿಂದ ಕಟ್ಟಿದ್ದು; ಒಳಂಗಿ ಮಾತ್ರ ಧರಿಸಿದ ಮನುಷ್ಯನನ್ನು “ಬೆತ್ತಲೆ” ಎಂದು ಕರೆಯುತ್ತಿದ್ದರು. ಅದರ ಮೇಲೆ ಮೇಲಂಗಿ — ಒಂದು ಅಥವಾ ಎರಡೂ ಭುಜಗಳ ಮೇಲೆ ಹೊದ್ದುಕೊಳ್ಳುವ ದೊಡ್ಡ ಚೌಕದ ಬಟ್ಟೆ. ಆರಂಭದ ಕಾಲದಲ್ಲಿ ಗಂಡಸರು ಸೊಂಟಪಟ್ಟಿಯನ್ನೂ ಧರಿಸುತ್ತಿದ್ದರು. ಓಡುವ ಅಥವಾ ದೂರ ನಡೆಯುವ ಮೊದಲು ಗಂಡಸರು ಉದ್ದದ ಉಡುಪುಗಳನ್ನು ನಡುಕಟ್ಟಿಗೆ ಸಿಕ್ಕಿಸಿಕೊಳ್ಳುತ್ತಿದ್ದರು, ಎಲೀಯನು ಅಹಾಬನ ಮುಂದೆ ಓಡಿದಾಗ ಮಾಡಿದಂತೆ (1 ಅರಸುಗಳು 18:46).
ರಾತ್ರಿಯಲ್ಲಿ ಮೇಲಂಗಿ ಹೊದಿಕೆಯಾಗಿ ಬಳಕೆಯಾಗುತ್ತಿತ್ತು, ಆದ್ದರಿಂದ ಅಡವಾಗಿ ಇಟ್ಟುಕೊಂಡ ಮೇಲಂಗಿಯನ್ನು “ಸೂರ್ಯನು ಮುಳುಗುವಷ್ಟರಲ್ಲಿ” ಹಿಂದಕ್ಕೆ ಕೊಡಬೇಕಾಗಿತ್ತು (ವಿಮೋಚನಕಾಂಡ 22:26). ಅದರ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಹೊಲಿಯುತ್ತಿದ್ದರು (ಧರ್ಮೋಪದೇಶಕಾಂಡ 22:12). ಹನ್ನಳು ಬಾಲಕ ಸಮುವೇಲನಿಗೆ ಪ್ರತಿವರ್ಷ “ಒಂದು ಚಿಕ್ಕ ಅಂಗಿಯನ್ನು” ಹೊಲಿದು ತರುತ್ತಿದ್ದಳು (1 ಸಮುವೇಲನು 2:19). ಯೋಸೇಫನ “ಬಣ್ಣಬಣ್ಣದ ಒಂದು ನಿಲುವಂಗಿಯನ್ನು” ಒಂದು ಅಭಿಪ್ರಾಯದ ಪ್ರಕಾರ ತೋಳುಗಳಿದ್ದ ಉದ್ದ ಅಂಗಿಯಾಗಿತ್ತು, ಇನ್ನೊಂದರ ಪ್ರಕಾರ ಸಮೃದ್ಧವಾಗಿ ಅಲಂಕರಿಸಿದ ಒಳಂಗಿಯಾಗಿತ್ತು. ಸೈನಿಕರು ಯೇಸುವಿನ ಹೊಲಿಗೆಯಿಲ್ಲದ ಒಳಂಗಿಗಾಗಿ ಚೀಟು ಹಾಕಿದರು — “ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು” (ಯೋಹಾನನು 19:23–24) — ಮತ್ತು ಪೌಲನು ತಾನು ತ್ರೋವದಲ್ಲಿ ಬಿಟ್ಟು ಬಂದ ಮೇಲಂಗಿಯನ್ನು ಕೇಳಿದನು (2 ತಿಮೊಥೆಯನಿಗೆ 4:13).
ಮುಖ್ಯ ವಚನಗಳು
ಯೆಹೋವನ ಹಸ್ತವು ಎಲೀಯನ ಸಂಗಡ ಇದ್ದುದರಿಂದ ಅವನು ನಡುಕಟ್ಟಿಕೊಂಡು ಅಹಾಬನ ಮುಂದೆ ಓಡುತ್ತಾ ಇಜ್ರೇಲನ್ನು ಸೇರಿದನು.ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು. ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು. ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.ಇದನ್ನು ಹೆಸರಿಸುವ ಎಲ್ಲಾ ವಚನಗಳು (195)
ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.
ಆದಿಕಾಂಡ12
ಯೆಹೋವ ದೇವರು ಆದಾಮನಿಗೂ ಅವನ ಹೆಂಡತಿಗೂ ಚರ್ಮದ ಅಂಗಿಗಳನ್ನು ಮಾಡಿ ತೊಡಿಸಿದನು.ಆಗ ಶೇಮ್ ಮತ್ತು ಯೆಫೆತರು ಕಂಬಳಿಯನ್ನು ತೆಗೆದುಕೊಂಡು ತಮ್ಮಿಬ್ಬರ ಬೆನ್ನಿನ ಮೇಲೆ ಹಾಕಿಕೊಂಡು ಹಿಂಭಾಗವಾಗಿ ನಡೆದು ತಂದೆಗೆ ಹೊದಿಸಿ ಅವನ ಬೆತ್ತಲೆತನವನ್ನು ಮುಚ್ಚಿದರು. ಅವರು ಹಿಮ್ಮುಖರಾಗಿದ್ದುದ್ದರಿಂದ ತಂದೆಯು ಬೆತ್ತಲೆಯಾಗಿದ್ದದ್ದನ್ನು ನೋಡಲಿಲ್ಲ.ಆಗ ಯಾಕೋಬನು ತನ್ನ ಮನೆಯವರಿಗೂ ತನ್ನ ಸಂಗಡ ಇದ್ದವರೆಲ್ಲರಿಗೂ “ನಿಮ್ಮ ಮಧ್ಯಲ್ಲಿರುವ ಅನ್ಯ ದೇವರುಗಳನ್ನು ತೆಗೆದುಹಾಕಿ ನಿಮ್ಮನ್ನು ಶುದ್ಧಪಡಿಸಿಕೊಂಡು, ವಸ್ತ್ರಗಳನ್ನು ಬದಲಾಯಿಸಿರಿ,ಯೋಸೇಫನು ಇಸ್ರಾಯೇಲನಿಗೆ ಮುಪ್ಪಿನಲ್ಲಿ ಹುಟ್ಟಿದವನಾಗಿದ್ದುದರಿಂದ ಅವನನ್ನು ತನ್ನ ಎಲ್ಲಾ ಮಕ್ಕಳಿಗಿಂತ ಹೆಚ್ಚಾಗಿ ಪ್ರೀತಿಸುತ್ತಿದ್ದನು, ಅಲ್ಲದೆ ಅವನಿಗೆ ಬಣ್ಣಬಣ್ಣದ ಒಂದು ನಿಲುವಂಗಿಯನ್ನು ಹೊಲಿಸಿ ಕೊಟ್ಟಿದ್ದನು.ಯೋಸೇಫನು ತನ್ನ ಅಣ್ಣಂದಿರ ಹತ್ತಿರಕ್ಕೆ ಬಂದಾಗ ಅವರು ಅವನ ಮೇಲಿದ್ದ ನಿಲುವಂಗಿಯನ್ನು ತೆಗೆದರು.ಆ ಮೇಲೆ ಅವರು ಒಂದು ಹೋತವನ್ನು ಕೊಯ್ದು ಅದರ ರಕ್ತದಲ್ಲಿ ಯೋಸೇಫನ ಅಂಗಿಯನ್ನು ಅದ್ದಿ,ಆ ಬಣ್ಣದ ನಿಲುವಂಗಿಯನ್ನು ತಮ್ಮ ತಂದೆಯ ಬಳಿಗೆ ತಂದು, “ಇದು ನಮಗೆ ಸಿಕ್ಕಿತು. ಇದು ನಿನ್ನ ಮಗನ ಅಂಗಿಯೋ ಏನೋ ದಯವಿಟ್ಟು ನೋಡು” ಎಂದು ಅವನಿಗೆ ಹೇಳಿದರು.ಯಾಕೋಬನು ಅದರ ಗುರುತು ಹಿಡಿದು, “ಈ ಅಂಗಿ ನನ್ನ ಮಗನದೇ ಹೌದು, ಕಾಡುಮೃಗವು ಅವನನ್ನು ಕೊಂದು ತಿಂದು ಬಿಟ್ಟಿದೆ. ಯೋಸೇಫನನ್ನು ಸಂದೇಹವಿಲ್ಲದೆ ಸೀಳಿಹಾಕಿರಬೇಕು” ಎಂದು ಹೇಳಿದನು.ಯಾಕೋಬನು ತನ್ನ ಬಟ್ಟೆಗಳನ್ನು ಹರಿದುಕೊಂಡು ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗಾಗಿ ಬಹು ದಿನಗಳವರೆಗೂ ದುಃಖಪಟ್ಟನು.ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.ಸಿಕ್ಕಿದಾಗ, ಅವರು ದುಃಖಾಕ್ರಾಂತರಾಗಿ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಕತ್ತೆಗಳ ಮೇಲೆ ಚೀಲಗಳನ್ನು ಹೇರಿ ಪಟ್ಟಣಕ್ಕೆ ಹಿಂತಿರುಗಿ ಬಂದರು.ಇದಲ್ಲದೆ ಪ್ರತಿಯೊಬ್ಬನಿಗೂ ಶ್ರೇಷ್ಠ ವಸ್ತ್ರಗಳನ್ನು ಕೊಟ್ಟನು. ಬೆನ್ಯಾಮೀನನಿಗೋ ಮುನ್ನೂರು ಬೆಳ್ಳಿ ನಾಣ್ಯಗಳನ್ನೂ ಹಾಗೂ ಐದು ಶ್ರೇಷ್ಠ ವಸ್ತ್ರಗಳನ್ನೂ ಕೊಟ್ಟನು.ವಿಮೋಚನಕಾಂಡ20
ನಿಮ್ಮಲ್ಲಿನ ಪ್ರತಿಯೊಬ್ಬ ಸ್ತ್ರೀಯು ನೆರೆಹೊರೆಯ ಹೆಂಗಸರಿಂದಲೂ, ನಿಮ್ಮ ಮನೆಗಳ ಅತಿಥಿಗಳಾಗಿ ತಂಗಿರುವ ಹೆಂಗಸರಿಂದಲೂ ಬೆಳ್ಳಿ ಬಂಗಾರದ ಒಡವೆಗಳನ್ನೂ, ಬಟ್ಟೆಗಳನ್ನೂ ಕೇಳಿಕೊಳ್ಳಲಿ. ನೀವು ಅವುಗಳನ್ನು ನಿಮ್ಮ ಗಂಡು ಹೆಣ್ಣು ಮಕ್ಕಳಿಗೆ ತೊಡಿಸಿರಿ. ಹೀಗೆ ನೀವು ಐಗುಪ್ತ್ಯರನ್ನು ಸುಲಿಗೆ ಮಾಡಿಹೊರಟು ಬರುವಿರಿ” ಅಂದನು.ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.ಇಸ್ರಾಯೇಲರು ಮೋಶೆಯ ಮಾತಿನ ಮೇರೆಗೆ ಐಗುಪ್ತ್ಯರಿಂದ ಬೆಳ್ಳಿ ಬಂಗಾರದ ಒಡವೆಗಳನ್ನು, ಬಟ್ಟೆಗಳನ್ನು ಕೇಳಿ ಪಡೆದುಕೊಂಡರು.ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ, “ನೀನು ಜನರ ಬಳಿಗೆ ಹೋಗಿ, ಈ ದಿನ ಮತ್ತು ನಾಳೆ ಅವರನ್ನು ಶುದ್ಧಗೊಳಿಸು. ನನ್ನ ಬರುವಿಕೆಗಾಗಿ ಅವರನ್ನು ಸಿದ್ಧಗೊಳಿಸು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು,ಮೋಶೆ ಬೆಟ್ಟದಿಂದಿಳಿದು ಜನರ ಬಳಿಗೆ ಬಂದು, ಅವರನ್ನು ಶುದ್ಧಗೊಳಿಸಿದನು. ಅವರು ತಮ್ಮ ಬಟ್ಟೆಗಳನ್ನು ತೊಳೆದುಕೊಂಡು ಶುದ್ಧರಾದರು.ವಂಚನೆಯಾಯಿತೆಂಬ ಅನುಮಾನ ಹುಟ್ಟಿದ ಪ್ರತಿಯೊಂದರ ವಿಷಯದಲ್ಲಿಯೂ, ಅದು ಎತ್ತು, ಕತ್ತೆ, ಕುರಿ ಅಥವಾ ಬಟ್ಟೆಗಳ ವಿಷಯವಾದರೂ, ಕಳೆದುಕೊಂಡ ಬೇರೆ ಯಾವ ವಸ್ತುವಿನ ವಿಷಯವಾದರೂ, ಇಬ್ಬರು ಅದು ತಮ್ಮದೆಂದು ಹೇಳುವಾಗ ಆ ಇಬ್ಬರ ವ್ಯಾಜ್ಯವು ದೇವರ ಸನ್ನಿಧಿಗೆ ಬರಬೇಕು. ದೇವರು ಯಾರನ್ನು ದ್ರೋಹಿಯೆಂದು ನಿರ್ಣಯಿಸುತ್ತಾನೋ ಅವನು ಎರಡರಷ್ಟು ತನ್ನ ನೆರೆಯವನಿಗೆ ಕೊಡಬೇಕು.ನೀನು ಒಬ್ಬನ ಕಂಬಳಿಯನ್ನು ಅಡವು ಇಟ್ಟುಕೊಂಡರೆ ಸೂರ್ಯನು ಮುಳುಗುವಷ್ಟರಲ್ಲಿ ಅದನ್ನು ಹಿಂದಕ್ಕೆ ಕೊಡಬೇಕು.ಏಕೆಂದರೆ ಅದು ಅವನಿಗೆ ಒಂದೇ ಹೊದಿಕೆಯಾಗಿದೆ. ಅದೇ ಅವನ ಮೈಗೆ ಉಡುಪು. ಅವನು ಬೇರೆ ಯಾವುದನ್ನು ಹೊದ್ದುಕೊಂಡು ಮಲಗಬೇಕು? ಅವನು ನನಗೆ ಮೊರೆಯಿಟ್ಟರೆ ನಾನು ಕಿವಿಗೊಟ್ಟು ಕೇಳುವೆನು. ಏಕೆಂದರೆ ನಾನು ದಯಾಪರನು.ಅವರು ಮಾಡಬೇಕಾದ ವಸ್ತ್ರಗಳು ಯಾವುವೆಂದರೆ; ಎದೆಯ ಪದಕದ ಚೀಲ, ಏಫೋದ್, ನಿಲುವಂಗಿ, ಕಸೂತಿ ಕೆಲಸದ ಮೇಲಂಗಿ, ಮುಂಡಾಸ ಹಾಗೂ ನಡುಕಟ್ಟು ಇವುಗಳೇ. ನಿನ್ನ ಸಹೋದರನಾದ ಆರೋನನೂ ಅವನ ಮಕ್ಕಳೂ ನನ್ನ ಯಾಜಕರಾಗುವುದಕ್ಕೆ ಅವರಿಗೋಸ್ಕರ ಈ ದೀಕ್ಷಾವಸ್ತ್ರಗಳನ್ನು ಮಾಡಿಸಬೇಕು.ನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರದಿಂದ ದಾಳಿಂಬ ಹಣ್ಣುಗಳನ್ನು ಅವುಗಳ ನಡುವೆ ಚಿನ್ನದ ಗೆಜ್ಜೆಗಳನ್ನು ಹಾಕಿಸಬೇಕು.ಚಿನ್ನದ ಗೆಜ್ಜೆಯೂ ದಾಳಿಂಬೆಯೂ ಒಂದಾದ ಮೇಲೆ ಒಂದು ಆ ನಿಲುವಂಗಿಯ ಅಂಚಿನ ಸುತ್ತಲೂ ಇರಬೇಕು.ಆರೋನನು ಧರಿಸಬೇಕಾದ ಒಳ ಅಂಗಿಯನ್ನು ಹತ್ತಿಯ ನೂಲಿನಿಂದ ಕಸೂತಿ ಹಾಕಿಸಿ ನೇಯಿಸಬೇಕು. ಅವನ ಮುಂಡಾಸವನ್ನು ಹತ್ತಿಯ ನೂಲಿನಿಂದ ಮಾಡಿಸಬೇಕು. ಅವನ ನಡುಕಟ್ಟನ್ನು ಕಸೂತಿ ಕೆಲಸದಿಂದ ಮಾಡಿಸಬೇಕು.ಆರೋನನ ಮಕ್ಕಳಿಗೆ ತಕ್ಕ ಗೌರವಕ್ಕಾಗಿಯೂ, ಅಲಂಕಾರಕ್ಕಾಗಿಯೂ ಅವರಿಗೆ ಮೇಲಂಗಿಗಳನ್ನು, ನಡುಕಟ್ಟುಗಳನ್ನು ಮತ್ತು ಮುಂಡಾಸಗಳನ್ನು ಮಾಡಿಸಬೇಕು.ಆ ವಸ್ತ್ರಗಳನ್ನು ತೆಗೆದುಕೊಂಡು ಒಳ ಅಂಗಿಯನ್ನು ಏಫೋದ್ ಕವಚದ ಸಂಗಡ ತೊಟ್ಟುಕೊಳ್ಳತಕ್ಕ ನಿಲುವಂಗಿಯನ್ನೂ, ಏಫೋದ್ ಕವಚವನ್ನು ಎದೆಯ ಪದಕವನ್ನೂ ಆರೋನನಿಗೆ ತೊಡಿಸಿ ಏಫೋದ್ ಕವಚದ ಕಸೂತಿ ಹಾಕಿದ ನಡುಕಟ್ಟನ್ನು ಕಟ್ಟಿಸಿ,ತರುವಾಯ ಅವನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ಮೇಲಂಗಿಗಳನ್ನು ತೊಡಿಸಿನಿಲುವಂಗಿಯ ಅಂಚಿನ ಸುತ್ತಲೂ ನೀಲಿ, ನೇರಳೆ, ಕಡುಗೆಂಪು ವರ್ಣಗಳುಳ್ಳ ದಾರಗಳಿಂದ ದಾಳಿಂಬೆ ಹಣ್ಣಿನಂತೆ ಚೆಂಡುಗಳನ್ನು ಮಾಡಿದರು.ಮತ್ತು ಚೊಕ್ಕ ಬಂಗಾರದಿಂದ ಗೆಜ್ಜೆಗಳನ್ನು ಮಾಡಿ ನಿಲುವಂಗಿಯ ಅಂಚಿನಲ್ಲಿ ದಾಳಿಂಬೆ ಚೆಂಡುಗಳ ನಡುವೆ ಇಟ್ಟರು.ಚಿನ್ನದ ಗೆಜ್ಜೆಯೂ ದಾಳಿಂಬೆಯಂತಿರುವ ಚೆಂಡೂ ಒಂದಾದ ಮೇಲೆ ಒಂದು ದೇವರ ಸೇವೆಗಾಗಿ ಇರುವ ಆ ನಿಲುವಂಗಿಯ ಅಂಚಿನ ಸುತ್ತಲೂ ಇದ್ದವು. ಯೆಹೋವನು ಮೋಶೆಗೆ ಆಜ್ಞಾಪಿಸಿದಂತೆಯೇ ಅದನ್ನು ಮಾಡಿದನು.ಅವರು ಆರೋನನಿಗೂ ಅವನ ಮಕ್ಕಳಿಗೂ ನಯವಾದ ನಾರಿನಿಂದ ನೇಕಾರರ ಕೆಲಸದ ರೀತಿಯಲ್ಲಿ ಮೇಲಂಗಿಗಳನ್ನೂ,ಆ ನಂತರ ನೀನು ಅವನ ಮಕ್ಕಳನ್ನು ಬರಮಾಡಿಯಾಜಕಕಾಂಡ4
ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಆರೋನನಿಗೆ ನಿಲುವಂಗಿಯನ್ನು ತೊಡಿಸಿ, ನಡುಕಟ್ಟನ್ನು ಸುತ್ತಿ, ಮೇಲಂಗಿಯನ್ನು ತೊಡಿಸಿ, ಏಫೋದ್ ಕವಚವನ್ನು ಹಾಕಿಸಿ, ಕವಚದ ಮೇಲೆ ಸೊಗಸಾಗಿ ನೇಯ್ದ ನಡುಕಟ್ಟನ್ನು ಕಟ್ಟಿದನು, ಅದರಿಂದ ಕವಚವನ್ನು ಅವನಿಗೆ ಹೊದಿಸಿದನು.ಆ ಮೇಲೆ ಯೆಹೋವನು ಆಜ್ಞಾಪಿಸಿದಂತೆ ಮೋಶೆ ಆರೋನನ ಮಕ್ಕಳನ್ನು ಹತ್ತಿರಕ್ಕೆ ಕರೆದು, ಅವರಿಗೆ ನಿಲುವಂಗಿಗಳನ್ನು ತೊಡಿಸಿ, ನಡುಕಟ್ಟುಗಳನ್ನು ಸುತ್ತಿ, ತಲೆಗೆ ಪೇಟಗಳನ್ನು ಇಟ್ಟನು.ಮೋಶೆಯ ಅಪ್ಪಣೆಯ ಮೇರೆಗೆ ಅವರು ಸಮೀಪಕ್ಕೆ ಬಂದು ಸತ್ತವರು ತೊಟ್ಟುಕೊಂಡಿದ್ದ ನಿಲುವಂಗಿಗಳನ್ನು ತೆಗೆಯದೆ ಅವರ ಶವಗಳನ್ನು ಎತ್ತಿ ಪಾಳೆಯದ ಹೊರಕ್ಕೆ ಹೊತ್ತುಕೊಂಡು ಹೋದರು.ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು.ಅರಣ್ಯಕಾಂಡ2
“ನೀನು ಇಸ್ರಾಯೇಲರ ಸಂತತಿಯವರ ಸಂಗಡ ಮಾತನಾಡಿ, ಅವರು ತಮ್ಮ ವಸ್ತ್ರಗಳ ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಿಕೊಳ್ಳಬೇಕು, ಪ್ರತಿಯೊಂದು ಗೊಂಡೆಯೂ ಒಂದೊಂದು ನೀಲಿ ದಾರದಿಂದ ಕಟ್ಟಿರಬೇಕು ಎಂದು ಅವರಿಗೆ ಆಜ್ಞಾಪಿಸು.ಆ ಗೊಂಡೆಗಳ ಉಪಯೋಗವೇನೆಂದರೆ, ನೀವು ಅವುಗಳನ್ನು ನೋಡುವಾಗ ನನ್ನ ಆಜ್ಞೆಗಳನ್ನೆಲ್ಲಾ ನೆನಪಿಗೆ ತಂದುಕೊಂಡು ಅದನ್ನು ನಡೆಸಬೇಕು ಮತ್ತು ನೀವು ಪೂರ್ವದಲ್ಲಿ ನನಗೆ ದೇವದ್ರೋಹಿಗಳಾಗಿ ಮನಸ್ಸಿಗೂ, ಕಣ್ಣಿಗೂ ತೋರಿದಂತೆಧರ್ಮೋಪದೇಶಕಾಂಡ10
ಆ ನಲವತ್ತು ವರ್ಷ ನಿಮ್ಮ ಮೈಮೇಲಿದ್ದ ಉಡುಪು ಹಳೇಯದಾಗಲಿಲ್ಲ; ನಿಮ್ಮ ಕಾಲುಗಳು ಬಾತುಹೋಗಲಿಲ್ಲ.ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.ಅವಳು ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳಿನ ವರೆಗೆ ತಾಯಿ ಮತ್ತು ತಂದೆಗಳ ವಿಯೋಗದ ನಿಮಿತ್ತ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.ಅವನ ಕತ್ತೆಯಾಗಲಿ, ಬಟ್ಟೆಯಾಗಲಿ, ಅವನು ಕಳೆದುಕೊಂಡ ಯಾವ ವಸ್ತುವಾಗಲಿ ನಿಮಗೆ ಸಿಕ್ಕಿದರೆ ಹಾಗೆಯೇ ಮಾಡಬೇಕು; ನೋಡದಂತೆ ಇರಲೇ ಬಾರದು.ಸ್ತ್ರೀಯು ಪುರುಷವೇಷವನ್ನಾಗಲಿ ಅಥವಾ ಪುರುಷನು ಸ್ತ್ರೀವೇಷವನ್ನಾಗಲಿ ಹಾಕಿಕೊಳ್ಳಬಾರದು; ಹಾಗೆ ಮಾಡುವವರು ನಿಮ್ಮ ದೇವರಾದ ಯೆಹೋವನಿಗೆ ಅಸಹ್ಯರು.ನೀವು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಲ್ಲಿ ಗೊಂಡೆಗಳನ್ನು ಕಟ್ಟಬೇಕು.ತಂದೆಗೆ ಹೆಂಡತಿಯಾದವಳನ್ನು ಸಂಗಮಿಸಲೇ ಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವುದು.ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.“ಅವರು, ಮಲತಾಯಿಯನ್ನು ಸಂಗಮಿಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತನು” ಎಂದು ಹೇಳಲು ಜನರೆಲ್ಲರೂ, “ಆಮೆನ್” ಅನ್ನಬೇಕು.ನಲ್ವತ್ತು ವರ್ಷ ನಾನು ನಿಮ್ಮನ್ನು ಅರಣ್ಯದಲ್ಲಿ ನಡೆಸಿಕೊಂಡು ಬಂದಿದ್ದೇನೆ. ನಿಮ್ಮ ಮೈಮೇಲಿದ್ದ ಉಡುಪು ಹರಿಯಲ್ಲಿಲ್ಲ ಅಥವಾ ಕಾಲಿನಲ್ಲಿದ್ದ ಕೆರವಾಗಲಿ ಸವೆದು ಹೋಗಲಿಲ್ಲ;ಯೆಹೋಶುವನು4
ಆಗ ಯೆಹೋಶುವನೂ ಮತ್ತು ಇಸ್ರಾಯೇಲ್ಯರ ಹಿರಿಯರೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು, ತಲೆಯ ಮೇಲೆ ಭೂದಿಯನ್ನು ಹಾಕಿಕೊಂಡು ಸಾಯಂಕಾಲದವರೆಗೂ ಯೆಹೋವನ ಮಂಜೂಷದ ಮುಂದೆ ಬೋರಲು ಬಿದ್ದರು.ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.ನಾವು ದ್ರಾಕ್ಷಾರಸ ತುಂಬಿಸಿಕೊಂಡಿದ್ದ ಈ ಬುದ್ದಲಿಗಳು ಹೊಸದಾಗಿದ್ದವು; ಈಗ ಹರಿದುಹೋಗಿವೆ. ನಮ್ಮ ಬಟ್ಟೆಬರೆಗಳು ಹಾಗೂ ಕೆರಗಳು ದೀರ್ಘಪ್ರಯಾಣದಿಂದ ಸವೆದುಹೋಗಿವೆ’” ಎಂದು ವಿವರಿಸಿದರು.ಅವರನ್ನು ಆಶೀರ್ವದಿಸಿ “ನೀವು ಬಹಳ ಸಮೃದ್ಧಿಯುಳ್ಳವರಾಗಿ ದನಕುರಿ, ಬೆಳ್ಳಿಬಂಗಾರ, ತಾಮ್ರ, ಕಬ್ಬಿಣ, ವಸ್ತ್ರ, ಮೊದಲಾದ ವಸ್ತುಗಳನ್ನು ತೆಗೆದುಕೊಂಡು ನಿಮ್ಮನಿಮ್ಮ ನಿವಾಸಗಳಿಗೆ ಹೋಗಿರಿ. ನಿಮ್ಮ ಶತ್ರುಗಳಿಂದ ತೆಗೆದುಕೊಂಡ ಕೊಳ್ಳೆಯಲ್ಲಿ ನಿಮ್ಮ ಸಹೋದರರಿಗೂ ಪಾಲು ಕೊಡಿರಿ” ಎಂದನುನ್ಯಾಯಸ್ಥಾಪಕರು3
ಗಿದ್ಯೋನನ ಬಿನ್ನಹಕ್ಕೆ ಇಸ್ರಾಯೇಲ್ಯರು, “ನಾವು ಸಂತೋಷದಿಂದ ಕೊಡುವೆವು” ಎಂದು ಹೇಳಿ, ಅಲ್ಲಿ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ತಾವು ಕೊಳ್ಳೆಯಾಗಿ ತಂದ ಓಲೆಗಳನ್ನು ಇಟ್ಟುಬಿಟ್ಟರು.ಸಂಸೋನನು ಇವರಿಗೆ, “ನಾನು ನಿಮಗೆ ಒಂದು ಒಗಟನ್ನು ಹೇಳುತ್ತೇನೆ; ನೀವು ಔತಣದ ಏಳು ದಿನಗಳಲ್ಲಿಯೇ ಅದನ್ನು ಬಿಚ್ಚಿ ಅದರ ಅರ್ಥವನ್ನು ಹೇಳಿದರೆ ನಿಮಗೆ ಮೂವತ್ತು ದುಪ್ಪಟಿಗಳನ್ನೂ ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡುವೆನು.ನಿಮ್ಮಿಂದ ಆಗದೆ ಹೋದರೆ ನೀವು ನನಗೆ ಮೂವತ್ತು ನಾರು ಬಟ್ಟೆಯ ನಿಲುವಂಗಿಗಳನ್ನು (ದುಪ್ಪಟಿಗಳನ್ನೂ), ಮೂವತ್ತು ವಿಶೇಷವಸ್ತ್ರಗಳನ್ನೂ ಕೊಡಬೇಕು” ಅನ್ನಲು ಅವರು ಅವನಿಗೆ, “ನಿನ್ನ ಒಗಟನ್ನು ಹೇಳು, ಕೇಳೋಣ” ಎಂದು ಹೇಳಿದರು.ರೂತಳು3
ನೀನು ಸ್ನಾನಮಾಡಿ, ಸುಗಂಧತೈಲವನ್ನು ಹಚ್ಚಿಕೊಂಡು, ಶ್ರೇಷ್ಠವಸ್ತ್ರಗಳನ್ನು ಧರಿಸಿಕೊಂಡು ಅಲ್ಲಿಗೆ ಹೋಗು; ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವರೆಗೂ ಮರೆಯಾಗಿದ್ದು.ಹೆದರಿ ಆಕೆಯನ್ನು “ನೀನು ಯಾರು?” ಎಂದು ಕೇಳಲು ಆಕೆಯು “ನಾನು ನಿನ್ನ ದಾಸಿಯಾದ ರೂತಳು, ನೀನು ಸಮೀಪಬಂಧುವಾಗಿರುವುದರಿಂದ ನಿನ್ನ ಹೊದಿಕೆಯ ಅಂಚನ್ನು ನನ್ನ ಮೇಲೆ ಹಾಕು” ಅಂದಳು.ಆಗ ಅವನು ಆಕೆಗೆ “ನಿನ್ನ ಮೇಲ್ಹೊದಿಕೆಯನ್ನು ಹಾಸು” ಎಂದು ಹೇಳಿದನು, ಆಕೆ ಹಾಸಲು ಅದರಲ್ಲಿ ಆರು ಪಡಿ ಜವೆಗೋದಿಯನ್ನು ಹಾಕಿ ಹೊರಿಸಿ ಕಳುಹಿಸಿದನು. ಆಕೆಯು ಊರೊಳಕ್ಕೆ ಹೋದಳು.1 ಸಮುವೇಲನು7
ಅವನ ತಾಯಿಯು ಪ್ರತಿವರ್ಷವೂ ತನ್ನ ಗಂಡನ ಜೊತೆಯಲ್ಲಿ ಯಜ್ಞವನ್ನರ್ಪಿಸುವುದಕ್ಕೆ ಬರುವಾಗ ಒಂದು ಚಿಕ್ಕ ಅಂಗಿಯನ್ನು ಹೊಲಿದು ಅವನಿಗೆ ತಂದುಕೊಡುತ್ತಿದ್ದಳು.ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು.ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.ಜನರು ದಾವೀದನಿಗೆ “ನಿನ್ನ ಶತ್ರುವನ್ನು ನಿನ್ನ ಕೈಗೆ ಒಪ್ಪಿಸಿಕೊಡುವೆನು, ಆಗ ನೀನು ಅವನನ್ನು ಮನಸ್ಸಿಗೆ ಬಂದಂತೆ ನಡೆಸಬಹುದು ಎಂದು ಯೆಹೋವನು ನಿನಗೆ ಹೇಳಿದ ಮಾತು ನೆರವೇರುವ ದಿನ ಇದೇ” ಅಂದಾಗ ಅವನೆದ್ದು ಮೆಲ್ಲನೆ ಹೋಗಿ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡನು.ಅನಂತರ ಸೌಲನ ನಿಲುವಂಗಿಯ ತುದಿಯನ್ನು ಕತ್ತರಿಸಿದ್ದಕ್ಕಾಗಿ ಅವನ ಮನಸ್ಸಾಕ್ಷಿಯು ಅವನನ್ನು ಚುಚ್ಚತೊಡಗಿತು.ನನ್ನ ತಂದೆಯೇ, ಇಗೋ ನೋಡು, ನನ್ನ ಕೈಯಲ್ಲಿ ನಿನ್ನ ನಿಲುವಂಗಿಯ ತುಂಡು ಇದೆ. ನಾನು ನಿನ್ನನ್ನು ಕೊಲ್ಲದೆ, ನಿನ್ನ ನಿಲುವಂಗಿಯ ತುದಿಯನ್ನು ಕತ್ತರಿಸಿಕೊಂಡೆನಷ್ಟೇ ಇದರಿಂದ ನನ್ನಲ್ಲಿ ಯಾವ ದೋಷವೂ ಅಪರಾಧವೂ ಇರುವುದಿಲ್ಲ. ನಾನು ನಿನಗೆ ವಿರೋಧವಾಗಿ ದ್ರೋಹಮಾಡಲಿಲ್ಲ ಎಂದು ತಿಳಿದುಕೋ. ಆದರೂ ನೀನು ನನ್ನ ಪ್ರಾಣಕ್ಕೆ ಹೊಂಚು ಹಾಕುತ್ತಿರುವಿಯಲ್ಲಾ.ಅವನು ತಿರುಗಿ, “ಅವನ ರೂಪ ಹೇಗಿದೆ?” ಎಂದು ಕೇಳಲು ಆಕೆಯು, “ನಿಲುವಂಗಿಯನ್ನು ಉಟ್ಟುಕೊಂಡ ಒಬ್ಬ ಮುದುಕನು ಬರುತ್ತಿದ್ದಾನೆ” ಎಂದು ಹೇಳಿದಳು. ಅವನು ಸಮುವೇಲನೆ ಎಂದು ಸೌಲನು ತಿಳಿದು, ನೆಲದ ಮಟ್ಟಿಗೂ ಬೊಗ್ಗಿ ನಮಸ್ಕರಿಸಿದನು.2 ಸಮುವೇಲನು4
ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.ಆಕೆಯು ನಾನಾ ವರ್ಣವುಳ್ಳ ಒಂದು ನಿಲುವಂಗಿಯನ್ನು ಧರಿಸಿಕೊಂಡಿದ್ದಳು. ಕನ್ಯೆಯರಾದ ರಾಜಪುತ್ರಿಯರು ಇದೇ ತರಹದ ವಸ್ತ್ರಗಳನ್ನು ಹಾಕಿಕೊಳ್ಳುತ್ತಿದ್ದರು. ಆತನ ಸೇವಕರು ಆಕೆಯನ್ನು ಹೊರಗೆ ಕಳುಹಿಸಿ ಕದವನ್ನು ಮುಚ್ಚಿದನು.ತಾಮಾರಳು ತಲೆಯ ಮೇಲೆ ಬೂದಿ ಹಾಕಿಕೊಂಡು ನಿಲುವಂಗಿಯನ್ನು ಹರಿದುಕೊಂಡು ಕೈಗಳನ್ನು ತಲೆಯ ಮೇಲಿಟ್ಟು ಗೋಳಾಡುತ್ತಾ ಹೋದಳು.ಅವನು ಗುಡ್ಡದ ತುದಿಯಲ್ಲಿ ದೇವಾರಾಧನೆ ನಡೆಯುವ ಸ್ಥಳಕ್ಕೆ ಬಂದಾಗ ಅರ್ಕಿಯನಾದ ಹೂಷೈ ಎಂಬುವವನು ಅಂಗಿಯನ್ನು ಹರಿದುಕೊಂಡು, ತಲೆಯ ಮೇಲೆ ಮಣ್ಣು ಹಾಕಿಕೊಂಡು, ಅರಸನ ಬಳಿಗೆ ಬಂದನು.1 ಅರಸುಗಳು3
ಅವರೆಲ್ಲರೂ ಅವನಿಗೆ ವರ್ಷ ವರ್ಷ ಬೆಳ್ಳಿಬಂಗಾರದ ಸಾಮಾನು, ಉಡುಪು, ಯುದ್ಧಕ್ಕೆ ಬೇಕಾದ ಆಯುಧಗಳು, ಸುಗಂಧದ್ರವ್ಯ, ಕುದುರೆ ಮತ್ತು ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.ಒಂದು ದಿನ ಯಾರೊಬ್ಬಾಮನು ಯೆರೂಸಲೇಮಿನಿಂದ ಎಲ್ಲಿಗೋ ಹೋಗುತ್ತಿರುವಾಗ ಅಡವಿಯಲ್ಲಿ ಶಿಲೋವಿನವನಾದ ಅಹೀಯನೆಂಬ ಪ್ರವಾದಿಯು ಅವನಿಗೆ ಎದುರಾದನು. ಅವನು ಹೊಸ ಬಟ್ಟೆಯನ್ನು ಹೊದ್ದುಕೊಂಡಿದ್ದನು. ಅಲ್ಲಿ ಇವರಿಬ್ಬರ ಹೊರತಾಗಿ ಬೇರೆ ಯಾರೂ ಇರಲಿಲ್ಲ.ಆಗ ಅಹೀಯನು ತಾನು ಹೊದ್ದುಕೊಂಡಿದ್ದ ಹೊಸ ಬಟ್ಟೆಯನ್ನು ತೆಗೆದುಕೊಂಡು ಹರಿದು ಹನ್ನೆರಡು ತುಂಡು ಮಾಡಿದನು.1 ಪೂರ್ವಕಾಲವೃತ್ತಾಂತ1
ದಾವೀದನೂ ಮಂಜೂಷವನ್ನು ಹೊತ್ತ ಮತ್ತು ವಾದ್ಯನುಡಿಸುವ ಎಲ್ಲಾ ಲೇವಿಯರೂ, ಹೊರುವವರ ಮುಖ್ಯಸ್ಥನಾದ ಕೆನನ್ಯನೂ ನೂಲಿನ ನಿಲುವಂಗಿಗಳನ್ನು ಧರಿಸಿಕೊಂಡಿದ್ದನು. ದಾವೀದನು ಇದರ ಹೊರತಾಗಿ ನಾರಿನ ಏಫೋದನ್ನೂ ಧರಿಸಿಕೊಂಡಿದ್ದನು.2 ಪೂರ್ವಕಾಲವೃತ್ತಾಂತ1
ಅವರೆಲ್ಲರೂ ಅವನಿಗೆ ವರ್ಷ ವರ್ಷವೂ ಬೆಳ್ಳಿ ಬಂಗಾರದ ಸಾಮಾನು, ಉಡುಪು, ಯುದ್ಧಸಲಕರಣಿಗಳು, ಶಸ್ತಾಸ್ತ್ರಗಳು, ಸುಗಂಧದ್ರವ್ಯ, ಕುದುರೆ, ಹೇಸರಗತ್ತೆ ಇವುಗಳನ್ನು ಕಾಣಿಕೆಯಾಗಿ ಕೊಡುತ್ತಿದ್ದರು.ಎಜ್ರನು3
ಅವರು ತಮ್ಮ ಸಾಮರ್ಥ್ಯಕ್ಕನುಸಾರವಾಗಿ ಕಟ್ಟಡದ ಭಂಡಾರಕ್ಕೆ ಕೊಟ್ಟದ್ದು ಅರುವತ್ತೊಂದು ಸಾವಿರ ಬಂಗಾರದ ಪವನುಗಳು, ಎರಡು ಲಕ್ಷದ ಐವತ್ತು ಸಾವಿರ ತೊಲಾ ಬೆಳ್ಳಿ ಮತ್ತು ನೂರು ಯಾಜಕವಸ್ತ್ರಗಳು.ಈ ವರ್ತಮಾನವನ್ನು ಕೇಳಿದೊಡನೆ ನಾನು ಬಟ್ಟೆಗಳನ್ನು ಮತ್ತು ಮೇಲಂಗಿಗಳನ್ನು ಹರಿದುಕೊಂಡು ತಲೆಯ ಮತ್ತು ಗಡ್ಡದ ಕೂದಲುಗಳನ್ನು ಕಿತ್ತುಕೊಂಡು, ಸ್ತಬ್ಧನಾಗಿ ಕುಳಿತುಕೊಂಡೆನು.ನಾನು ಸಂಧ್ಯಾ ನೈವೇದ್ಯ ಸಮರ್ಪಣೆಯ ಹೊತ್ತಿನವರೆಗೂ ಸ್ತಬ್ಧನಾಗಿ ಕುಳಿತುಕೊಂಡಿದ್ದೆನು. ಆ ಮೇಲೆ ದೇಹದಂಡನೆಮಾಡುವುದನ್ನು ಬಿಟ್ಟು ಹರಿದ ಬಟ್ಟೆಮೇಲಂಗಿಗಳಿಂದ ಕೂಡಿದವನಾಗಿಯೇ ಮೊಣಕಾಲೂರಿ ನನ್ನ ದೇವರಾದ ಯೆಹೋವನ ಕಡೆಗೆ ಕೈಗಳನ್ನೆತ್ತಿ ಪ್ರಾರ್ಥಿಸಿದ್ದೇನೆಂದರೆ:ನೆಹೆಮೀಯನು3
ಗೋತ್ರಪ್ರಧಾನರಲ್ಲಿ ಕೆಲವರು ಕೆಲಸಕಾರ್ಯಗಳಿಗಾಗಿ ಧನ ಸಹಾಯ ಮಾಡಿದರು. ತಿರ್ಷಾತಾ ಅನ್ನಿಸಿಕೊಳ್ಳುವ ದೇಶಾಧಿಪತಿಯು ಭಂಡಾರಕ್ಕೆ ಕೊಟ್ಟದ್ದು ಸಾವಿರ ಬಂಗಾರದ ನಾಣ್ಯಗಳು, ಐವತ್ತು ಬೋಗುಣಿಗಳು, ಐನೂರಮೂವತ್ತು ಯಾಜಕವಸ್ತ್ರಗಳು.ಉಳಿದ ಜನರು ಕೊಟ್ಟದ್ದು ಇಪ್ಪತ್ತು ಸಾವಿರ ಬಂಗಾರದ ನಾಣ್ಯಗಳು, ಒಂದು ಲಕ್ಷ ತೊಲಾ ಬೆಳ್ಳಿ, ಅರುವತ್ತೇಳು ಯಾಜಕವಸ್ತ್ರಗಳನ್ನು ನೀಡಿದರು.ನಲ್ವತ್ತು ವರ್ಷ ಅವರನ್ನು ಅರಣ್ಯದಲ್ಲಿ ಸಾಕುತ್ತಾ ಇದ್ದೆ. ಅವರಿಗೆ ಯಾವ ಕೊರತೆಯೂ ಆಗಲಿಲ್ಲ. ಅವರ ಬಟ್ಟೆಗಳು ಹರಿದುಹೋಗಲಿಲ್ಲ, ಅವರ ಕಾಲುಗಳು ನೋವಿನಿಂದ ಊದಿಕೊಳ್ಳಲಿಲ್ಲ.ಯೋಬನು5
ಆಗ ಯೋಬನು ಎದ್ದು ಮೇಲಂಗಿಯನ್ನು ಹರಿದುಕೊಂಡು, ತಲೆ ಬೋಳಿಸಿಕೊಂಡು ನೆಲದ ಮೇಲೆ ಅಡ್ಡಬಿದ್ದು ದೇವರನ್ನು ಆರಾಧಿಸಿ,ಅವರು ದೂರದಿಂದ ಕಣ್ಣೆತ್ತಿ ನೋಡಿ ಯೋಬನ ಗುರುತನ್ನು ಹಿಡಿಯಲಾರದೆ ಹೋದ ಕಾರಣ ಗಟ್ಟಿಯಾಗಿ ಅತ್ತು ತಮ್ಮ ತಮ್ಮ ಮೇಲಂಗಿಗಳನ್ನು ಹರಿದುಕೊಂಡು, ಮಣ್ಣನ್ನು ಮೇಲಕ್ಕೆ ತೂರಿ ತಮ್ಮ ತಲೆಯ ಮೇಲೆ ಸುರಿದುಕೊಂಡರು.ನೀನು ನನ್ನನ್ನು ಗುಂಡಿಯಲ್ಲಿ ಮುಳುಗಿಸಿ, ನನ್ನ ಬಟ್ಟೆಗಳಿಗೆ ನಾನು ಅಸಹ್ಯನಾಗುವಂತೆ ಮಾಡುವಿ.ನಾನು ಧರ್ಮವನ್ನು ಧರಿಸಿಕೊಂಡೆನು, ಧರ್ಮವು ನನ್ನನ್ನು ಧರಿಸಿತು. ನನ್ನ ನ್ಯಾಯವೇ ನನಗೆ ನಿಲುವಂಗಿಯೂ, ಕಿರೀಟವೂ ಆಗಿತ್ತು.ನನ್ನ ಬಟ್ಟೆಯು ರೋಗದ ಅಧಿಕ ಬಲದಿಂದ ಕೆಟ್ಟುಹೋಗಿ; ಅಂಗಿಯ ಕೊರಳ ಪಟ್ಟಿಯ ಹಾಗೆ ನನ್ನನ್ನು ಸುತ್ತಿಕೊಂಡಿದೆ.ಕೀರ್ತನೆಗಳು2
ಬೆಳಕನ್ನು ವಸ್ತ್ರದಂತೆ ಹೊದ್ದುಕೊಂಡಿರುವೆ; ಆಕಾಶವನ್ನು ಗುಡಾರದಂತೆ ಎತ್ತಿ ಹರಡಿರುವೆ.ಮಾನಭಂಗವೇ ನನ್ನ ವಿರೋಧಿಗಳಿಗೆ ವಸ್ತ್ರವಾಗಲಿ; ನಾಚಿಕೆಯೇ ಅವರ ಹೊದಿಕೆಯಾಗಲಿ.ಜ್ಞಾನೋಕ್ತಿಗಳು2
ಆಕಾಶಕ್ಕೆ ಏರಿ ಇಳಿದಿರುವವನಾರು? ಮುಷ್ಠಿಯಲ್ಲಿ ಗಾಳಿಯನ್ನು ಕೂಡಿಸಿರುವವರು ಯಾರು? ತನ್ನ ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿರುವವರು ಯಾರು? ಭೂಮಿಯ ಎಲ್ಲೆಗಳನ್ನೆಲ್ಲಾ ಸ್ಥಾಪಿಸಿರುವವರು ಯಾರು? ಅವನ ಹೆಸರೇನು? ಅವನ ಮಗನ ಹೆಸರೇನು? ನೀನೇ ಬಲ್ಲವನು.ಹಚ್ಚಡಗಳನ್ನು ನೆಯ್ದು ಮಾರಾಟಮಾಡುವಳು, ನಡುಕಟ್ಟುಗಳನ್ನು ವರ್ತಕನಿಗೆ ಒದಗಿಸುವಳು.ಪರಮಗೀತೆ2
ವಧುವೇ, ನಿನ್ನ ತುಟಿಗಳು ಜೇನುಗರೆಯುತ್ತವೆ; ಜೇನೂ ಮತ್ತು ಹಾಲೂ ನಿನ್ನ ನಾಲಿಗೆಯ ಅಡಿಯಲ್ಲಿವೆ, ನಿನ್ನ ಉಡುಪುಗಳು ಲೆಬನೋನಿನ ಸುಗಂಧ ಸೂಸುತ್ತಿದೆ.“ನನ್ನ ಒಳಂಗಿಯನ್ನು ತೆಗೆದೆನಲ್ಲಾ, ಅದನ್ನು ಹೇಗೆ ಹಾಕಿಕೊಂಡೇನು? ಪಾದಗಳನ್ನು ತೊಳೆದುಕೊಂಡೆನಲ್ಲಾ, ಅವುಗಳನ್ನು ಹೇಗೆ ಕೊಳೆಮಾಡಿಕೊಳ್ಳಲಿ?” ಎಂದು ನಾನು ಅಂದುಕೊಂಡಾಗ,ಯೆಶಾಯನು10
ಆ ದಿನದಲ್ಲಿ ಒಬ್ಬನು ತನ್ನ ಸಹೋದರನನ್ನು ತಂದೆಯ ಮನೆಯಲ್ಲಿ ಹಿಡಿದು, ‘ನಿನಗೆ ನಿಲುವಂಗಿ ಇದೆ. ನೀನು ನಮಗೆ ಒಡೆಯನಾಗಬೇಕು. ಹಾಳಾದ ಈ ಪಟ್ಟಣವು ನಿನ್ನ ಕೈಕೆಳಗಿರಲಿ ತಂದೆಯ ಮನೆಯೊಳಗೆ ಅಣ್ಣನನ್ನು ಬಲವಂತ ಮಾಡಲು ಅಣ್ಣನು ದೇಶದ ನಿರರ್ಥಕ ವ್ರಣವೈದ್ಯನಾಗುವುದಕ್ಕೆ ನನಗೆ ಇಷ್ಟವಿಲ್ಲ’ ಎಂದು ನಿರಾಕರಿಸುವನು.ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.ಹಬ್ಬದ ಉಡುಗೆ-ತೊಡುಗೆ, ಮೇಲಂಗಿ, ಶಾಲು, ಕೈಚೀಲ,ಕೈಗನ್ನಡಿ, ನಾರುಮಡಿ, ಮುಡಿ ಮುಕುಟ, ಮೇಲ್ಹೊದಿಕೆ ಈ ಸೊಗಸಾದ ಭೂಷಣಗಳನ್ನೆಲ್ಲಾ ತೆಗೆದುಹಾಕುವನು.ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.ನಿನ್ನ ನಿಲುವಂಗಿಯನ್ನು ಅವನಿಗೆ ತೊಡಿಸಿ, ನಿನ್ನ ನಡುಕಟ್ಟನ್ನು ಅವನಿಗೆ ಕಟ್ಟಿ, ನಿನ್ನ ಅಧಿಕಾರವನ್ನು ಅವನ ಕೈಗೆ ಕೊಡುವೆನು; ಅವನು ಯೆರೂಸಲೇಮಿನ ನಿವಾಸಿಗಳಿಗೂ, ಯೆಹೂದದ ಮನೆತನದವರಿಗೂ ತಂದೆಯಾಗುವನು.ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.ಯೆರೆಮೀಯನು3
ಇದಲ್ಲದೆ ನಿರ್ದೋಷಿಗಳಾದ ದರಿದ್ರರ ಪ್ರಾಣರಕ್ತವು ನಿನ್ನ ನೆರಿಗೆಯಲ್ಲಿ ಅಂಟಿಕೊಂಡಿದೆ; ಇವರು ಕನ್ನ ಕೊರೆಯುವುದನ್ನು ಕಂಡೆನು ಎಂದು ನೀವು ನೆವ ಹೇಳುವಂತಿಲ್ಲ, ನಿನ್ನ ಈ ಎಲ್ಲಾ ದುರಭ್ಯಾಸಗಳ ದೆಸೆಯಿಂದ ನಿನ್ನನ್ನು ದಂಡಿಸುವೆನು.“ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ, ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು.ನಿನ್ನ ಉಡುಗೆಯನ್ನು ನಿನ್ನ ಕಣ್ಣಮುಂದೆಯೇ ಕೀಳಿಸುವೆನು, ನಿನಗೆ ಅವಮಾನವಾಗುವುದು.ಪ್ರಲಾಪಗಳು1
ಆಕೆಯ ನೆರಿಗೆಯು ಹೊಲಸಾಗಿತ್ತು, ಮುಂದಿನ ಗತಿಯೇನೆಂದು ಮನಸ್ಸಿಗೆ ತರಲಿಲ್ಲ; ಆದಕಾರಣ ವಿಪರೀತ ಹೀನಸ್ಥಿತಿಯಲ್ಲಿ ಬಿದ್ದು ಬಿಟ್ಟಳು; ಸಂತೈಸುವವರೇ ಇಲ್ಲ. “ಯೆಹೋವನೇ, ನನ್ನ ಕಷ್ಟವನ್ನು ಲಕ್ಷಿಸು; ನನ್ನ ಶತ್ರು ಹೆಚ್ಚಳಪಡುತ್ತಾನಲ್ಲಾ” ಎಂದು ಮೊರೆಯಿಡುತ್ತಾಳೆ.ಯೆಹೆಜ್ಕೇಲನು3
ಆಗ ಕಡೆಯ ಭಾಗದಲ್ಲಿ ಉಳಿಸಿಕೊಂಡ ಕೆಲವು ಕೂದಲನ್ನು ನಿನ್ನ ಮೇಲಂಗಿಯ ಅಂಚಿನಲ್ಲಿ ಕಟ್ಟು.ನಾನು ಹಾದುಹೋಗುತ್ತಾ ನಿನ್ನನ್ನು ನೋಡಲು ಇಗೋ, ನೀನು ಮದುವೆಗೆ ಸಿದ್ಧಳಾಗಿದ್ದಿ; ಆಗ ನಾನು ನನ್ನ ಹೊದಿಕೆಯನ್ನು ನಿನಗೆ ಹೊದಿಸಿ ನಿನ್ನ ಮಾನವನ್ನು ಕಾಪಾಡಿದೆನು; ಇದಲ್ಲದೆ ನಾನು ನಿನಗೆ ಪ್ರಮಾಣಮಾಡಿ ಒಡಂಬಡಿಕೆ ಮಾಡಿಕೊಂಡೆ ಆದುದರಿಂದ ನೀನು ನನ್ನವಳಾದೆ’” ಇದು ಕರ್ತನಾದ ಯೆಹೋವನ ನುಡಿ.ಆಗ ಸಮುದ್ರದ ಸುತ್ತುಮುತ್ತಲಿನ ಸಕಲ ಅರಸರು ತಮ್ಮ ಸಿಂಹಾಸನದಿಂದ ಇಳಿದು, ನಿಲುವಂಗಿಗಳನ್ನು ತೆಗೆದುಹಾಕಿ, ವಿಚಿತ್ರವಾಗಿ ಹೊಲೆದ ತಮ್ಮ ಕಸೂತಿಯ ಬಟ್ಟೆಯನ್ನು ಕಿತ್ತುಹಾಕಿ, ತತ್ತರವನ್ನೇ ಹೊದ್ದುಕೊಂಡು, ನೆಲದ ಮೇಲೆ ಕುಳಿತು, ಕ್ಷಣ ಕ್ಷಣಕ್ಕೂ ನಡುಗುತ್ತಾ, ನಿನ್ನ ವಿಷಯವಾಗಿ ಆಶ್ಚರ್ಯಪಡುವರು.ದಾನಿಯೇಲನು2
ಅದರಂತೆ ಶಲ್ಯ, ಇಜಾರು, ಮುಂಡಾಸ ಮೊದಲಾದ ಉಡುಪನ್ನು ಧರಿಸಿಕೊಂಡಿದ್ದ ಹಾಗೆಯೇ ಅವರನ್ನು ಕಟ್ಟಿ ಧಗಧಗನೆ ಉರಿಯುವ ಬೆಂಕಿಯೊಳಗೆ ಹಾಕಿಬಿಟ್ಟರು.ಅಲ್ಲಿ ಕೂಡಿದ್ದ ಉಪರಾಜ, ನಾಯಕ, ದೇಶಾಧಿಪತಿ, ಮಂತ್ರಿಗಳು ಅವರನ್ನು ನೋಡಿ ಅವರ ಮೇಲೆ ಬೆಂಕಿಯ ಅಧಿಕಾರವು ನಡೆದಿಲ್ಲ, ಅವರ ತಲೆಕೂದಲೂ ಸುಟ್ಟಿಲ್ಲ, ಅವರ ಶಲ್ಯಗಳಿಗೆ ವಿಕಾರವಿಲ್ಲ, ಬೆಂಕಿಯ ವಾಸನೆಯೇ ಮುಟ್ಟಿಲ್ಲ” ಎಂದು ತಿಳಿದುಕೊಂಡರು.ಮೀಕನು1
ನನ್ನ ಜನರೋ ಕೆಲವು ಕಾಲದಿಂದ ಶತ್ರುಗಳಾಗಿ ಎದ್ದಿದ್ದಾರೆ. ಜಗಳವನ್ನೊಲ್ಲದೆ ನಿರ್ಭಯವಾಗಿ ಹೋಗಿ ಬರುವವರ ಮೇಲಂಗಿಯನ್ನು ಕಿತ್ತುಕೊಳ್ಳುತ್ತೀರಿ.ನಹೂಮನು1
ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, “ಇಗೋ ನಾನು ನಿನಗೆ ವಿರುದ್ಧವಾಗಿದ್ದೇನೆ, ನಿನ್ನ ನೆರಿಗೆಯನ್ನು ನಿನ್ನ ಕಣ್ಣ ಮುಂದೆಯೇ ಕೀಳಿಸುವೆನು, ನಿನ್ನ ಬೆತ್ತಲೆತನವನ್ನು ಜನಾಂಗಗಳಿಗೆ ತೋರಿಸುವೆನು, ನಿನ್ನ ಅವಮಾನವನ್ನು ರಾಜ್ಯಗಳಿಗೆ ತೋರುವಂತೆ ಮಾಡುವೆನು.ಹಗ್ಗಾಯನು1
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.ಜೆಕರ್ಯನು2
ದೇವದೂತನು ತನ್ನ ಸೇವಕರಿಗೆ, “ಇವನ ಕೊಳೆಬಟ್ಟೆಗಳನ್ನು ತೆಗೆದುಬಿಡಿರಿ” ಎಂದು ಅಪ್ಪಣೆ ಕೊಟ್ಟು ಅವನಿಗೆ, “ಇಗೋ, ನಿನ್ನ ದೋಷವನ್ನು ನಿನ್ನಿಂದ ತೊಲಗಿಸಿದ್ದೇನೆ, ನಿನಗೆ ಶ್ರೇಷ್ಠವಸ್ತ್ರವನ್ನು ತೊಡಿಸುವೆನು” ಎಂದು ಹೇಳಿದನು.ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ಆ ಕಾಲದಲ್ಲಿ ಜನಾಂಗಗಳ ವಿವಿಧ ಭಾಷೆಗಳವರಾದ ಹತ್ತು ಜನರು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವು ನಿಮ್ಮೊಂದಿಗೆ ಬರುವೆವು, ಏಕೆಂದರೆ ದೇವರು ನಿಮ್ಮ ಸಂಗಡ ಇದ್ದಾನೆಂಬ ಸುದ್ದಿಯು ನಮ್ಮ ಕಿವಿಗೆ ಬಿದ್ದಿದೆ’” ಎಂದು ಹೇಳುವರು.ಮತ್ತಾಯನು14
ನಿನ್ನ ಸಂಗಡ ವ್ಯಾಜ್ಯವಾಡಿ ನಿನ್ನ ಒಳಂಗಿಯನ್ನು ತೆಗೆದುಕೊಳ್ಳಬೇಕೆಂದಿರುವವನಿಗೆ ಮೇಲಂಗಿಯನ್ನೂ ಬಿಟ್ಟುಕೊಡು.ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.ಆಗ ಹನ್ನೆರಡು ವರ್ಷದಿಂದ ರಕ್ತಕುಸುಮ ರೋಗವಿದ್ದ ಒಬ್ಬ ಹೆಂಗಸು,“ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆ ಎಂದು ಮನಸ್ಸಿನಲ್ಲಿ” ಅಂದುಕೊಂಡು ಹಿಂದಿನಿಂದ ಬಂದು ಯೇಸುವಿನ ಉಡುಪಿನ ಅಂಚನ್ನು ಮುಟ್ಟಿದಳು.ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.ಅವರು ಆತನನ್ನು ನಿನ್ನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಬೇಡಿಕೊಂಡರು, ಮತ್ತು ಮುಟ್ಟಿದವರೆಲ್ಲರು ಸ್ವಸ್ಥರಾದರು.ಅಲ್ಲಿ ಆತನು ಅವರ ಮುಂದೆ ರೂಪಾಂತರಗೊಂಡನು. ಆತನ ಮುಖವು ಸೂರ್ಯನ ಹಾಗೆ ಪ್ರಕಾಶಿಸಿತು. ಆತನ ವಸ್ತ್ರಗಳು ಬೆಳಕಿನಂತೆ ಬೆಳ್ಳಗಾದವು.ಕತ್ತೆಯನ್ನೂ ಮರಿಯನ್ನೂ ತಂದು ಅವುಗಳ ಮೇಲೆ ತಮ್ಮ ಬಟ್ಟೆಗಳನ್ನು ಹಾಕಲು ಯೇಸು ಹತ್ತಿ ಕುಳಿತುಕೊಂಡನು.ಆಗ ಜನರ ಗುಂಪಿನಲ್ಲಿ ಬಹಳ ಮಂದಿ ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು; ಬೇರೆ ಕೆಲವರು ಮರಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು.ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂತಿರುಗಿ ಹೋಗದಿರಲಿ.ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.ಬಳಿಕ ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಿಗಾಗಿ ಚೀಟು ಹಾಕಿ ಪಾಲುಮಾಡಿಕೊಂಡರು;ಮಾರ್ಕನು15
“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.ಆ ಹೆಂಗಸು ಯೇಸುವಿನ ಸಮಾಚಾರವನ್ನು ಕೇಳಿದ್ದರಿಂದ, “ನಾನು ಆತನ ಉಡುಪನ್ನು ಮುಟ್ಟಿದರೆ ಸಾಕು, ಸ್ವಸ್ಥಳಾಗುವೆನು” ಎಂದು ಆಲೋಚಿಸಿ ಗುಂಪಿನಲ್ಲಿ ಹಿಂದಿನಿಂದ ಬಂದು ಆತನ ಉಡುಪನ್ನು ಮುಟ್ಟಿದಳು.ಆ ಕ್ಷಣವೇ ಯೇಸು ತನ್ನಿಂದ ಶಕ್ತಿಯು ಹೊರಟಿತೆಂದು ತನ್ನಲ್ಲಿ ತಿಳಿದುಕೊಂಡು ಗುಂಪಿನಲ್ಲಿ ಹಿಂತಿರುಗಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಲುಚಪ್ಪಲಿಗಳನ್ನು ಹಾಕಿಕೊಳ್ಳಬಹುದು, ಆದರೆ ಎರಡು ಅಂಗಿಗಳನ್ನು ಧರಿಸಬೇಡಿರಿ” ಎಂದು ಅಪ್ಪಣೆಕೊಟ್ಟನು.ಆತನು ಯಾವ ಗ್ರಾಮಗಳಿಗೆ, ಯಾವ ಊರು ಹಳ್ಳಿಗಳಿಗೆ ಹೋದರೂ ಅಲ್ಲಿಯವರು ರೋಗಿಗಳನ್ನು ತಂದು ಸಂತೆಬೀದಿಗಳಲ್ಲಿ ಇಟ್ಟು, ಆತನ ಉಡುಪಿನ ಅಂಚನ್ನಾದರೂ ಮುಟ್ಟಗೊಡಿಸಬೇಕೆಂದು ಆತನನ್ನು ಬೇಡಿಕೊಂಡರು; ಆತನನ್ನು ಮುಟ್ಟಿದವರೆಲ್ಲರೂ ಗುಣಹೊಂದಿದರು.ಆತನ ವಸ್ತ್ರಗಳು ಅತ್ಯಂತ ಶುಭ್ರವಾಗಿ ಬೆಳ್ಳಗೆ ಹೊಳೆಯಿತು. ಭೂಲೋಕದಲ್ಲಿರುವ ಯಾವ ಅಗಸನಾದರೂ ಅಷ್ಟು ಬೆಳ್ಳಗೆ ಮಾಡಲಾಗದಷ್ಟು ಅದು ಬಿಳುಪಾಗಿತ್ತು.ಅವನು ತನ್ನ ಹೊದಿಕೆಯನ್ನು ತೆಗೆದುಹಾಕಿ ತಟ್ಟನೆ ಎದ್ದು ಯೇಸುವಿನ ಬಳಿಗೆ ಬಂದನು.ಶಿಷ್ಯರು ಆ ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ತಮ್ಮ ಮೇಲಂಗಿಗಳನ್ನು ಅದರ ಮೇಲೆ ಹಾಕಲು ಆತನು ಅದನ್ನು ಹತ್ತಿ ಕುಳಿತುಕೊಂಡನು.ಆಗ ಅನೇಕರು ತಮ್ಮ ಮೇಲಂಗಿಗಳನ್ನು ದಾರಿಯಲ್ಲಿ ಹಾಸಿದರು. ಬೇರೆ ಕೆಲವರು ತೋಟಗಳಿಂದ ಎಳೆಯ ರೆಂಬೆಗಳನ್ನು ಕಡಿದು, ತಂದು ಹಾಸಿದರು.ಆತನು ಉಪದೇಶಮಾಡಿ ಹೇಳಿದ್ದೇನಂದರೆ, “ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನಿಲುವಂಗಿಯನ್ನು ಧರಿಸಿಕೊಂಡು ತಿರುಗಾಡುತ್ತಾ,ಹೊಲದಲ್ಲಿರುವವನು ತನ್ನ ಹೊದಿಕೆಯನ್ನು ತೆಗೆದುಕೊಳ್ಳುವುದಕ್ಕೆ ಹಿಂದಿರುಗಿ ಹೋಗದಿರಲಿ.ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.ಅವರು ಆತನನ್ನು ಶಿಲುಬೆಗೆ ಹಾಕಿ ಆತನ ಬಟ್ಟೆಗಳಲ್ಲಿ ಯಾವುದು ಯಾರಿಗೆ ಸಿಗಬೇಕೆಂದು ಚೀಟು ಹಾಕಿ ಪಾಲುಮಾಡಿಕೊಂಡರು.ಅವರು ಸಮಾಧಿಯೊಳಗೆ ಹೋಗಿ, ಒಬ್ಬ ಯೌವನಸ್ಥನು ಬಿಳಿ ನಿಲುವಂಗಿಯನ್ನು ಧರಿಸಿಕೊಂಡು ಬಲ ಭಾಗದಲ್ಲಿ ಕುಳಿತಿರುವುದನ್ನು ಕಂಡು ಬೆಚ್ಚಿಬೆರಗಾದರು.ಲೂಕನು14
ಆತನು, “ಎರಡು ಅಂಗಿಗಳುಳ್ಳವನು ಇಲ್ಲದವನಿಗೆ ಒಂದು ಕೊಡಲಿ; ಆಹಾರವುಳ್ಳವನು ಇಲ್ಲದವನಿಗೆ ಕೊಡಲಿ” ಎಂದು ಅವರಿಗೆ ಹೇಳಿದನು.ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.ನಿನ್ನ ಒಂದು ಕೆನ್ನೆಯ ಮೇಲೆ ಹೊಡೆದವನಿಗೆ ಮತ್ತೊಂದು ಕೆನ್ನೆಯನ್ನೂ ತೋರಿಸು; ನಿನ್ನ ಮೇಲಂಗಿಯನ್ನು ಕಿತ್ತುಕೊಳ್ಳುವವನಿಗೆ ಒಳಂಗಿಯನ್ನೂ ತೆಗೆದುಕೊಳ್ಳಲು ಅಡ್ಡಿಮಾಡಬೇಡ.ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಕೊಂಡ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿ ಭೋಗದಲ್ಲಿ ಬಾಳುವವರು ಅರಮನೆಗಳಲ್ಲಿ ಇರುತ್ತಾರಷ್ಟೆ.ಯೇಸು ದಡಕ್ಕೆ ಇಳಿಯುತ್ತಲೇ ಆ ಊರಿನವನಾದ ಒಬ್ಬ ಮನುಷ್ಯನು ಆತನೆದುರಿಗೆ ಬಂದನು. ಅವನಿಗೆ ದೆವ್ವಗಳು ಹಿಡಿದಿದ್ದವು. ಅವನು ಬಹುಕಾಲದಿಂದ ವಸ್ತ್ರವನ್ನೇ ಧರಿಸದೆ ಮನೆಯಲ್ಲಿ ವಾಸಿಸದೆ ಸಮಾಧಿಯ ಗವಿಗಳಲ್ಲಿಯೇ ಇರುತ್ತಿದ್ದನು.ಆಕೆಯು ಹಿಂದಿನಿಂದ ಬಂದು ಆತನ ಅಂಗಿಯ ಅಂಚನ್ನು ಮುಟ್ಟಿದಳು; ಮುಟ್ಟುತ್ತಲೇ ಆಕೆಗೆ ರಕ್ತಸ್ರಾವವಾಗುವುದು ನಿಂತಿತು.ಕಳುಹಿಸುವಾಗ ಅವರಿಗೆ ಹೇಳಿದ್ದೇನಂದರೆ, “ನಿಮ್ಮ ಪ್ರಯಾಣಕ್ಕಾಗಿ ಏನನ್ನೂ ತೆಗೆದುಕೊಂಡು ಹೋಗಬೇಡಿರಿ, ಕೋಲು, ಚೀಲ, ಬುತ್ತಿ, ಹಣ ಬೇಡ; ಎರಡಂಗಿಗಳಿರಬಾರದು.ಆತನು ಪ್ರಾರ್ಥನೆಮಾಡುತ್ತಿರಲಾಗಿ ಆತನ ಮುಖಭಾವವು ಬದಲಾಯಿತು. ಆತನ ಉಡುಪು ಬೆಳ್ಳಗಾಗಿ ಮಿಂಚುತ್ತಾ ಬಂದಿತು.ತಂದೆಯು ತನ್ನ ಆಳುಗಳಿಗೆ, ‘ಶ್ರೇಷ್ಠವಾದ ನಿಲುವಂಗಿಯನ್ನು ತಟ್ಟನೆ ತಂದು ಇವನಿಗೆ ಉಡಿಸಿ, ಇವನ ಕೈಗೆ ಉಂಗುರವನ್ನು ತೊಡಿಸಿರಿ, ಕಾಲಿಗೆ ಜೋಡು ಮೆಡಿಸಿರಿ,ಅದನ್ನು ಯೇಸುವಿನ ಬಳಿಗೆ ತಂದು ತಮ್ಮ ಬಟ್ಟೆಗಳನ್ನು ಆ ಕತ್ತೆಮರಿಯ ಮೇಲೆ ಹಾಕಿ ಯೇಸುವನ್ನು ಕುಳ್ಳಿರಿಸಿದರು.ಆತನು ಹೋಗುತ್ತಿರುವಾಗ ಅವರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು.“ಶಾಸ್ತ್ರಿಗಳ ವಿಷಯದಲ್ಲಿ ಎಚ್ಚರಿಕೆಯಾಗಿರಿ. ಅವರು ನಿಲುವಂಗಿಗಳನ್ನು ತೊಟ್ಟುಕೊಂಡು ತಿರುಗಾಡುವುದರಲ್ಲಿ ಮನಸ್ಸುಳ್ಳವರೂ, ಅಂಗಡಿಬೀದಿಗಳಲ್ಲಿ ನಮಸ್ಕಾರಗಳು, ಸಭಾಮಂದಿರಗಳಲ್ಲಿ ಮುಖ್ಯ ಪೀಠಗಳು, ಔತಣಕೂಟಗಳಲ್ಲಿ ಪ್ರಥಮಸ್ಥಾನ, ಇವುಗಳನ್ನು ಬಯಸುವವರೂ ಆಗಿದ್ದಾರೆ.ಅದಕ್ಕೆ ಆತನು, “ಈಗಲಾದರೋ ಹಣವಿದ್ದವನು ಅದನ್ನು ತೆಗೆದುಕೊಳ್ಳಲಿ, ಕೈಚೀಲವಿರುವವನು ಅದನ್ನು ತೆಗೆದುಕೊಳ್ಳಲಿ, ಮತ್ತು ಕತ್ತಿಯಿಲ್ಲದವನು ತನ್ನ ಮೇಲಂಗಿಯನ್ನು ಮಾರಿ ಒಂದು ಕತ್ತಿಯನ್ನು ಕೊಂಡುಕೊಳ್ಳಲಿ.ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.ಯೋಹಾನನು7
ಆತನು ಊಟದಿಂದ ಎದ್ದು ತನ್ನ ಮೇಲುಹೊದಿಕೆಯನ್ನು ತೆಗೆದಿಟ್ಟು ಅಂಗ ವಸ್ತ್ರವನ್ನು ತೆಗೆದುಕೊಂಡು ನಡುವಿಗೆ ಕಟ್ಟಿಕೊಂಡನು.ಆತನು ಅವರ ಪಾದಗಳನ್ನು ತೊಳೆದ ಮೇಲೆ ತನ್ನ ಮೇಲುಹೊದಿಕೆಯನ್ನು ಹಾಕಿಕೊಂಡು, ಪುನಃ ಕುಳಿತುಕೊಂಡು ಅವರಿಗೆ ಹೇಳಿದ್ದೇನಂದರೆ, “ನಾನು ನಿಮಗೆ ಮಾಡಿದ್ದು ಏನೆಂದು ತಿಳಿಯಿತೋ?ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,ಯೇಸು ಮುಳ್ಳಿನ ಕಿರೀಟವನ್ನು ಮತ್ತು ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಧರಿಸಿದವನಾಗಿ ಹೊರಗೆ ಬಂದನು. ಆಗ ಪಿಲಾತನು ಅವರಿಗೆ, “ಇಗೋ, ಈ ಮನುಷ್ಯನು” ಎಂದನು.ಸಿಪಾಯಿಗಳು ಯೇಸುವನ್ನು ಶಿಲುಬೆಗೆ ಹಾಕಿದ ಮೇಲೆ ಅವರು ಆತನ ವಸ್ತ್ರಗಳನ್ನು ತೆಗೆದುಕೊಂಡು ನಾಲ್ಕು ಪಾಲು ಮಾಡಿ ಒಬ್ಬೊಬ್ಬ ಸಿಪಾಯಿಗೆ ಒಂದೊಂದು ಭಾಗದಂತೆ ಹಂಚಿಕೊಂಡರು. ಆತನ ಒಳಂಗಿಯನ್ನು ಸಹ ತೆಗೆದುಕೊಂಡರು. ಆದರೆ ಆ ಅಂಗಿಗೆ ಹೊಲಿಗೆ ಇರಲಿಲ್ಲ. ಅದು ಮೇಲಿನಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.ಆಮೇಲೆ ಅವರು, “ನಾವು ಇದನ್ನು ಹರಿಯಬಾರದು ಚೀಟು ಹಾಕಿ, ಇದು ಯಾರಿಗೆ ಬರುವುದೋ ನೋಡೋಣ” ಎಂದು ಮಾತನಾಡಿಕೊಂಡರು. ಇದರಿಂದ “ನನ್ನ ಬಟ್ಟೆಗಳನ್ನು ತಮ್ಮಲ್ಲಿ ಪಾಲುಮಾಡಿಕೊಂಡರು. ನನ್ನ ಅಂಗಿಗೋಸ್ಕರ ಚೀಟು ಹಾಕಿದರು” ಎಂಬ ಧರ್ಮಶಾಸ್ತ್ರದ ಮಾತು ನೆರವೇರಿತು. ಸಿಪಾಯಿಗಳು ಇದನ್ನೆಲ್ಲಾ ಮಾಡಿದರು.ಆಗ ಯೇಸುವಿಗೆ ಪ್ರಿಯನಾಗಿದ್ದ ಶಿಷ್ಯನು ಪೇತ್ರನಿಗೆ, “ಆತನು ಕರ್ತನೇ” ಎಂದು ಹೇಳಿದನು. ಸೀಮೋನ್ ಪೇತ್ರನು ಅದನ್ನು ಕೇಳಿ ತಾನು ತೆಗೆದು ಬಿಟ್ಟಿದ್ದ ತನ್ನ ಮೇಲಂಗಿಯನ್ನು ಸುತ್ತಿಕೊಂಡು ಸಮುದ್ರದೊಳಗೆ ಧುಮುಕಿದನು.ಅಪೊಸ್ತಲರ ಕೃತ್ಯಗಳು9
ಅವನನ್ನು ಊರ ಹೊರಕ್ಕೆ ನೂಕಿಕೊಂಡು ಹೋಗಿ ಕೊಲ್ಲುವುದಕ್ಕೆ ಕಲ್ಲೆಸೆದರು. ಸಾಕ್ಷಿಯವರು ತಮ್ಮ ಬಟ್ಟೆಗಳನ್ನು ತೆಗೆದು ಸೌಲನೆಂಬ ಒಬ್ಬ ಯೌವನಸ್ಥನ ಕಾಲುಗಳ ಬಳಿಯಲ್ಲಿ ಇಟ್ಟರು.ಪೇತ್ರನು ಎದ್ದು ಅವರ ಜೊತೆಯಲ್ಲಿ ಹೋದನು. ಅವನು ಬಂದ ಕೂಡಲೆ ಅವರು ಅವನನ್ನು ಮೇಲಂತಸ್ತಿಗೆ ಕರೆದುಕೊಂಡು ಹೋದರು. ಅಲ್ಲಿ ವಿಧವೆಯರೆಲ್ಲ ಅಳುತ್ತಾ, ಅವನ ಹತ್ತಿರ ನಿಂತುಕೊಂಡು ದೊರ್ಕಳು ತಮ್ಮ ಸಂಗಡ ಇದ್ದಾಗ ಮಾಡಿಕೊಟ್ಟಿದ್ದ ಒಳಂಗಿಗಳನ್ನೂ, ಮೇಲಂಗಿಗಳನ್ನೂ ತೋರಿಸಿದರು.ಆ ದೂತನು ಅವನಿಗೆ; “ನಡುಕಟ್ಟಿಕೊಂಡು, ನಿನ್ನ ಕೆರಗಳನ್ನು ಮೆಟ್ಟಿಕೋ” ಎಂದು ಹೇಳಲು, ಅವನು ಹಾಗೆಯೇ ಮಾಡಿದನು. “ನಿನ್ನ ಮೇಲಂಗಿಯನ್ನು ಹಾಕಿಕೊಂಡು ನನ್ನ ಹಿಂದೆ ಬಾ” ಅಂದನು.ಇದನ್ನು ಕೇಳಿ ಅಪೊಸ್ತಲರಾದ ಬಾರ್ನಬ ಮತ್ತು ಪೌಲರು ತಮ್ಮ ವಸ್ತ್ರಗಳನ್ನು ಹರಿದುಕೊಂಡು ಜನರ ಗುಂಪಿನೊಳಗೆ ನುಗ್ಗಿ ಹೀಗೆಂದು ಕೂಗಿ ಹೇಳಿದರು;ಆಗ ಜನರು ಗುಂಪಾಗಿ ಕೂಡಿ, ಅವರಿಗೆ ವಿರೋಧವಾಗಿ ಒಟ್ಟಾಗಿ ಎದ್ದರು. ಮತ್ತು ಅಧಿಕಾರಿಗಳು; ಇವರ ವಸ್ತ್ರಗಳನ್ನು ಹರಿದು, ತೆಗೆದು, ಛಡಿಗಳಿಂದ ಹೊಡೆಸಬೇಕೆಂದು ಅಪ್ಪಣೆಕೊಟ್ಟರು.ಅವರು ಎದುರಿಸಿ, ದೂಷಿಸಲಾಗಿ ಅವನು ತನ್ನ ವಸ್ತ್ರಗಳನ್ನು ಝಾಡಿಸಿ ಅವರಿಗೆ; “ನಿಮ್ಮ ನಾಶನಕ್ಕೆ ನೀವೇ ಹೊಣೆ. ನಾನು ಶುದ್ಧನು. ನಾನು ಇಂದಿನಿಂದ ಅನ್ಯಜನರ ಬಳಿಗೆ ಹೋಗುತ್ತೇನೆ” ಎಂದು ಹೇಳಿ,ನಾನು ಯಾರ ಬೆಳ್ಳಿಬಂಗಾರವನ್ನಾಗಲಿ, ಉಡಿಗೆತೊಡಿಗೆಯನ್ನಾಗಲಿ ಬಯಸಲಿಲ್ಲ.ಮತ್ತು ನಿನ್ನ ಸಾಕ್ಷಿಯಾದ ಸ್ತೆಫನನ ರಕ್ತವು ಚೆಲ್ಲಿಸಲ್ಪಟ್ಟಾಗ, ನಾನೂ ಹತ್ತಿರ ನಿಂತು ಅದನ್ನು ಸಮ್ಮತಿಸಿ, ಅವನನ್ನು ಕೊಂದವರ ವಸ್ತ್ರಗಳನ್ನು ಕಾಯುತ್ತಿದ್ದೆನಲ್ಲಾ’ ಎಂಬುದು ಅವರೇ ಬಲ್ಲವರಾಗಿದ್ದಾರೆ.ಅವರು ಕೂಗುತ್ತಾ, ತಮ್ಮ ವಸ್ತ್ರಗಳನ್ನು ಹರಿದುಕೊಳ್ಳುತ್ತಾ, ಧೂಳನ್ನು ತೂರುತ್ತಾ ಇರಲಾಗಿ,1 ಕೊರಿಂಥದವರಿಗೆ1
ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?1 ತಿಮೊಥೆಯನಿಗೆ1
ಹಾಗೆಯೇ ಸ್ತ್ರೀಯರು ಮಾನಸ್ಥೆಯರಾಗಿಯೂ, ಸಭ್ಯತೆಯುಳ್ಳವರಾಗಿಯೂ ಇದ್ದು, ಗೌರವಕ್ಕೆ ತಕ್ಕ ಉಡುಪನ್ನೂ ಧರಿಸಿಕೊಳ್ಳಬೇಕೆಂದು ಅಪೇಕ್ಷಿಸುತ್ತೇನೆ. ಅವರು ಜಡೆಯನ್ನು ಹೆಣೆಯುವುದು, ಚಿನ್ನ, ಮುತ್ತು, ಬೆಲೆಯುಳ್ಳ ವಸ್ತ್ರಇಬ್ರಿಯರಿಗೆ2
ಅವು ನಾಶವಾಗುವವು. ಆದರೆ ನೀನು ಶಾಶ್ವತವಾಗಿರುತ್ತೀ. ಅವೆಲ್ಲವೂ ವಸ್ತ್ರದಂತೆ ಹಳೆಯದಾಗುವವು.ಅವುಗಳನ್ನು ಮೇಲಂಗಿಯಂತೆ ಮಡಿಸುತ್ತೀ ಮತ್ತು ಅವು ವಸ್ತ್ರದಂತೆ ಬದಲಾಗುವವು. ನೀನಾದರೂ ಅನನ್ಯನು. ನಿನ್ನ ವರ್ಷಗಳಿಗೆ ಅಂತ್ಯವೇ ಇಲ್ಲ” ಎಂತಲೂ ಹೇಳುತ್ತಾನೆ.ಯಾಕೋಬನು1
ನಿಮ್ಮ ಐಶ್ವರ್ಯ, ಸಂಪತ್ತು ನಾಶವಾಗಿದೆ. ನಿಮ್ಮ ಬಟ್ಟೆಗಳಿಗೆ ನುಸಿ ಹಿಡಿದಿದೆ.1 ಪೇತ್ರನು1
ಜಡೆ ಹೆಣೆದುಕೊಳ್ಳುವುದೂ, ಚಿನ್ನದ ಒಡವೆಗಳನ್ನು ಹಾಕಿಕೊಳ್ಳುವುದೂ, ಬೆಲೆಬಾಳುವ ವಸ್ತ್ರಗಳನ್ನು ಧರಿಸಿಕೊಳ್ಳುವುದೂ ಈ ಮೊದಲಾದ ಹೊರಗಣ ಶೃಂಗಾರವೇ ನಿಮ್ಮ ಅಲಂಕಾರವಾಗಿರಬಾರದು.ಯೂದನು1
ಬೆಂಕಿಯ ಬಾಯಲ್ಲಿ ಇರುವವರನ್ನು ಎಳೆದು ಸಂರಕ್ಷಿಸಿರಿ, ಕೆಲವರನ್ನು ಭಯಪಡುತ್ತಾ ಕರುಣಿಸಿರಿ. ಶಾರೀರಿಕ ನಡತೆಯಿಂದ ಹೊಲಸಾದ ಅವರ ಉಡುಪನ್ನೂ ಸಹ ಹಗೆಮಾಡಿರಿ.ಪ್ರಕಟಣೆ13
ಆ ದೀಪಸ್ತಂಭಗಳ ಮಧ್ಯದಲ್ಲಿ ಮನುಷ್ಯಕುಮಾರನಂತೆ ಇರುವವನನ್ನೂ ಕಂಡೆನು. ಆತನು ನಿಲುವಂಗಿಯನ್ನು ಧರಿಸಿ ಚಿನ್ನದ ಪಟ್ಟಿಯನ್ನು ಎದೆಗೆ ಕಟ್ಟಿಕೊಂಡಿದ್ದನು.ಆದರೂ ತಮ್ಮ ಅಂಗಿಗಳನ್ನು ಮಲಿನ ಮಾಡಿಕೊಳ್ಳದಿರುವ ಸ್ವಲ್ಪ ಜನರು ಸಾರ್ದಿಸಿನಲ್ಲಿ ನಿನಗಿದ್ದಾರೆ. ಅವರು ಯೋಗ್ಯರಾಗಿರುವುದರಿಂದ ಶುಭ್ರವಸ್ತ್ರಗಳನ್ನು ಧರಿಸಿಕೊಂಡು ನನ್ನ ಜೊತೆಯಲ್ಲಿ ನಡೆಯುವರು.ಜಯಹೊಂದುವವನು ಶುಭ್ರವಸ್ತ್ರಗಳನ್ನು ಧರಿಸುವನು. ಜೀವಬಾಧ್ಯರ ಪುಸ್ತಕದಿಂದ ಅವನ ಹೆಸರನ್ನು ನಾನು ಅಳಿಸದೆ, ಅವನು ನನ್ನವನೆಂದು ನನ್ನ ತಂದೆಯ ಎದುರಿನಲ್ಲಿಯೂ ಆತನ ದೂತರ ಮುಂದೆಯೂ ಒಪ್ಪಿಕೊಳ್ಳುವೆನು.ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ, ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.ಇದಲ್ಲದೆ ಸಿಂಹಾಸನದ ಸುತ್ತಲೂ ಇಪ್ಪತ್ನಾಲ್ಕು ಸಿಂಹಾಸನಗಳಿದ್ದವು. ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ನಾಲ್ಕು ಮಂದಿ ಹಿರಿಯರು ಕುಳಿತಿದ್ದರು. ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು.ಇದಾದ ನಂತರ ಇಗೋ, ಯಾರಿಂದಲೂ ಎಣಿಸಲಾಗದಂಥ ಮಹಾ ಜನಸಮೂಹವು ಸಿಂಹಾಸನದ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ ನಿಂತಿರುವುದನ್ನು ಕಂಡೆನು. ಅವರು ಸಕಲ ಜನಾಂಗ, ಕುಲ, ಜಾತಿಗಳವರೂ ಸಕಲ ಭಾಷೆಗಳನ್ನಾಡುವವರೂ ಆಗಿದ್ದರು. ಅವರು ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡು ತಮ್ಮ ಕೈಗಳಲ್ಲಿ ಖರ್ಜೂರದ ಗರಿಗಳನ್ನು ಹಿಡಿದುಕೊಂಡಿದ್ದರು.ಆಗ ಇದನ್ನು ನೋಡಿ ಹಿರಿಯರಲ್ಲಿ ಒಬ್ಬನು, “ಬಿಳೀ ನಿಲುವಂಗಿಗಳನ್ನು ತೊಟ್ಟುಕೊಂಡಿರುವವರಾದ ಇವರು ಯಾರು? ಎಲ್ಲಿಂದ ಬಂದರು” ಎಂದು ನನ್ನನ್ನು ಕೇಳಲು, “ಅಯ್ಯಾ ನೀನೇ ಬಲ್ಲೆ” ಎಂದೆನು.ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.“ಇಗೋ ಕಳ್ಳನು ಬರುವಂತೆ ಬರುತ್ತೇನೆ. ತಾನು ಬೆತ್ತಲೆಯಾಗಿ ತಿರುಗಾಡಿ ಜನರಿಂದ ಅವಮಾನಕ್ಕೆ ಗುರಿಯಾಗದಂತೆ ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಜಾಗರೂಕತೆಯಿಂದ ಕಾಪಾಡಿಕೊಳ್ಳುವವನು ಧನ್ಯನು.”ಆತನು ರಕ್ತದಲ್ಲಿ ಅದ್ದಿದ ವಸ್ತ್ರವನ್ನು ಧರಿಸಿಕೊಂಡಿದ್ದನು. ಆತನಿಗೆ ದೇವರ ವಾಕ್ಯವೆಂದು ಹೆಸರು.ಆತನ ವಸ್ತ್ರದ ಮೇಲೂ, ತೊಡೆಯ ಮೇಲೂ “ರಾಜಾಧಿರಾಜನೂ ಕರ್ತಾಧಿ ಕರ್ತನೂ” ಎಂಬ ಹೆಸರು ಬರೆದಿದೆ.“ತಮ್ಮ ನಿಲುವಂಗಿಗಳನ್ನು ತೊಳೆದುಕೊಂಡು ಶುದ್ಧರಾಗಿರುವವರು ಧನ್ಯರು. ಅವರಿಗೆ ಜೀವವೃಕ್ಷದ ಹಕ್ಕು ಇರುವುದು. ಅವರು ಬಾಗಿಲುಗಳ ಮೂಲಕ ಆ ಪಟ್ಟಣದೊಳಗೆ ಬಂದು ಸೇರುವರು.ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Human-made Things in the Bible © United Bible Societies 2025, adapted from R. Pritz, The Works of Their Hands: Man-made Things in the Bible © 2009 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು