ಆಹಾರ ಮತ್ತು ಪಾನೀಯ
ರೊಟ್ಟಿ
ಹೀಬ್ರೂ lechem · ಗ್ರೀಕ್ artos · ಬೈಬಲಿನಲ್ಲಿ ಹೆಚ್ಚಾಗಿ ಹೆಸರಿಸಲಾದ ಆಹಾರ
ರೊಟ್ಟಿಯನ್ನು ಬಹುತೇಕ ಪ್ರತಿಯೊಂದು ಊಟದಲ್ಲೂ ತಿನ್ನುತ್ತಿದ್ದರು, ಮತ್ತು lechem ಎಂಬ ಹೀಬ್ರೂ ಪದಕ್ಕೆ ಸಾಮಾನ್ಯವಾಗಿ ಆಹಾರ ಎಂಬ ಅರ್ಥವೂ ಇರಬಹುದಿತ್ತು. ಹೆಚ್ಚಿನ ಕುಟುಂಬಗಳು ತಮ್ಮ ರೊಟ್ಟಿಯನ್ನು ತಾವೇ ಮಾಡುತ್ತಿದ್ದವು. ಪ್ರತಿದಿನ ಧಾನ್ಯವನ್ನು ಎರಡು ಬೀಸುವ ಕಲ್ಲುಗಳ ನಡುವೆ ಬೀಸುತ್ತಿದ್ದರು — ಮೊಣಕಾಲೂರಿ ಮಾಡುವ ಕಷ್ಟದ ಕೆಲಸ, ಸಾಮಾನ್ಯವಾಗಿ ಹೆಂಗಸರು ಮತ್ತು ದಾಸಿಯರು ಮಾಡುತ್ತಿದ್ದರು (ವಿಮೋಚನಕಾಂಡ 11:5). ನೀರು ಹಾಕಿ ಮರದ ತೊಟ್ಟಿಯಲ್ಲಿ ಹಿಟ್ಟನ್ನು ನಾದುತ್ತಿದ್ದರು. ಅದು ಉಬ್ಬುವಂತೆ ಹಳೆಯ, ಹುಳಿ ಬಂದ ಹಿಟ್ಟಿನ ತುಂಡನ್ನು ಬೆರೆಸುತ್ತಿದ್ದರು; ಆತುರದಲ್ಲಿ, ವಿಮೋಚನೆಯ ರಾತ್ರಿಯಂತೆ, ರೊಟ್ಟಿಯನ್ನು ಹುಳಿಯಿಲ್ಲದೆ ಸುಡುತ್ತಿದ್ದರು (ವಿಮೋಚನಕಾಂಡ 12:34).
ಚಪ್ಪಟೆ ರೊಟ್ಟಿಗಳನ್ನು ಕಾದ ಕಲ್ಲುಗಳ ಮೇಲೆ, ಕಬ್ಬಿಣದ ಹೆಂಚಿನ ಮೇಲೆ, ಅಥವಾ ಕಟ್ಟಿಗೆ, ಒಣಹುಲ್ಲು ಅಥವಾ ಸಗಣಿಯಿಂದ ಕಾಯಿಸಿದ ಚಿಕ್ಕ ಮಣ್ಣಿನ ಒಲೆಯ ಒಳಗೋಡೆಗೆ ಒತ್ತಿ ಸುಡುತ್ತಿದ್ದರು; ಅವು ನಿಮಿಷಗಳಲ್ಲಿ ಸಿದ್ಧವಾಗುತ್ತಿದ್ದವು. ನಯವಾದ ಗೋದಿಹಿಟ್ಟಿನ ರೊಟ್ಟಿ ಅತಿಥಿಗಳಿಗೂ ಶ್ರೀಮಂತರಿಗೂ, ಜವೆಗೋದಿಯ ರೊಟ್ಟಿ ಬಡವರಿಗೂ. ರೊಟ್ಟಿಗಳನ್ನು ಕತ್ತರಿಸದೆ ಕೈಯಿಂದ ಮುರಿಯುತ್ತಿದ್ದರು. ಯೆರೂಸಲೇಮಿನಲ್ಲಿ ರೊಟ್ಟಿ ಸುಡುವವರ ಬೀದಿ ಇತ್ತು, ಮತ್ತು ಸೆರೆಯಲ್ಲಿದ್ದ ಯೆರೆಮೀಯನಿಗೆ ಅಲ್ಲಿಂದ ಪ್ರತಿದಿನ ಒಂದು ರೊಟ್ಟಿ ಸಿಗುತ್ತಿತ್ತು (ಯೆರೆಮೀಯನು 37:21).
ಮುಖ್ಯ ವಚನಗಳು
ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.ಆದುದರಿಂದ ಜನರು ಹಿಟ್ಟಿಗೆ ಹುಳಿಹಾಕುವುದಕ್ಕಿಂತ ಮೊದಲೇ ನಾದುವ ಪಾತ್ರೆಗಳ ಸಂಗಡ ಕಣಕದ ಮುದ್ದೆಯನ್ನು ಬಟ್ಟೆಯಲ್ಲಿ ಗಂಟುಕಟ್ಟಿ ಹೆಗಲಿನ ಮೇಲೆ ಹಾಕಿಕೊಂಡು ಹೊರಟುಹೋದರು.ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.ಇದನ್ನು ಹೆಸರಿಸುವ ಎಲ್ಲಾ ವಚನಗಳು (410)
ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.
ಆದಿಕಾಂಡ24
ನೀನು ಪುನಃ ಮಣ್ಣಿಗೆ ಸೇರುವ ತನಕ ಬೆವರು ಸುರಿಸುತ್ತಾ ಬೇಕಾದ ಆಹಾರವನ್ನು ಸಂಪಾದಿಸಬೇಕು. ನೀನು ಮಣ್ಣಿನಿಂದ ತೆಗೆಯಲ್ಪಟ್ಟವನಾಗಿರುವುದರಿಂದ ನೀನು ಮಣ್ಣೇ; ಪುನಃ ಮಣ್ಣಿಗೆ ಸೇರತಕ್ಕವನಾಗಿದ್ದೀ” ಎಂದು ಹೇಳಿದನು.ಸಾಲೇಮಿನ ಅರಸನಾದ ಮೆಲ್ಕೀಚೆದೆಕನು ಸಹ ಬಂದು ರೊಟ್ಟಿಯನ್ನೂ ದ್ರಾಕ್ಷಾರಸವನ್ನೂ ಕೊಟ್ಟನು. ಇವನು ಪರಾತ್ಪರನಾದ ದೇವರ ಯಾಜಕನಾಗಿದ್ದನು.ಸ್ವಲ್ಪ ಆಹಾರ ತರುತ್ತೇನೆ, ಊಟವಾದ ಮೇಲೆ ನೀವು ಮುಂದಕ್ಕೆ ಪ್ರಯಾಣ ಮಾಡಬಹುದು” ಎನ್ನಲು ಅವರು, “ನೀನು ಹೇಳಿದಂತೆ ಮಾಡಬಹುದು” ಅಂದರು.ಆಗ ಅಬ್ರಹಾಮನು ಗುಡಾರದಲ್ಲಿದ್ದ ಸಾರಳ ಬಳಿಗೆ ಓಡಿಹೋಗಿ ಆಕೆಗೆ, “ಹಸನಾದ ಮೂರು ಸೇರು ಹಿಟ್ಟನ್ನು ನಾದಿ ಬೇಗ ರೊಟ್ಟಿಗಳನ್ನು ಮಾಡು” ಎಂದು ಹೇಳಿದನು.ಅವನು ಅವರನ್ನು ಬಹಳ ಬಲವಂತ ಮಾಡಿದ್ದರಿಂದ ಅವರು ಅವನ ಬಳಿಯಲ್ಲಿ ಇಳಿದುಕೊಳ್ಳುವುದಕ್ಕೆ ಒಪ್ಪಿದರು. ಅವರು ಮನೆಗೆ ಬಂದಾಗ ಅವನು ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿ ಔತಣವನ್ನು ಮಾಡಿಸಲು ಅವರು ಊಟಮಾಡಿದರು.ಮಾರನೆಯ ದಿನ ಬೆಳಗ್ಗೆ ಅಬ್ರಹಾಮನು ಎದ್ದು, ಹಾಗರಳಿಗೆ ಬುತ್ತಿಯನ್ನೂ, ಒಂದು ತಿತ್ತಿ ತಣ್ಣೀರನ್ನೂ ಅವಳ ಹೆಗಲಿನ ಮೇಲೆ ಇಟ್ಟು, ಮಗುವನ್ನು ಒಪ್ಪಿಸಿ ಅವಳನ್ನು ಕಳುಹಿಸಿಬಿಟ್ಟನು. ಅವಳು ಹೊರಟು ಬೇರ್ಷೆಬದ ಕಾಡಿನಲ್ಲಿ ಅಲೆಯುತ್ತಿದ್ದಳು.ಆಗ ಯಾಕೋಬನು ಏಸಾವನಿಗೆ ರೊಟ್ಟಿಯನ್ನೂ ಅಲಸಂದಿ ಗುಗ್ಗರಿಯ ಪಲ್ಯವನ್ನು ಕೊಟ್ಟನು. ಏಸಾವನು ತಿಂದು ಕುಡಿದು ಎದ್ದು ಹೋದನು. ಹೀಗೆ ಅವನು ತನ್ನ ಚೊಚ್ಚಲತನದ ಹಕ್ಕನ್ನು ತಾತ್ಸಾರ ಮಾಡಿ ಬಿಟ್ಟನು.ನಂತರ ತಾನು ಸಿದ್ಧಮಾಡಿದ್ದ ರುಚಿಪದಾರ್ಥವನ್ನೂ ರೊಟ್ಟಿಯನ್ನೂ ತನ್ನ ಮಗನಾದ ಯಾಕೋಬನ ಕೈಯಲ್ಲಿ ಕೊಟ್ಟಳು.ಯಾಕೋಬನು ಅಲ್ಲಿ ಪ್ರಮಾಣ ಮಾಡಿ, “ದೇವರು ನನ್ನ ಸಂಗಡ ಇದ್ದು ನಾನು ಹೋಗುವ ಈ ಮಾರ್ಗದಲ್ಲಿ ನನ್ನನ್ನು ಕಾಪಾಡಿ ಉಣ್ಣುವುದಕ್ಕೆ ಆಹಾರವನ್ನೂ, ಉಡುವುದಕ್ಕೆ ವಸ್ತ್ರವನ್ನೂ, ನನಗೆ ಕೊಟ್ಟು,ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಊಟಮಾಡಲು ಕರೆಯಿಸಿದನು. ಅವರು ಊಟ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.ಆ ಮೇಲೆ ಅವರು ಊಟಕ್ಕೆ ಕುಳಿತುಕೊಂಡಾಗ ಅವರು ತಮ್ಮ ಕಣ್ಣುಗಳನ್ನೆತ್ತಿ ನೋಡಲಾಗಿ, ಇಷ್ಮಾಯೇಲರ ಗುಂಪು ಒಂಟೆಗಳ ಮೇಲೆ ಪರಿಮಳ ದ್ರವ್ಯ, ಸುಗಂಧ ತೈಲ, ರಕ್ತಬೋಳ, ಇವುಗಳನ್ನು ಹೇರಿಕೊಂಡು ಗಿಲ್ಯಾದಿನಿಂದ ಐಗುಪ್ತದೇಶಕ್ಕೆ ಪ್ರಯಾಣಮಾಡುತ್ತಾ ಬರುವುದನ್ನು ಕಂಡರು.ಅವನು ತನ್ನ ಆಸ್ತಿಯನ್ನೆಲ್ಲಾ ಯೋಸೇಫನ ವಶಕ್ಕೆ ಒಪ್ಪಿಸಿದನು. ಇವನು ತನ್ನ ಬಳಿಯಲ್ಲೇ ಇದ್ದುದರಿಂದ ತಾನು ತಿನ್ನುವ ಆಹಾರ ಒಂದನ್ನೇ ಹೊರತು ಬೇರೆ ಯಾವ ವಿಷಯದಲ್ಲೂ ಚಿಂತಿಸುತ್ತಿರಲಿಲ್ಲ. ಯೋಸೇಫನು ರೂಪವಂತನೂ, ಸುಂದರನೂ ಆಗಿದ್ದನು.ಯೋಸೇಫನು ಹೇಳಿದ ಪ್ರಕಾರ ಕ್ಷಾಮದ ಏಳು ವರ್ಷಗಳು ಪ್ರಾರಂಭವಾಯಿತು. ಬರವು ಸುತ್ತಲಿರುವ ಎಲ್ಲಾ ದೇಶಗಳಲ್ಲಿಯೂ ಹಬ್ಬಿತು. ಐಗುಪ್ತ ದೇಶದಲ್ಲಿ ಮಾತ್ರ ಆಹಾರವಿತ್ತು.ಐಗುಪ್ತ ದೇಶದಲ್ಲಿ ಬರ ಬಂದಾಗ ಪ್ರಜೆಗಳು ಆಹಾರ ಬೇಕೆಂದು ಫರೋಹನಿಗೆ ಮೊರೆಯಿಟ್ಟರು. ಅವನು ಅವರಿಗೆ, “ಯೋಸೇಫನ ಬಳಿಗೆ ಹೋಗಿರಿ, ಅವನು ಹೇಳಿದಂತೆ ಮಾಡಿರಿ” ಎಂದು ಹೇಳಿದನು.ತಾವು ಅಲ್ಲೇ ಊಟ ಮಾಡಬೇಕೆಂಬ ಸಂಗತಿಯನ್ನು ಅವರು ಕೇಳಿದ್ದರಿಂದ ತಾವು ತಂದಿದ್ದ ಕಾಣಿಕೆಯನ್ನು ಯೋಸೇಫನಿಗೆ ಕೊಡಲು ಸಿದ್ಧಮಾಡಿಕೊಂಡರು.ಆ ಮೇಲೆ ಮುಖವನ್ನು ತೊಳೆದುಕೊಂಡು ಹೊರಗೆ ಬಂದು, ಮನಸ್ಸನ್ನು ಬಿಗಿ ಹಿಡಿದು, “ಊಟಕ್ಕೆ ಬಡಿಸಿರಿ” ಎಂದು ಅಪ್ಪಣೆ ಕೊಟ್ಟನು.ಪರಿಚಾರಕರು ಅವನಿಗೂ ಅವನ ಅಣ್ಣತಮ್ಮಂದಿರಿಗೂ ಅವನ ಸಂಗಡವಿದ್ದ ಐಗುಪ್ತರಿಗೂ ಬೇರೆ ಬೇರೆಯಾಗಿ ಊಟಕ್ಕೆ ಬಡಿಸಿದರು. ಏಕೆಂದರೆ ಐಗುಪ್ತರು ಇಬ್ರಿಯರ ಜೊತೆ ಸಹಪಂಕ್ತಿಯಲ್ಲಿ ಊಟಮಾಡುತ್ತಿರಲಿಲ್ಲ. ಅದು ಐಗುಪ್ತರಿಗೆ ಅಸಹ್ಯವಾಗಿತ್ತು.ತನ್ನ ತಂದೆಗೋಸ್ಕರ ಐಗುಪ್ತ ದೇಶದ ಒಳ್ಳೆಯ ವಸ್ತುಗಳನ್ನು ಹತ್ತು ಕತ್ತೆಗಳ ಮೇಲೆ ಹೇರಿಸಿ, ಹತ್ತು ಹೆಣ್ಣುಕತ್ತೆಗಳ ಮೇಲೆ ತನ್ನ ತಂದೆಗೆ ಪ್ರಯಾಣಕ್ಕೆ ಬೇಕಾದ ದವಸ ಧಾನ್ಯಗಳನ್ನು, ರೊಟ್ಟಿ ಮತ್ತು ಇತರ ಆಹಾರವನ್ನು ಕಳುಹಿಸಿದನು.ಯೋಸೇಫನು ತನ್ನ ತಂದೆಗೂ, ಅಣ್ಣತಮ್ಮಂದಿರಿಗೂ, ತಂದೆಯ ಮನೆಯವರೆಲ್ಲರಿಗೂ ಅವರವರ ಕುಟುಂಬಗಳಿಗೆ ಸೇರಿದವರ ಲೆಕ್ಕದ ಪ್ರಕಾರ ಆಹಾರವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.ಬರವು ಬಹು ಘೋರವಾಗಿದ್ದುದರಿಂದ ದೇಶದ ಯಾವ ಭಾಗದಲ್ಲಿಯೂ ಆಹಾರ ಸಿಕ್ಕುತ್ತಿರಲಿಲ್ಲ. ಆ ಬರದ ನಿಮಿತ್ತ ಐಗುಪ್ತ ದೇಶವು ಹಾಗೂ ಕಾನಾನ್ ದೇಶವು ಕ್ಷಾಮದಿಂದ ಬರಡಾದವು.ಐಗುಪ್ತ ದೇಶದಲ್ಲಿಯೂ, ಕಾನಾನ್ ದೇಶದಲ್ಲಿಯೂ ಇದ್ದ ಹಣವೆಲ್ಲಾ ಮುಗಿದುಹೋದ ನಂತರ ಐಗುಪ್ತರೆಲ್ಲರೂ ಯೋಸೇಫನ ಬಳಿಗೆ ಬಂದು, “ನಮ್ಮ ಹಣವೆಲ್ಲಾ ಮುಗಿದುಹೋಯಿತು; ನೀನು ನಮಗೆ ಆಹಾರವನ್ನು ಕೊಡಬೇಕು; ನಾವು ನಿನ್ನ ಮುಂದೆ ಸತ್ತರೆ ಪ್ರಯೋಜನವೇನು?” ಎಂದು ಹೇಳಿದರು.ಅವರು ತಮ್ಮ ಕುರಿದನಗಳನ್ನು ಯೋಸೇಫನ ಬಳಿಗೆ ತೆಗೆದುಕೊಂಡು ಬರಲು, ಅವನು ಅವರ ಕುದುರೆಗಳನ್ನೂ, ಕುರಿದನಗಳನ್ನೂ, ಕತ್ತೆಗಳನ್ನೂ ತೆಗೆದುಕೊಂಡು ಅವರಿಗೆ ಧಾನ್ಯವನ್ನು ಕೊಟ್ಟನು. ಆ ವರ್ಷದಲ್ಲಿ ಅವರ ಕುರಿದನಗಳನ್ನೆಲ್ಲಾ ತೆಗೆದುಕೊಂಡು ಧಾನ್ಯವನ್ನು ಕೊಟ್ಟು ಅವರನ್ನು ಸಂರಕ್ಷಿಸಿದನು.“ನಿನ್ನ ಕಣ್ಣೆದುರಿಗೆ ನಾವು ಏಕೆ ಸಾಯಬೇಕು; ನಮ್ಮ ಭೂಮಿಯು ಏಕೆ ಹಾಳಾಗಬೇಕು; ನಮ್ಮನ್ನೂ ನಮ್ಮ ಭೂಮಿಯನ್ನೂ ತೆಗೆದುಕೊಂಡು ಧಾನ್ಯವನ್ನು ಕೊಡು; ನಾವು ನಮ್ಮ ಭೂಮಿಯನ್ನು ಫರೋಹನಿಗೆ ಕೊಟ್ಟುಬಿಟ್ಟು ಅವನಿಗೆ ಗುಲಾಮರಾಗುವೆವು. ನಾವು ಸಾಯದೆ ಬದುಕಬೇಕಾದರೆ ಮತ್ತು ಭೂಮಿಯು ಹಾಳಾಗದ ಹಾಗೆ ನೀನು ನಮಗೆ ಬಿತ್ತನೆ ಬೀಜವನ್ನು ಕೊಡಬೇಕು” ಎಂದು ಹೇಳಿದರು.ಆಶೇರನಿಗೆ ಧಾನ್ಯ ಸಮೃದ್ಧಿಯಾಗುವುದು. ಅವನಲ್ಲಿ ರಾಜಭೋಗ ಪದಾರ್ಥಗಳು ದೊರಕುವವು.ವಿಮೋಚನಕಾಂಡ31
ಆಗ ಅವನು ತನ್ನ ಮಕ್ಕಳಿಗೆ, “ಅವನು ಎಲ್ಲಿದ್ದಾನೆ? ಏಕೆ ಆ ಮನುಷ್ಯನನ್ನು ಬಿಟ್ಟು ಬಂದಿರಿ? ಅವನನ್ನು ಕರೆಯಿರಿ, ಅವನು ನಮ್ಮೊಂದಿಗೆ ಊಟಮಾಡಲಿ” ಎಂದು ಹೇಳಿದನು.ಆ ರಾತ್ರಿಯಲ್ಲಿಯೇ ಆ ಮಾಂಸವನ್ನು ಭೋಜನಮಾಡಬೇಕು. ಅದನ್ನು ಬೆಂಕಿಯಲ್ಲಿ ಸುಟ್ಟು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪಿನ ಪಲ್ಯಗಳ ಸಂಗಡ ಊಟಮಾಡಬೇಕು.“‘ಏಳು ದಿನಗಳವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನು ನಿಮ್ಮ ಮನೆಯೊಳಗಿಂದ ತೆಗೆದುಬಿಡಬೇಕು. ಏಕೆಂದರೆ ಮೊದಲನೆಯ ದಿನದಿಂದ ಏಳನೆಯ ದಿನದವರೆಗೆ ಹುಳಿರೊಟ್ಟಿಯನ್ನು ತಿನ್ನುವವನು ಇಸ್ರಾಯೇಲಿನೊಳಗಿಂದ ತೆಗೆದುಹಾಕಲ್ಪಡಬೇಕು.ನೀವು ಹುಳಿಯಿಲ್ಲದ ರೊಟ್ಟಿಯ ಹಬ್ಬವನ್ನು ಆಚರಿಸಬೇಕು. ಏಕೆಂದರೆ ಈ ದಿನದಲ್ಲಿಯೇ ನಾನು ನಿಮ್ಮ ಸೈನ್ಯಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ್ದರಿಂದ ನೀವೂ, ನಿಮ್ಮ ಸಂತತಿಯವರೂ ಈ ದಿನವನ್ನು ಆಚರಣೆಗೆ ತರಬೇಕು. ಇದು ಶಾಶ್ವತವಾದ ನಿಯಮವಾಗಿದೆ.ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಾಯಂಕಾಲ ಮೊದಲುಗೊಂಡು ಅದೇ ತಿಂಗಳಿನ ಇಪ್ಪತ್ತೊಂದನೆಯ ದಿನದ ಸಾಯಂಕಾಲದವರೆಗೆ ನೀವು ಹುಳಿಯಿಲ್ಲದ ರೊಟ್ಟಿಗಳನ್ನೇ ತಿನ್ನಬೇಕು.ನೀವು ನಿಮ್ಮ ಮನೆಗಳಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕೇ ಹೊರತು, ಹುಳಿಕಲಸಿದ ಯಾವುದನ್ನೂ ತಿನ್ನಕೂಡದು’” ಎಂದು ಆಜ್ಞಾಪಿಸಿದನು.ಅವರು ಐಗುಪ್ತ ದೇಶದಿಂದ ತಂದ ನಾದಿದ ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಕೊಂಡರು. ಅವರು ಐಗುಪ್ತ ದೇಶದಿಂದ ಹೊರಡಿಸಲ್ಪಟ್ಟು ಸ್ವಲ್ಪವಾದರೂ ಸಮಯ ಸಿಕ್ಕದೆ ಹೋದದರಿಂದ ಕಣಕದಲ್ಲಿ ಹುಳಿಯನ್ನು ಕಲಸಿರಲಿಲ್ಲ ಮತ್ತು ಬೇರೆ ಯಾವ ಆಹಾರವನ್ನೂ ಸಿದ್ಧಪಡಿಸಿಕೊಂಡಿರಲಿಲ್ಲ.ಏಳು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು, ಏಳನೆಯ ದಿನದಲ್ಲಿ ಯೆಹೋವನ ಘನಕ್ಕಾಗಿ ಹಬ್ಬವನ್ನು ಆಚರಿಸಬೇಕು.ಆ ಏಳು ದಿನವೂ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮಾತ್ರವಲ್ಲದೆ, ನಿಮ್ಮಲ್ಲಿ ಹುಳಿಹಿಟ್ಟು ಕಾಣಿಸಬಾರದು. ಇಲ್ಲವೆ ಹುಳಿಹಿಟ್ಟು ನಿಮ್ಮ ಗಡಿಯಲ್ಲೇ ಕಾಣಬಾರದು.ಇಸ್ರಾಯೇಲರು ಮೋಶೆ ಮತ್ತು ಆರೋನರಿಗೆ, “ಈ ಸಮೂಹವನ್ನೆಲ್ಲಾ ಹಸಿವೆಯಿಂದ ಸಾಯಿಸಬೇಕೆಂದು ನೀವು ನಮ್ಮನ್ನು ಈ ಮರುಭೂಮಿಗೆ ಕರೆದುಕೊಂಡು ಬಂದಿದ್ದೀರಿ. ನಾವು ಐಗುಪ್ತ ದೇಶದಲ್ಲಿದ್ದಾಗ ಮಾಂಸದ ಪಾತ್ರೆಗಳ ಬಳಿಯಲ್ಲಿ ಕುಳಿತುಕೊಂಡು ಹೊಟ್ಟೆತುಂಬಾ ರೊಟ್ಟಿಯನ್ನು ತಿನ್ನುತ್ತಿದ್ದಾಗ ಯೆಹೋವನ ಕೈಯಿಂದ ಸತ್ತು ಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು” ಎಂದರು.ಆಗ ಯೆಹೋವನು ಮೋಶೆಗೆ, “ನಾನು ಆಕಾಶದಿಂದ ನಿಮಗಾಗಿ ಆಹಾರವನ್ನು ಸುರಿಸುತ್ತೇನೆ. ಜನರು ಪ್ರತಿದಿನವೂ ಹೊರಗೆ ಹೋಗಿ ಆ ದಿನಕ್ಕೆ ಬೇಕಾಗುವಷ್ಟನ್ನು ಮಾತ್ರ ಕೂಡಿಸಿಕೊಳ್ಳಬೇಕು. ಇದರಿಂದ ಅವರು ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯುವರೋ ಇಲ್ಲವೋ ಎಂದು ಪರೀಕ್ಷಿಸುತ್ತೇನೆ.ಆಗ ಮೋಶೆ, “ಯೆಹೋವನು ಸಾಯಂಕಾಲದ ಹೊತ್ತಿನಲ್ಲಿ ನಿಮಗೆ ಮಾಂಸಾಹಾರವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ಕೊಡುವನು. ನಿಮ್ಮ ಗುಣುಗುಟ್ಟುವಿಕೆಯು ಯೆಹೋವನಿಗೆ ಕೇಳಿಸಿತು. ನಾನು ಮತ್ತು ಆರೋನನು ಎಷ್ಟರವರು? ನಿಮ್ಮ ಗುಣುಗುಟ್ಟುವಿಕೆ ಯೆಹೋವನ ವಿರುದ್ಧವೇ ಹೊರತು ನಮ್ಮ ವಿರುದ್ಧವಲ್ಲ” ಎಂದನು.“ಇಸ್ರಾಯೇಲರ ಗುಣುಗುಟ್ಟುವಿಕೆಯು ನನಗೆ ಕೇಳಿಸಿತು. ನೀನು ಅವರಿಗೆ, ‘ನೀವು ಸಾಯಂಕಾಲದಲ್ಲಿ ಮಾಂಸವನ್ನೂ, ಮುಂಜಾನೆಯಲ್ಲಿ ಬೇಕಾದಷ್ಟು ರೊಟ್ಟಿಯನ್ನೂ ತಿನ್ನುವಿರಿ. ಇದರಿಂದ ನಾನು ನಿಮ್ಮ ದೇವರಾದ ಯೆಹೋವನು ಎಂಬುದು ನಿಮಗೆ ಗೊತ್ತಾಗುವುದೆಂದು ಹೇಳಬೇಕು’” ಎಂಬುದೇ.ಇಸ್ರಾಯೇಲರು ಅದನ್ನು ಕಂಡು ಒಬ್ಬರಿಗೊಬ್ಬರು, “ಇದೇನಿರಬಹುದು?” ಎಂದು ಅಂದುಕೊಂಡರು. ಅದು ಏನೆಂದು ಅವರಿಗೆ ತಿಳಿಯಲಿಲ್ಲ. ಮೋಶೆ ಅವರಿಗೆ, “ಇದು ಯೆಹೋವನು ನಿಮಗಾಗಿ ತಿನ್ನುವುದಕ್ಕೆ ಕೊಟ್ಟಿರುವ ರೊಟ್ಟಿಯಾಗಿದೆ.ಆರನೆಯ ದಿನ ಎರಡರಷ್ಟು ಆಹಾರವು, ಅಂದರೆ ಒಬ್ಬೊಬ್ಬನಿಗೆ ಎರಡೆರಡು ಸೇರಿನಂತೆ ಆರಿಸಿ ತುಂಬಿಟ್ಟುಕೊಂಡಿದ್ದರಿಂದ ಸಮೂಹದ ಅಧಿಕಾರಿಗಳೆಲ್ಲರು ಮೋಶೆಯ ಬಳಿಗೆ ಬಂದು ಈ ಸಂಗತಿಯನ್ನು ತಿಳಿಸಿದರು.ನೋಡಿರಿ, ಯೆಹೋವನು ನಿಮಗೆ ಸಬ್ಬತ್ ದಿನವನ್ನು ಆಚರಿಸಬೇಕೆಂದು ಅಪ್ಪಣೆಕೊಟ್ಟಿರುವುದರಿಂದಲೇ ಆರನೆಯ ದಿನದಲ್ಲಿ ಎರಡು ದಿನದ ಆಹಾರವು ನಿಮಗೆ ದೊರಕುವಂತೆ ಅನುಗ್ರಹಿಸಿದ್ದಾನೆ. ನಿಮ್ಮಲ್ಲಿ ಪ್ರತಿಯೊಬ್ಬನು ತಾನಿರುವ ಸ್ಥಳದಲ್ಲಿ ಇರಬೇಕು. ಏಳನೆಯ ದಿನದಲ್ಲಿ ಒಬ್ಬನೂ ತನ್ನ ಸ್ಥಳವನ್ನು ಬಿಟ್ಟು ಹೊರಗೆ ಹೋಗಬಾರದು” ಎಂದು ಹೇಳಿದನು.ಇಸ್ರಾಯೇಲರು ಆ ಆಹಾರಕ್ಕೆ “ಮನ್ನ” ಎಂದು ಹೆಸರಿಟ್ಟರು. ಅದು ಬಿಳಿ ಕೊತ್ತುಂಬರಿ ಕಾಳಿನಂತಿದ್ದು ರುಚಿಯಲ್ಲಿ ಜೇನುತುಪ್ಪ ಸವರಿದ ದೋಸೆಯಂತೆ ಇತ್ತು.ಮೋಶೆಯು ಜನರಿಗೆ, “ಯೆಹೋವನು ಆಜ್ಞಾಪಿಸಿದ್ದು ಇದೇ, ‘ನಾನು ಐಗುಪ್ತ ದೇಶದಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಮರುಭೂಮಿಯಲ್ಲಿ ತಿನ್ನುವುದಕ್ಕೆ ಕೊಟ್ಟ ಆಹಾರವನ್ನು ನಿಮ್ಮ ಸಂತಾನದವರು ನೋಡುವ ಹಾಗೆ ಅವರಿಗಾಗಿ ನೀವು ಒಂದು ಸೇರು ಮನ್ನವನ್ನು ತುಂಬಿಸಿ ಸುರಕ್ಷಿತವಾಗಿ ಇಟ್ಟುಕೊಳ್ಳಬೇಕು’” ಎಂದು ಹೇಳಿದನು.ಇದಲ್ಲದೆ ಮೋಶೆಯ ಮಾವನಾದ ಇತ್ರೋವನು ದೇವರಿಗೆ ಸರ್ವಾಂಗಹೋಮ ಯಜ್ಞಗಳನ್ನು ಸಮರ್ಪಿಸಿದನು. ಆರೋನನು, ಇಸ್ರಾಯೇಲರ ಹಿರಿಯರೆಲ್ಲರೂ ಅವನ ಸಂಗಡ ದೇವರ ಸನ್ನಿಧಿಯಲ್ಲಿ ಸಹಭೋಜನವನ್ನು ಮಾಡುವುದಕ್ಕೆ ಬಂದರು.ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಹಬ್ಬ. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನವೂ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಆ ತಿಂಗಳಲ್ಲಿಯೇ ಐಗುಪ್ತ ದೇಶದಿಂದ ಹೊರಟು ಬಂದ ನೆನಪಿಗಾಗಿ ಇದನ್ನು ಆಚರಿಸಬೇಕು. ಕೈಯಲ್ಲಿ ಕಾಣಿಕೆಯಿಲ್ಲದೆ ಬರಿಗೈಯಲ್ಲಿ ನನ್ನ ಸನ್ನಿಧಿಗೆ ಯಾರು ಬರಬಾರದು.ನಿಮ್ಮ ದೇವರಾದ ಯೆಹೋವನೊಬ್ಬನನ್ನೇ ಆರಾಧಿಸಬೇಕು. ಆಗ ಆತನು ನಿಮ್ಮ ಅನ್ನಪಾನಗಳನ್ನು ಆಶೀರ್ವದಿಸುವನು. ನಿಮ್ಮಲ್ಲಿರುವ ವ್ಯಾಧಿಯನ್ನು ತೆಗೆದುಹಾಕುವನು.ನೈವೇದ್ಯದ ರೊಟ್ಟಿಗಳು ಪ್ರತಿದಿನ ಆ ಮೇಜಿನ ಮೇಲೆ ನನ್ನ ಸಮ್ಮುಖದಲ್ಲಿಯೇ ಇಟ್ಟಿರಬೇಕು.ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,ಆರೋನನೂ ಅವನ ಮಕ್ಕಳೂ ಆ ಟಗರಿನ ಮಾಂಸವನ್ನೂ ಪುಟ್ಟಿಯಲ್ಲಿರುವ ರೊಟ್ಟಿಯನ್ನೂ ದೇವದರ್ಶನ ಗುಡಾರದ ಬಾಗಿಲೊಳಗೆ ಊಟಮಾಡಬೇಕು.ಪ್ರತಿಷ್ಠೆಗೆ ಸಂಬಂಧಪಟ್ಟ ಮಾಂಸದಲ್ಲಾಗಲಿ, ರೊಟ್ಟಿಯಲ್ಲಾಗಲಿ ಏನಾದರೂ ಮರುದಿನದ ಉದಯದ ವರೆಗೆ ಉಳಿದರೆ ಅದನ್ನು ಸುಟ್ಟುಬಿಡಬೇಕು. ಅದು ಪವಿತ್ರವಾದುದರಿಂದ ಯಾರೂ ಅದನ್ನು ತಿನ್ನಬಾರದು.“ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ನಾನು ನಿಮಗೆ ಆಜ್ಞಾಪಿಸಿದಂತೆ ನೀವು ಚೈತ್ರಮಾಸದಲ್ಲಿ ನೇಮಕವಾದ ಕಾಲದಲ್ಲಿ ಏಳು ದಿನಗಳ ಕಾಲ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ನೀವು ಚೈತ್ರಮಾಸದಲ್ಲಿಯೇ ಐಗುಪ್ತದೇಶದಿಂದ ಬಿಡುಗಡೆಯಾಗಿ ಬಂದಿರಲ್ಲವೇ?ಮೋಶೆಯು ಆ ಬೆಟ್ಟದಲ್ಲಿ ಯೆಹೋವನ ಸನ್ನಿಧಿಯಲ್ಲಿ ಹಗಲಿರುಳು ನಲ್ವತ್ತು ದಿನ ಇದ್ದನು. ಆ ದಿನಗಳಲ್ಲಿ ಅವನು ಏನೂ ತಿನ್ನಲಿಲ್ಲ, ಏನೂ ಕುಡಿಯಲಿಲ್ಲ. ಆತನು ಒಡಂಬಡಿಕೆಯ ವಾಕ್ಯಗಳನ್ನು ಅಂದರೆ ಹತ್ತು ಆಜ್ಞೆಗಳನ್ನು ಆ ಕಲ್ಲಿನ ಹಲಗೆಗಳ ಮೇಲೆ ಬರೆದನು.ಮೇಜು, ಅದರ ಕಂಬಗಳು, ಅದರ ಉಪಕರಣಗಳು, ಅದರ ಮೇಲೆ ಇಡತಕ್ಕ ನೈವೇದ್ಯದ ರೊಟ್ಟಿಗಳು,ಮೇಜನ್ನು, ಅದರ ಎಲ್ಲಾ ಉಪಕರಣಗಳನ್ನು, ನೈವೇದ್ಯದ ರೊಟ್ಟಿಯನ್ನು,ಯೆಹೋವನು ಮೋಶೆಗೆ ಆಜ್ಞಾಪಿಸಿದ ಹಾಗೆ ಮೇಜಿನ ಮೇಲೆ ರೊಟ್ಟಿಗಳನ್ನು ಕ್ರಮವಾಗಿ ಯೆಹೋವನ ಸನ್ನಿಧಿಯಲ್ಲಿ ಇರಿಸಿದನು.ಯಾಜಕಕಾಂಡ32
“‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.ಯಾಜಕನು ಯಜ್ಞವೇದಿಯ ಮೇಲೆ ಅವುಗಳನ್ನು ಹೋಮಮಾಡಬೇಕು. ಅದು ಯೆಹೋವನಿಗೆ ಅಗ್ನಿಯ ಮೂಲಕವಾಗಿ ಅರ್ಪಿಸಿದ ಆಹಾರವಾಗುವುದು.ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮದ ರೂಪವಾಗಿ ಅರ್ಪಿಸಿದ ಆಹಾರವಾಗಿರುವುದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.ಉಳಿದದ್ದನ್ನು ಆರೋನನೂ ಮತ್ತು ಅವನ ವಂಶದವರೂ ತಿನ್ನಬಹುದು; ಅವರು ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿಕೊಂಡು ಪವಿತ್ರಸ್ಥಳದೊಳಗೆ ಅಂದರೆ ದೇವದರ್ಶನದ ಗುಡಾರದ ಅಂಗಳದಲ್ಲಿ ತಿನ್ನಬೇಕು.ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞದಲ್ಲಿ ಒಪ್ಪಿಸುವ ಪಶುವಿನೊಡನೆ ಹುಳಿರೊಟ್ಟಿಗಳನ್ನು ಸಮರ್ಪಿಸಬೇಕು.“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.ಮೋಶೆ ಆರೋನನಿಗೂ ಮತ್ತು ಅವನ ಮಕ್ಕಳಿಗೂ, “ಮಾಂಸವನ್ನು ನೀವು ದೇವದರ್ಶನದ ಗುಡಾರದ ಬಾಗಿಲಿನ ಹತ್ತಿರ ಬೇಯಿಸಿ ಅದನ್ನು ಮತ್ತು ಪಟ್ಟಾಭಿಷೇಕಕ್ಕಾಗಿ ಪುಟ್ಟಿಯಲ್ಲಿ ಇಟ್ಟಿರುವ ಭಕ್ಷ್ಯಗಳನ್ನು ಅಲ್ಲೇ ಊಟಮಾಡಬೇಕು. ‘ಆರೋನನೂ ಅವನ ಮಕ್ಕಳೂ ಅದನ್ನು ತಿನ್ನಬೇಕು’ ಎಂಬುದೇ ನನಗಾದ ಅಪ್ಪಣೆ.ಆ ಮಾಂಸದಲ್ಲಿಯೂ, ಭಕ್ಷ್ಯಗಳಲ್ಲಿಯೂ ಉಳಿದದ್ದನ್ನು ನೀವು ಬೆಂಕಿಯಿಂದ ಸುಟ್ಟುಬಿಡಬೇಕು.ಮೋಶೆ ಆರೋನನಿಗೂ ಅವನ ಉಳಿದ ಮಕ್ಕಳಾದ ಎಲ್ಲಾಜಾರ್ ಮತ್ತು ಈತಾಮಾರ್ ಎಂಬವರಿಗೆ, “ಯೆಹೋವನಿಗೆ ಅಗ್ನಿಯ ಮೂಲಕ ಸಮರ್ಪಿತವಾದ ದ್ರವ್ಯಗಳಲ್ಲಿ ಉಳಿದಿರುವ ಧಾನ್ಯನೈವೇದ್ಯ ದ್ರವ್ಯವನ್ನು ತೆಗೆದುಕೊಂಡು, ಅದರಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಮಾಡಿಸಿ, ಯಜ್ಞವೇದಿಯ ಬಳಿಯಲ್ಲಿ ಊಟಮಾಡಬೇಕು. ಅದು ಮಹಾಪರಿಶುದ್ಧವಾಗಿದೆ.ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರು ಆಗಿರುವುದರಿಂದ ಪವಿತ್ರರಾಗಿರಬೇಕು.ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವುದರಿಂದ ಅವರನ್ನು ಪರಿಶುದ್ಧರೆಂದು ನೀವು ಭಾವಿಸಬೇಕು.“ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.ನಪುಂಸಕನಾಗಲಿ, ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವುದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವುದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.ದೇವರಿಗೆ ನೈವೇದ್ಯವಾದ ಆಹಾರದಲ್ಲಿ ಪರಿಶುದ್ಧವಾದದ್ದನ್ನು ಮತ್ತು ಮಹಾಪರಿಶುದ್ಧವಾದುದನ್ನು ಅವನು ಊಟಮಾಡಬಹುದು.ಹೊತ್ತುಮುಣುಗಿದ ನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು. ಅದು ಅವನ ಆಹಾರವೇ.ಆದರೆ ಯಾಜಕನು ಕ್ರಯಕ್ಕೆ ತೆಗೆದುಕೊಂಡ ಗುಲಾಮರೂ ಮತ್ತು ಅವನ ಮನೆಯಲ್ಲಿ ಹುಟ್ಟಿದ ಗುಲಾಮರು ಅದನ್ನು ಊಟಮಾಡಬಹುದು.ಯಾಜಕನ ಮಗಳು ವಿಧವೆಯಾಗಲಿ ಅಥವಾ ಗಂಡನಿಂದ ಬಿಡಲ್ಪಟ್ಟವಳಾಗಲಿ, ಮಕ್ಕಳಿಲ್ಲದೆ ಇದ್ದರೆ ಬಾಲ್ಯದಲ್ಲಿ ತಂದೆಯ ಬಳಿಯಲ್ಲಿ ಇದ್ದಂತೆಯೇ ಕನ್ಯೆಯಾಗಿಯೇ ತಂದೆಯ ಮನೆಯನ್ನು ಸೇರಿ ತಂದೆಯ ಆಹಾರದಲ್ಲಿ ಭಾಗಿಯಾಗಬಹುದು. ಯಾಜಕರಲ್ಲದ ಇತರರು ಅದನ್ನು ಊಟಮಾಡಲೇಬಾರದು.ಅನ್ಯದೇಶದವನಿಂದ ತೆಗೆದುಕೊಂಡ ಅಂತಹ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದುದಲ್ಲ; ಆದಕಾರಣ ಸಮರ್ಪಣೆ ಆಗುವುದಿಲ್ಲ’” ಅಂದನು.ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕಾದ ಜಾತ್ರೆಯನ್ನು ಯೆಹೋವನಿಗೋಸ್ಕರ ಆಚರಿಸಬೇಕು. ಅದು ಮೊದಲುಗೊಂಡು ಏಳು ದಿನಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.ನೀವು ನಿಮ್ಮ ದೇವರಿಗೆ ಸಲ್ಲಿಸಬೇಕಾದದ್ದನ್ನು ತಂದು ಕೊಡುವವರೆಗೂ ಆ ವರ್ಷದ ಬೆಳೆಯ ರೊಟ್ಟಿಯನ್ನಾಗಲಿ, ಸುಟ್ಟ ತೆನೆಗಳನ್ನಾಗಲಿ ಅಥವಾ ಹಸಿತೆನೆಗಳನ್ನಾಗಲಿ ತಿನ್ನಲೇಬಾರದು. ನಿಮಗೂ, ನಿಮ್ಮ ಸಂತತಿಯವರಿಗೂ ಮತ್ತು ನಿಮ್ಮ ಎಲ್ಲಾ ವಾಸಸ್ಥಾನಗಳಲ್ಲಿಯೂ ಇದು ಶಾಶ್ವತನಿಯಮ.ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು.ಆ ರೊಟ್ಟಿಗಳೊಡನೆ ಒಂದು ವರ್ಷದ ಪೂರ್ಣಾಂಗವಾದ ಏಳು ಕುರಿಗಳನ್ನು, ಒಂದು ಹೋರಿಯನ್ನು ಮತ್ತು ಎರಡು ಟಗರುಗಳನ್ನು ಸಮರ್ಪಿಸಬೇಕು. ಇವು ಧಾನ್ಯದ್ರವ್ಯದೊಡನೆ ಮತ್ತು ಪಾನದ್ರವ್ಯದೊಡನೆ ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವ ಸರ್ವಾಂಗಹೋಮವಾಗುವವು.ಯಾಜಕನು ಇವುಗಳನ್ನು, ಪ್ರಥಮಫಲದ ರೊಟ್ಟಿಗಳನ್ನು ಮತ್ತು ಎರಡು ಕುರಿಗಳನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು. ಅವು ಯೆಹೋವನಿಗೆ ಮೀಸಲಾಗಿ ಯಾಜಕನಿಗೆ ಸಲ್ಲಬೇಕು.“ಅದಲ್ಲದೆ ನೀನು ಗೋದಿಯ ಹಿಟ್ಟಿನಿಂದ ಹನ್ನೆರಡು ರೊಟ್ಟಿಗಳನ್ನು ಮಾಡಬೇಕು; ಪ್ರತಿಯೊಂದು ರೊಟ್ಟಿಯು ಆರಾರು ಸೇರಿನದಾಗಿರಬೇಕು.ಒಂದೊಂದು ರಾಶಿಯ ಮೇಲೆ ಸ್ವಚ್ಛವಾದ ಧೂಪವನ್ನು ಇಡಬೇಕು. ಆ ರೊಟ್ಟಿಗಳ ನೈವೇದ್ಯವನ್ನು ಸೂಚಿಸುವುದಕ್ಕಾಗಿ ಆ ಧೂಪವೇ ಯೆಹೋವನಿಗೆ ಹೋಮಮಾಡಬೇಕು.ಕಣತುಳಿಸುವ ಕೆಲಸವು ದ್ರಾಕ್ಷಿಯ ಬೆಳೆಯ ಕಾಲದ ತನಕ ಮತ್ತು ದ್ರಾಕ್ಷಿಯ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು, ನೀವು ಸಮೃದ್ಧಿಯಾಗಿ ಊಟ ಮಾಡುವಿರಿ, ನಿಮ್ಮ ದೇಶದಲ್ಲಿ ಸುರಕ್ಷಿತವಾಗಿ ವಾಸಮಾಡುವಿರಿ.ನಾನು ನಿಮ್ಮ ಜೀವನಾಧಾರವನ್ನು ತೆಗೆದುಬಿಟ್ಟಾಗ ಹತ್ತು ಜನರು ಹೆಂಗಸರು ಒಂದೇ ಒಲೆಯಲ್ಲಿ ರೊಟ್ಟಿಸುಟ್ಟು, ಅದನ್ನು ತೂಕದ ಪ್ರಕಾರ ಹಂಚಿಕೊಡುವರು; ನೀವು ಅದನ್ನು ಊಟಮಾಡಿದಾಗ ತೃಪ್ತಿಹೊಂದುವುದಿಲ್ಲ.ಅರಣ್ಯಕಾಂಡ13
ಬಳಿಕ ಅವರು ಯೆಹೋವನ ಸಮ್ಮುಖದಲ್ಲಿರುವ ಮೇಜಿನ ಮೇಲೆ ನೀಲಿ ಬಟ್ಟೆಯನ್ನು ಹಾಸಿ ಅದರ ಮೇಲೆ ಮೇಜಿಗೆ ಸೇರಿದ ಪಾತ್ರೆಗಳನ್ನೂ, ಧೂಪಾರತಿಗಳನ್ನೂ, ಹೂಜಿಗಳನ್ನೂ, ಪಾನದ್ರವ್ಯಾರ್ಪಣೆಯ ಬಟ್ಟಲುಗಳನ್ನೂ ಇಡಬೇಕು. ಯಾವಾಗಲೂ ಇರಬೇಕಾದ ರೊಟ್ಟಿಗಳು ಅದರ ಮೇಲೆ ಇರಬೇಕು.ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.ಆ ಟಗರನ್ನೂ, ಪುಟ್ಟಿ ತುಂಬಾ ಹುಳಿಯಿಲ್ಲದ ರೊಟ್ಟಿಗಳನ್ನೂ, ಯಾಜಕನು ಯೆಹೋವನಿಗೆ ಸಮಾಧಾನಯಜ್ಞವಾಗಿ ಸಮರ್ಪಿಸಬೇಕು. ಅವನು ತಂದ ಧಾನ್ಯದ್ರವ್ಯ ಪಾನದ್ರವ್ಯಗಳನ್ನೂ ನೈವೇದ್ಯಮಾಡಬೇಕು.ತರುವಾಯ ಯಾಜಕನು ಬೇಯಿಸಿದ ಆ ಟಗರಿನ ಮುಂದೊಡೆಯನ್ನೂ, ಪುಟ್ಟಿಯಲ್ಲಿನ ಹುಳಿಯಿಲ್ಲದ ಒಂದು ರೊಟ್ಟಿಯನ್ನು, ಹಾಗೂ ಹುಳಿಯಿಲ್ಲದ ಒಂದು ಕಡುಬನ್ನೂ ತೆಗೆದುಕೊಂಡು ನಾಜೀರನು ಕ್ಷೌರಮಾಡಿಸಿಕೊಂಡ ನಂತರ ಅವನ ಕೈಯಲ್ಲಿ ಅರ್ಪಿಸಬೇಕು.ಅಂಥವರು ಎರಡನೆಯ ತಿಂಗಳಿನ ಹದಿನಾಲ್ಕನೆಯ ದಿನದ ಸಂಜೆಯ ವೇಳೆಯಲ್ಲಿ ಅದನ್ನು ಆಚರಿಸಬೇಕು. ಆ ಪಶುವಿನ ಮಾಂಸವನ್ನು ಹುಳಿಯಿಲ್ಲದ ರೊಟ್ಟಿಗಳ ಮತ್ತು ಕಹಿಯಾದ ಸೊಪ್ಪುಗಳ ಸಂಗಡ ಊಟಮಾಡಬೇಕು.ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.ಹೀಗಿರುವುದರಿಂದ ಯೆಹೋವನಿಗೆ ತಿರುಗಿಬೀಳಬೇಡಿರಿ. ಇದಲ್ಲದೆ ಆ ದೇಶದ ಜನರಿಗೆ ಭಯಪಡಬೇಡಿರಿ. ಏಕೆಂದರೆ ನಾವು ಅವರನ್ನು ಸುಲಭವಾಗಿ ಜಯಿಸಿಬಿಡುವೆವು. ಅವರಿಗೆ ನೆರಳಾಗಿದ್ದ ದೇವರು ಅವರನ್ನು ಕೈಬಿಟ್ಟಿದ್ದಾನೆ, ಯೆಹೋವನು ನಮ್ಮ ಸಂಗಡ ಇದ್ದಾನೆ. ಅವರಿಗೆ ಭಯಪಡಬೇಡಿರಿ” ಎಂದರು.ನೀವು ಭೂಮಿಯಿಂದ ಬೆಳೆದ ಬೆಳೆಯನ್ನು ಉಪಯೋಗಿಸುವಾಗ, ಸ್ವಲ್ಪವನ್ನು ಯೆಹೋವನಿಗೋಸ್ಕರ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.ನೀವು ಕಣದಲ್ಲಿ ತುಳಿಸಿದ ದವಸದಲ್ಲಿ ಸ್ವಲ್ಪವನ್ನು ಯೆಹೋವನದೆಂದು ಪ್ರತ್ಯೇಕಿಸುವ ಪ್ರಕಾರವೇ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನೂ ಕಾಣಿಕೆಯಾಗಿ ಪ್ರತ್ಯೇಕಿಸಬೇಕು.ಆಗ ಅವರು ದೇವರಿಗೂ ಮತ್ತು ಮೋಶೆಗೂ ವಿರುದ್ಧವಾಗಿ ಮಾತನಾಡಿ, “ನೀವು ನಮ್ಮನ್ನು ಈ ಮರಳುಗಾಡಿನಲ್ಲಿ ಕೊಲ್ಲಬೇಕೆಂದು ಐಗುಪ್ತ ದೇಶದಿಂದ ಕರೆದುಕೊಂಡು ಬಂದಿರೋ? ಇಲ್ಲಿ ಆಹಾರವೂ ಇಲ್ಲ, ನೀರೂ ಇಲ್ಲ. ಈ ರುಚಿ ಇಲ್ಲದ ಆಹಾರವನ್ನು ತಿಂದು ನಮಗೆ ಬೇಸರವಾಯಿತು” ಎಂದು ಹೇಳಿದರು.“ನೀನು ಇಸ್ರಾಯೇಲರಿಗೆ ಆಜ್ಞಾಪಿಸಿ ಅವರಿಗೆ, ‘ನನಗೆ ಸುಗಂಧಹೋಮಮಾಡುವುದಕ್ಕಾಗಿ ಇಸ್ರಾಯೇಲರು ನನಗೋಸ್ಕರ ತರುವ ಆಹಾರವನ್ನು ನೇಮಕವಾದ ಕಾಲಗಳಲ್ಲಿ ತಂದು ಎಚ್ಚರಿಕೆಯಿಂದ ಸಮರ್ಪಿಸಬೇಕೆಂದು ಅವರಿಗೆ ಆಜ್ಞಾಪಿಸು.’ಅದೇ ತಿಂಗಳಿನ ಹದಿನೈದನೆಯ ದಿನದಲ್ಲಿ ಜಾತ್ರೆ ಪ್ರಾರಂಭವಾಗುವುದು; ಏಳು ದಿನಗಳವರೆಗೂ ಹುಳಿಯಿಲ್ಲದ ರೊಟ್ಟಿಗಳನ್ನು ಊಟಮಾಡಬೇಕು.ಆ ಏಳು ದಿನಗಳಲ್ಲಿಯೂ ನಿತ್ಯ ಸರ್ವಾಂಗಹೋಮವನ್ನು ಸಮರ್ಪಿಸುವುದಲ್ಲದೆ ಮೇಲೆ ಹೇಳಿದ ಕ್ರಮದ ಪ್ರಕಾರ ಪ್ರತಿದಿನವೂ ಹೋಮರೂಪವಾಗಿ ಯೆಹೋವನಿಗೆ ಆಹಾರವನ್ನು, ಪಾನದ್ರವ್ಯವನ್ನು ಸಹ ಸಮರ್ಪಿಸಿ ಆತನಿಗೋಸ್ಕರ ಸುವಾಸನೆಯನ್ನುಂಟುಮಾಡಬೇಕು.ಧರ್ಮೋಪದೇಶಕಾಂಡ10
ಮನುಷ್ಯರು ಆಹಾರದಿಂದ ಮಾತ್ರವಲ್ಲ, ಯೆಹೋವನ ಬಾಯಿಂದ ಹೊರಡುವ ಪ್ರತಿಯೊಂದು ನುಡಿಯಿಂದಲೂ ಬದುಕುತ್ತಾರೆ ಎಂಬುದು ನಿಮಗೆ ತಿಳಿಯುವಂತೆ ಆತನು ನಿಮ್ಮನ್ನು ಕಷ್ಟಕ್ಕೆ ಒಳಪಡಿಸಿ, ಹಸಿವೆಯಿಂದ ಬಳಲಿಸಿ, ನಿಮಗೂ, ನಿಮ್ಮ ಪೂರ್ವಿಕರಿಗೂ ಗೊತ್ತಿಲ್ಲದ ಮನ್ನವನ್ನು ಕೊಟ್ಟು ಪೋಷಿಸಿದನು.ಅಲ್ಲಿ ನೀವು ದುರ್ಭಿಕ್ಷವನ್ನು ಕಾಣದೆ ಸಮೃದ್ಧಿಯಾಗಿ ಊಟಮಾಡಿ, ಯಾವ ಕೊರತೆಯೂ ಇಲ್ಲದೆ ಇರುವಿರಿ. ಆ ದೇಶದಲ್ಲಿ ಕಬ್ಬಿಣದ ಕಲ್ಲು ಸಿಕ್ಕುತ್ತದೆ; ಅಲ್ಲಿಯ ಬೆಟ್ಟಗಳಲ್ಲಿ ತಾಮ್ರದ ಗಣಿಗಳುಂಟು.ಯೆಹೋವನು ನಿಮ್ಮ ಸಂಗಡ ಮಾಡಿದ ನಿಬಂಧನೆಯನ್ನು ಬರೆದ ಆ ಕಲ್ಲಿನ ಹಲಿಗೆಗಳನ್ನು ತೆಗೆದುಕೊಳ್ಳುವುದಕ್ಕೆ ನಾನು ಬೆಟ್ಟವನ್ನು ಹತ್ತಿದ್ದಾಗ ನಾನು ಅನ್ನ ಪಾನಗಳನ್ನು ಬಿಟ್ಟು ಹಗಲಿರುಳು ನಲ್ವತ್ತು ದಿನ ಆ ಬೆಟ್ಟದಲ್ಲಿದ್ದೆನು.ನೀವು ಹೀಗೆ ಅಪರಾಧಮಾಡಿ ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದನ್ನು ನಡಿಸಿ ಆತನನ್ನು ಕೋಪಗೊಳಿಸಿದ ಕಾರಣ ನಾನು ಮೊದಲಿನಂತೆ ಅನ್ನ ಪಾನಗಳನ್ನು ಬಿಟ್ಟು ನಲ್ವತ್ತು ದಿನಗಳು ಹಗಲಿರುಳು ಯೆಹೋವನ ಸನ್ನಿಧಿಯಲ್ಲೇ ಬಿದ್ದಿದ್ದೆನು.ಆತನು ಅನಾಥರ ಮತ್ತು ವಿಧವೆಯರ ನ್ಯಾಯವನ್ನು ಸ್ಥಾಪಿಸುತ್ತಾನೆ. ಪರದೇಶಿಗಳಾದವರಲ್ಲಿ ಪ್ರೀತಿಯಿಟ್ಟು ಅವರಿಗೆ ಅನ್ನವಸ್ತ್ರಗಳನ್ನು ಕೊಡುತ್ತಾನೆ.ಅದರೊಂದಿಗೆ ಹುಳಿಹಾಕಿದ ರೊಟ್ಟಿಯನ್ನು ತಿನ್ನಬಾರದು; ಯಾಕೆಂದರೆ ನೀವು (ರೊಟ್ಟಿಗೆ ಹುಳಿಹಾಕುವುದಕ್ಕೆ ಅವಕಾಶವಿಲ್ಲದೆ) ಅವಸರದಿಂದ ಐಗುಪ್ತದೇಶವನ್ನು ಬಿಟ್ಟು ಬಂದಿರಿ. ನಿಮಗೆ ಬಿಡುಗಡೆಯಾದ ಆ ದಿನವು ನಿಮ್ಮ ಜೀವಮಾನದಲ್ಲೆಲ್ಲಾ ನೆನಪಿನಲ್ಲಿಟ್ಟುಕೊಳ್ಳುವಂತೆ ನೀವು ಕಷ್ಟವನ್ನು ಸೂಚಿಸುವ ಹುಳಿಯಿಲ್ಲದ ರೊಟ್ಟಿಗಳನ್ನು ಏಳು ದಿನಗಳ ವರೆಗೂ ತಿನ್ನಬೇಕು.ಆರು ದಿನ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು; ಏಳನೆಯ ದಿನದಲ್ಲಿ ನಿಮ್ಮ ದೇವರಾದ ಯೆಹೋವನಿಗಾಗಿ ಸಭೆ ಸೇರಿಬರಬೇಕು; ಆ ದಿನದಲ್ಲಿ ಯಾವ ಕೆಲಸವ ಮಾಡಬಾರದು.ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.ಯಾಕೆಂದರೆ ನೀವು ಐಗುಪ್ತದೇಶದಿಂದ ಬಂದಾಗ ಅಮ್ಮೋನಿಯರು ಅನ್ನಪಾನಗಳನ್ನು ತಂದು ನಿಮ್ಮನ್ನು ಎದುರುಗೊಳ್ಳಲಿಲ್ಲ; ಮೋವಾಬ್ಯರು ನಿಮ್ಮನ್ನು ಶಪಿಸುವುದಕ್ಕಾಗಿ ಬೆಯೋರನ ಮಗನಾದ ಬಿಳಾಮನಿಗೆ ಹಣಕೊಟ್ಟು ಎರಡು ನದಿಗಳ ಮಧ್ಯದಲ್ಲಿರುವ ಅರಾಮಿನ ಪೆತೋರ್ ಊರಿನಿಂದ ಅವನನ್ನು ಕರೆಯಿಸಿದರು.ನೀವು ರೊಟ್ಟಿಯನ್ನು ತಿನ್ನಲಿಲ್ಲ, ದ್ರಾಕ್ಷಾರಸವನ್ನಾಗಲಿ ಯಾವ ಮದ್ಯವನ್ನಾಗಲಿ ಕುಡಿಯಲೇ ಇಲ್ಲ. ಯೆಹೋವನೇ ನಿಮ್ಮ ದೇವರು ಎಂಬುದು ನಿಮಗೆ ತಿಳಿಯಬೇಕೆಂಬ ಉದ್ದೇಶದಿಂದ ಹೀಗಾಯಿತು.ಯೆಹೋಶುವನು3
ಮರುದಿನದಿಂದ ಆ ದೇಶದ ಧಾನ್ಯವನ್ನು ಊಟಕ್ಕೆ ಉಪಯೋಗಿಸಲು ತೊಡಗಿದರು. ಹೇಗೆಂದರೆ ಅದೇ ಪಸ್ಕಹಬ್ಬದ ದಿನದಲ್ಲಿ ಅವರು ಹುಳಿಯಿಲ್ಲದ ರೊಟ್ಟಿಗಳನ್ನೂ, ಸುಟ್ಟ ತೆನೆಗಳನ್ನೂ ತಿಂದರು.ಹರಿದುಹೋಗಿದ್ದ ಹಳೆಯ ಕೆರಗಳನ್ನು ಮೆಟ್ಟಿಕೊಂಡರು. ಹಳೆಯ ಬಟ್ಟೆಗಳನ್ನು ಹಾಕಿಕೊಂಡರು. ಒಣರೊಟ್ಟಿ ಚೂರುಗಳನ್ನು ಬುತ್ತಿಯಾಗಿ ಕಟ್ಟಿಕೊಂಡರು.ನಾವು ನಿಮ್ಮನ್ನು ಎದುರುಗೊಳ್ಳುವುದಕ್ಕಾಗಿ ಮನೆಬಿಟ್ಟು ಹೊರಟಾಗ ಪ್ರಯಾಣಕ್ಕೋಸ್ಕರ ತೆಗೆದುಕೊಂಡ ಈ ರೊಟ್ಟಿ ಬಿಸಿಯಾಗಿತ್ತು. ಈಗ ಒಣಗಿ ಚೂರುಚೂರಾಗಿದೆ ನೋಡಿರಿ.ನ್ಯಾಯಸ್ಥಾಪಕರು11
ಜನರು ಅನ್ಯದೇವತೆಗಳನ್ನು ಆರಿಸಿಕೊಂಡಿದ್ದರು; ಯುದ್ಧವು ಉರುಬಾಗಿಲವರೆಗೂ ಬಂದಿತ್ತು. ಇಸ್ರಾಯೇಲರ ನಲ್ವತ್ತು ಸಾವಿರ ಸೈನಿಕರ ಮಧ್ಯದಲ್ಲಿ ಗುರಾಣಿ ಬರ್ಜಿಗಳು ಇರಲೇ ಇಲ್ಲ.ಗಿದ್ಯೋನನು ಮನೆಗೆ ಹೋಗಿ ಒಂದು ಆಡಿನ ಮರಿಯನ್ನು ತೆಗೆದುಕೊಂಡು, ಒಂದು ಏಫಾ ಅಂದರೆ ಸುಮಾರು ಮೂವ್ವತ್ತು ಸೇರು ಹಿಟ್ಟಿನಿಂದ ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು, ಮಾಂಸವನ್ನು ಸಿದ್ಧಮಾಡಿ, ಪುಟ್ಟಿಯಲ್ಲಿಟ್ಟು ಅದರ ರಸವನ್ನು ಬಟ್ಟಲಿನಲ್ಲಿ ಹೊಯ್ದು, ಎಲ್ಲವನ್ನೂ ಏಲಾ ಮರದ ಕೆಳಗೆ ಆತನ ಮುಂದೆ ತಂದಿಟ್ಟನು.ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಆ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.ಅನಂತರ ಯೆಹೋವನ ದೂತನು ತನ್ನ ಕೈಕೋಲನ್ನು ಚಾಚಿ ಅದರ ತುದಿಯನ್ನು ಆ ರೊಟ್ಟಿಗಳಿಗೂ, ಮಾಂಸಕ್ಕೂ ಮುಟ್ಟಿಸಲು ಬಂಡೆಯಿಂದ ಬೆಂಕಿಯೆದ್ದು ಅವೆರಡನ್ನೂ ದಹಿಸಿಬಿಟ್ಟಿತು; ಯೆಹೋವನ ದೂತನು ಅದೃಶ್ಯನಾದನು.ಗಿದ್ಯೋನನು ಬಂದಾಗ ಅವರಲ್ಲೊಬ್ಬನು ತನ್ನ ಜೊತೆಗಾರನಿಗೆ ಒಂದು ಕನಸನ್ನು ತಿಳಿಸುತ್ತಿದ್ದನು. ಅವನು, “ಇಗೋ, ನಾನು ಒಂದು ಕನಸು ಕಂಡೆನು; ಅದರಲ್ಲಿ ಒಂದು ಜವೆಗೋದಿಯ ರೊಟ್ಟಿಯು ಉರುಳುತ್ತಾ ಮಿದ್ಯಾನ್ಯರ ಪಾಳೆಯದೊಳಗೆ ಬಂದು, ಒಂದು ಡೇರೆಗೆ ತಗಲಿ, ಅದನ್ನು ಬುಡಮೇಲು ಮಾಡಿ ಬೀಳಿಸಿಬಿಟ್ಟಿತು” ಎಂದು ಹೇಳಿದನುಗಿದ್ಯೋನನು ಸುಖೋತಿನವರಿಗೆ, “ದಯವಿಟ್ಟು ನನ್ನ ಜೊತೆಯಲ್ಲಿ ಬಂದಿರುವವರಿಗೆ ಕೆಲವು ರೊಟ್ಟಿಗಳನ್ನು ಕೊಡಿರಿ, ಅವರು ಬಹಳ ದಣಿದಿದ್ದಾರೆ; ನಾನು ಮಿದ್ಯಾನ್ಯರ ಅರಸರಾದ ಜೆಬಹ, ಚಲ್ಮುನ್ನರನ್ನು ಹಿಂದಟ್ಟುತ್ತಾ ಇದ್ದೇನೆ” ಅಂದನು.ಆದರೆ ಸುಖೋತಿನ ಮುಖಂಡರು ಅವನಿಗೆ, “ನಾವು ನಿನ್ನ ಸೈನಿಕರಿಗೆ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ನೀನು ಕೈಕಟ್ಟಿ ವಶಮಾಡಿಕೊಂಡಿದ್ದೀಯೋ?” ಎಂದು ಉತ್ತರಕೊಟ್ಟರು.ಅನಂತರ ಅವನು ಸುಖೋತಿನವರ ಬಳಿಗೆ ಹೋಗಿ ಅವರಿಗೆ, “ನಾವು ದಣಿದಿರುವ ನಿನ್ನ ಸೈನಿಕರಿಗೋಸ್ಕರ ರೊಟ್ಟಿಗಳನ್ನು ಕೊಡುವುದಕ್ಕೆ ಜೆಬಹ, ಚಲ್ಮುನ್ನರನ್ನು ಕೈಕಟ್ಟಿ ಸ್ವಾಧೀನಮಾಡಿಕೊಂಡಿದ್ದೀಯೋ? ಎಂದು ನನ್ನನ್ನು ನಿಂದಿಸಿದಿರಲ್ಲಾ;ಯೆಹೋವನ ದೂತನು ಮಾನೋಹನಿಗೆ, “ನೀನು ನನ್ನನ್ನು ನಿಲ್ಲಿಸಿಕೊಂಡರೂ ನಾನು ನಿನ್ನ ಆಹಾರವನ್ನು ಊಟಮಾಡುವುದಿಲ್ಲ; ಯಜ್ಞಮಾಡಬೇಕೆಂದು ನಿನಗೆ ಮನಸ್ಸಿದ್ದರೆ ಅದನ್ನು ಯೆಹೋವನಿಗೆ ಸಮರ್ಪಿಸು” ಅಂದನು. ಅವನು ಯೆಹೋವನ ದೂತನೆಂಬುದು ಮಾನೋಹನಿಗೆ ಗೊತ್ತಿರಲಿಲ್ಲ.ಅವರು ನಾಲ್ಕನೆಯ ದಿನ ಬೆಳಿಗ್ಗೆ ಎದ್ದು ಹೋಗುವುದಕ್ಕೆ ಸಿದ್ಧರಾಗಲು ಆ ಸ್ತ್ರೀಯ ತಂದೆಯು ತನ್ನ ಅಳಿಯನಿಗೆ, “ಮೊದಲು ಸ್ವಲ್ಪ ಊಟಮಾಡಿ ಬಲಹೊಂದು; ಆಮೇಲೆ ಹೋಗಬಹುದು” ಎಂದು ಹೇಳಲುನಮ್ಮ ಕತ್ತೆಗಳಿಗೆ ಹುಲ್ಲೂ ಕಾಳೂ ಇವೆ; ನನಗೂ ನಿನ್ನ ಸೇವಕಿಗೂ, ನಿನ್ನ ಸೇವಕನ ಸಂಗಡ ಬಂದಿರುವ ಈ ಪ್ರಾಯಸ್ಥನಿಗೂ ಸಾಕಾಗುವಷ್ಟು ರೊಟ್ಟಿಯೂ, ದ್ರಾಕ್ಷಾರಸವೂ ಇರುತ್ತವೆ. ನಮಗೆ ಹೆಚ್ಚು ಏನೂ ಬೇಕಾಗಿರುವುದಿಲ್ಲ” ಎಂದು ಹೇಳಿದನು.ರೂತಳು2
ಯೆಹೋವನು ತನ್ನ ಜನರನ್ನು ಸಂದರ್ಶಿಸಿ ಅವರಿಗೆ ಆಹಾರವನ್ನು ಅನುಗ್ರಹಿಸಿದ್ದಾನೆಂಬ ವರ್ತಮಾನವನ್ನು ಕೇಳಿದ ನವೊಮಿಯು ತನ್ನ ಸೊಸೆಯರೊಡನೆ ಮೋವಾಬ್ ದೇಶದಿಂದ ಯೆಹೂದ ದೇಶಕ್ಕೆ ಹೋಗಬೇಕೆಂದು ನಿರ್ಧರಿಸಿದಳು.ಊಟದ ವೇಳೆಯಲ್ಲಿ ಬೋವಜನು “ಇಲ್ಲಿ ಬಾ; ರೊಟ್ಟಿಯನ್ನು ತೆಗೆದುಕೊಂಡು ಮುರಿದು ಹುಳಿರಸದಲ್ಲಿ ಅದ್ದಿ ತಿನ್ನು” ಎಂದು ಕರೆಯಲು ಆಕೆಯು ಹೋಗಿ ತೆನೆ ಕೊಯ್ಯುವವರ ಬಳಿಯಲ್ಲಿ ಕುಳಿತುಕೊಂಡಳು. ಇದಲ್ಲದೆ ಅವನು ಆಕೆಗೆ ಸುಟ್ಟ ತೆನೆಗಳನ್ನು ಕೊಟ್ಟನು. ಆಕೆಯು ತಿಂದು ತೃಪ್ತಳಾಗಿ ಇನ್ನೂ ಉಳಿಸಿಕೊಂಡಳು.1 ಸಮುವೇಲನು23
ಹೊಟ್ಟೆತುಂಬಾ ಊಟಮಾಡುತ್ತಿದ್ದವರು ಅನ್ನಕ್ಕೋಸ್ಕರ ಕೂಲಿಮಾಡುತ್ತಾರೆ; ಹಸಿದವರು ಉಂಡು ಸುಖದಿಂದಿರುತ್ತಾರೆ. ಬಂಜೆಯು ಏಳು ಮಂದಿ ಮಕ್ಕಳನ್ನು ಹೆರುವಳು; ಮಕ್ಕಳುಳ್ಳವಳು ದಿಕ್ಕಿಲ್ಲದೆ ಹೋಗುವಳು.ನಿನ್ನ ಮನೆಯಲ್ಲಿ ಉಳಿದವರು ಬಂದು ಅವನ ಮುಂದೆ ಅಡ್ಡ ಬಿದ್ದು, ನಮಗೆ ಒಂದು ಬೆಳ್ಳಿಕಾಸನ್ನು ರೊಟ್ಟಿಯ ಚೂರನ್ನು ಕೊಡು; ಒಂದು ತುತ್ತು ಅನ್ನಕ್ಕೆ ಮಾರ್ಗವಾಗುವ ಹಾಗೆ ಯಾಜಕನ ಸೇವೆಯಲ್ಲಿ ಯಾವುದಕ್ಕಾದರೂ ನಮ್ಮನ್ನು ಸೇರಿಸಿಕೋ” ಎಂದು ಅವನನ್ನು ಬೇಡಿಕೊಳ್ಳುವರು, ಎಂದು ಹೇಳಿದನು.ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿಯು ಮುಗಿದುಹೋಯಿತು. ಆ ದೇವರ ಮನುಷ್ಯನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿಲ್ಲವಲ್ಲಾ; ಏನು ಕೊಡಬೇಕು?” ಎನ್ನಲುನೀನು ಅಲ್ಲಿಂದ ಮುಂದೆ ನಡೆದು ತಾಬೋರಿನ ಹತ್ತಿರವಿರುವ ಏಲೋನ್ ವೃಕ್ಷದ ಬಳಿಗೆ ಬಂದಾಗ ದೇವದರ್ಶನಕ್ಕಾಗಿ ಬೇತೇಲಿಗೆ ಹೋಗುವ ಮೂವರು ಜನರು ನಿನ್ನನ್ನು ಎದುರುಗೊಳ್ಳುವರು. ಅವರಲ್ಲೊಬ್ಬನು ಮೂರು ಹೋತಮರಿಗಳನ್ನೂ, ಮತ್ತೊಬ್ಬನು ಮೂರು ರೊಟ್ಟಿಗಳನ್ನೂ, ಇನ್ನೊಬ್ಬನು ದ್ರಾಕ್ಷಾರಸದ ಒಂದು ಬುದ್ದಲಿಯನ್ನೂ ಹೊತ್ತುಕೊಂಡಿರುವರು.ಅವರು ನಿನ್ನ ಕ್ಷೇಮಸಮಾಚಾರವನ್ನು ವಿಚಾರಿಸಿ ಎರಡು ರೊಟ್ಟಿಗಳನ್ನು ನಿನಗೆ ಕೊಡುವರು; ನೀನು ಅವುಗಳನ್ನು ತೆಗೆದುಕೊಳ್ಳಬೇಕು.ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.ಇಷಯನು ರೊಟ್ಟಿಯನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ, ಒಂದು ಹೋತಮರಿಯನ್ನೂ, ಕತ್ತೆಯ ಮೇಲೆ ಹೇರಿಸಿ ತನ್ನ ಮಗನಾದ ದಾವೀದನ ಮುಖಾಂತರ ಸೌಲನಿಗೆ ಕಳುಹಿಸಿದನು.ಒಂದು ದಿನ ಇಷಯನು ತನ್ನ ಮಗನಾದ ದಾವೀದನಿಗೆ, “ಇಗೋ ಇಲ್ಲಿ ಮೂವತ್ತು ಸೇರು ಹುರಿದ ಧಾನ್ಯ, ಹತ್ತು ರೊಟ್ಟಿಗಳೂ ಇರುತ್ತವೆ. ಇವುಗಳನ್ನು ತೆಗೆದುಕೊಂಡು ಶೀಘ್ರವಾಗಿ ಪಾಳೆಯಕ್ಕೆ ಹೋಗಿ ನಿನ್ನ ಅಣ್ಣಂದಿರಿಗೆ ಕೊಡು.ದಾವೀದನು ಹೊಲದಲ್ಲಿ ಅಡಗಿಕೊಂಡನು.ಮರುದಿನದಲ್ಲಿಯೂ, ಅಂದರೆ ತಿಂಗಳಿನ ಎರಡನೆಯ ದಿನದಲ್ಲಿಯೂ ದಾವೀದನ ಸ್ಥಾನ ಬರಿದಾಗಿದ್ದರಿಂದ ಸೌಲನು, “ಇಷಯನ ಮಗನು ನಿನ್ನೆಯೂ, ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ?” ಎಂದು ತನ್ನ ಮಗನಾದ ಯೋನಾತಾನನನ್ನು ಕೇಳಿದನು.ಅವನು ಬಲು ಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆಯು ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿನ ಊಟಮಾಡಲೇ ಇಲ್ಲ.ಈಗ ನಿನ್ನ ಕೈಯಲ್ಲಿ ಏನಾದರೂ ಉಂಟೋ? ನಾಲ್ಕೈದು ರೊಟ್ಟಿಗಳಾದರೂ, ಬೇರೆ ಯಾವ ಆಹಾರಪದಾರ್ಥವಾದರೂ ಇದ್ದರೆ ನನಗೆ ಕೊಟ್ಟುಬಿಡು” ಎಂದನು.ಯಾಜಕನು ದಾವೀದನಿಗೆ, “ನನ್ನ ಬಳಿಯಲ್ಲಿ ಮೀಸಲು ರೊಟ್ಟಿಗಳು ಹೊರತು ಬೇರೆ ರೊಟ್ಟಿಗಳಿಲ್ಲ. ನಿನ್ನ ಆಳುಗಳು ಸ್ತ್ರೀಸಂಗ ಬಿಟ್ಟವರಾಗಿದ್ದರೆ ಅವುಗಳನ್ನು ಕೊಡಬಹುದು” ಎಂದನು.ಬಿಸಿರೊಟ್ಟಿಗಳನ್ನು ಅರ್ಪಿಸಿದ ಆ ದಿನಗಳಲ್ಲಿ ಯೆಹೋವನ ಸನ್ನಿಧಿಯಿಂದ ತೆಗೆಯಲ್ಪಟ್ಟ ನೈವೇದ್ಯವಾದ ಮೊದಲ ರೊಟ್ಟಿಗಳ ಹೊರತು ಅಲ್ಲಿ ಬೇರೆ ರೊಟ್ಟಿಗಳು ಇರಲಿಲ್ಲವಾದ್ದರಿಂದ, ಯಾಜಕನು ಆ ಪರಿಶುದ್ಧವಾದ ರೊಟ್ಟಿಗಳನ್ನೇ ಕೊಟ್ಟುಬಿಟ್ಟನು.ಆಗ ಸೌಲನು ಅವನಿಗೆ, “ನೀನು ನನಗೆ ವಿರೋಧವಾಗಿ ಇಷಯನ ಮಗನೊಡನೆ ಒಳಸಂಚುಮಾಡಿದ್ದೇಕೆ? ಅವನು ನನಗೆ ವಿರೋಧವಾಗಿ ಎದ್ದು ನನ್ನ ಜೀವಕ್ಕಾಗಿ ಹೊಂಚುಹಾಕುವಂತೆ ನೀನು ಅವನಿಗೆ ರೊಟ್ಟಿಕತ್ತಿಗಳನ್ನು ಕೊಟ್ಟು, ದೈವೋತ್ತರವನ್ನು ತಿಳಿಸಿದ್ದೇಕೆ?” ಎಂದು ಕೇಳಿದನುಉಣ್ಣೆಕತ್ತರಿಸುವವರಿಗೋಸ್ಕರ ನಾನು ಸಿದ್ಧ ಮಾಡಿಸಿರುವ ಮಾಂಸವನ್ನು ಆಹಾರಪಾನಗಳನ್ನೂ, ಎಲ್ಲಿಂದಲೋ ಬಂದವರಿಗೆ ಕೊಟ್ಟುಬಿಡಬೇಕೋ?” ಎಂದು ಉತ್ತರ ಕೊಟ್ಟನು.ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ,ಸೌಲನು ಸಮುವೇಲನ ಮಾತುಗಳನ್ನು ಕೇಳಿದ ಕೂಡಲೇ ಭಯಭ್ರಾಂತನಾಗಿ ನೆಲದ ಮೇಲೆ ಉದ್ದಕ್ಕೆ ಬಿದ್ದನು. ಅವನು ಇಡೀ ದಿನ ಊಟಮಾಡಲಿಲ್ಲವಾದ್ದರಿಂದ ಅವನಲ್ಲಿ ಬಲವೇ ಇರಲಿಲ್ಲ.ಆದುದರಿಂದ ನೀನು ದಯವಿಟ್ಟು ನಿನ್ನ ದಾಸಿಯ ಮಾತನ್ನು ಕೇಳಬೇಕು. ಸ್ವಲ್ಪ ಆಹಾರ ತರುತ್ತೇನೆ, ಪ್ರಯಾಣಕ್ಕೆ ಬಲಬರುವ ಹಾಗೆ ಅದನ್ನು ಊಟಮಾಡು” ಎಂದು ಹೇಳಿದಳು.ಆ ಸ್ತ್ರೀಗೆ ಮನೆಯಲ್ಲಿ ಒಂದು ಕೊಬ್ಬಿದ ಕರುವಿತ್ತು. ಆಕೆಯು ಶೀಘ್ರವಾಗಿ ಅದನ್ನು ಕೊಯ್ದು, ಸಿದ್ಧಮಾಡಿ, ಹಿಟ್ಟನ್ನು ತೆಗೆದುಕೊಂಡು ನಾದಿ, ಹುಳಿಯಿಲ್ಲದ ರೊಟ್ಟಿಗಳನ್ನು ಸುಟ್ಟು ಸೌಲನಿಗೂ ಅವನ ಸೇವಕರಿಗೂ ಬಡಿಸಿದಳು.ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,ಅಂಜೂರ ಹಣ್ಣಿನ ಉಂಡೆಯನ್ನೂ ಎರಡು ದ್ರಾಕ್ಷಿ ಗೊಂಚಲುಗಳನ್ನು ಕೊಟ್ಟರು. ಮೂರು ದಿನ ಹಗಲಿರುಳು ಅನ್ನಪಾನವಿಲ್ಲದೆ ಬಹಳವಾಗಿ ಬಳಲಿಹೋಗಿದ್ದ ಇವನು ಅವುಗಳನ್ನು ತಿನ್ನುತ್ತಲೇ ಚೇತರಿಸಿಕೊಂಡನು.2 ಸಮುವೇಲನು15
ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.ಸೂರ್ಯಸ್ತಮಾನಕ್ಕೆ ಮೊದಲೇ ಜನರೆಲ್ಲರೂ ದಾವೀದನ ಬಳಿಗೆ ಬಂದು ಅವನನ್ನು ಊಟಕ್ಕೆ ಎಬ್ಬಿಸಬೇಕೆಂದು ಪ್ರಯತ್ನಿಸಿದರು. ಆದರೆ ಅವನು, “ಸೂರ್ಯನು ಮುಣುಗುವ ಮೊದಲು ನಾನು ರೊಟ್ಟಿಯನ್ನಾಗಲಿ, ಬೇರೆ ಯಾವುದನ್ನಾಗಲಿ ಬಾಯಲ್ಲಿ ಹಾಕಿದರೆ ದೇವರು ನನಗೆ ಬೇಕಾದದ್ದನ್ನು ಮಾಡಲಿ” ಎಂದು ಆಣೆಯಿಟ್ಟು ಹೇಳಿದನು.ಸಭೆಯಾಗಿ ಸೇರಿ ಬಂದಿರುವ ಇಸ್ರಾಯೇಲರ ಪ್ರತಿಯೊಬ್ಬ ಗಂಡಸಿಗೂ ಹೆಂಗಸಿಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಮಾಂಸವನ್ನೂ ಮತ್ತು ದ್ರಾಕ್ಷಿ ಹಣ್ಣಿನ ಉಂಡೆಯನ್ನೂ ಕೊಡಿಸಿದರು. ತರುವಾಯ ಜನರೆಲ್ಲರೂ ತಮ್ಮ ತಮ್ಮ ಮನೆಗಳಿಗೆ ಹೋದರು.ಆಗ ದಾವೀದನು ಅವನಿಗೆ, “ಹೆದರಬೇಡ, ನಿನ್ನ ತಂದೆಯಾದ ಯೋನಾತಾನನನ್ನು ನೆನಸಿ ನಿನಗೆ ದಯೆತೋರಿಸುತ್ತೇನೆ. ನಿನ್ನ ಅಜ್ಜನಾದ ಸೌಲನ ಭೂಮಿಯನ್ನೆಲ್ಲಾ ನಿನಗೆ ಹಿಂದಕ್ಕೆ ಕೊಡುತ್ತೇನೆ, ಮತ್ತು ನೀನು ಪ್ರತಿ ದಿನ ನನ್ನ ಪಂಕ್ತಿಯಲ್ಲೇ ಊಟಮಾಡಬೇಕು” ಎಂದು ಹೇಳಿದನು.ನೀನು, ನಿನ್ನ ಮಕ್ಕಳೂ ಮತ್ತು ನಿನ್ನ ದಾಸರು ನಿನ್ನ ಯಜಮಾನನ ಮೊಮ್ಮಗನ ಆಹಾರಕ್ಕಾಗಿ ಭೂಮಿಯನ್ನು ವ್ಯವಸಾಯ ಮಾಡಿ, ಅದರ ಬೆಳೆಯನ್ನು ಇವರ ಮನೆಯವರ ಅಶನಾರ್ಥವಾಗಿ (ಜೀವನಾಂಶಕ್ಕಾಗಿ) ತಂದು ಕೊಡಬೇಕು. ಆದರೆ ಮೆಫೀಬೋಶೆತ್ತಿಗಾದರೋ ನಿತ್ಯವೂ ನನ್ನ ಪಂಕ್ತಿಯಲ್ಲಿ ಭೋಜನವಾಗುವುದು” ಎಂದು ಹೇಳಿದನು. ಚೀಬನಿಗೆ ಹದಿನೈದು ಮಂದಿ ಗಂಡು ಮಕ್ಕಳೂ, ಇಪ್ಪತ್ತು ಮಂದಿ ಸೇವಕರು ಇದ್ದರು.ಬಡವನಿಗೆ ಒಂದು ಹೆಣ್ಣು ಕುರಿಮರಿಯ ಹೊರತು ಬೇರೇನೂ ಇರಲಿಲ್ಲ. ಅವನು ಅದನ್ನು ಕೊಂಡುಕೊಂಡು ಸಾಕುತ್ತಿದ್ದನು. ಅದು ಮಗಳಂತೆ ಅವನ ಸಂಗಡಲೂ, ಅವನ ಮಕ್ಕಳ ಸಂಗಡಲೂ ಬೆಳೆಯುತ್ತಾ, ಅವರೊಡನೆ ರೊಟ್ಟಿ ತಿನ್ನುತ್ತಾ, ಅವರ ಪಾತ್ರೆಯಲ್ಲೇ ನೀರು ಕುಡಿಯುತ್ತಾ ಇತ್ತು. ಅವನ ಎದೆ ಮೇಲೆಯೇ ಒರಗಿಕೊಂಡು ನಿದ್ದೆ ಮಾಡುತ್ತಿತ್ತು.ಅವನ ಮನೆಯ ಹಿರಿಯ ಸೇವಕರು ಅವನನ್ನು ಎಬ್ಬಿಸುವುದಕ್ಕೆ ಹೋದರು. ಆದರೆ ಅವನು ಏಳಲೇ ಇಲ್ಲ. ಅವರೊಡನೆ ಆಹಾರ ತೆಗೆದುಕೊಳ್ಳಲೂ ಇಲ್ಲ.ಆಗ ದಾವೀದನು ನೆಲದಿಂದೆದ್ದು, ಸ್ನಾನ ಮಾಡಿ, ತೈಲ ಹಚ್ಚಿಕೊಂಡು, ತನ್ನ ಬಟ್ಟೆಗಳನ್ನು ಬದಲಿಸಿ, ಯೆಹೋವನ ಮಂದಿರಕ್ಕೆ ಹೋಗಿ ಆರಾಧನೆ ಮಾಡಿದನು. ಅನಂತರ ಮನೆಗೆ ಬಂದು ಆಹಾರ ತರಿಸಿ ಊಟಮಾಡಿದನು.ಇದನ್ನು ನೋಡಿ ಅವನ ಸೇವಕರು ಅವನಿಗೆ, “ಇದೇನು ನೀನು ಮಾಡಿದ್ದು? ಹುಡುಗನು ಜೀವದಿಂದಿದ್ದಾಗ ಅಳುತ್ತಾ ಉಪವಾಸಮಾಡಿದ್ದೀ. ಹುಡುಗನು ಸತ್ತ ನಂತರ ಎದ್ದು ಊಟ ಮಾಡಿರುವೆ” ಎಂದರು.ಆಗ ಯೋನಾದಾಬನು ಅವನಿಗೆ, “ನೀನು ಅಸ್ವಸ್ಥನಾದವನಂತೆ ಹಾಸಿಗೆಯ ಮೇಲೆ ಮಲಗಿಕೋ. ನಿನ್ನ ತಂದೆಯು ನಿನ್ನನ್ನು ನೋಡುವುದಕ್ಕೆ ಬಂದಾಗ ಅವನಿಗೆ, ‘ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನಗಾಗಿ ಆಹಾರ ಸಿದ್ಧಮಾಡುವುದಕ್ಕೆ ಕಳುಹಿಸು. ಆಕೆ ನನ್ನೆದುರಿನಲ್ಲಿಯೆ ಸಿದ್ಧಮಾಡಿ, ತನ್ನ ಕೈಯಿಂದಲೇ ಊಟಮಾಡಿಸಲಿ’ ಎಂದು ಹೇಳು” ಎಂದನು.ಅಮ್ನೋನನು ಅಸ್ವಸ್ಥನಾದವನಂತೆ ಮಲಗಿಕೊಂಡನು. ಅರಸನು ಅವನನ್ನು ನೋಡುವುದಕ್ಕೆ ಬಂದಾಗ ಅವನು ಅರಸನಿಗೆ, “ದಯವಿಟ್ಟು ನನ್ನ ತಂಗಿಯಾದ ತಾಮಾರಳನ್ನು ನನ್ನ ಬಳಿಗೆ ಕಳುಹಿಸು. ಆಕೆ ನನಗೋಸ್ಕರ ನನ್ನ ಕಣ್ಣ ಮುಂದೆಯೇ ಆಹಾರವನ್ನು ಸಿದ್ಧಮಾಡಿಕೊಡುವುದಾದರೆ ಊಟಮಾಡುವೆನು” ಎಂದು ಹೇಳಿದನು.ಕೂಡಲೆ ಆಕೆಯು ತನ್ನ ಅಣ್ಣನಾದ ಅಮ್ನೋನನ ಮನೆಗೆ ಹೋದಳು. ಅವನು ಮಲಗಿದ್ದನು. ಆಕೆಯು ಹೋಗಿ ಹಿಟ್ಟು ತೆಗೆದುಕೊಂಡು ನಾದಿ, ಅವನ ಕಣ್ಣ ಮುಂದೆಯೇ ರೊಟ್ಟಿಗಳನ್ನು ಮಾಡಿದಳು.ಎಲ್ಲರೂ ಹೋದ ಮೇಲೆ ಅವನು ತಾಮಾರಳಿಗೆ, “ಆಹಾರವನ್ನು ಈ ಕೋಣೆಗೆ ತೆಗೆದುಕೊಂಡು ಬಾ; ನೀನಾಗಿ ತಂದುಕೊಟ್ಟರೆ ಊಟಮಾಡುತ್ತೇನೆ” ಎಂದು ಹೇಳಿದನು. ಆಗ ತಾಮಾರಳು ತಾನು ಮಾಡಿದ ಆಹಾರವನ್ನು ಅಣ್ಣನಾದ ಅಮ್ನೋನನಿದ್ದ ಕೋಣೆಗೆ ತೆಗೆದುಕೊಂಡು ಹೋಗಿ ಅವನ ಮುಂದಿಟ್ಟಳು.ದಾವೀದನು ಗುಡ್ಡದ ತುದಿಯ ಆಚೆಗೆ ಹೋದ ಕೂಡಲೆ ಮೆಫೀಬೋಶೆತನ ಸೇವಕನಾದ ಚೀಬನು ತಡಿಹಾಕಿದ ಎರಡು ಕತ್ತೆಗಳ ಮೇಲೆ ಇನ್ನೂರು ರೊಟ್ಟಿಗಳನ್ನೂ, ನೂರು ಒಣಗಿದ ದ್ರಾಕ್ಷಿ ಗೊಂಚಲುಗಳನ್ನೂ, ನೂರು ಅಂಜೂರ ಹಣ್ಣುಗಳನ್ನೂ, ಒಂದು ಬುದ್ದಲಿ ದ್ರಾಕ್ಷಾರಸವನ್ನೂ ಹೇರಿಕೊಂಡು ಬಂದು ಅವನನ್ನು ಎದುರುಗೊಂಡನು.ಅರಸನು ಚೀಬನನ್ನು, “ಇವುಗಳನ್ನು ಯಾಕೆ ತಂದಿ?” ಎಂದು ಕೇಳಿದನು. ಅವನು, “ಅರಸನ ಮನೆಯವರು ಸವಾರಿಮಾಡುವುದಕ್ಕಾಗಿ ಕತ್ತೆಗಳನ್ನು, ಆಳುಗಳು ತಿನ್ನುವುದಕ್ಕಾಗಿ ಹಣ್ಣು ಮತ್ತು ರೊಟ್ಟಿಗಳನ್ನು, ಅರಣ್ಯದಲ್ಲಿ ದಣಿದವರು ಕುಡಿಯುವುದಕ್ಕಾಗಿ ದ್ರಾಕ್ಷಾರಸವನ್ನು ತಂದಿದ್ದೇನೆ” ಎಂದು ಉತ್ತರಕೊಟ್ಟನು.1 ಅರಸುಗಳು25
ಸೊಲೊಮೋನನ ಅರಮನೆಗೆ ಪ್ರತಿದಿನ ಬೇಕಾಗುವ ಆಹಾರಪದಾರ್ಥಗಳು, ಮೂವತ್ತು ಕೋರ್ ಗೋದಿಯ ಹಿಟ್ಟು, ಅರುವತ್ತು ಕೋರ್ ಜವೆಗೋದಿಯ ಹಿಟ್ಟು,ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.ಸೊಲೊಮೋನನು ಯೆಹೋವನ ಆಲಯಕ್ಕೋಸ್ಕರ ಮಾಡಿಸಿದ ಒಳಗಿನ ಸಾಮಾನುಗಳು ಯಾವುವೆಂದರೆ - ಬಂಗಾರದ ಧೂಪವೇದಿಯು ನೈವೇದ್ಯವಾದ ರೊಟ್ಟಿಗಳನ್ನಿಡುವುದಕ್ಕಾಗಿ ಬಂಗಾರದ ಮೇಜು,ಅವರು ಮೊದಲು ಮಿದ್ಯಾನಿಗೂ, ಆ ಮೇಲೆ ಪಾರಾನಿಗೂ ಬಂದರು. ಅಲ್ಲಿಂದ ಕೆಲವು ಜನರು ಪಾರಾನಿನ ಜನರನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಐಗುಪ್ತದ ಅರಸನಾದ ಫರೋಹನ ಬಳಿಗೆ ಬಂದರು. ಫರೋಹನು ಹದದನಿಗೆ ಆಹಾರವನ್ನು, ಮನೆಯನ್ನೂ ಮತ್ತು ಭೂಮಿಯನ್ನೂ ಕೊಟ್ಟನು.ಆದರೆ ದೇವರ ಮನುಷ್ಯನು ಅರಸನಿಗೆ, “ನೀನು ನನಗೆ ನಿನ್ನ ಆಸ್ತಿಯಲ್ಲಿ ಅರ್ಧವನ್ನು ಕೊಟ್ಟರೂ, ನಾನು ನಿನ್ನ ಸಂಗಡ ಬರುವುದಿಲ್ಲ. ಇಲ್ಲಿ ಅನ್ನ ಪಾನಗಳನ್ನು ತೆಗೆದುಕೊಳ್ಳುವುದಿಲ್ಲ.ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ ಮತ್ತು ಹಿಂದಿರುಗಿ ಹೋಗುವಾಗ ಬೇರೆ ದಾರಿಯಿಂದ ಹೋಗಬೇಕೆಂತಲೂ ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಹೇಳಿದನು.ಆಗ ಆ ಮುದುಕನು ಅವನಿಗೆ, “ನೀನು ನನ್ನ ಮನೆಗೆ ಬಂದು ಊಟಮಾಡು” ಎಂದು ಹೇಳಿದನು.ಅದಕ್ಕೆ ಅವನು, “ನಾನು ನಿನ್ನ ಸಂಗಡ ಬರವುದಿಲ್ಲ ಮತ್ತು ಈ ಸ್ಥಳದಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳುವುದಿಲ್ಲ.ಇಲ್ಲಿ ಅನ್ನಪಾನಗಳನ್ನು ತೆಗೆದುಕೊಳ್ಳಬಾರದೆಂದೂ, ಬಂದ ದಾರಿಯನ್ನು ಬಿಟ್ಟು ಬೇರೆ ದಾರಿಯಿಂದ ಹಿಂದಿರುಗಿ ಹೋಗಬೇಕೆಂದು ನನಗೆ ಯೆಹೋವನ ಅಪ್ಪಣೆಯಾಗಿದೆ” ಎಂದು ಉತ್ತರಕೊಟ್ಟನು.ಆಗ ಆ ಮುದುಕನು, “ನಾನು ನಿನ್ನಂತೆ ಪ್ರವಾದಿಯಾಗಿದ್ದೇನೆ. ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು, ನಿನ್ನನ್ನು ಕರೆದುಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ” ಎಂದು ಹೇಳಿದನು. ಆದರೆ ದೇವರ ಮನುಷ್ಯನಿಗೆ ಪ್ರವಾದಿ ಹೇಳಿದ ಮಾತು ಸುಳ್ಳಾಗಿತ್ತು.ದೇವರ ಮನುಷ್ಯನು ಆ ಪ್ರವಾದಿಯ ಮಾತನ್ನು ನಂಬಿ ಅವನ ಮನೆಗೆ ಹೋಗಿ ಅನ್ನಪಾನಗಳನ್ನು ತೆಗೆದುಕೊಂಡನು.ಅನ್ನಪಾನಗಳನ್ನು ತೆಗೆದುಕೊಳ್ಳುವುದಕ್ಕೋಸ್ಕರ ಹಿಂದಿರುಗಿ ಬಂದದ್ದರಿಂದ, ನಿನ್ನ ಶವವು ನಿನ್ನ ಕುಟುಂಬ ಸ್ಮಶಾನಭೂಮಿಯನ್ನು ಸೇರುವುದೇ ಇಲ್ಲವೆಂದು ಯೆಹೋವನು ಹೇಳುತ್ತಾನೆ” ಅಂದನು.ಅನ್ನಪಾನಗಳನ್ನು ತೆಗೆದುಕೊಂಡ ನಂತರ ಅವನು ತಾನು ಕರೆದುಕೊಂದು ಬಂದಿದ್ದ ಪ್ರವಾದಿಗೋಸ್ಕರ ಕತ್ತೆಗೆ ತಡಿಹಾಕಿಸಿದನು.ನೀನು ಹತ್ತು ರೊಟ್ಟಿಗಳನ್ನೂ, ಒಂದಷ್ಟು ಸಿಹಿಪದಾರ್ಥವನ್ನೂ ಮತ್ತು ಒಂದು ಕುಪ್ಪೆ ಜೇನುತುಪ್ಪವನ್ನೂ ತೆಗೆದುಕೊಂಡು ಅವನ ಬಳಿಗೆ ಹೋಗು. ಹುಡುಗನಿಗೆ ಏನಾಗುವುದೆಂದು ಅವನು ತಿಳಿಸುವನು” ಎಂದು ಹೇಳಿದನು.ಕಾಗೆಗಳು ಅವನಿಗೆ ಪ್ರಾತಃಕಾಲದಲ್ಲಿಯೂ ಸಾಯಂಕಾಲದಲ್ಲಿಯೂ ರೊಟ್ಟಿ ಮತ್ತು ಮಾಂಸಗಳನ್ನು ತಂದುಕೊಡುತ್ತಿದ್ದವು. ಅವನು ಇವುಗಳನ್ನು ತಿನ್ನುತ್ತಿದ್ದನು. ಹಳ್ಳದ ನೀರು ಅವನಿಗೆ ಪಾನವಾಗಿತ್ತು.ಆಕೆಯು ಹೋಗುತ್ತಿರುವಾಗ ಪುನಃ ಆಕೆಯನ್ನು ಕರೆದು, “ನೀನು ಬರುವಾಗ ನನಗೋಸ್ಕರ ಒಂದು ತುಂಡು ರೊಟ್ಟಿಯನ್ನೂ ತೆಗೆದುಕೊಂಡು ಬಾ” ಅಂದನು.ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.ಆಗ ಎಲೀಯನು ಆಕೆಗೆ, “ಹೆದರಬೇಡ, ನೀನು ಹೇಳಿದಂತೆಯೇ ಮಾಡು. ಆದರೆ ಮೊದಲು ಅದರಿಂದ ನನಗೋಸ್ಕರ ಒಂದು ಚಿಕ್ಕ ರೊಟ್ಟಿಯನ್ನು ಮಾಡಿಕೊಂಡು ಬಾ. ತರುವಾಯ ನಿನಗೂ ನಿನ್ನ ಮಗನಿಗೂ ಮಾಡಿಕೋ.ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ಯೆಹೋವನಲ್ಲಿ ಬಹು ಭಯಭಕ್ತಿಯುಳ್ಳವನಾದ ಈ ಓಬದ್ಯನು ನೂರು ಜನರು ಪ್ರವಾದಿಗಳನ್ನು ತೆಗೆದುಕೊಂಡು ಅವರನ್ನು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅವರಿಗೆ ಅನ್ನಪಾನಗಳನ್ನು ಕೊಟ್ಟು ಸಾಕುತ್ತಿದ್ದನು.ಈಜೆಬೆಲಳು ಯೆಹೋವನ ಪ್ರವಾದಿಗಳನ್ನು ಸಂಹರಿಸುತ್ತಿರುವಾಗ ನಾನು ಮಾಡಿದ್ದು ನನ್ನ ಸ್ವಾಮಿಯಾದ ನಿನಗೆ ಗೊತ್ತಾಗಲಿಲ್ಲವೋ? ಅವರಲ್ಲಿ ನೂರು ಜನರನ್ನು ತೆಗೆದುಕೊಂಡು ಐವತ್ತೈವತ್ತು ಜನರನ್ನಾಗಿ ಗವಿಗಳಲ್ಲಿ ಅಡಗಿಸಿಟ್ಟು, ಅನ್ನ ಪಾನಗಳನ್ನು ಕೊಟ್ಟು ಸಾಕಿದೆನಲ್ಲವೇ.ಎಲೀಯನು ಎದ್ದು ನೋಡಲಾಗಿ ಕೆಂಡದ ಮೇಲೆ ಸುಟ್ಟ ರೊಟ್ಟಿಯೂ ಒಂದು ತಂಬಿಗೆ ನೀರು ತನ್ನ ತಲೆಯ ಹತ್ತಿರ ಇರುವುದನ್ನು ಕಂಡು ಅವುಗಳನ್ನು ತೆಗೆದುಕೊಂಡು ತಿಂದು, ಕುಡಿದು ತಿರುಗಿ ಮಲಗಿದನು.“ನನ್ನ ಪಿತ್ರಾರ್ಜಿತ ಸ್ವತ್ತನ್ನು ನಿನಗೆ ಕೊಡುವುದಿಲ್ಲ” ಎಂದು ಇಜ್ರೇಲಿನವನಾದ ನಾಬೋತನು ಹೇಳಿದ್ದರಿಂದ ಅಹಾಬನು ಸಿಟ್ಟಿನಿಂದ ಗಂಟುಮುಖ ಮಾಡಿಕೊಂಡು ಮನೆಗೆ ಹೋಗಿ ಊಟಮಾಡಲೊಲ್ಲದೆ, ಮಂಚದ ಮೇಲೆ ಮಲಗಿ ಗೋಡೆಯ ಕಡೆಗೆ ಮುಖ ತಿರುಗಿಸಿಕೊಂಡನು.ಆಗ ಅವನ ಹೆಂಡತಿಯಾದ ಈಜೆಬೆಲಳು ಅವನ ಬಳಿಗೆ ಬಂದು ಅವನನ್ನು, “ನೀನು ಯಾಕೆ ಊಟಮಾಡುವುದಿಲ್ಲ? ನಿನಗೆ ಯಾವ ಚಿಂತೆ ಇರುತ್ತದೆ?” ಎಂದು ಕೇಳಿದಳು.ಆಗ ಅವನ ಹೆಂಡತಿಯಾದ ಈಜೆಬೆಲಳು ಅವನಿಗೆ, “ಇಸ್ರಾಯೇಲರ ಅರಸನಾದ ನೀನು ಹೀಗೆ ಮಾಡುವುದು ಸರಿಯೇ? ಎದ್ದು ಊಟ ಮಾಡಿ ಸಂತೋಷದಿಂದಿರು. ನಾನು ನಿನಗೆ ಇಜ್ರೇಲಿನವನಾದ ನಾಬೋತನ ದ್ರಾಕ್ಷಿತೋಟವನ್ನು ಕೊಡಿಸುತ್ತೇನೆ” ಎಂದು ಹೇಳಿದಳು.‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಅನ್ನುತ್ತಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.2 ಅರಸುಗಳು7
ಒಂದು ಸಾರಿ ಎಲೀಷನು ಶೂನೇಮಿಗೆ ಹೋದನು. ಅಲ್ಲಿ ಒಬ್ಬ ಕುಲೀನ ಸ್ತ್ರೀಯು ಅವನನ್ನು ತನ್ನ ಮನೆಯಲ್ಲಿ ಊಟಮಾಡಬೇಕೆಂದು ಒತ್ತಾಯಪಡಿಸಿದಳು. ಅಂದಿನಿಂದ ಅವನು ಆ ಮಾರ್ಗದಿಂದ ಹೋಗುವಾಗೆಲ್ಲಾ ಆ ಮನೆಯಲ್ಲೇ ಊಟಮಾಡುತ್ತಿದ್ದನು.ಒಂದು ದಿನ ಬಾಳ್ ಷಾಲಿಷಾ ಊರಿನ ಒಬ್ಬ ಮನುಷ್ಯನು ಇಪ್ಪತ್ತು ಜವೆಗೋದಿಯ ರೊಟ್ಟಿಗಳನ್ನೂ, ಒಂದು ಚೀಲದ ತುಂಬಾ ಹಸೀ ತೆನೆಗಳನ್ನೂ, ಪ್ರಥಮಫಲದ ಕಾಣಿಕೆಯಾಗಿ ತೆಗೆದುಕೊಂಡು ಬಂದು ದೇವರ ಮನುಷ್ಯನಿಗೆ ಸಮರ್ಪಿಸಿದನು. ಎಲೀಷನು ತನ್ನ ಸೇವಕನಿಗೆ, “ಇದನ್ನು ಜನರಿಗೆ ಕೊಡು ಅವರು ಊಟಮಾಡಲಿ” ಎಂದು ಹೇಳಿದನು.ಅದಕ್ಕೆ ಅವನು, “ಇವರನ್ನು ನೀನು ಸಂಹರಿಸಬೇಡ, ಕತ್ತಿಬಿಲ್ಲುಗಳಿಂದ ಸ್ವಾಧೀನಪಡಿಸಿಕೊಂಡು ಸೆರೆಯಾಗಿ ತಂದವರನ್ನು ನೀನು ಸಂಹರಿಸುವೆಯೋ? ಇವರಿಗೆ ಅನ್ನಪಾನಗಳನ್ನು ಕೊಡು, ಉಂಡು ಕುಡಿದು ತಮ್ಮ ಯಜಮಾನನ ಬಳಿಗೆ ಹಿಂದಿರುಗಿ ಹೋಗಲಿ” ಎಂದು ಉತ್ತರಕೊಟ್ಟನು.ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.ಪೂಜಾಸ್ಥಳಗಳಿಂದ ಬಂದ ಯಾಜಕರಿಗೆ ಇತರ ಯಾಜಕರೊಡನೆ ಹುಳಿಯಿಲ್ಲದ ರೊಟ್ಟಿಗಳಲ್ಲಿ ಪಾಲುಸಿಕ್ಕಿದರೂ, ಅವರಿಗೆ ಯೆರೂಸಲೇಮಿನಲ್ಲಿದ್ದ ಯೆಹೋವನ ಯಜ್ಞವೇದಿಯ ಸಮೀಪಕ್ಕೆ ಹೋಗುವುದಕ್ಕೆ ಅಪ್ಪಣೆಯಿರಲಿಲ್ಲ.ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೇ ಹೋಯಿತು.ಎವೀಲ್ಮೆರೋದಕನು ಯೆಹೋಯಾಖೀನನ ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡಿದನು.1 ಪೂರ್ವಕಾಲವೃತ್ತಾಂತ5
ಲೇವಿಯರಲ್ಲಿ ಕೋರಹಿಯನಾದ ಶಲ್ಲೂಮನ ಚೊಚ್ಚಲ ಮಗನಾದ ಮತ್ತಿತ್ಯನು ರೊಟ್ಟಿ ಸುಡುವ ಕೆಲಸದ ಮೇಲ್ವಿಚಾರಕನು.ಅವನ ಸಹೋದರರಾದ ಮಿಕ್ಕ ಕೆಹಾತ್ಯರಲ್ಲಿ ಕೆಲವರು ಪ್ರತಿ ಸಬ್ಬತ್ತಿನಲ್ಲಿ ನೈವೇದ್ಯದ ರೊಟ್ಟಿಗಳನ್ನು ತಯಾರಿಸುವ ಕೆಲಸವಿತ್ತು.ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.ಹಾಗೂ ಅವರಲ್ಲಿ ಪ್ರತಿಯೊಬ್ಬ ಪುರುಷ ಹಾಗು ಸ್ತ್ರೀಗೂ ಒಂದು ರೊಟ್ಟಿಯನ್ನೂ, ಒಂದು ತುಂಡು ಬೇಯಿಸಿದ ಮಾಂಸವನ್ನೂ ಮತ್ತು ದ್ರಾಕ್ಷಿಹಣ್ಣಿನ ಒಂದು ಗೊಂಚಲನ್ನೂ ಕೊಡಿಸಿದನು.ದೇವಾಲಯದಲ್ಲಿ ಸೇವೆಮಾಡುವುದೂ, ನೈವೇದ್ಯದ ಮೀಸಲು ರೊಟ್ಟಿ, ನೈವೇದ್ಯಕ್ಕೆ ಬೇಕಾದ ಗೋದಿಹಿಟ್ಟು, ಹುಳಿಯಿಲ್ಲದ ರೊಟ್ಟಿ, ಕಬ್ಬಿಣದ ಹಂಚಿನಲ್ಲಿ ಸುಟ್ಟ ರೊಟ್ಟಿ, ಎಣ್ಣೆಯಿಂದ ನೆನೆದ ಭಕ್ಷ್ಯಗಳು ಇವುಗಳನ್ನು ಒದಗಿಸುವುದೂ, ಸೇರು, ಅಳತೆಗೋಲುಗಳನ್ನು ಪರೀಕ್ಷಿಸುವುದೂ,2 ಪೂರ್ವಕಾಲವೃತ್ತಾಂತ7
ಸೊಲೊಮೋನನು ಯೆಹೋವನ ದೇವಾಲಯಕ್ಕಾಗಿ ಮಾಡಿಸಿದ ಒಳಗಿನ ಸಾಮಾನುಗಳು ಯಾವುದೆಂದರೆ: ಬಂಗಾರದ ಧೂಪವೇದಿ, ನೈವೇದ್ಯ ರೊಟ್ಟಿಗಳನ್ನಿಡುವ ಮೇಜುಗಳು,ಮೋಶೆಯ ಆಜ್ಞೆಯಂತೆ ಸಬ್ಬತ್ ದಿನ, ಅಮಾವಾಸ್ಯೆ, ವಾರೋತ್ಸವ ಜಾತ್ರೆ ಇವುಗಳಲ್ಲಿಯೂ ಹುಳಿಯಿಲ್ಲದ ರೊಟ್ಟಿಗಳ ಹಬ್ಬ, ಪಂಚಾಶತ್ತಮ ದಿನದ ಹಬ್ಬ, ಪರ್ಣಶಾಲೆ ಹಬ್ಬ ಎಂಬ ಮೂರು ವಾರ್ಷಿಕ ಹಬ್ಬಗಳಲ್ಲಿಯೂ ಆಯಾ ದಿನಗಳಿಗೆ ನೇಮಕವಾದ ಯಜ್ಞಗಳನ್ನು ಸಮರ್ಪಿಸುತ್ತಿದ್ದನು.ಈ ಯಾಜಕರು ಪ್ರತಿದಿನ ಬೆಳಿಗ್ಗೆ ಹಾಗು ಸಾಯಂಕಾಲ ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಸಮರ್ಪಿಸುತ್ತಾ ಸುಗಂಧದ್ರವ್ಯ ಧೂಪವನ್ನು ಹಾಕುತ್ತಾ ಶುದ್ಧ ಬಂಗಾರದ ಮೇಜಿನ ಮೇಲೆ ನೈವೇದ್ಯವಾದ ರೊಟ್ಟಿಗಳನ್ನಿಡುತ್ತಾ ಪ್ರತಿ ಸಾಯಂಕಾಲದಲ್ಲಿ ಬಂಗಾರದ ದೀಪಸ್ತಂಭದ ದೀಪಗಳನ್ನು ಹಚ್ಚುತ್ತಾ ಇರುತ್ತಾರೆ. ಹೀಗೆ ನಾವು ನಮ್ಮ ದೇವರಾದ ಯೆಹೋವನ ಕಟ್ಟಳೆಗಳನ್ನು ಕೈಕೊಳ್ಳುತ್ತೇವೆ; ನೀವಾದರೋ ಆತನನ್ನು ಬಿಟ್ಟವರು.ಅವರಿಗೆ, ‘ನಾನು ಸುರಕ್ಷಿತನಾಗಿ ಹಿಂದಿರುಗುವವರೆಗೂ ಇವನನ್ನು ಸೆರೆಯಲ್ಲಿಟ್ಟು ಸೆರೆಮನೆಯ ಅನ್ನಪಾನಗಳನ್ನೇ ಕೊಟ್ಟು ಕುಗ್ಗಿಸಬೇಕೆಂದು ಅರಸನು ಹೇಳಿದ್ದಾನೆ’ ಎಂದು ಹೇಳಿರಿ” ಎಂಬುದಾಗಿ ಆಜ್ಞಾಪಿಸಿದನು.ಹೀಗೆ, ಅನೇಕಾನೇಕ ಜನರು ಎರಡನೆಯ ತಿಂಗಳಿನಲ್ಲಿ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುವುದಕ್ಕಾಗಿ ಯೆರೂಸಲೇಮಿನಲ್ಲಿ ಸೇರಿಬಂದರು; ಆ ಜನಸಮೂಹವು ಮಹಾಸಮೂಹವಾಗಿತ್ತು.ಯೆರೂಸಲೇಮಿನಲ್ಲಿ ಸೇರಿಬಂದಿದ್ದ ಇಸ್ರಾಯೇಲರು ಏಳು ದಿನಗಳವರೆಗೂ ಮಹಾ ಸಂತೋಷದಿಂದ ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸುತ್ತಾ ಇದ್ದರು. ಲೇವಿಯರೂ, ಯಾಜಕರೂ ಮಹಾವಾದ್ಯಗಳೊಡನೆ ಯೆಹೋವನನ್ನು ಪ್ರತಿದಿನವೂ ಸ್ತುತಿ ಕೀರ್ತಿಸುತ್ತಾ ಇದ್ದರು.ಕೂಡಿಬಂದಿದ್ದ ಇಸ್ರಾಯೇಲರು ಆ ಕಾಲದಲ್ಲಿ ಪಸ್ಕಹಬ್ಬವನ್ನೂ ಏಳು ದಿನಗಳವರೆಗೆ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನೂ ಆಚರಿಸಿದರು.ಎಜ್ರನು2
ಇದಲ್ಲದೆ ಇಸ್ರಾಯೇಲ್ ದೇವರ ಆಲಯವನ್ನು ಕಟ್ಟುವುದರಲ್ಲಿ ಅಶ್ಶೂರದ ಅರಸನು ತಮಗೆ ಸಹಾಯಮಾಡುವಂತೆ ಯೆಹೋವನು ಅವನ ಮನಸ್ಸನ್ನು ತಿರುಗಿಸಿ ತಮಗೆ ಸಂತೋಷವನ್ನು ಉಂಟುಮಾಡಿದ್ದಾನೆ ಎಂದು ಹರ್ಷಿಸುತ್ತಾ ಏಳು ದಿನಗಳ ವರೆಗೂ ಹುಳಿಯಿಲ್ಲದ ರೊಟ್ಟಿಗಳ ಜಾತ್ರೆಯನ್ನು ಆಚರಿಸಿದರು.ಆ ಮೇಲೆ ಎಜ್ರನು ದೇವಾಲಯದ ಮುಂದಣ ಸ್ಥಳವನ್ನು ಬಿಟ್ಟು ಎದ್ದು ಎಲ್ಯಾಷೀಬನ ಮಗನಾದ ಯೆಹೋಹಾನಾನನ ಕೊಠಡಿಗೆ ಹೋಗಿ ಅಲ್ಲಿ ಸೆರೆಯಿಂದ ಬಂದವರ ನಿಮಿತ್ತ ದುಃಖಿಸುತ್ತಾ, ಅನ್ನಪಾನಗಳನ್ನು ತೆಗೆದುಕೊಳ್ಳದೆ ರಾತ್ರಿಯನ್ನು ಕಳೆದನು.ನೆಹೆಮೀಯನು6
ಅರಸನಾದ ಅರ್ತಷಸ್ತನು ನನ್ನನ್ನು ಯೆಹೂದ ದೇಶದ ಅಧಿಪತಿಯನ್ನಾಗಿ ನೇಮಿಸಿದಂದಿನಿಂದ ಹನ್ನೆರಡು ವರ್ಷಗಳ ವರೆಗೆ ಅಂದರೆ ಅವನ ಆಳ್ವಿಕೆಯ ಇಪ್ಪತ್ತನೆಯ ವರ್ಷದಿಂದ ಮೂವತ್ತೆರಡನೆಯ ವರ್ಷದವರೆಗೆ ನಾನಾಗಲಿ ನನ್ನ ಸಹೋದರರಾಗಲಿ ದೇಶಾಧಿಪತಿಗೆ ಸಲ್ಲತಕ್ಕ ಭತ್ಯದಿಂದ ಜೀವನಮಾಡಲಿಲ್ಲ.ನನಗಿಂತ ಮೊದಲಿದ್ದ ದೇಶಾಧಿಪತಿಗಳು ಜನರ ಮೇಲೆ ಬಹಳ ಭಾರಹಾಕಿ ಅವರಿಂದ ದಿನಕ್ಕೆ ನಲ್ವತ್ತು ರೂಪಾಯಿಯ ಆಹಾರವನ್ನೂ, ದ್ರಾಕ್ಷಾರಸವನ್ನೂ ತೆಗೆದುಕೊಂಡದ್ದಲ್ಲದೆ ಅವರ ಸೇವಕರೂ ಜನರ ಮೇಲೆ ದೊರೆತನ ನಡೆಸಿದರು. ನಾನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿ ಇರುವುದರಿಂದ ಹಾಗೆ ಮಾಡದೆ ಆ ಪೌಳಿಗೋಡೆ ಕಟ್ಟುವುದರಲ್ಲಿ ನಿರತನಾಗಿದ್ದೆನು.ಪ್ರತಿದಿನ ಒಂದು ಹೋರಿ, ಆರು ಕೊಬ್ಬಿದ ಕುರಿ, ಕೆಲವು ಪಕ್ಷಿಗಳು ನಮ್ಮ ಭೋಜನಕ್ಕಾಗಿ ಸಿದ್ಧವಾಗುತ್ತಿದ್ದವು. ಹತ್ತು ದಿನಕ್ಕೊಮ್ಮೆ ನಾನು ಎಲ್ಲಾ ಬಗೆಯ ದ್ರಾಕ್ಷಾರಸವನ್ನು ಬೇಕಾದಷ್ಟು ಒದಗಿಸಲು ವ್ಯವಸ್ಥೆಮಾಡಿದೆ. ಇಷ್ಟೆಲ್ಲಾ ಇದ್ದರೂ ಆ ಜನರು ಮಾಡುತ್ತಿದ್ದ ಕೆಲಸವು ಬಹು ಕಠಿಣವಾಗಿದ್ದದರಿಂದ ನಾನು ದೇಶಾಧಿಪತಿಗೆ ಸಲ್ಲತಕ್ಕ ಭತ್ಯವನ್ನು ಕೇಳಲೇ ಇಲ್ಲ.ಅವರಿಗೆ ಹಸಿವಾದಾಗ ಪರಲೋಕದಿಂದ ಆಹಾರವನ್ನು ಕೊಟ್ಟು, ಬಾಯಾರಿದಾಗ ಬಂಡೆಯೊಳಗಿಂದ ನೀರನ್ನು ಬರಮಾಡಿ, ಪ್ರಮಾಣಪೂರ್ವಕವಾಗಿ ವಾಗ್ದಾನಮಾಡಿದ ದೇಶದಲ್ಲಿ ನೀವು ಸೇರಿ ಅದನ್ನು ಸ್ವಾಧೀನಮಾಡಿಕೊಳ್ಳಿರಿ ಎಂದು ಅವರಿಗೆ ಆಜ್ಞಾಪಿಸಿದೆ.ಆ ಹಣವು ದೇವರ ಸನ್ನಿಧಿಯಲ್ಲಿ ಇಡತಕ್ಕ ರೊಟ್ಟಿ, ನಿತ್ಯಧಾನ್ಯ, ನೈವೇದ್ಯ ಇವುಗಳಿಗಾಗಿಯೂ, ನಿತ್ಯ ಸರ್ವಾಂಗಹೋಮ, ಸಬ್ಬತ್ ದಿನ, ಅಮಾವಾಸ್ಯೆ ಮತ್ತು ಜಾತ್ರೆ ಉತ್ಸವ ಇವುಗಳಲ್ಲಿ ಮಾಡಬೇಕಾಗಿರುವ ಸರ್ವಾಂಗಹೋಮ, ಸಮಾಧಾನಯಜ್ಞ, ಇಸ್ರಾಯೇಲರ ದೋಷಪರಿಹಾರಕ ಯಜ್ಞ ಇವುಗಳಿಗಾಗಿಯೂ ನಮ್ಮ ದೇವರ ದೇವಾಲಯಕ್ಕೆ ಸಂಬಂಧವಾದ ಬೇರೆ ಎಲ್ಲಾ ಕೆಲಸಕಾರ್ಯಗಳಿಗಾಗಿಯೂ ವೆಚ್ಚವಾಗಬೇಕು.ಯಾಕೆಂದರೆ ಅವರು ಇಸ್ರಾಯೇಲರನ್ನು ಅನ್ನಪಾನಗಳೊಡನೆ ಎದುರುಗೊಳ್ಳಲಿಲ್ಲ, ಅವರನ್ನು ಶಪಿಸುವುದಕ್ಕಾಗಿ ಬಿಳಾಮನಿಗೆ ಹಣವನ್ನು ಕೊಟ್ಟು ಅವನನ್ನು ಕರೆಯಿಸಿದರು. ನಮ್ಮ ದೇವರಾದರೋ ಅವನಿಂದ ಶಾಪವನ್ನಲ್ಲ, ಆಶೀರ್ವಾದವನ್ನೇ ಹೇಳಿಸಿದನು ಎಂಬ ಮಾತು ಬರೆದಿರುವುದಾಗಿ ಕಂಡು ಬಂದಿತು.ಯೋಬನು11
ನಿಟ್ಟುಸಿರೇ ನನ್ನೆದುರಿಗೆ ಬರುವ ಆಹಾರವಾಗಿದೆ. ನನ್ನ ನರಳಾಟವು ಜಲಧಾರೆಯಂತಿದೆ.ಇಂಥಾ ಆಹಾರವು ನನಗೆ ಅಸಹ್ಯವಾಗಿದೆ; ಮುಟ್ಟಲಾರೆನು.‘ರೊಟ್ಟಿ ಎಲ್ಲಿ?’ ಎಂದು ಹುಡುಕುತ್ತಾ ಅಲೆದಾಡುವನೆಂಬುದಾಗಿ ನಿಶ್ಚಯಿಸಿಕೊಂಡು, ಆ ಕತ್ತಲಿನ ದಿನವು ತನ್ನ ಪಕ್ಕದಲ್ಲಿ ಸಿದ್ಧವಾಗಿದೆ ಎಂದು ತಿಳಿದುಕೊಂಡಿರುವನು.ತಿಂದ ಮೇಲೆ ಆ ಪದಾರ್ಥವು ಮಾರ್ಪಟ್ಟು, ಅವನೊಳಗೆ ಹಾವಿನ ವಿಷವಾಗುವುದು.ಬಳಲಿದವನಿಗೆ ನೀರು ಕೊಡದೆ, ಹಸಿದವನಿಗೆ ಅನ್ನಕೊಡದೆ ಹೋಗಿದ್ದಿ.ಇಗೋ, ಅಡವಿಯಲ್ಲಿ ಕಾಡುಕತ್ತೆಗಳು ಹೇಗೋ ಹಾಗೆಯೇ, ಇವರು ತಮ್ಮ ಹೊಟ್ಟೇ ಪಾಡಿಗಾಗಿ ಹೊರಟು ಆಹಾರವನ್ನು ಆತುರವಾಗಿ ಹುಡುಕುವರು; ಅರಣ್ಯವೇ ಇವರ ಮಕ್ಕಳಿಗಾಗಿ ಆಹಾರವನ್ನು ಒದಗಿಸುವುದು.ಅವನಿಗೆ ಮಕ್ಕಳು ಹೆಚ್ಚಿದರೆ ಕತ್ತಿಗೆ ತುತ್ತಾಗುವರು, ಅವನ ಸಂತತಿಯವರಿಗೆ ಅನ್ನದ ಕೊರತೆ ತಪ್ಪದು.ಭೂಮಿಯು ಅನ್ನವನ್ನು ಕೊಡುವುದು, ಅದರ ಕೆಳಭಾಗವು ಬೆಂಕಿ ಬಿದ್ದಂತೆ ಹಾಳಾಗಿರುವುದು.ಅಥವಾ ನನಗಿರುವ ತುತ್ತು ಅನ್ನದಲ್ಲಿ ಅನಾಥರಿಗೆ ಏನೂ ಕೊಡದೆ, ನಾನೊಬ್ಬನೇ ತಿಂದೆನೋ?ಅವನ ಜೀವವು ಆಹಾರಕ್ಕೆ ಬೇಸರಗೊಳ್ಳುವುದು, ಅವನ ಆತ್ಮವು ಮೃಷ್ಟಾನ್ನಕ್ಕೂ ಅಸಹ್ಯಪಡುವುದು.ಆಗ ಅವನ ಎಲ್ಲಾ ಅಣ್ಣತಮ್ಮಂದಿರೂ, ಎಲ್ಲಾ ಅಕ್ಕತಂಗಿಯರೂ, ಮೊದಲು ಅವನ ಮನೆಯಲ್ಲಿ ಅವನೊಂದಿಗೆ ಭೋಜನಮಾಡುತ್ತಿದ್ದ ಎಲ್ಲಾ ಪರಿಚಿತರೂ ಅವನ ಬಳಿಗೆ ಬಂದು ಯೆಹೋವನು ಅವನ ಮೇಲೆ ಬರಮಾಡಿದ್ದ ಆಪತ್ತಿನ ವಿಷಯವಾಗಿ ತಮ್ಮ ತಮ್ಮ ಅನುತಾಪವನ್ನು ತೋರ್ಪಡಿಸಿ ಅವನನ್ನು ಸಂತೈಸಿದರು. ಇದಲ್ಲದೆ ಪ್ರತಿಯೊಬ್ಬರೂ ಒಂದೊಂದು ವರಹವನ್ನೂ ಒಂದೊಂದು ಚಿನ್ನದ ಉಂಗುರವನ್ನೂ ಅವನಿಗೆ ಕೊಟ್ಟರು.ಕೀರ್ತನೆಗಳು20
ದುಷ್ಟತ್ವವನ್ನು ನಡೆಸುವವರೆಲ್ಲರು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಆಹಾರವನ್ನೋ ಎಂಬಂತೆ ನುಂಗಿಬಿಡುತ್ತಾರೆ; ಯೆಹೋವನನ್ನು ಸ್ಮರಿಸುವುದಿಲ್ಲ.ನಾನು ಬಾಲಕನಾಗಿದ್ದೆನು, ಈಗ ವೃದ್ಧನಾಗಿದ್ದೇನೆ; ಈ ವರೆಗೂ ನೀತಿವಂತನು ದಿಕ್ಕಿಲ್ಲದೆ ಬಿದ್ದಿರುವುದನ್ನಾಗಲಿ, ಅವನ ಸಂತತಿಯವರು ಭಿಕ್ಷೆಬೇಡಿ ತಿನ್ನುವುದನ್ನಾಗಲಿ ನೋಡಲಿಲ್ಲ.ನಾನು ಯಾರನ್ನು ನಂಬಿದ್ದೆನೋ, ಯಾರು ನನ್ನ ಮನೆಯಲ್ಲಿ ಅನ್ನಪಾನಗಳನ್ನು ತೆಗೆದುಕೊಂಡನೋ, ಅಂತಹ ಆಪ್ತಸ್ನೇಹಿತನು ನನಗೆ ಕಾಲನ್ನು ಅಡ್ಡಗೊಟ್ಟಿದ್ದಾನೆ.“ನಿನ್ನ ದೇವರು ಎಲ್ಲಿ?” ಎಂದು ಜನರು ಯಾವಾಗಲೂ ನನ್ನನ್ನು ಪರಿಹಾಸ್ಯ ಮಾಡುವುದರಿಂದ, ಹಗಲಿರುಳು ನನಗೆ ಕಣ್ಣೀರೇ ಆಹಾರವಾಯಿತು.ದುಷ್ಟತ್ವವನ್ನು ನಡೆಸುವವರು ಯಾರೆಂದು ತಿಳಿಯುವುದಿಲ್ಲವೋ? ಅವರು ನನ್ನ ಜನರನ್ನು ಕೊಳ್ಳೆಹೊಡೆದು ಜೀವಿಸುತ್ತಾರೆ; ದೇವರನ್ನು ಪ್ರಾರ್ಥಿಸುವುದಿಲ್ಲ.ಬಂಡೆಯನ್ನು ಹೊಡೆದು, ನೀರು ಚಿಮ್ಮಿ ಹೊರಗೆ ಬರುವಂತೆಯೂ, ಪ್ರವಾಹವು ದಡಮೀರಿ ಹರಿಯುವಂತೆಯೂ ಮಾಡಿದನಲ್ಲವೋ? ಆತನು ರೊಟ್ಟಿಯನ್ನು ಕೊಡಲು ಶಕ್ತನೋ? ತನ್ನ ಜನರಿಗೆ ಮಾಂಸವನ್ನೂ ಒದಗಿಸುವನೋ” ಎಂಬುದೇ.ಅವರಲ್ಲಿ ಪ್ರತಿಯೊಬ್ಬನು ದೇವದೂತರ ಆಹಾರವನ್ನು ಸೇವಿಸಿದನು. ಆತನು ಅವರಿಗೆ ಭೋಜನವನ್ನು ಸಂತೃಪ್ತಿಯಾಗಿ ಅನುಗ್ರಹಿಸಿದನು.ರೋದನವೇ ಅವರ ಆಹಾರವಾಗುವಂತೆಯೂ, ಅಶ್ರುಧಾರೆಯೇ ಅವರ ಪಾನವಾಗುವಂತೆಯೂ ಮಾಡಿದಿ.ನನ್ನ ಹೃದಯವು ಬಿಸಿಲಿನಿಂದ ಬಾಡಿಹೋದ ಹುಲ್ಲಿನಂತಿದೆ; ಊಟವನ್ನು ಮರೆತೆನು.ಬೂದಿಯೇ ನನಗೆ ಆಹಾರವಾಯಿತು; ನನ್ನ ಪಾನದಲ್ಲಿ ಕಣ್ಣೀರು ಮಿಶ್ರವಾಯಿತು.ಪಶುಗಳಿಗೋಸ್ಕರ ಹುಲ್ಲನ್ನು ಮೊಳಿಸುತ್ತೀ; ಮನುಷ್ಯರಿಗೋಸ್ಕರ ಪೈರುಗಳನ್ನು ಹುಟ್ಟಿಸುತ್ತೀ. ಅವರು ಭೂವ್ಯವಸಾಯಮಾಡಿ ಆಹಾರವನ್ನು,ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.ಅನಂತರ ಆತನು ಐಗುಪ್ತ ದೇಶದಲ್ಲಿ ಕ್ಷಾಮವನ್ನು ಬರಮಾಡಿ, ಆಹಾರವನ್ನು ನಾಶಮಾಡಿಬಿಟ್ಟನು.ಅವರು ಬೇಡಿಕೊಳ್ಳಲು ಲಾವಕ್ಕಿಗಳನ್ನು ಬರಮಾಡಿದನು; ದಿವ್ಯ ಆಹಾರದಿಂದ ಅವರನ್ನು ತೃಪ್ತಿಗೊಳಿಸಿದನು.ಬೆಳಗಾಗುವುದಕ್ಕಿಂತ ಮುಂಚೆ ಏಳುವವರೇ, ಹೊತ್ತು ಮೀರಿ ಮಲಗುವವರೇ, ನೀವು ಆಹಾರಕ್ಕಾಗಿ ಇಷ್ಟು ಕಷ್ಟಪಡುವುದು ವ್ಯರ್ಥ; ಆತನು ಅದನ್ನು ತನ್ನ ಪ್ರಿಯರಿಗೆ ನಿದ್ರೆಯಲ್ಲಿಯೂ ಕೊಡುತ್ತಾನೆ.ಇದರ ಆದಾಯವನ್ನು ಆಶೀರ್ವದಿಸುವೆನು; ಇಲ್ಲಿಯ ಬಡವರನ್ನು ಆಹಾರದಿಂದ ತೃಪ್ತಿಗೊಳಿಸುವೆನು;ಎಲ್ಲಾ ಜೀವಿಗಳಿಗೂ ಆಹಾರ ಕೊಡುವವನು ಆತನೇ, ಆತನ ಪ್ರೀತಿಯು ಶಾಶ್ವತವಾದದ್ದು.ಹಿಂಸೆಗೆ ಗುರಿಯಾದವರ ನ್ಯಾಯವನ್ನು ಸ್ಥಾಪಿಸುವವನೂ, ಹಸಿದವರಿಗೆ ಆಹಾರ ಕೊಡುವವನೂ ಆತನೇ. ಯೆಹೋವನು ಸೆರೆಯಲ್ಲಿರುವವರನ್ನು ಬಿಡಿಸುತ್ತಾನೆ.ಆತನು ಪಶುಗಳಿಗೂ, ಕೂಗುತ್ತಿರುವ ಕಾಗೆಮರಿಗಳಿಗೂ ಬೇಕಾದ ಆಹಾರಕೊಡುತ್ತಾನೆ.ರೊಟ್ಟಿ ತುಂಡುಗಳಂತಿರುವ ಆನೆಕಲ್ಲುಗಳನ್ನು ಸುರಿಸುತ್ತಾನೆ, ಆತನು ಚಳಿಯನ್ನು ಬರಮಾಡಲು ಅದನ್ನು ಸಹಿಸುವವರು ಯಾರು?ಜ್ಞಾನೋಕ್ತಿಗಳು26
ದುಷ್ಟತನವೇ ಅವರ ಆಹಾರ; ಬಲಾತ್ಕಾರವೇ ಅವರ ದ್ರಾಕ್ಷಾರಸ ಪಾನ.ಬೇಸಿಗೆಯಲ್ಲಿ ತನ್ನ ತೀನಿಯನ್ನು ಸಿದ್ಧಮಾಡುವುದು, ಸುಗ್ಗಿಯ ಕಾಲದಲ್ಲಿ ತನಗೆ ಬೇಕಾದಷ್ಟು ಆಹಾರವನ್ನು ಸಂಗ್ರಹಿಸಿಟ್ಟುಕೊಳ್ಳುವುದು.ವೇಶ್ಯೆಯಿಂದ ಯಾವನಿಗಾದರೂ ಒಂದು ರೊಟ್ಟಿ ಮಾತ್ರ ಗತಿಯಾಗುವುದು, ಪರಸ್ತ್ರೀಯೋ ಅಮೂಲ್ಯವಾದ ಜೀವವನ್ನು ಬೇಟೆಯಾಡುವಳು.ಬನ್ನಿರಿ, ನಾನು ಬಡಿಸುವ ಆಹಾರವನ್ನು ಉಣ್ಣಿರಿ, ನಾನು ಬೆರೆಸಿರುವ ದ್ರಾಕ್ಷಾರಸವನ್ನು ಕುಡಿಯಿರಿ.“ಕದ್ದ ನೀರು ಸಿಹಿಯಾಗಿದೆ, ಗುಟ್ಟಾಗಿ ತಿನ್ನುವ ತಿಂಡಿಯು ರುಚಿಯಾಗಿದೆ” ಎಂದು ಬುದ್ಧಿಹೀನನಿಗೆ ಹೇಳುತ್ತಾಳೆ.ಹೊಟ್ಟೆಗಿಲ್ಲದ ಡಾಂಭಿಕನಿಗಿಂತಲೂ ಸೇವಕನುಳ್ಳ ಸಾಧಾರಣ ಮನುಷ್ಯನ ಸ್ಥಿತಿಯೇ ಲೇಸು.ದುಡಿದು ಹೊಲಗೇಯುವವನು ಹೊಟ್ಟೆತುಂಬಾ ಉಣ್ಣುವನು, ವ್ಯರ್ಥಕಾರ್ಯಾಸಕ್ತನು ಬುದ್ಧಿಹೀನನೇ.ಹೆಮ್ಮೆಯ ಫಲವು ಕಲಹವೇ, ಬುದ್ಧಿವಾದಕ್ಕೆ ಕಿವಿಗೊಡುವವರಲ್ಲಿ ಜ್ಞಾನ.ವ್ಯಾಜ್ಯದ ಮನೆಯಲ್ಲಿ ತುಂಬಿದ ಔತಣಕ್ಕಿಂತಲೂ, ಸಮಾಧಾನದ ಒಣತುತ್ತೇ ಮೇಲು.ಪಾಪಪ್ರಿಯನು ಕಲಹಪ್ರಿಯ, ಸೊಕ್ಕಿನಿಂದ ಮಾತನಾಡುವವನು ಕೇಡು ಬರಮಾಡಿಕೊಳ್ಳುವನು.ನಿದ್ರಾನಿರತನಾಗಿರಬೇಡ! ಬಡವನಾದೀಯೆ, ಕಣ್ಣು ತೆರೆ! ಆಹಾರದಿಂದ ತೃಪ್ತಿಗೊಳ್ಳುವಿ.ಮೋಸದಿಂದ ಸಿಕ್ಕಿದ ಆಹಾರವು ಮನುಷ್ಯನಿಗೆ ರುಚಿ, ಆ ಮೇಲೆ ಅವನ ಬಾಯಿ ಮರಳಿನಿಂದ ತುಂಬುವುದು.ದಯಾದೃಷ್ಟಿಯವನು ಆಶೀರ್ವಾದವನ್ನು ಪಡೆಯುವನು, ತನ್ನ ಆಹಾರವನ್ನು ಬಡವರಿಗೆ ಕೊಡುತ್ತಾನಲ್ಲವೆ.ಅವನ ರುಚಿಪದಾರ್ಥಗಳನ್ನು ಬಯಸಬೇಡ, ಅದು ಮೋಸದ ಆಹಾರವೇ ಸರಿ.ಲೋಭಿಯ ಅನ್ನವನ್ನು ಉಣ್ಣದಿರು, ಅವನ ರುಚಿಪದಾರ್ಥಗಳನ್ನು ಬಯಸಬೇಡ.ನೀನು ತಿಂದ ತುತ್ತನ್ನು ಕಕ್ಕಿಬಿಡುವಿ, ನಿನ್ನ ಸವಿಮಾತುಗಳು ವ್ಯರ್ಥ.ನಿನ್ನ ವೈರಿ ಹಸಿದಿದ್ದರೆ ಅನ್ನವಿಡು, ಬಾಯಾರಿದ್ದರೆ ನೀರುಕೊಡು,ನಿನ್ನ ಊಟಕ್ಕೂ, ಮನೆಯವರ ಆಹಾರಕ್ಕೂ ಮೇಕೆಯ ಹಾಲು ಬೇಕಾದಷ್ಟಾಗುವುದು, ಅದು ನಿನ್ನ ದಾಸಿಯರಿಗೆ ಜೀವನವಾಗುವುದು.ಬಡವರನ್ನು ಹಿಂಸಿಸುವ ದರಿದ್ರನು, ಒಂದು ಕಾಳೂ ಉಳಿಯದಂತೆ ಪೈರನ್ನು ಬಡಿಯುವ ಮಳೆಯ ಹಾಗೆ.ದುಡಿದು ಹೊಲಗೇಯುವವನಿಗೆ ಹೊಟ್ಟೆ ತುಂಬಾ ಅನ್ನ, ವ್ಯರ್ಥ ಕಾರ್ಯಾಸಕ್ತನಿಗೆ ಹೊಟ್ಟೆತುಂಬಾ ಬಡತನ.ಪಕ್ಷಪಾತವು ಅಧರ್ಮ, ತುತ್ತು ಅನ್ನಕ್ಕಾಗಿಯೂ ಜನರು ದ್ರೋಹಮಾಡುವುದುಂಟು.ನನ್ನಿಂದ ಕಪಟವನ್ನೂ, ಸುಳ್ಳುಮಾತನ್ನೂ ತೊಲಗಿಸು, ಬಡತನವನ್ನಾಗಲಿ, ಐಶ್ವರ್ಯವನ್ನಾಗಲಿ ಕೊಡದೆ ನನಗೆ ತಕ್ಕಷ್ಟು ಆಹಾರವನ್ನು ಭೋಜನಮಾಡಿಸು.ಯಾವುವೆಂದರೆ, ಪಟ್ಟಕ್ಕೆ ಬಂದ ದಾಸನು, ಹೊಟ್ಟೆತುಂಬಿದ ನೀಚನು,ಇರುವೆಗಳು ದುರ್ಬಲಜಾತಿಯಾವಾದರೂ, ಸುಗ್ಗಿಯಲ್ಲಿ ತಮ್ಮ ಆಹಾರವನ್ನು ಸಿದ್ಧಮಾಡಿಕೊಳ್ಳುವವು.ವ್ಯಾಪಾರದ ಹಡಗುಗಳಂತೆ, ದೂರದಿಂದ ಬೇಕಾದ ಆಹಾರವನ್ನು ತರುವಳು.ಸೋಮಾರಿತನದ ಅನ್ನವನ್ನು ತಿನ್ನದೆ, ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು.ಪ್ರಸಂಗಿ4
ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ಉಣ್ಣು. ನಿನ್ನ ದ್ರಾಕ್ಷಾರಸವನ್ನು ಒಳ್ಳೆಯ ಮನಸ್ಸಿನಿಂದ ಕುಡಿ. ದೇವರು ನಿನ್ನ ಕೆಲಸಗಳನ್ನು ಈಗ ಒಪ್ಪಿಕೊಳ್ಳುತ್ತಾನೆ.ನಾನು ಲೋಕದಲ್ಲಿ ತಿರುಗಿ ದೃಷ್ಟಿಸಲು ವೇಗಿಗಳಿಗೆ ಓಟದಲ್ಲಿ ಗೆಲುವಿಲ್ಲ. ಬಲಿಷ್ಠರಿಗೆ ಯುದ್ಧದಲ್ಲಿ ಜಯವಿಲ್ಲ. ಜ್ಞಾನಿಗಳಿಗೆ ಅನ್ನ ಸಿಕ್ಕದು. ವಿವೇಕಿಗಳಿಗೆ ಧನ ಲಭಿಸದು. ಪ್ರವೀಣರಿಗೆ ದಯೆ ದೊರಕದು. ಕಾಲವೂ, ಗತಿಯೂ ಅವರೆಲ್ಲರಿಗೆ ಸಂಭವಿಸುತ್ತದೆ.ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.ಯೆಶಾಯನು17
ಇಗೋ, ಕರ್ತನೂ, ಸೇನಾಧೀಶ್ವರನೂ ಆಗಿರುವ ಯೆಹೋವನೆಂಬ ನಾನು ಯೆರೂಸಲೇಮಿನಿಂದಲೂ, ಯೆಹೂದದಿಂದಲೂ ಜೀವನಕ್ಕೆ ಆಧಾರವಾದ ಅನ್ನಪಾನಗಳನ್ನೆಲ್ಲಾ ತೆಗೆದುಬಿಡುವೆನು.ಆ ದಿನದಲ್ಲಿ ಅವನು ಗಟ್ಟಿಯಾಗಿ ಕೂಗುತ್ತಾ, ‘ನಾನು ನಿಮ್ಮನ್ನು ಸ್ವಸ್ಥಪಡಿಸುವುದಿಲ್ಲ. ನನ್ನ ಮನೆಯಲ್ಲಿ ಅನ್ನವಾಗಲೀ, ವಸ್ತ್ರವಾಗಲೀ ಇಲ್ಲ: ಜನರನ್ನು ಆಳುವ ಒಡೆಯನನ್ನಾಗಿ ನನ್ನನ್ನು ಮಾಡಬೇಡಿರಿ’” ಎಂದು ಹೇಳುವನು.ಆ ದಿನದಲ್ಲಿ ಏಳು ಮಂದಿ ಹೆಂಗಸರು ಒಬ್ಬ ಪುರುಷನನ್ನು ಹಿಡಿದು, “ನಾವು ಸ್ವಂತವಾಗಿ ದುಡಿದ ಅನ್ನವನ್ನು ಉಣ್ಣುವೆವು, ನಾವೇ ಸಂಪಾದಿಸಿದ ಬಟ್ಟೆಯನ್ನು ಉಟ್ಟುಕೊಳ್ಳುವೆವು, ನಿನ್ನ ಹೆಸರು ಮಾತ್ರ ನಮಗಿದ್ದರೆ ಸಾಕು. ಯಜಮಾನನಾಗಿ ನಮ್ಮ ಮಾನ ಕಾಪಾಡಿದರೆ ಸಾಕು” ಎಂದು ಕೇಳಿಕೊಳ್ಳುವರು.ಬಾಯಾರಿದವರಿಗೆ ನೀರನ್ನು ತಂದುಕೊಡಿರಿ, ತೇಮಾ ದೇಶದ ನಿವಾಸಿಗಳೇ ಓಡಿ ಹೋದವರನ್ನು ರೊಟ್ಟಿಯೊಡನೆ ಎದುರುಗೊಳ್ಳಿರಿ.ಗೋದಿಯ ಕಾಳನ್ನು ನುಚ್ಚು ಮಾಡುವನೋ? ತನ್ನ ಕುದುರೆಗಳ ಗಾಡಿಯ ಚಕ್ರವನ್ನು ಹೊಡೆಯುತ್ತಾ ಗುಂಡನ್ನು ಉರುಳಿಸುತ್ತಾ ಯಾವಾಗಲೂ ಒಕ್ಕುತ್ತಿರುವುದಿಲ್ಲ, ನುಚ್ಚು ಮಾಡುವುದಿಲ್ಲ.ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, ನಿಮ್ಮ ಬೋಧಕನು ಇನ್ನು ಮರೆಯಾಗಿರನು, ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ.ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು.ಇವನಿಗೆ ಗಿರಿದುರ್ಗಗಳೇ, ಆಶ್ರಯ ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು.ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು.”ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು.“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು.ಸೆರೆಯಲ್ಲಿ ಕುಗ್ಗಿರುವವನು ಸಾಯನು, ಪಾತಾಳಕ್ಕೆ ಇಳಿಯನು, ಬೇಗನೆ ಬಿಡುಗಡೆಯಾಗುವನು. ಅವನಿಗೆ ಅನ್ನದ ಕೊರತೆಯೇ ಇರುವುದಿಲ್ಲ.ಆಹಾರವಲ್ಲದ್ದಕ್ಕೆ ಹಣವನ್ನು ಏಕೆ ವ್ಯರ್ಥ ಮಾಡುತ್ತೀರಿ? ತೃಪ್ತಿಗೊಳಿಸದ ಪದಾರ್ಥಕ್ಕೆ ನಿಮ್ಮ ದುಡಿತವನ್ನು ವೆಚ್ಚಮಾಡುವುದೇಕೆ? ಕಿವಿಗೊಟ್ಟು ನನ್ನ ಮಾತನ್ನು ಕೇಳಿರಿ, ಒಳ್ಳೆಯದನ್ನೇ ಉಂಡು ಮೃಷ್ಟಾನ್ನದಲ್ಲಿ ಆನಂದಪಡಿರಿ.ಮಳೆಯೂ, ಹಿಮವೂ ಆಕಾಶದಿಂದ ಬಿದ್ದು, ಭೂಮಿಯನ್ನು ತೋಯಿಸಿ, ಹಸರುಗೊಳಿಸಿ ಫಲಿಸುವಂತೆ ಮಾಡಿ, ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವುದಿಲ್ಲವೋ,ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ.ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ.ತೋಳವು ಕುರಿಯ ಸಂಗಡ ಮೇಯುವುದು, ಸಿಂಹವು ಎತ್ತಿನಂತೆ ಹುಲ್ಲು ತಿನ್ನುವುದು, ಹಾವಿಗೆ ಧೂಳೇ ಆಹಾರವಾಗುವುದು. ನನ್ನ ಪರಿಶುದ್ಧ ಪರ್ವತದಲ್ಲೆಲ್ಲಾ ಯಾರೂ ಕೇಡು ಮಾಡುವುದಿಲ್ಲ, ಯಾರೂ ಹಾಳು ಮಾಡುವುದಿಲ್ಲ” ಎಂದು ಯೆಹೋವನು ಅನ್ನುತ್ತಾನೆ.ಯೆರೆಮೀಯನು11
ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.ಗಗನದ ಒಡತಿಗೆ ಹೋಳಿಗೆಗಳನ್ನು ಮಾಡುವುದಕ್ಕಾಗಿ ಮಕ್ಕಳು ಸೌದೆಯನ್ನು ಆರಿಸುತ್ತಾರೆ, ತಂದೆಗಳು ಬೆಂಕಿಯನ್ನು ಹೊತ್ತಿಸುತ್ತಾರೆ, ಹೆಂಗಸರು ಕಣಕವನ್ನು ನಾದುತ್ತಾರೆ; ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸುತ್ತಾರೆ; ನನ್ನನ್ನು ಕೆಣಕಬೇಕೆಂದೇ ಇದನ್ನೆಲ್ಲಾ ಮಾಡುತ್ತಾರೆ.ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಗೆ ಸಮಾನನಾಗಿದ್ದೆನು. “ಮರವನ್ನು ಫಲಸಹಿತವಾಗಿ ನಾಶಪಡಿಸೋಣ, ಇವನು ನಿರ್ನಾಮವಾಗುವಂತೆ ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ” ಎಂದು ಅವರು ನನಗೆ ವಿರುದ್ಧವಾಗಿ ಕುಯುಕ್ತಿಗಳನ್ನು ಕಲ್ಪಿಸಿದ್ದು ನನಗೆ ತಿಳಿದಿರಲಿಲ್ಲ.ಅರಸನಾದ ಚಿದ್ಕೀಯನು ಇದನ್ನು ಕೇಳಿ ಅಪ್ಪಣೆ ಕೊಡಲು ಯೆರೆಮೀಯನನ್ನು ಕಾರಾಗೃಹದ ಅಂಗಳದಲ್ಲಿಟ್ಟು, ಪಟ್ಟಣದ ರೊಟ್ಟಿಯೆಲ್ಲಾ ತೀರುವ ತನಕ ರೊಟ್ಟಿಯ ಪೇಟೆಯಿಂದ ಪ್ರತಿದಿನ ಒಂದೊಂದು ರೊಟ್ಟಿಯನ್ನು ಅವನಿಗೆ ತಂದು ಕೊಡುತ್ತಿದ್ದರು. ಹೀಗೆ ಯೆರೆಮೀಯನು ಕಾರಾಗೃಹದ ಅಂಗಳದಲ್ಲೇ ವಾಸಿಸುತ್ತಿದ್ದನು.“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.ಏಳನೆಯ ತಿಂಗಳಿನಲ್ಲಿ ರಾಜವಂಶದವನೂ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದ ಇಷ್ಮಾಯೇಲನು ಹತ್ತು ಮಂದಿಯೊಂದಿಗೆ ಅಹೀಕಾಮನ ಮಗನಾದ ಗೆದಲ್ಯನು ವಾಸವಾಗಿದ್ದ ಮಿಚ್ಪಕ್ಕೆ ಬಂದನು; ಅಲ್ಲಿ ಅವನೊಂದಿಗೆ ಊಟಮಾಡಿದರು.ಬೇಡವೇ ಬೇಡ; ನಾವು ಯುದ್ಧ ಕಾಣದೆ, ತುತ್ತೂರಿಯ ಶಬ್ದ ಕೇಳದೆ, ಅನ್ನದ ಕೊರತೆಯಿಂದ ಹಸಿವಾಗದೆ ಇರುವ ಐಗುಪ್ತ ದೇಶಕ್ಕೆ ಹೋಗಿ ಅಲ್ಲೇ ವಾಸಿಸುವೆವು’ ಎಂದುಕೊಂಡರೆ,ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುವುದಿಲ್ಲ ಎಂದು ನಾವು ಬಾಯಿಬಿಟ್ಟು ಹೇಳಿದ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುವೆವು. ಮೊದಲು ಯೆಹೂದದ ಊರುಗಳಲ್ಲಿ ಮತ್ತು ಯೆರೂಸಲೇಮಿನ ಬೀದಿಗಳಲ್ಲಿ ನಾವೂ ಮತ್ತು ನಮ್ಮ ಪೂರ್ವಿಕರೂ ನಮ್ಮ ಅರಸರೂ, ನಮ್ಮ ಪ್ರಧಾನರೂ ಹೀಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬಾ ಉಂಡು ಸುಖಪಡುತ್ತಿದ್ದೆವು.ಗಗನದ ಒಡತಿಗೆ ಧೂಪಹಾಕಿ ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರವಾದ ಹೋಳಿಗೆಗಳನ್ನು ಮಾಡಿ ಪಾನದ್ರವ್ಯವನ್ನು ಅರ್ಪಿಸಿದ್ದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೋ?” ಎಂದರು.ಘೋರಕ್ಷಾಮದ ದೆಸೆಯಿಂದ ಪಟ್ಟಣದಲ್ಲಿರುವವರಿಗೆ ಆಹಾರ ಸಿಕ್ಕದೆಹೋಯಿತು. ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಹನ್ನೊಂದನೆಯ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನದಲ್ಲಿ,ಯೆಹೋಯಾಖೀನನು ಸೆರೆಯ ಬಟ್ಟೆಗಳನ್ನು ತೆಗೆದುಹಾಕಿ, ಜೀವದಿಂದಿರುವವರೆಗೂ ಅರಸನ ಪಂಕ್ತಿಯಲ್ಲಿ ಊಟಮಾಡುತ್ತಿದ್ದನು.ಪ್ರಲಾಪಗಳು4
ಆಕೆಯ ಜನರೆಲ್ಲಾ ನರಳುತ್ತಾರೆ, ಅವರು ಅನ್ನವನ್ನು ಹುಡುಕಿಕೊಳ್ಳುವ ಗತಿ ಬಂತು, ಪ್ರಾಣಾಧಾರವಾದ ಆಹಾರಕ್ಕಾಗಿ ತಮ್ಮ ಅಮೂಲ್ಯ ವಸ್ತುಗಳನ್ನೂ ಕೊಟ್ಟುಬಿಟ್ಟಿದ್ದಾರೆ, “ಯೆಹೋವನೇ, ನೋಡು, ಕಟಾಕ್ಷಿಸು, ನಾನು ತುಚ್ಛಳಾದೆನಲ್ಲಾ” ಎಂದು ಪ್ರಲಾಪಿಸುತ್ತಾಳೆ.ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.ಹೇಗಾದರೂ ಹೊಟ್ಟೆ ತುಂಬಾ ಅನ್ನ ತಿನ್ನೋಣ ಎಂದು ಐಗುಪ್ತ್ಯರಿಗೂ ಮತ್ತು ಅಶ್ಶೂರ್ಯರಿಗೂ ಅಧೀನರಾದೆವು.ಆಹಾರಕ್ಕೋಸ್ಕರ ಬೆಳೆಯನ್ನು ಕೊಯ್ಯುತ್ತಿರುವಾಗ ಅರಣ್ಯದವರ ಕತ್ತಿಯಿಂದ ಪ್ರಾಣಾಪಾಯಕ್ಕೆ ಗುರಿಯಾಗಿದ್ದೇವೆ.ಯೆಹೆಜ್ಕೇಲನು21
“ಇದಲ್ಲದೆ ನೀನು ಗೋದಿ, ಜವೆಗೋದಿ, ಅವರೆ, ಅಲಸಂದಿ, ನವಣೆ, ಕಡಲೆ, ಇವುಗಳನ್ನು ತೆಗೆದುಕೊಂಡು ಒಂದೇ ಪಾತ್ರೆಯಲ್ಲಿ ಹಾಕಿ ಅವುಗಳಿಂದ ರೊಟ್ಟಿಯನ್ನು ಮಾಡಿಕೋ; ಮಗ್ಗುಲಲ್ಲಿ ಮಲಗಿಕೊಳ್ಳುವಷ್ಟು ದಿನ, ಅಂದರೆ ಮುನ್ನೂರತೊಂಬತ್ತು ದಿನ ಅದನ್ನು ತಿನ್ನು.ನೀನು ಸೌದೆಗೆ ಬದಲಾಗಿ ಮನುಷ್ಯರ ಮಲವನ್ನು ಉರಿಸಿ, ನಿನ್ನ ಜನರ ಕಣ್ಣೆದುರಿಗೆ ಆ ಹಿಟ್ಟನ್ನು ರೊಟ್ಟಿಮಾಡಿ ಜವೆಗೋದಿಯ ರೊಟ್ಟಿಗಳಂತೆ ತಿನ್ನು.ಹಾಗೆಯೇ ಇಸ್ರಾಯೇಲ್ ವಂಶದವರು ನನ್ನಿಂದ ಅನ್ಯದೇಶಗಳಿಗೆ ಅಟ್ಟಲ್ಪಟ್ಟು ಆ ದೇಶೀಯರ ನಡುವೆ ವಾಸಿಸುತ್ತಾ ತಮ್ಮ ಆಹಾರವನ್ನು ಹೊಲಸಾಗಿ ತಿನ್ನುವರು” ಇದು ಯೆಹೋವನ ನುಡಿ.ಆತನು ನನಗೆ, “ನೋಡು, ಮನುಷ್ಯರ ಮಲಕ್ಕೆ ಬದಲಾಗಿ ದನಗಳ ಸಗಣಿಯನ್ನು ನಿನಗೆ ಗೊತ್ತುಮಾಡಿದ್ದೇನೆ, ಇದನ್ನು ಉರಿಸಿ ನಿನ್ನ ರೊಟ್ಟಿಯನ್ನು ಸುಟ್ಟುಕೋ” ಎಂದು ಉತ್ತರಕೊಟ್ಟನು.ಇದಲ್ಲದೆ ಆತನು ನನಗೆ ಹೀಗೆ ಹೇಳಿದನು, “ನರಪುತ್ರನೇ, ನಾನು ಯೆರೂಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕದ ಪ್ರಕಾರ ಕಳವಳದಿಂದ ತಿನ್ನುವರು, ನೀರನ್ನು ಅಳತೆಯ ಪ್ರಕಾರ ನಡುಗುತ್ತಾ ಕುಡಿಯುವರು.ಅವರಲ್ಲಿ ಪ್ರತಿಯೊಬ್ಬರೂ ಅನ್ನ ಮತ್ತು ನೀರಿನ ಕೊರತೆಯಿಂದ ಕುಗ್ಗಿ ತಮ್ಮ ಅಧರ್ಮದಿಂದ ನಾಶವಾಗಿ ಹೋಗುವರು.”ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.“ನರಪುತ್ರನೇ, ನೀನು ಅನ್ನವನ್ನು ನಡುಗುತ್ತಾ ತಿನ್ನು ಮತ್ತು ನೀರನ್ನು ಹೆದರಿಕೆಯಿಂದ ಕುಡಿ.ಆ ದೇಶದಲ್ಲಿರುವ ಜನರಿಗೆ ಹೀಗೆ ಹೇಳು, ‘ಕರ್ತನಾದ ಯೆಹೋವನು ಇಸ್ರಾಯೇಲ್ ದೇಶದ ಯೆರೂಸಲೇಮಿನ ನಿವಾಸಿಗಳ ವಿಷಯವಾಗಿ ಇಂತೆನ್ನುತ್ತಾನೆ, ಅವರು ಅನ್ನವನ್ನು ನಡಗುತ್ತಾ ತಿನ್ನುವರು ಮತ್ತು ನೀರನ್ನು ಹೆದರಿಕೆಯಿಂದ ಕುಡಿಯುವರು; ಏಕೆಂದರೆ ಆ ದೇಶದವರೆಲ್ಲರು ಬಲಾತ್ಕಾರಿಗಳಾಗಿರುವುದರಿಂದ ಅಲ್ಲಿನ ಸೊತ್ತೆಲ್ಲಾ ಸೂರೆಯಾಗಿ, ದೇಶವು ಬರಿದಾಗುವುದು.ನೀವು ಜವೆಗೋದಿಯ ಹಿಡಿಗಳನ್ನೂ, ರೊಟ್ಟಿಯ ಚೂರುಗಳನ್ನೂ ಆಶಿಸಿ ಸುಳ್ಳು ಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳುವುದರಿಂದ ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.’“ನರಪುತ್ರನೇ, ಅಪರಾಧವನ್ನು ನಡೆಸಿ ನನ್ನ ವಿರುದ್ಧವಾಗಿ ಪಾಪಮಾಡಿದ ದೇಶದ ಮೇಲೆ ನಾನು ಕೈಯೆತ್ತಿ, ಅದರ ಆಹಾರ ಸರಬರಾಜನ್ನು ತೆಗೆದುಬಿಟ್ಟು, ಕ್ಷಾಮವನ್ನು ಬರಮಾಡಿ, ಜನರನ್ನು, ಪಶುಗಳನ್ನು ಅದರೊಳಗಿಂದ ನಿರ್ಮೂಲ ಮಾಡುತ್ತೇನೆ.ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.ಸೊದೋಮೆಂಬ ನಿನ್ನ ತಂಗಿಯ ದೋಷವನ್ನು ನೋಡು; ಹೆಮ್ಮೆಪಡುವುದು, ಹೊಟ್ಟೆತುಂಬಿಸಿಕೊಳ್ಳುವುದು, ಸ್ವಂತ ಸುಖದಲ್ಲಿ ಮುಳುಗಿರುವುದು, ಇವು ಆಕೆಯಲ್ಲಿಯೂ ಮತ್ತು ಆಕೆಯ ಕುಮಾರ್ತೆಯರಲ್ಲಿಯೂ ಇದ್ದವು. ಅಲ್ಲದೆ ಆಕೆಯು ದೀನದರಿದ್ರರಿಗೆ ಬೆಂಬವಾಗಿರಲಿಲ್ಲ.ಮುಟ್ಟಿನ ಹೆಂಗಸನ್ನು ಸೇರದೆ, ಯಾರನ್ನೂ ಹಿಂಸಿಸದೆ, ಸಾಲಮಾಡಿದವನ ಒತ್ತೆಯನ್ನು ಬಿಗಿಹಿಡಿಯದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,ಯಾರನ್ನೂ ಹಿಂಸಿಸದೆ, ಒತ್ತೆಯನ್ನು ಕೇಳದೆ, ಯಾರ ಸೊತ್ತನ್ನೂ ಅಪಹರಿಸದೆ, ಹಸಿದವನಿಗೆ ಅನ್ನಕೊಟ್ಟು, ಬೆತ್ತಲೆಯಿರುವವನಿಗೆ ಹೊದಿಕೆಯನ್ನು ಹೊದಿಸಿ,ಸದ್ದಿಲ್ಲದೆ ಮೊರೆಯಿಡು, ವಿಯೋಗ ದುಃಖವನ್ನು ತೋರಿಸಬೇಡ, ರುಮಾಲನ್ನು ಸುತ್ತಿಕೊಂಡಿರು, ಕೆರಗಳನ್ನು ಮೆಟ್ಟಿಕೊಂಡಿರು, ಬಾಯನ್ನು ಬಟ್ಟೆಯಿಂದ ಮುಚ್ಚಿಕೊಳ್ಳಬೇಡ, ಗಾರಿಗೆಯನ್ನು ತಿನ್ನಬೇಡ.”ನಾನು ಮಾಡಿದಂತೆ ಆಗ ನೀವೂ ಮಾಡುವಿರಿ, ಅಂದರೆ ಬಟ್ಟೆಯಿಂದ ಬಾಯನ್ನು ಮುಚ್ಚಿಕೊಳ್ಳದೆ, ಮನುಷ್ಯರ ರೊಟ್ಟಿಯನ್ನು ತಿನ್ನದೆ ಇರುವಿರಿ,ಇಸ್ರಾಯೇಲಿನ ಪ್ರಭುವೋ ಯೆಹೋವನ ಸನ್ನಿಧಿಯಲ್ಲಿ ಊಟ ಮಾಡುವುದಕ್ಕಾಗಿ ಇಲ್ಲಿ ಕುಳಿತುಕೊಳ್ಳಬಹುದು. ಅವನು ಹೆಬ್ಬಾಗಿಲ ಪಡಸಾಲೆಯ ಮಾರ್ಗವಾಗಿ ಪ್ರವೇಶಿಸಿ, ಅದೇ ಮಾರ್ಗವಾಗಿ ಹೊರಗೆ ಹೋಗಬೇಕು” ಎಂದು ಹೇಳಿದನು.‘ಇಸ್ರಾಯೇಲ್ ವಂಶದವರೇ, ನೀವು ನನ್ನ ರೊಟ್ಟಿಯನ್ನೂ, ಕೊಬ್ಬನ್ನೂ, ರಕ್ತವನ್ನೂ ಅರ್ಪಿಸುವಾಗ, ಹೃದಯದಲ್ಲಿಯೂ, ಶರೀರದಲ್ಲಿಯೂ ಸುನ್ನತಿಹೀನರಾದ ಮ್ಲೇಚ್ಛರನ್ನು ನನ್ನ ಪವಿತ್ರಾಲಯದೊಳಗೆ ಬರಮಾಡಿ, ನನ್ನ ಮಂದಿರವನ್ನು ಅಪವಿತ್ರಗೊಳಿಸಿ, ನನ್ನ ಒಡಂಬಡಿಕೆಯನ್ನು ಭಂಗಪಡಿಸಿ, ನಿಮ್ಮ ದುರಾಚಾರಗಳ ಲೆಕ್ಕವನ್ನು ಹೆಚ್ಚಿಸಿದ್ದೀರಿ.“ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.ಪಟ್ಟಣವನ್ನು ಹೊರತುಪಡಿಸಿ, ಅದಕ್ಕೆ ಒಳಪಟ್ಟ ಉಳಿದ ಭೂಮಿಯ ಉದ್ದವು ಮೀಸಲಾದ ಪವಿತ್ರ ಕ್ಷೇತ್ರದ ಪಕ್ಕದಲ್ಲಿ ಪೂರ್ವದ ಕಡೆಗೆ ಹತ್ತು ಸಾವಿರ ಮೊಳವು, ಪಶ್ಚಿಮದ ಕಡೆಗೆ ಹತ್ತು ಸಾವಿರ ಮೊಳವು ಆಗಿರಬೇಕು. ಆ ಭೂಮಿಯು ಮೀಸಲಾದ ಪವಿತ್ರ ಕ್ಷೇತ್ರದ ಮೇರೆಯನ್ನು ಅನುಸರಿಸುವುದು. ಅದರ ಉತ್ಪತ್ತಿಯು ಆ ಪಟ್ಟಣದ ನಿವಾಸಿಗಳಿಗೆ ಆಹಾರವಾಗುವುದು.ದಾನಿಯೇಲನು1
ಮೂರು ವಾರ ಮುಗಿಯುವ ತನಕ ನಾನು ರುಚಿಪದಾರ್ಥವನ್ನು ತಿನ್ನಲಿಲ್ಲ. ಮಾಂಸವನ್ನೂ, ದ್ರಾಕ್ಷಾರಸವನ್ನೂ ನನ್ನ ಬಾಯಿಗೆ ಹಾಕಲಿಲ್ಲ. ಎಣ್ಣೆಯನ್ನು ಹಚ್ಚಿಕೊಳ್ಳಲಿಲ್ಲ.ಹೋಶೇಯನು3
ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”ಎಫ್ರಾಯೀಮು ಜನಾಂಗಗಳಲ್ಲಿ ಸೇರಿಕೊಳ್ಳುತ್ತದೆ; ಎಫ್ರಾಯೀಮು ತಿರುವಿಹಾಕದ ರೊಟ್ಟಿಯಂತಿದೆ.ಯೆಹೋವನಿಗೆ ದ್ರಾಕ್ಷಾರಸವನ್ನು ನೈವೇದ್ಯವಾಗಿ ಸುರಿಯರು, ಅವರ ಯಜ್ಞಗಳು ಆತನಿಗೆ ಮೆಚ್ಚಿಕೆಯಾಗುವುದಿಲ್ಲ. ಅವರ ಆಹಾರವು ಸತ್ತವರ ಮನೆಯ ಆಹಾರದಂತಿರುವುದು; ಅದನ್ನು ತಿನ್ನುವವರೆಲ್ಲರೂ ಅಶುದ್ಧರಾಗುವರು, ಅದು ಅವರ ಹೊಟ್ಟೆತುಂಬುವುದಕ್ಕೆ ಮಾತ್ರ ಅನುಕೂಲವಾಗುವುದು, ಅದು ಯೆಹೋವನ ಆಲಯಕ್ಕೆ ಬರಲು ಯೋಗ್ಯವಲ್ಲ.ಆಮೋಸನು3
“ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.ಅನಂತರ ಅಮಚ್ಯನು ಆಮೋಸನಿಗೆ, “ಕಣಿ ಹೇಳುವವನೇ, ಯೆಹೂದ ದೇಶಕ್ಕೆ ಓಡಿಹೋಗು. ಅಲ್ಲಿಯೇ ರೊಟ್ಟಿತಿಂದು ಪ್ರವಾದಿಸು.ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.ಓಬದ್ಯನು1
ನಿನ್ನ ಮಿತ್ರ ಮಂಡಲಿಯವರೆಲ್ಲರೂ ನಿನ್ನನ್ನು ನಿನ್ನ ಮೇರೆಯ ಆಚೆಗೆ ತಳ್ಳಿಬಿಟ್ಟಿದ್ದಾರೆ, ನಿನ್ನ ಆಪ್ತರು ನಿನ್ನನ್ನು ವಂಚಿಸಿ ಸೋಲಿಸಿದ್ದಾರೆ. ನಿನ್ನ ಅನ್ನ ತಿಂದವರೇ ವಿವೇಕವಿಲ್ಲದೆ ನಿನಗೆ ಉರುಲೊಡ್ಡಿದ್ದಾರೆ.ಹಗ್ಗಾಯನು1
ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.ಮಲಾಕಿಯನು1
ನನ್ನ ಯಜ್ಞವೇದಿಯ ಮೇಲೆ ಅಶುದ್ಧ ಪದಾರ್ಥಗಳನ್ನು ಅರ್ಪಿಸುತ್ತೀರಲ್ಲಾ. “ಯಾವ ವಿಷಯದಲ್ಲಿ ಅಶುದ್ಧಗೊಳಿಸಿದ್ದೇವೆ?” ಅನ್ನುತ್ತೀರಿ. “ಯೆಹೋವನ ಮೇಜಿಗೆ ಘನತೆಯೇನಿದೆ?” ಎಂದು ನೀವು ಅಂದುಕೊಳ್ಳುವುದರಲ್ಲಿಯೇ ಇದೆ.ಮತ್ತಾಯನು18
ಆಗ ಸೈತಾನನು ಆತನ ಬಳಿಗೆ ಬಂದು, “ನೀನು ದೇವರ ಮಗನಾಗಿದ್ದರೆ ಈ ಕಲ್ಲುಗಳಿಗೆ ರೊಟ್ಟಿಯಾಗುವಂತೆ ಅಪ್ಪಣೆಕೊಡು” ಎಂದು ಹೇಳಲು,ಯೇಸು, “‘ಮನುಷ್ಯನು ರೊಟ್ಟಿ ತಿಂದ ಮಾತ್ರದಿಂದ ಬದುಕುವುದಿಲ್ಲ, ಆದರೆ ದೇವರ ಬಾಯಿಂದ ಬರುವ ಪ್ರತಿಯೊಂದು ನುಡಿಯಿಂದಲೂ ಬದುಕುವನು’ ಎಂದು ಬರೆದಿದೆ” ಅಂದನು.ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?ಅದಕ್ಕವರು, “ಇಲ್ಲಿ ಐದು ರೊಟ್ಟಿ ಎರಡು ಮೀನು ಮಾತ್ರ ಇವೆ” ಅನ್ನಲಾಗಿ,ತರುವಾಯ ಜನರ ಗುಂಪಿಗೆ ಹುಲ್ಲಿನ ಮೇಲೆ ಕುಳಿತುಕೊಳ್ಳುವುದಕ್ಕೆ ಹೇಳಿ ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ದೇವರಿಗೆ ಸ್ತೋತ್ರ ಮಾಡಿ ರೊಟ್ಟಿಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಕೊಟ್ಟರು.ಶಿಷ್ಯರು ಆತನಿಗೆ, “ಇಷ್ಟು ದೊಡ್ಡ ಜನರ ಗುಂಪನ್ನು ತೃಪ್ತಿಪಡಿಸಲಾಗುವಷ್ಟು ರೊಟ್ಟಿಯು ಈ ಅಡವಿಯಲ್ಲಿ ನಮಗೆ ಎಲ್ಲಿಂದ ಸಿಕ್ಕೀತು?” ಎಂದು ಹೇಳಿದರು.ಅದಕ್ಕೆ ಯೇಸು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.ಆತನು ಆ ಏಳು ರೊಟ್ಟಿಗಳನ್ನೂ ಆ ಮೀನುಗಳನ್ನೂ ತೆಗೆದುಕೊಂಡು ದೇವರಿಗೆ ಸ್ತೋತ್ರ ಮಾಡಿ ಅವುಗಳನ್ನು ಮುರಿದು ಶಿಷ್ಯರಿಗೆ ಕೊಟ್ಟನು. ಶಿಷ್ಯರು ಜನರಿಗೆ ಹಂಚಿಕೊಟ್ಟರು.ಶಿಷ್ಯರು ರೊಟ್ಟಿ ಬುತ್ತಿ ತೆಗೆದುಕೊಳ್ಳುವುದನ್ನು ಮರೆತು ಆಚೇ ದಡಕ್ಕೆ ಬಂದಿದ್ದರು.ಅದಕ್ಕೆ ಅವರು, “ನಾವು ರೊಟ್ಟಿಯನ್ನು ತೆಗೆದುಕೊಳ್ಳದೆ ಬಂದಿದ್ದರಿಂದ” ಹೀಗೆ ಹೇಳಿರಬೇಕು ಎಂದು ತಮ್ಮತಮ್ಮೊಳಗೆ ಮಾತನಾಡಿಕೊಳ್ಳುತ್ತಿದ್ದರು.ಯೇಸು ಅದನ್ನು ತಿಳಿದು, “ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ಶೇಖರಿಸಿಕೊಂಡಿದ್ದಿರಿ?ಇಲ್ಲವೆ ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರಿಗೆ ಹಂಚಿದ ನಂತರ ಎಷ್ಟು ಪುಟ್ಟಿ ತುಂಬಿಟ್ಟಿರಿ? ನೀವು ಇನ್ನೂ ಗ್ರಹಿಸಲಿಲ್ಲವೇ? ನಿಮಗೆ ನೆನಪಿಲ್ಲವೇ?ನಾನು ರೊಟ್ಟಿಯನ್ನು ಕುರಿತು ಮಾತನಾಡಲಿಲ್ಲ, ಎಂಬುದು ನಿಮಗೆ ಹೇಗೆ ತಿಳಿಯದು? ಆದರೆ ನಾನು ನಿಮಗೆ ಹೇಳಿದು ಏನೆಂದರೆ, ಫರಿಸಾಯರ ಮತ್ತು ಸದ್ದುಕಾಯರ ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರ ಬೇಕೆಂದೇ” ಅಂದನು.ಆಗ ಅವರು ರೊಟ್ಟಿಯ ಹುಳಿಹಿಟ್ಟನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಆತನು ತಮಗೆ ಹೇಳಲಿಲ್ಲ; ಆದರೆ ಫರಿಸಾಯರ ಮತ್ತು ಸದ್ದುಕಾಯರ ಬೋಧನೆಯನ್ನು ಕುರಿತು ಎಚ್ಚರಿಕೆಯಾಗಿರಬೇಕೆಂದು ಹೇಳಿದನು ಎಂಬುದಾಗಿ ತಿಳಿದುಕೊಂಡರು.ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು ಶಿಷ್ಯರಿಗೆ ಕೊಟ್ಟು, “ತೆಗೆದುಕೊಳ್ಳಿರಿ, ತಿನ್ನಿರಿ, ಇದು ನನ್ನ ದೇಹ” ಅಂದನು.ಮಾರ್ಕನು15
ಅದಕ್ಕೆ ಯೇಸು, “ನೀವೇ ಅವರಿಗೆ ಊಟಕ್ಕೇನಾದರೂ ಕೊಡಿರಿ” ಎಂದು ಉತ್ತರಕೊಟ್ಟನು. ಅದಕ್ಕವರು, “ನಾವು ಹೋಗಿ ಇನ್ನೂರು ದಿನಾರಿ ನಾಣ್ಯಗಳ ಬೆಲೆಯಷ್ಟು ರೊಟ್ಟಿಯನ್ನು ಕೊಂಡುಕೊಂಡು ಅವರಿಗೆ ಊಟ ಕೊಡಬೇಕೋ?” ಎಂದು ಹೇಳಲುಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ? ಹೋಗಿ ನೋಡಿ” ಅಂದನು. ಅವರು ವಿಚಾರಿಸಿಕೊಂಡು ಬಂದು, “ನಮ್ಮಲ್ಲಿ ಐದು ರೊಟ್ಟಿ ಮತ್ತು ಎರಡು ಮೀನುಗಳಿವೆ” ಅಂದರು.ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.ಊಟಮಾಡಿದವರು ಐದು ಸಾವಿರ ಮಂದಿ ಗಂಡಸರು.ಏಕೆಂದರೆ ಅವರು ರೊಟ್ಟಿಯ ವಿಷಯವಾದ ಮಹತ್ಕಾರ್ಯವನ್ನು ಗ್ರಹಿಸಿರಲಿಲ್ಲ; ಅವರ ಹೃದಯವು ಕಠಿಣವಾಗಿತ್ತು.ಅದಕ್ಕೆ ಶಿಷ್ಯರು, “ಈ ಅಡವಿಯಲ್ಲಿ ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತಂದು ಈ ಜನರನ್ನು ತೃಪ್ತಿಪಡಿಸುವುದಕ್ಕಾದೀತು?” ಅಂದರು.ಆತನು, “ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?” ಎಂದು ಅವರನ್ನು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳು ಇವೆ” ಅಂದರು.ಆಗ ಯೇಸು ಜನರ ಗುಂಪಿಗೆ, ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು, ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಸ್ತೋತ್ರಮಾಡಿ ಅವುಗಳನ್ನು ಮುರಿದು ಜನರಿಗೆ ಹಂಚಲು ತನ್ನ ಶಿಷ್ಯರ ಕೈಗೆ ಕೊಟ್ಟನು; ಅವರು ಗುಂಪಿನವರಿಗೆ ಹಂಚಿಕೊಟ್ಟರು.ಆದರೆ ಶಿಷ್ಯರು ರೊಟ್ಟಿಯನ್ನು ತೆಗೆದುಕೊಳ್ಳಲು ಮರೆತಿದ್ದರು. ದೋಣಿಯಲ್ಲಿ ಅವರ ಹತ್ತಿರ ಒಂದು ರೊಟ್ಟಿ ಮಾತ್ರ ಇತ್ತು; ಬೇರೆ ಏನೂ ಇರಲಿಲ್ಲ.ಅವರು, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು” ಎಂದು ತಮ್ಮೊಳಗೆ ಚರ್ಚಿಸಿಕೊಂಡರು.ಆತನು ಅದನ್ನು ತಿಳಿದು, “ರೊಟ್ಟಿಯಿಲ್ಲವಲ್ಲಾ ಎಂದು ನಿಮ್ಮೊಳಗೆ ಚರ್ಚಿಸಿಕೊಳ್ಳುವುದೇಕೆ? ನೀವು ಇನ್ನೂ ಗ್ರಹಿಸಲಿಲ್ಲವೋ? ನಿಮಗೆ ತಿಳಿವಳಿಕೆ ಬರಲಿಲ್ಲವೋ? ನಿಮ್ಮ ಮನಸ್ಸು ಅಷ್ಟು ಕಠಿಣವಾಗಿದೆಯೋ?ನಾನು ಆ ಐದು ರೊಟ್ಟಿಗಳನ್ನು ಮುರಿದು ಐದು ಸಾವಿರ ಜನರಿಗೆ ಹಂಚಿಸಿದಾಗ ಉಳಿದ ರೊಟ್ಟಿಯ ತುಂಡುಗಳನ್ನು ಎಷ್ಟು ಬುಟ್ಟಿ ತುಂಬಾ ತೆಗೆದುಕೊಂಡು ಹೋದಿರಿ?” ಎಂದು ಕೇಳಿದನು. ಅವರು, “ಹನ್ನೆರಡು ಬುಟ್ಟಿಗಳು” ಅಂದರು.ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.ಅವರು ಊಟಮಾಡುತ್ತಿರುವಾಗ ಯೇಸು ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಮುರಿದು ಶಿಷ್ಯರಿಗೆ ಕೊಡುತ್ತಾ “ಇದನ್ನು ತೆಗೆದುಕೊಳ್ಳಿರಿ, ಇದು ನನ್ನ ದೇಹ” ಎಂದನು.ಲೂಕನು11
ಆಗ ಸೈತಾನನು ಆತನಿಗೆ, “ನೀನು ದೇವರ ಮಗನಾಗಿದ್ದರೆ ಈ ಕಲ್ಲನ್ನು ರೊಟ್ಟಿಯಾಗುವಂತೆ ಅಪ್ಪಣೆ ಕೊಡು” ಎಂದು ಹೇಳಲು,ಏಕೆಂದರೆ ಸ್ನಾನಿಕನಾದ ಯೋಹಾನನು ಬಂದಿದ್ದಾನೆ; ಅವನು ರೊಟ್ಟಿ ತಿನ್ನದವನು, ದ್ರಾಕ್ಷಾರಸ ಕುಡಿಯದವನು; ನೀವು, ‘ಅವನಿಗೆ ದೆವ್ವ ಹಿಡಿದದೆ’ ಅನ್ನುತ್ತೀರಿ.ಆತನು, “ನೀವೇ ಅವರಿಗೆ ಊಟಕ್ಕೆ ಕೊಡಿರಿ” ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.ಆ ಮೇಲೆ ಯೇಸುವು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಆಕಾಶದ ಕಡೆಗೆ ನೋಡಿ ಅವುಗಳನ್ನು ಆಶೀರ್ವದಿಸಿ, ಮುರಿದು ಶಿಷ್ಯರ ಕೈಗೆ ಕೊಟ್ಟು, ಇದನ್ನು ಜನರ ಗುಂಪಿಗೆ ಹಂಚಿರಿ ಅಂದನು.ಮತ್ತು ಯೇಸು ಅವರಿಗೆ ಹೇಳಿದ್ದೇನಂದರೆ, “ನಿಮ್ಮಲ್ಲಿ ಒಬ್ಬನು ತನ್ನ ಸ್ನೇಹಿತನ ಮನೆಗೆ ನಡುರಾತ್ರಿಯಲ್ಲಿ ಹೋಗುತ್ತಾನೆಂದು ಭಾವಿಸೋಣ, ಅವನು, ‘ಸ್ನೇಹಿತನೆ, ನನಗೆ ಮೂರು ರೊಟ್ಟಿಗಳನ್ನು ಸಾಲವಾಗಿ ಕೊಡು.ಆಗ ಅವನಿಗೆ ಬುದ್ಧಿಬಂದು ಅವನು, ‘ನನ್ನ ತಂದೆಯ ಬಳಿಯಲ್ಲಿ ಎಷ್ಟೋ ಮಂದಿ ಕೂಲಿಯಾಳುಗಳಿಗೆ ಬೇಕಾದಷ್ಟು ಆಹಾರವಿದೆ, ನಾನಾದರೋ ಇಲ್ಲಿ ಹಸಿವಿನಿಂದ ಸಾಯುತ್ತಿದ್ದೇನೆ.ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,ಬಳಿಕ ಆತನು ರೊಟ್ಟಿಯನ್ನು ತೆಗೆದುಕೊಂಡು ಸ್ತೋತ್ರಮಾಡಿ ಮುರಿದು ಅವರಿಗೆ ಕೊಟ್ಟು, “ಇದು ನಿಮಗೋಸ್ಕರ ಕೊಟ್ಟಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.ಆತನು ಅವರ ಸಂಗಡ ಊಟಕ್ಕೆ ಕುಳಿತುಕೊಂಡಾಗ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ, ಮುರಿದು ಅವರಿಗೆ ಕೊಡುತ್ತಿರಲಾಗಿ,ಆಗ ಅವರಿಬ್ಬರು ದಾರಿಯಲ್ಲಿ ನಡೆದ ಸಂಗತಿಯನ್ನೂ ರೊಟ್ಟಿ ಮುರಿಯುವುದರಲ್ಲಿ ತಾವು ಆತನ ಗುರುತು ಹಿಡಿದೆವೆಂಬುದನ್ನೂ ವಿವರಿಸಿದರು.ಯೋಹಾನನು9
ಹೀಗಿರಲಾಗಿ ಯೇಸು ಕಣ್ಣೆತ್ತಿ ನೋಡಿದಾಗ ಜನರ ದೊಡ್ಡಗುಂಪು ತನ್ನ ಕಡೆಗೆ ಬರುವುದನ್ನು ನೋಡಿ “ಇವರ ಊಟಕ್ಕೆ ನಾವು ಎಲ್ಲಿಂದ ರೊಟ್ಟಿ ಕೊಂಡು ತರೋಣ?” ಎಂದು ಫಿಲಿಪ್ಪನನ್ನು ಕೇಳಿದನು.ಅದಕ್ಕೆ ಫಿಲಿಪ್ಪನು, “ಪ್ರತಿಯೊಬ್ಬನಿಗೆ ಸ್ವಲ್ಪ ಸ್ವಲ್ಪ ಸಿಕ್ಕಬೇಕಾದರೂ ಇನ್ನೂರು ದಿನಾರಿ ಮೌಲ್ಯದ ರೊಟ್ಟಿಯಾದರೂ ಅವರಿಗೆ ಸಾಲುವುದಿಲ್ಲ” ಎಂದನು.“ಇಲ್ಲಿ ಒಬ್ಬ ಹುಡುಗನ ಬಳಿಯಲ್ಲಿ ಐದು ಜವೆಗೋದಿಯ ರೊಟ್ಟಿಗಳೂ, ಎರಡು ಮೀನುಗಳೂ ಇವೆ. ಆದರೆ ಇಷ್ಟೊಂದು ಜನರಿಗೆ ಅವು ಯಾತಕ್ಕಾದಾವು?” ಎಂದು ಹೇಳಲು,ಆಮೇಲೆ ಯೇಸು ಆ ರೊಟ್ಟಿಗಳನ್ನು ತೆಗೆದುಕೊಂಡು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿ, ಕುಳಿತಿದ್ದವರಿಗೆ ಹಂಚಿದನು. ಅದೇ ರೀತಿ ಮೀನುಗಳನ್ನು ಅವರಿಗೆ ಬೇಕಾದಷ್ಟು ಹಂಚಿದನು.ಅವರು ಆ ಐದು ಜವೆಗೋದಿಯ ರೊಟ್ಟಿಗಳಲ್ಲಿ ಜನರು ತಿಂದು ಮಿಕ್ಕ ತುಂಡುಗಳನ್ನು ಕೂಡಿಸಿ, ಹನ್ನೆರಡು ಪುಟ್ಟಿಗಳಿಗೆ ತುಂಬಿಸಿದರು.ಅಷ್ಟರೊಳಗೆ ತಿಬೇರಿಯಾದಿಂದ ಬೇರೆ ದೋಣಿಗಳು ಹೊರಟು, ಕರ್ತನು ದೇವರಿಗೆ ಕೃತಜ್ಞತೆ ಸಲ್ಲಿಸಿ, ಜನರಿಗೆ ರೊಟ್ಟಿಯನ್ನು ಊಟಮಾಡಿಸಿದ ಸ್ಥಳದ ಸಮೀಪಕ್ಕೆ ಬಂದವು.ಯೇಸು ಅವರಿಗೆ “ನಿಮಗೆ ಸತ್ಯವಾಗಿ ಹೇಳುತ್ತೇನೆ. ನೀವು ನನ್ನನ್ನು ಹುಡುಕುವುದು ಸೂಚಕಕಾರ್ಯಗಳನ್ನು ನೋಡಿದ್ದರಿಂದಲ್ಲ, ಆ ರೊಟ್ಟಿ ತಿಂದು ಹೊಟ್ಟೆ ತುಂಬಿಸಿಕೊಂಡಿದ್ದರಿಂದಲೇ.ಅವರು ದಡಕ್ಕೆ ಬಂದು ಸೇರಿದಾಗ, ಕೆಂಡಗಳನ್ನೂ ಅವುಗಳ ಮೇಲೆ ಇಟ್ಟಿದ್ದ ಮೀನುಗಳನ್ನು ಮತ್ತು ರೊಟ್ಟಿಯನ್ನು ಕಂಡರು.ಯೇಸು ಬಂದು ರೊಟ್ಟಿಯನ್ನು ತೆಗೆದುಕೊಂಡು ಅವರಿಗೆ ಕೊಟ್ಟನು. ಹಾಗೆಯೇ ಮೀನನ್ನೂ ಕೊಟ್ಟನು.ಅಪೊಸ್ತಲರ ಕೃತ್ಯಗಳು7
ಅವರು ಅಪೊಸ್ತಲರ ಬೋಧನೆಯಲ್ಲಿಯೂ, ಸಹೋದರರೊಂದಿಗೆ ಅನ್ಯೋನ್ಯತೆಯಲ್ಲಿಯೂ, ರೊಟ್ಟಿಮುರಿಯುವುದರಲ್ಲಿಯೂ, ಪ್ರಾರ್ಥನೆಗಳಲ್ಲಿಯೂ ನಿರತರಾಗಿದ್ದರು.ಅವರು ಪ್ರತಿದಿನ ಏಕಮನಸ್ಸಿನಿಂದ ದೇವಾಲಯದಲ್ಲಿ ಸೇರಿಬರುತ್ತಾ, ಮನೆಮನೆಗಳಲ್ಲಿ ರೊಟ್ಟಿಮುರಿದು ಉಲ್ಲಾಸದಿಂದಲೂ, ಸರಳ ಸಹೃದಯದಿಂದಲೂ ಸಹಭೋಜನ ಮಾಡುತ್ತಾ ಇದ್ದರು.ಇದು ಯೆಹೂದ್ಯರಿಗೆ ಮೆಚ್ಚಿಕೆಯಾಗಿದೆ ಎಂದು ತಿಳಿದು, ಅಷ್ಟಕ್ಕೆ ನಿಲ್ಲದೆ ಪೇತ್ರನನ್ನೂ ಬಂಧಿಸಿದನು. ಆ ಕಾಲದಲ್ಲಿ ಪಸ್ಕಹಬ್ಬ ಅಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ನಡೆಯುತ್ತಿತ್ತು.ಹುಳಿಯಿಲ್ಲದ ರೊಟ್ಟಿಯ ಹಬ್ಬದ ದಿನಗಳನ್ನು ಪೂರೈಸಿದ ಮೇಲೆ ನಾವು ಫಿಲಿಪ್ಪಿಯಿಂದ ಹೊರಟು ಹಡಗನ್ನು ಹತ್ತಿ ಐದು ದಿನಗಳಲ್ಲಿ ತ್ರೋವದಲ್ಲಿ ಬಂದು ಅವರನ್ನು ಸೇರಿದೆವು. ಅಲ್ಲಿ ಏಳು ದಿನಗಳ ಕಾಲ ತಂಗಿದ್ದೆವು.ವಾರದ ಮೊದಲನೆಯ ದಿನದಲ್ಲಿ ನಾವು ರೊಟ್ಟಿ ಮುರಿಯುವ ನಿಯಮಕ್ಕಾಗಿ ಸೇರಿಬಂದಾಗ ಪೌಲನು ಅಲ್ಲಿ ನೆರೆದಂತಹ ವಿಶ್ವಾಸಿಗಳಿಗೆ ಬೋಧನೆಮಾಡಿದನು. ಮರುದಿನ ಹೊರಡಬೇಕೆಂದಿದ್ದ ಪೌಲನು ಅವರಿಗೆ ಬೋಧಿಸುತ್ತಾ ಮಧ್ಯರಾತ್ರಿಯವರೆಗೂ ಉಪನ್ಯಾಸವನ್ನು ನೀಡಿದನು.ಆಗ ಅವನು ಮೇಲಕ್ಕೆ ಹೋಗಿ ರೊಟ್ಟಿ ಮುರಿದು ಊಟಮಾಡಿ ಬಹಳ ಹೊತ್ತು ಬೆಳಗಾಗುವ ತನಕ ಮಾತನಾಡಿ ಹೊರಟುಹೋದನು.ರೊಟ್ಟಿಯನ್ನು ತೆಗೆದುಕೊಂಡು, ಎಲ್ಲರ ಮುಂದೆ ದೇವರ ಸ್ತೋತ್ರಮಾಡಿ ಅದನ್ನು ಮುರಿದು ತಿನ್ನುವುದಕ್ಕೆ ಪ್ರಾರಂಭಿಸಿದನು.1 ಕೊರಿಂಥದವರಿಗೆ8
ನೀವು ಹುಳಿಯಿಲ್ಲದವರೆನಿಸಿಕೊಂಡದ್ದರಿಂದ ಹಳೇ ಹುಳಿಯನ್ನು ತೆಗೆದುಹಾಕಿ ಹೊಸ ಕಣಕದಂತಾಗಿರಿ. ಯಾಕೆಂದರೆ ಈಗಾಗಲೇ ನಮ್ಮ ಪಸ್ಕ ಯಜ್ಞದ ಕುರಿಮರಿಯು ಬಲಿಯಾಗಿದೆ; ಆ ಕುರಿಮರಿ ಯಾವುದೆಂದರೆ ಕ್ರಿಸ್ತನೇ.ಆದಕಾರಣ ನಾವು ಹಳೇ ಹುಳಿಯನ್ನು ಅಂದರೆ ದುರ್ಮಾರ್ಗತ್ವ ಮತ್ತು ದುಷ್ಟತ್ವ ಎಂಬ ಹುಳಿಯನ್ನು ಇಟ್ಟುಕೊಳ್ಳದೇ ಪ್ರಾಮಾಣಿಕತೆ ಹಾಗೂ ಸತ್ಯತೆ ಎಂಬ ಹುಳಿಯಿಲ್ಲದ ರೊಟ್ಟಿಯನ್ನೇ ತೆಗೆದುಕೊಂಡು ಹಬ್ಬವನ್ನು ಆಚರಿಸೋಣ.ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?ರೊಟ್ಟಿ ಒಂದೇ ಆಗಿರುವ ಹಾಗೆ ಅನೇಕರಾಗಿರುವ ನಾವೆಲ್ಲರು ಒಂದೇ ದೇಹದಂತಿದ್ದೇವೆ. ಯಾಕೆಂದರೆ ನಾವೆಲ್ಲರೂ ಆ ಒಂದೇ ರೊಟ್ಟಿಯಲ್ಲಿ ಪಾಲು ತೆಗೆದುಕೊಂಡು ತಿನ್ನುತ್ತೇವೆ.ನಾನು ನಿಮಗೆ ತಿಳಿಸಿಕೊಟ್ಟ ಉಪದೇಶವನ್ನು ಕರ್ತನಿಂದ ಹೊಂದಿದೆನು. ಅದೇನೆಂದರೆ, ಕರ್ತನಾದ ಯೇಸು ತಾನು ಹಿಡಿದು ಕೊಡಲ್ಪಟ್ಟ ರಾತ್ರಿಯಲ್ಲಿ ರೊಟ್ಟಿಯನ್ನು ತೆಗೆದುಕೊಂಡು ದೇವರ ಸ್ತೋತ್ರ ಮಾಡಿ ಅದನ್ನು ಮುರಿದು,ನೀವು ಈ ರೊಟ್ಟಿಯನ್ನು ತಿಂದು ಈ ಪಾನಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.2 ಕೊರಿಂಥದವರಿಗೆ1
ಬಿತ್ತುವವನಿಗೆ ಬೀಜವನ್ನೂ, ತಿನ್ನುವವನಿಗೆ ಆಹಾರವನ್ನು ಕೊಡುವಾತನು ನಿಮಗೂ ಬಿತ್ತುವುದಕ್ಕೆ ಬೀಜವನ್ನು ಕೊಟ್ಟು ಅದನ್ನು ಹೆಚ್ಚಿಸಿ ನಿಮ್ಮ ಧರ್ಮಕಾರ್ಯಗಳಿಂದಾಗುವ ಫಲಗಳನ್ನು ವೃದ್ಧಿಪಡಿಸುವನು.2 ಥೆಸಲೋನಿಕದವರಿಗೆ1
ನಾವು ಹಣಕೊಡದೆ ಯಾರ ಬಳಿಯಲ್ಲಿಯೂ ಊಟ ಮಾಡಲಿಲ್ಲ, ನಿಮ್ಮಲ್ಲಿ ಯಾರಿಗೂ ಭಾರವಾಗಬಾರದೆಂದು ಹಗಲಿರುಳು ಕಷ್ಟದಿಂದಲೂ ಪ್ರಯಾಸದಿಂದಲೂ ದುಡಿದು ಜೀವನ ಮಾಡಿದೆವು.ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Human-made Things in the Bible © United Bible Societies 2025, adapted from R. Pritz, The Works of Their Hands: Man-made Things in the Bible © 2009 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು