Bible Explorer ಆ್ಯಪ್ ಪಡೆಯಿರಿ

ವಿಶ್ವಕೋಶ › ಆಹಾರ ಮತ್ತು ಪಾನೀಯ

ಆಹಾರ ಮತ್ತು ಪಾನೀಯ

ಆಲಿವ್ ಎಣ್ಣೆ

ಹೀಬ್ರೂ shemen · ಗ್ರೀಕ್ elaion · ಆಹಾರ, ಬೆಳಕು ಮತ್ತು ದೇಹದ ಆರೈಕೆ

ಆಲಿವ್ ಎಣ್ಣೆಯನ್ನು ಬಹುತೇಕ ಪ್ರತಿಯೊಂದು ಅಡುಗೆಮನೆಯಲ್ಲೂ ಬಳಸುತ್ತಿದ್ದರು: ಅದರಿಂದ ರೊಟ್ಟಿ ಸುಡುತ್ತಿದ್ದರು ಮತ್ತು ಆಹಾರ ಕರಿಯುತ್ತಿದ್ದರು (1 ಅರಸುಗಳು 17:12). ಅತ್ಯುತ್ತಮ ಎಣ್ಣೆ ಕಲ್ಲಿನ ಒರಳಿನಲ್ಲಿ ಕೈಯಿಂದ ಜಜ್ಜಿದ ಕಾಯಿಗಳಿಂದ ಬರುತ್ತಿತ್ತು; ಹೆಚ್ಚಿನವನ್ನು ತೊಟ್ಟಿಯಲ್ಲಿ ತುಳಿಯುತ್ತಿದ್ದರು ಅಥವಾ ಭಾರವಾದ ಬೀಸುವ ಕಲ್ಲಿನ ಅಡಿಯಲ್ಲಿ ಜಜ್ಜಿ ಭಾರ ಹೇರಿದ ತೊಲೆಗಳಿಂದ ಹಿಂಡುತ್ತಿದ್ದರು. ಎಣ್ಣೆ ತೊಟ್ಟಿಗಳಲ್ಲಿ ತಿಳಿಯಾಗಿ ನಿಂತ ಮೇಲೆ ಜಾಡಿಗಳಲ್ಲಿ ಅಥವಾ ಚರ್ಮದ ಚೀಲಗಳಲ್ಲಿ ಇಡುತ್ತಿದ್ದರು. ಅದು ಬೆಲೆಬಾಳುವ ವ್ಯಾಪಾರದ ವಸ್ತುವಾಗಿತ್ತು: ಸೊಲೊಮೋನನು ತೂರಿನ ಹೀರಾಮನಿಗೆ ಪ್ರತಿವರ್ಷ ಎಣ್ಣೆಯಿಂದ ಸಂದಾಯ ಮಾಡುತ್ತಿದ್ದನು (1 ಅರಸುಗಳು 5:11), ಮತ್ತು ಎಕ್ರೋನಿನಲ್ಲಿ ಪುರಾತತ್ವಜ್ಞರು ಕ್ರಿ.ಪೂ. 7ನೇ ಶತಮಾನದ ನೂರಕ್ಕೂ ಹೆಚ್ಚು ಎಣ್ಣೆಯ ಗಾಣಗಳನ್ನು ಕಂಡುಕೊಂಡರು.

ಸೂರ್ಯಾಸ್ತದ ನಂತರ ಒಂದೇ ಬೆಳಕು ಆಲಿವ್ ಎಣ್ಣೆ ಮತ್ತು ಅಗಸೆಯ ಬತ್ತಿ ಹಾಕಿದ ಚಿಕ್ಕ ಮಣ್ಣಿನ ದೀಪಗಳಿಂದ ಬರುತ್ತಿತ್ತು; ಒಂದು ದೀಪದಲ್ಲಿ ಒಂದು ರಾತ್ರಿಗೆ ಸಾಕಷ್ಟು ಎಣ್ಣೆ ಹಿಡಿಯುತ್ತಿತ್ತು, ಮತ್ತು ಯೇಸುವಿನ ಸಾಮ್ಯದಲ್ಲಿ ಬುದ್ಧಿವಂತ ಕನ್ಯೆಯರು ಪಾತ್ರೆಗಳಲ್ಲಿ ಹೆಚ್ಚುವರಿ ಎಣ್ಣೆಯನ್ನು ತೆಗೆದುಕೊಂಡು ಹೋದರು (ಮತ್ತಾಯನು 25:3–4). ಜನರು ಸ್ನಾನದ ನಂತರ ಮತ್ತು ಹಬ್ಬದ ದಿನಗಳಲ್ಲಿ ಚರ್ಮಕ್ಕೂ ಕೂದಲಿಗೂ ಎಣ್ಣೆ ಹಚ್ಚುತ್ತಿದ್ದರು — ಎಣ್ಣೆ ಹಚ್ಚಿಕೊಳ್ಳದಿರುವುದು ಶೋಕದ ಚಿಹ್ನೆಯಾಗಿತ್ತು (2 ಸಮುವೇಲನು 14:2). ಎಣ್ಣೆಯನ್ನು ಔಷಧವಾಗಿಯೂ ಬಳಸುತ್ತಿದ್ದರು: ಒಳ್ಳೆಯ ಸಮಾರ್ಯದವನು ಗಾಯಗೊಂಡವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದನು.

ಮುಖ್ಯ ವಚನಗಳು

ದೀಪಗಳಿಗಾಗಿ ಕುಟ್ಟಿ ತೆಗೆದ ಒಲಿವ್ ಎಣ್ಣೆವಿಮೋ 27:20ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
ಹೀರಾಮನಿಗಾಗಿ ಎಣ್ಣೆ1 ಅರಸು 5:11ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಕೀರ್ತ 104:15ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
ಎಣ್ಣೆಯ ಕಾಯಿಯನ್ನು ಜಜ್ಜುವುದುಮೀಕ 6:15ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
ಶೋಕದಲ್ಲಿ ಎಣ್ಣೆಯಿಲ್ಲ2 ಸಮು 14:2ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
ಗಾಯಗಳಿಗೆ ಎಣ್ಣೆ ಮತ್ತು ದ್ರಾಕ್ಷಾರಸಲೂಕ 10:34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.

ಇದನ್ನು ಹೆಸರಿಸುವ ಎಲ್ಲಾ ವಚನಗಳು (196)

ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.

ಆದಿಕಾಂಡ2
ಆದಿ 28:18ಯಾಕೋಬನು ಬೆಳಗ್ಗೆ ಎದ್ದು ತಾನು ತಲೆದಿಂಬಾಗಿ ಇಟ್ಟುಕೊಂಡಿದ್ದ ಕಲ್ಲನ್ನು ತೆಗೆದುಕೊಂಡು ಅದನ್ನು ಸ್ತಂಭವಾಗಿ ನಿಲ್ಲಿಸಿ ಅದರ ಮೇಲೆ ಎಣ್ಣೆಯನ್ನು ಹೊಯ್ದನು.
ಆದಿ 35:14ಯಾಕೋಬನು ತನ್ನ ಸಂಗಡ ದೇವರು ಮಾತನಾಡಿದ ಸ್ಥಳದಲ್ಲಿ ಕಲ್ಲಿನ ಸ್ತಂಭವನ್ನು ನಿಲ್ಲಿಸಿ ಅದರ ಮೇಲೆ ಪಾನಕಾಭಿಷೇಕಮಾಡಿ ಎಣ್ಣೆಯನ್ನು ಹೊಯ್ದನು.
ವಿಮೋಚನಕಾಂಡ19
ವಿಮೋ 25:6ದೀಪಕ್ಕೆ ಬೇಕಾದ ಎಣ್ಣೆಯೂ, ಅಭಿಷೇಕ ತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳೂ,
ವಿಮೋ 27:20ದೀಪವು ಯಾವಾಗಲೂ ಉರಿಯುವಂತೆ ಇಸ್ರಾಯೇಲ್ಯರು ಒಲಿವ್ ಮರದ ಕಾಯಿಗಳನ್ನು ಕುಟ್ಟಿ ನಿರ್ಮಲವಾದ ಒಲಿವ್ ಎಣ್ಣೆಯನ್ನು ತೆಗೆದುಕೊಂಡು ಬರುವಂತೆ ಅವರಿಗೆ ಅಪ್ಪಣೆಕೊಡಬೇಕು.
ವಿಮೋ 29:2ಮತ್ತು ಹುಳಿಯಿಲ್ಲದ ರೊಟ್ಟಿಗಳನ್ನು, ಎಣ್ಣೆ ಮಿಶ್ರಿತವಾದ ಹುಳಿಯಿಲ್ಲದ ಹೋಳಿಗೆಗಳನ್ನು, ಎಣ್ಣೆ ಸವರಿದ ಹುಳಿಯಿಲ್ಲದ ಕಡಬುಗಳನ್ನೂ,
ವಿಮೋ 29:7ಅಭಿಷೇಕತೈಲವನ್ನು ಅವನ ಮೇಲೆ ಸುರಿದು ಅವನನ್ನು ಅಭಿಷೇಕಿಸಬೇಕು.
ವಿಮೋ 29:21ಅದಲ್ಲದೆ ನೀನು ಯಜ್ಞವೇದಿಯ ಮೇಲಿರುವ ರಕ್ತದಲ್ಲಿಯೂ, ಅಭಿಷೇಕ ತೈಲದಲ್ಲಿಯೂ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಬೇಕು. ಹೀಗೆ ಅವನೂ ಮತ್ತು ಅವನ ಮಕ್ಕಳೂ ಅವರ ವಸ್ತ್ರಗಳ ಸಹಿತವಾಗಿ ಪರಿಶುದ್ಧರಾಗುವರು.
ವಿಮೋ 29:23ಮತ್ತು ಯೆಹೋವನಿಗೆದುರಾಗಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಪದಾರ್ಥಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆ ಮಿಶ್ರವಾದ ಒಂದು ಹೋಳಿಗೆಯನ್ನು ಮತ್ತು ಒಂದು ಕಡುಬನ್ನು ತೆಗೆದುಕೊಂಡು,
ವಿಮೋ 29:40ಒಂದೂವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ ಮೂರು ಸೇರು ಗೋದಿಹಿಟ್ಟನ್ನೂ ಬೆರಸಿ ಧಾನ್ಯಸಮರ್ಪಣೆಗಾಗಿ ಆ ಮೊದಲನೆಯ ಕುರಿಯ ಸಂಗಡ ಅರ್ಪಿಸಬೇಕು. ಪಾನದ್ರವ್ಯಾರ್ಪಣೆಗಾಗಿ ಒಂದು ಪಾವು ದ್ರಾಕ್ಷಾರಸವನ್ನು ಅದರೊಂದಿಗೆ ಅರ್ಪಿಸಬೇಕು.
ವಿಮೋ 30:24ಐನೂರು ಸುಗಂಧವಾದ ಚೆಕ್ಕೆ, ಮತ್ತು ಒಂದು ಹೀನ್ ಒಲೀವ್ ಎಣ್ಣೆ ಇವುಗಳನ್ನೆಲ್ಲಾ ತೆಗೆದುಕೊಂಡು,
ವಿಮೋ 30:25ಸುಗಂಧ ದ್ರವ್ಯಕಾರರ ಪದ್ದತಿಯ ಮೇರೆಗೆ ಮಿಶ್ರಮಾಡಿ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡಿಸಬೇಕು. ಇದು ಪರಿಶುದ್ಧವಾದ ಅಭಿಷೇಕ ತೈಲವಾಗಿರುವುದು.
ವಿಮೋ 30:31ನೀನು ಇಸ್ರಾಯೇಲರಿಗೆ ಆಜ್ಞಾಪಿಸತಕ್ಕದ್ದೇನೆಂದರೆ, “ನೀವೂ ನಿಮ್ಮ ಸಂತತಿಯವರೂ ಈ ತೈಲವನ್ನು ನನ್ನ ಸೇವೆಗೆ ನೇಮಕವಾದ ಪರಿಶುದ್ಧ ಅಭಿಷೇಕ ತೈಲವೆಂದು ತಿಳಿದುಕೊಳ್ಳಬೇಕು.
ವಿಮೋ 31:11ಅಭಿಷೇಕತೈಲ ಮತ್ತು ಪವಿತ್ರಸ್ಥಾನದ ಸೇವೆಗೆ ಬೇಕಾದ ಪರಿಮಳಧೂಪ ಇವುಗಳನ್ನೆಲ್ಲಾ ನಾನು ನಿನಗೆ ಆಜ್ಞಾಪಿಸಿದಂತೆಯೇ ಅವರು ಮಾಡುವರು.”
ವಿಮೋ 35:8ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳು,
ವಿಮೋ 35:14ದೀಪಸ್ತಂಭ, ಅದರ ಉಪಕರಣಗಳು, ಹಣತೆಗಳು, ದೀಪಕ್ಕೆ ಬೇಕಾದ ಎಣ್ಣೆ,
ವಿಮೋ 35:15ಧೂಪವೇದಿ, ಅದರ ಕಂಬಗಳು, ಅಭಿಷೇಕ ತೈಲ, ಪರಿಮಳಧೂಪದ್ರವ್ಯ, ಗುಡಾರದ ಬಾಗಿಲಿನ ಪರದೆ,
ವಿಮೋ 35:28ದೀಪಕ್ಕೆ ಬೇಕಾದ ಎಣ್ಣೆಯನ್ನು ಹಾಗು ಅಭಿಷೇಕತೈಲಕ್ಕೆ ಮತ್ತು ಪರಿಮಳಧೂಪಕ್ಕೆ ಬೇಕಾದ ಸುಗಂಧದ್ರವ್ಯಗಳನ್ನು ತಂದುಕೊಟ್ಟರು.
ವಿಮೋ 37:29ಅದಲ್ಲದೆ ಅವನು ದೇವರ ಪವಿತ್ರ ಸೇವೆಗೆ ನೇಮಕವಾದ ಪಟ್ಟಾಭಿಷೇಕತೈಲವನ್ನೂ ಪರಿಮಳದ್ರವ್ಯಗಳಿಂದ ಮಾಡಿದ ಸ್ವಚ್ಛವಾದ ಧೂಪದ್ರವ್ಯವನ್ನೂ ಸುಗಂಧದ್ರವ್ಯಮಾಡುವವರ ವಿಧಾನದ ಪ್ರಕಾರವೇ ತಯಾರಿಸಿದನು.
ವಿಮೋ 39:37ಚೊಕ್ಕ ಬಂಗಾರದ ದೀಪಸ್ತಂಭವನ್ನು, ಅದರ ಮೇಲಿಡಬೇಕಾದ ಹಣತೆಗಳನ್ನು, ಅದರ ಉಪಕರಣಗಳನ್ನು, ದೀಪಕ್ಕೆ ಬೇಕಾದ ಎಣ್ಣೆಯನ್ನು,
ವಿಮೋ 39:38ಚಿನ್ನದ ಧೂಪವೇದಿಯನ್ನು, ಅಭಿಷೇಕತೈಲವನ್ನು, ಸುವಾಸನೆಯುಳ್ಳ ಧೂಪವನ್ನು, ಗುಡಾರದ ಬಾಗಿಲಿನ ಪರದೆಯನ್ನು,
ವಿಮೋ 40:9“ನೀನು ಅಭಿಷೇಕತೈಲವನ್ನು ತೆಗೆದುಕೊಂಡು ಗುಡಾರವನ್ನೂ ಅದರಲ್ಲಿರುವುದೆಲ್ಲವನ್ನೂ ಅದರ ಎಲ್ಲಾ ಉಪಕರಣಗಳನ್ನೂ ಅಭಿಷೇಕಿಸಿ ನನಗಾಗಿ ಪ್ರತಿಷ್ಠಿಸಬೇಕು; ಅಂದಿನಿಂದ ಅದು ಪರಿಶುದ್ಧವಾಗಿರುವುದು.
ಯಾಜಕಕಾಂಡ36
ಯಾಜ 2:1“‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು.
ಯಾಜ 2:2ಅದನ್ನು ಆರೋನನ ವಂಶದವರಾದ ಯಾಜಕರ ಬಳಿಗೆ ತರಬೇಕು. ಯಾಜಕನು ದೇವರಿಗೆ ನೈವೇದ್ಯವಾದದ್ದನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಎಣ್ಣೆ ಬೆರೆಸಿದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದು.
ಯಾಜ 2:4“‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು.
ಯಾಜ 2:5ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.
ಯಾಜ 2:6ನೀವು ಅದನ್ನು ಚೂರುಚೂರಾಗಿ ಮುರಿದು, ಅದರ ಮೇಲೆ ಎಣ್ಣೆ ಹೊಯ್ಯಬೇಕು. ಇದು ಧಾನ್ಯನೈವೇದ್ಯವಾಗಿದೆ.
ಯಾಜ 2:7ನೀವು ಅರ್ಪಿಸುವ ಧಾನ್ಯ ನೈವೇದ್ಯ ಬಾಂಡ್ಲಿಯಲ್ಲಿ ಪಕ್ವಮಾಡಿದ್ದಾದರೆ ಅದು ಎಣ್ಣೆ ಹೊಯ್ದ ಗೋದಿಹಿಟ್ಟಿನದಾಗಿರಬೇಕು.
ಯಾಜ 2:15ಅದು ಧಾನ್ಯನೈವೇದ್ಯ ವಸ್ತುವಾದ್ದರಿಂದ ನೀವು ಅದರ ಮೇಲೆ ಎಣ್ಣೆ ಹೊಯ್ದು ಧೂಪವಿಡಬೇಕು.
ಯಾಜ 2:16ಯಾಜಕನು ನೈವೇದ್ಯವನ್ನು ಯೆಹೋವನ ಒಳ್ಳೆಯತನವನ್ನು ಸೂಚಿಸುವುದಕ್ಕಾಗಿ ಆ ಉಮ್ಮಿಗೆಯಲ್ಲಿಯೂ ಮತ್ತು ಎಣ್ಣೆಯಲ್ಲಿಯೂ ಸ್ವಲ್ಪಭಾಗವನ್ನು ತೆಗೆದುಕೊಂಡು ಧೂಪವೆಲ್ಲವನ್ನು ಅದಕ್ಕೆ ಸೇರಿಸಿ ಅಗ್ನಿಯ ಮೂಲಕ ಯೆಹೋವನಿಗೆ ಹೋಮಮಾಡಬೇಕು.
ಯಾಜ 5:11“‘ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ಕೊಡುವುದಕ್ಕೂ ಗತಿಯಿಲ್ಲದೆ ಹೋದರೆ, ಅವನು ದೋಷಪರಿಹಾರಕ್ಕಾಗಿ ಮೂರು ಸೇರು ಗೋದಿಹಿಟ್ಟನ್ನು ತರಬೇಕು. ಆ ಹೋಮದ್ರವ್ಯವು ದೋಷಪರಿಹಾರಾರ್ಥವಾಗಿ ಇರುವುದರಿಂದ ಅದರ ಮೇಲೆ ಎಣ್ಣೆಯನ್ನು ಹೊಯ್ಯಬಾರದು ಅಥವಾ ಧೂಪವನ್ನು ಇಡಬಾರದು.
ಯಾಜ 6:15ಅವರಲ್ಲಿ ಒಬ್ಬನು ನೈವೇದ್ಯವಾದದ್ದನ್ನು ಸೂಚಿಸುವುದಕ್ಕಾಗಿ ಎಣ್ಣೆ ಹೊಯ್ದ ಹಿಟ್ಟಿನಲ್ಲಿ ಒಂದು ಹಿಡಿಯನ್ನು ಮತ್ತು ಅದರ ಮೇಲಿರುವ ಧೂಪವೆಲ್ಲವನ್ನು ತೆಗೆದುಕೊಂಡು ಯಜ್ಞವೇದಿಯ ಮೇಲೆ ಹೋಮಮಾಡಿ ಯೆಹೋವನಿಗೆ ಪರಿಮಳವನ್ನು ಉಂಟುಮಾಡಬೇಕು.
ಯಾಜ 6:21ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನಸಿದ್ದಾಗಿರಬೇಕು. ಅದನ್ನು ಭಾಗಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.
ಯಾಜ 7:10ಆದರೆ ಎಣ್ಣೆ ಹೊಯ್ದ ಹಿಟ್ಟನ್ನಾಗಲಿ ಅಥವಾ ಬರೀ ಹಿಟ್ಟನ್ನಾಗಲಿ ಯಾರಾದರೂ ನೈವೇದ್ಯಕ್ಕಾಗಿ ತಂದಾಗ ಅದನ್ನು ಆರೋನನ ವಂಶದವರೆಲ್ಲರೂ ಸಮಾನವಾಗಿ ಅನುಭವಿಸಬೇಕು.
ಯಾಜ 7:12ಯಾರಾದರೂ ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವುದಾದರೆ ಅದರೊಡನೆ ಎಣ್ಣೆ ಮಿಶ್ರವಾದ ಹುಳಿಯಿಲ್ಲದ ಕಡುಬುಗಳನ್ನು ಮತ್ತು ಎಣ್ಣೆಯಿಂದ ಪೂರಾ ನೆನಸಿದ ಗೋದಿ ಹಿಟ್ಟಿನ ಹೋಳಿಗೆಗಳನ್ನು ಸಮರ್ಪಿಸಬೇಕು.
ಯಾಜ 8:2“ನೀನು ಆರೋನನನ್ನು ಮತ್ತು ಅವನ ಗಂಡು ಮಕ್ಕಳನ್ನು ಕರೆದುಕೊಂಡು ಅವರಿಗೆ ಬೇಕಾದ ದೀಕ್ಷಾವಸ್ತ್ರಗಳನ್ನು ಮತ್ತು ಅಭಿಷೇಕತೈಲವನ್ನು, ದೋಷಪರಿಹಾರಕ್ಕಾಗಿ ಸಮರ್ಪಿಸಬೇಕಾದ ಹೋರಿಯನ್ನು, ಎರಡು ಟಗರುಗಳನ್ನು ಮತ್ತು ಹುಳಿಯಿಲ್ಲದ ಭಕ್ಷ್ಯಗಳು ತುಂಬಿರುವ ಪುಟ್ಟಿಯನ್ನು ತೆಗೆದುಕೊಂಡುಬಂದು,
ಯಾಜ 8:10ಅನಂತರ ಮೋಶೆ ಅಭಿಷೇಕತೈಲವನ್ನು ತೆಗೆದುಕೊಂಡು, ದೇವದರ್ಶನದ ಗುಡಾರವನ್ನು ಮತ್ತು ಅದರಲ್ಲಿದ್ದ ಎಲ್ಲವನ್ನು ಅಭಿಷೇಕಿಸಿ ಪ್ರತಿಷ್ಠಿಸಿದನು.
ಯಾಜ 8:12ಆರೋನನನ್ನು ಪ್ರತಿಷ್ಠಿಸುವುದಕ್ಕಾಗಿ ಆ ತೈಲದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ತಲೆಯ ಮೇಲೆ ಹೊಯ್ದು ಅವನನ್ನು ಅಭಿಷೇಕಿಸಿದನು.
ಯಾಜ 8:26ಯೆಹೋವನ ಸನ್ನಿಧಿಯಲ್ಲಿ ಪುಟ್ಟಿಯಲ್ಲಿ ಇಟ್ಟಿದ್ದ ಹುಳಿಯಿಲ್ಲದ ಭಕ್ಷ್ಯಗಳಲ್ಲಿ ಒಂದು ರೊಟ್ಟಿಯನ್ನು, ಎಣ್ಣೆಮಿಶ್ರವಾದ ಒಂದು ಹೋಳಿಗೆಯನ್ನು ಹಾಗು ಒಂದು ಕಡುಬನ್ನು ತೆಗೆದುಕೊಂಡು ಈ ಭಕ್ಷ್ಯಗಳನ್ನು ಆ ಕೊಬ್ಬಿನ ಮತ್ತು ಬಲದೊಡೆಯ ಮೇಲೆ ಇಟ್ಟನು.
ಯಾಜ 8:30ಆಗ ಮೋಶೆ ಅಭಿಷೇಕತೈಲದಲ್ಲಿ ಮತ್ತು ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿ ಸ್ವಲ್ಪವನ್ನು ತೆಗೆದುಕೊಂಡು ಆರೋನನ ಹಾಗೂ ಅವನ ವಸ್ತ್ರಗಳ ಮೇಲೆಯೂ, ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿಮುಕಿಸಿದನು. ಹೀಗೆ ಆರೋನನನ್ನು ಅವನ ವಸ್ತ್ರಗಳನ್ನು, ಅವನ ಮಕ್ಕಳನ್ನು ಮತ್ತು ಅವರ ವಸ್ತ್ರಗಳನ್ನು ಪ್ರತಿಷ್ಠಿಸಿದನು.
ಯಾಜ 9:4ಕುರಿಯನ್ನು ಸಮಾಧಾನಯಜ್ಞಕ್ಕಾಗಿ ಒಂದು ಹೋರಿಯನ್ನು, ಟಗರನ್ನು ಧಾನ್ಯನೈವೇದ್ಯಕ್ಕಾಗಿ ಎಣ್ಣೆಮಿಶ್ರವಾದ ಪದಾರ್ಥವನ್ನು ತೆಗೆದುಕೊಂಡು ಯೆಹೋವನ ಮುಂದೆ ಬರಬೇಕೆಂದು ಆಜ್ಞಾಪಿಸು’” ಅಂದನು.
ಯಾಜ 10:7ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವುದರಿಂದ ನೀವು ದೇವದರ್ಶನದ ಗುಡಾರದ ಬಾಗಿಲನ್ನು ಬಿಟ್ಟು ಹೋಗಬಾರದು; ಹೋದರೆ ಸಾಯುವಿರಿ” ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡೆದುಕೊಂಡರು.
ಯಾಜ 14:10“ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನು, ಪೂರ್ಣಾಂಗವಾದ ಒಂದು ವರ್ಷದ ಕುರಿಯನ್ನು, ನೈವೇದ್ಯಕ್ಕಾಗಿ ಎಣ್ಣೆ ಬೆರೆಸಿದ ಒಂಭತ್ತು ಸೇರು ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತೆಗೆದುಕೊಂಡು ಬರಬೇಕು.
ಯಾಜ 14:12ಯಾಜಕನು ಆ ಟಗರುಗಳಲ್ಲಿ ಒಂದನ್ನು ಮತ್ತು ಆ ಒಂದು ಸೇರು ಎಣ್ಣೆಯನ್ನು ಪ್ರಾಯಶ್ಚಿತ್ತಯಜ್ಞವಾಗಿ ಸಮರ್ಪಿಸಬೇಕು. ಅವುಗಳನ್ನು ನೈವೇದ್ಯವಾಗಿ ಯೆಹೋವನ ಸನ್ನಿಧಿಯಲ್ಲಿ ನಿವಾಳಿಸಬೇಕು.
ಯಾಜ 14:15ಆಗ ಯಾಜಕನು ಆ ಒಂದು ಸೇರು ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
ಯಾಜ 14:16ತನ್ನ ಬಲಗೈಯ ಬೆರಳನ್ನು ಅದರಲ್ಲಿ ಅದ್ದಿ, ಯೆಹೋವನ ಸನ್ನಿಧಿಯಲ್ಲಿ ಏಳು ಸಾರಿ ಬೆರಳಿನಿಂದ ಚಿಮುಕಿಸಬೇಕು.
ಯಾಜ 14:17ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ ಮತ್ತು ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
ಯಾಜ 14:18ಅವನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನು ಶುದ್ಧಮಾಡಿಸಿಕೊಳ್ಳುವವನ ತಲೆಯ ಮೇಲೆ ಹೊಯ್ದುಬಿಡಬೇಕು. ಹೀಗೆ ಯಾಜಕನು ಯೆಹೋವನ ಸನ್ನಿಧಿಯಲ್ಲಿ ಅವನ ದೋಷವನ್ನು ಪರಿಹರಿಸುವನು.
ಯಾಜ 14:21“ಅವನು ಬಡವನಾಗಿದ್ದು ಅಷ್ಟನ್ನು ಸಮರ್ಪಿಸುವುದಕ್ಕೆ ಆಗದಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರ ಮಾಡಿಸಿಕೊಳ್ಳುವುದಕ್ಕಾಗಿ ಯಾಜಕನ ಕೈಯಿಂದ ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಹತ್ತರಲ್ಲಿ ಒಂದು ಭಾಗ ಎಣ್ಣೆ ಕಲಸಿದ ಗೋದಿಹಿಟ್ಟನ್ನು ಮತ್ತು ಒಂದು ಸೇರು ಎಣ್ಣೆಯನ್ನು ತರಬೇಕು.
ಯಾಜ 14:24ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನು, ಒಂದು ಸೇರು ಎಣ್ಣೆಯನ್ನು ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.
ಯಾಜ 14:26ಅನಂತರ ಯಾಜಕನು ಆ ಎಣ್ಣೆಯಲ್ಲಿ ಸ್ವಲ್ಪವನ್ನು ತನ್ನ ಎಡಗೈಯಲ್ಲಿ ಹೊಯ್ದುಕೊಂಡು,
ಯಾಜ 14:27ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿಮುಕಿಸಬೇಕು.
ಯಾಜ 14:28ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.
ಯಾಜ 14:29ಶುದ್ಧ ಮಾಡಿಸಿಕೊಳ್ಳುವವನಿಗಾಗಿ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವುದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ಉಳಿದ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.
ಯಾಜ 21:10“‘ಮಹಾಯಾಜಕನು ಅಂದರೆ ತನ್ನ ಸಹೋದರರಲ್ಲಿ ಪ್ರಧಾನನು, ಯಾವನು ತೈಲಾಭಿಷೇಕಹೊಂದಿ, ದೀಕ್ಷಾವಸ್ತ್ರಗಳನ್ನು ಧರಿಸಿ, ಪಟ್ಟಕ್ಕೆ ಬರುವನೋ ಅವನು ದುಃಖಸೂಚನೆಗಾಗಿ ತನ್ನ ತಲೆಯ ಕೂದಲನ್ನು ಕೆದರಿಕೊಳ್ಳಬಾರದು, ಬಟ್ಟೆಗಳನ್ನು ಹರಿದುಕೊಳ್ಳಬಾರದು.
ಯಾಜ 21:12ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.
ಯಾಜ 23:13ಅದರೊಂದಿಗೆ ಮಾಡಬೇಕಾದ ಧಾನ್ಯನೈವೇದ್ಯವು ಯಾವುದೆಂದರೆ ಎಣ್ಣೆ ಬೆರೆತ ಆರು ಸೇರು ಗೋದಿಯ ಹಿಟ್ಟು. ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ ಇದನ್ನು ಬೆಂಕಿಯಲ್ಲಿ ಹೋಮಮಾಡಬೇಕು. ಅದರೊಂದಿಗೆ ಸಮರ್ಪಿಸಬೇಕಾದ ಪಾನದ್ರವ್ಯವು ಒಂದುವರೆ ಸೇರು ದ್ರಾಕ್ಷಾರಸ.
ಯಾಜ 24:2“ದೇವಸ್ಥಾನದಲ್ಲಿನ ದೀಪಗಳನ್ನು ಪ್ರತಿನಿತ್ಯವೂ ಉರಿಸುವುದಕ್ಕಾಗಿ ಇಸ್ರಾಯೇಲರು ಎಣ್ಣೆಮರದ ಕಾಯಿಗಳನ್ನು ಕುಟ್ಟಿ ತೆಗೆದ ನಿರ್ಮಲವಾದ ಎಣ್ಣೆಯನ್ನು ನಿನಗೆ ತಂದುಕೊಡಬೇಕೆಂದು ಅವರಿಗೆ ಆಜ್ಞಾಪಿಸು.
ಅರಣ್ಯಕಾಂಡ32
ಅರಣ್ಯ 4:9ಆ ಮೇಲೆ ಅವರು ದೀಪಸ್ತಂಭವನ್ನೂ ಅದಕ್ಕೆ ಸಂಬಂಧಪಟ್ಟ ಹಣತೆಗಳನ್ನೂ, ಎಣ್ಣೆಯ ಪಾತ್ರೆಗಳನ್ನೂ
ಅರಣ್ಯ 4:16ಮಹಾಯಾಜಕ ಆರೋನನ ಮಗನಾದ ಎಲ್ಲಾಜಾರನು ದೀಪದ ಎಣ್ಣೆಯನ್ನೂ, ಪರಿಮಳಧೂಪವನ್ನೂ, ನಿತ್ಯವಾಗಿ ನೈವೇದ್ಯಮಾಡುವ ಧಾನ್ಯದ್ರವ್ಯವನ್ನೂ, ಅಭಿಷೇಕತೈಲವನ್ನೂ ತನ್ನ ವಶದಲ್ಲಿ ಇಟ್ಟುಕೊಳ್ಳಬೇಕು. ಅದಲ್ಲದೆ ದೇವದರ್ಶನದ ಗುಡಾರದ ಎಲ್ಲಾ ಭಾಗಗಳೂ ಅದರಲ್ಲಿಯೂ ಅದರ ಪಾತ್ರೆಗಳಲ್ಲಿಯೂ ಇರುವ ಸಮಸ್ತ ವಸ್ತುಗಳೂ ಅವನ ಮೇಲ್ವಿಚಾರಣೆಯಲ್ಲಿರಬೇಕು.”
ಅರಣ್ಯ 5:15ಆಗ ಅವನು ಮಾಡಬೇಕಾದದ್ದೇನೆಂದರೆ, ಆ ಪುರುಷನು ತನ್ನ ಹೆಂಡತಿಯನ್ನು ಯಾಜಕನ ಬಳಿಗೆ ಕರೆದುಕೊಂಡು ಬರಬೇಕು ಮತ್ತು ಅವಳ ಸಂಗತಿಯನ್ನು ವಿಚಾರಿಸುವುದಕ್ಕಾಗಿ ಅವನು ಯಾಜಕನಿಗೆ ಮೂರು ಸೇರು ಜವೆಗೋದಿಯ ಹಿಟ್ಟನ್ನು ಕಾಣಿಕೆಯಾಗಿ ತಂದುಕೊಡಬೇಕು. ಅದು ವ್ಯಭಿಚಾರ ಸಂಶಯವನ್ನು ಸೂಚಿಸುವುದಕ್ಕೂ ಮತ್ತು ಪಾಪವನ್ನು ಹೊರಪಡಿಸುವುದಕ್ಕೂ ಯೆಹೋವನಿಗೆ ನೈವೇದ್ಯವಾದ ಕಾಣಿಕೆಯಾದುದರಿಂದ ಆ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯ್ಯಲೂಬಾರದು, ಧೂಪವನ್ನು ಇಡಲೂಬಾರದು.
ಅರಣ್ಯ 6:15ಇದಲ್ಲದೆ ಒಂದು ಪುಟ್ಟಿ ತುಂಬಾ ಎಣ್ಣೆ ಬೆರಸಿದ ಗೋದಿಹಿಟ್ಟಿನ ಹುಳಿಯಿಲ್ಲದ ರೊಟ್ಟಿಗಳು, ಎಣ್ಣೆ ಹಾಕಿದ ಹುಳಿಯಿಲ್ಲದ ಕಡಬುಗಳನ್ನು ಧಾನ್ಯದ್ರವ್ಯ, ಪಾನದ್ರವ್ಯಗಳೊಡನೆ ತರಬೇಕು.
ಅರಣ್ಯ 7:13ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ. ಎಪ್ಪತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:19ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯು; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:25ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;
ಅರಣ್ಯ 7:31ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:37ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:43ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:49ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:55ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಬೆಳ್ಳಿಯ ಒಂದು ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಬೆಳ್ಳಿಯ ಒಂದು ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:61ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:67ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ; ಎಪ್ಪತ್ತು ಶೆಕಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:73ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆಯೂ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 7:79ಅವನು ತಂದ ಕಾಣಿಕೆ: ದೇವಸ್ಥಾನದ ನಾಣ್ಯ ತೂಕದ ಮೇರೆಗೆ ನೂರ ಮೂವತ್ತು ಶೆಕೆಲ್ ತೂಕದ ಒಂದು ಬೆಳ್ಳಿಯ ತಟ್ಟೆ, ಎಪ್ಪತ್ತು ಶೆಕೆಲ್ ತೂಕವುಳ್ಳ ಒಂದು ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು.
ಅರಣ್ಯ 8:8ತರುವಾಯ ಅವರು ಸರ್ವಾಂಗಹೊಮಕ್ಕಾಗಿ ಒಂದು ಹೋರಿಯನ್ನೂ ಅದರೊಡನೆ ಸಮರ್ಪಿಸಬೇಕಾದ ಧಾನ್ಯನೈವೇದ್ಯ ಅಂದರೆ ಎಣ್ಣೆ ಬೆರೆಸಿದ ಗೋದಿಯ ಹಿಟ್ಟನ್ನೂ ದೋಷಪರಿಹಾರಕ ಯಜ್ಞಕ್ಕಾಗಿ ಮತ್ತೊಂದು ಹೋರಿಯನ್ನು ತೆಗೆದುಕೊಳ್ಳಬೇಕು.
ಅರಣ್ಯ 11:8ಜನರು ತಿರುಗಾಡುತ್ತಾ ಅದನ್ನು ಕೂಡಿಸಿಕೊಂಡು ಬೀಸುವ ಕಲ್ಲುಗಳಿಂದ ಬೀಸಿ, ಇಲ್ಲವೆ ಒರಳಿನಲ್ಲಿ ಕುಟ್ಟಿ ಪಾತ್ರೆಗಳಲ್ಲಿ ಬೇಯಿಸಿ ರೊಟ್ಟಿಗಳನ್ನು ಮಾಡಿಕೊಂಡರು. ಅದರ ರುಚಿ ಎಣ್ಣೆ ಬೆರಸಿ ಮಾಡಿದ ಭಕ್ಷ್ಯಗಳಂತಿತ್ತು.
ಅರಣ್ಯ 15:4ಅದರೊಂದಿಗೆ ಯೆಹೋವನಿಗೆ ಕಾಣಿಕೆಯಾಗಿ ಧಾನ್ಯನೈವೇದ್ಯ ಸಮರ್ಪಿಸುವಾಗ ಒಂದುವರೆ ಸೇರು ಎಣ್ಣೆ ಬೆರಸಿದ ಮೂರು ಸೇರು ಗೋದಿಯ ಹಿಟ್ಟನ್ನೂ ಸೇರಿಸಬೇಕು.
ಅರಣ್ಯ 15:6“‘ಇದಲ್ಲದೆ ಟಗರಿನೊಂದಿಗೆ ಯೆಹೋವನಿಗೆ ಪರಿಮಳವನ್ನು ಉಂಟುಮಾಡುವುದಕ್ಕೆ, ಧಾನ್ಯನೈವೇದ್ಯಕ್ಕಾಗಿ ಎರಡು ಸೇರು ಎಣ್ಣೆ ಬೆರಸಿದ ಆರು ಸೇರು ಗೋದಿಯ ಹಿಟ್ಟನ್ನೂ,
ಅರಣ್ಯ 15:9ಅವನು ಧಾನ್ಯನೈವೇದ್ಯಕ್ಕಾಗಿ ಮೂರು ಸೇರು ಎಣ್ಣೆ ಬೆರಸಿದ ಒಂಭತ್ತು ಸೇರು ಗೋದಿಯ ಹಿಟ್ಟನ್ನೂ, ಒಂದು ಹೋರಿಯೊಂದಿಗೆ ತರಬೇಕು.
ಅರಣ್ಯ 18:12ಇಸ್ರಾಯೇಲರು ಯೆಹೋವನಿಗೆ ಸಮರ್ಪಿಸುವ ಪ್ರಥಮಫಲಗಳು ಯಾವುವೆಂದರೆ: ಎಣ್ಣೆ, ದ್ರಾಕ್ಷಾರಸ, ಧಾನ್ಯ ಇವುಗಳಲ್ಲಿ ಶ್ರೇಷ್ಠವಾದದ್ದು ನಿನಗೇ ಸೇರಬೇಕೆಂದು ವಿಧಿಸಿದ್ದೇನೆ.
ಅರಣ್ಯ 28:5ನೀವು ಧಾನ್ಯನೈವೇದ್ಯಕ್ಕಾಗಿ ಒಂದುವರೆ ಸೇರು ಶ್ರೇಷ್ಠವಾದ ಎಣ್ಣೆಯನ್ನೂ, ಮೂರು ಸೇರು ಹಿಟ್ಟನ್ನು ಬೆರೆಸಿ ಸಮರ್ಪಿಸಬೇಕು.
ಅರಣ್ಯ 28:9“‘ಸಬ್ಬತ್ ದಿನದಲ್ಲಿ ಧಾನ್ಯ ಸಮರ್ಪಣೆಗಾಗಿ ಎರಡು ಪೂರ್ಣಾಂಗವಾದ ದೋಷವಿಲ್ಲದ ಒಂದು ವರ್ಷದ ಕುರಿಮರಿಯನ್ನು, ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನೂ, ಅದಕ್ಕೆ ತಕ್ಕ ಪಾನದ ಸಮರ್ಪಣೆಯನ್ನು ಮಾಡಬೇಕು.
ಅರಣ್ಯ 28:12ಒಂದೊಂದು ಹೋರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು ಸೇರಿಸಬೇಕು.
ಅರಣ್ಯ 28:13ಕುರಿಮರಿಗೆ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಬೆರಸಿದ ಮೂರು ಸೇರು ಹಿಟ್ಟನ್ನು ಯೆಹೋವನಿಗೆ ಸುಗಂಧವಾಸನೆಯ ಸರ್ವಾಂಗಹೋಮಕ್ಕಾಗಿ ಬೆಂಕಿಯಿಂದ ಮಾಡಿದ ಬಲಿಯೂ ಇದೇ.
ಅರಣ್ಯ 28:20ಇವುಗಳೊಂದಿಗೆ ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ತಂದುಕೊಡಬೇಕು. ಹೋರಿಗೆ ಒಂಭತ್ತು ಸೇರು, ಟಗರಿಗೆ ಆರು ಸೇರು,
ಅರಣ್ಯ 28:28ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,
ಅರಣ್ಯ 29:3ಧಾನ್ಯನೈವೇದ್ಯಕ್ಕಾಗಿ ಆ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಎಣ್ಣೆ ಬೆರೆಸಿದ ಆರು ಸೇರು ಹಿಟ್ಟನ್ನು,
ಅರಣ್ಯ 29:9ಧಾನ್ಯನೈವೇದ್ಯಕ್ಕಾಗಿ ಹೋರಿಗೆ ಎಣ್ಣೆ ಬೆರೆಸಿದ ಒಂಭತ್ತು ಸೇರು ಹಿಟ್ಟನ್ನು, ಟಗರಿಗೆ ಆರು ಸೇರು ಎಣ್ಣೆ ಬೆರೆಸಿದ ಹಿಟ್ಟನ್ನು,
ಅರಣ್ಯ 29:14ಧಾನ್ಯನೈವೇದ್ಯಕ್ಕಾಗಿ ಪ್ರತಿಯೊಂದು ಹೋರಿಗೆ ಎಣ್ಣೆ ಬೆರಸಿದ ಒಂಭತ್ತು ಸೇರು ಹಿಟ್ಟನ್ನೂ, ಟಗರಿಗೆ ಎಣ್ಣೆ ಬೆರಸಿದ ಆರು ಸೇರು ಹಿಟ್ಟನ್ನು,
ಅರಣ್ಯ 35:25ಸಭೆಯು ಹತ್ಯಮಾಡಿದವನನ್ನು ಆ ಸಮೀಪ ಬಂಧುವಿನ ಕೈಯಿಂದ ತಪ್ಪಿಸಿ ಅವನು ಓಡಿಹೋಗಿದ್ದ ಆಶ್ರಯನಗರಕ್ಕೆ ತಿರುಗಿ ಸೇರಿಸಬೇಕು. ಪಟ್ಟಾಭಿಷೇಕ ಹೊಂದಿದ ಮಹಾಯಾಜಕನು ಜೀವದಿಂದಿರುವ ತನಕ ಅವನು ಆ ಪಟ್ಟಣದಲ್ಲೇ ವಾಸಿಸಬೇಕು.
ಧರ್ಮೋಪದೇಶಕಾಂಡ10
ಧರ್ಮೋ 7:13ಆತನು ನಿಮ್ಮನ್ನು ಪ್ರೀತಿಸಿ, ಅಭಿವೃದ್ಧಿಪಡಿಸಿ ಹೆಚ್ಚಿಸುವನು. ಆತನು ನಿಮ್ಮ ಪೂರ್ವಿಕರಿಗೆ ಪ್ರಮಾಣಮಾಡಿಕೊಟ್ಟ ದೇಶದಲ್ಲಿ ನಿಮ್ಮ ಸಂತಾನವನ್ನೂ, ವ್ಯವಸಾಯವನ್ನೂ, ನಿಮಗಿರುವ ದವಸ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ನಿಮ್ಮ ದನ ಮತ್ತು ಕುರಿಗಳಲ್ಲಿ ಹುಟ್ಟಿದ್ದನ್ನೂ ಅಭಿವೃದ್ಧಿಪಡಿಸುವನು.
ಧರ್ಮೋ 8:8ಆ ದೇಶದಲ್ಲಿ ಗೋದಿ, ಜವೆಗೋದಿ, ದ್ರಾಕ್ಷಿ, ಅಂಜೂರ, ದಾಳಿಂಬ ಇವುಗಳು ಬೆಳೆಯುತ್ತವೆ; ಎಣ್ಣೆ ಮರಗಳೂ ಮತ್ತು ಜೇನೂ ಸಿಕ್ಕುತ್ತವೆ.
ಧರ್ಮೋ 11:14ನಿಮಗೆ ಗೋದಿ, ದ್ರಾಕ್ಷಿ, ಎಣ್ಣೇಕಾಯಿ ಇವುಗಳ ಬೆಳೆ ಚೆನ್ನಾಗಿ ಉಂಟಾಗುವಂತೆ ಆತನು ನಿಮ್ಮ ಭೂಮಿಗೆ ಬೇಕಾದ ಮುಂಗಾರು ಮತ್ತು ಹಿಂಗಾರು ಮಳೆಯನ್ನು ಸರಿಯಾಗಿ ಕೊಡುವನು.
ಧರ್ಮೋ 12:17ಧಾನ್ಯ, ದ್ರಾಕ್ಷಿ, ಎಣ್ಣೇಕಾಯಿ ಈ ಬೆಳೆಗಳ ದಶಮಾಂಶಗಳನ್ನೂ, ದನ ಮತ್ತು ಕುರಿಗಳ ಚೊಚ್ಚಲು ಮರಿಗಳನ್ನೂ, ಹರಕೆಮಾಡಿದ ಪದಾರ್ಥಗಳನ್ನೂ, ಕಾಣಿಕೆಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸಿದ ಪದಾರ್ಥಗಳನ್ನೂ ನಿಮ್ಮ ನಿಮ್ಮ ಊರುಗಳಲ್ಲಿ ತಿನ್ನಬಾರದು.
ಧರ್ಮೋ 14:23ಧಾನ್ಯ, ದ್ರಾಕ್ಷಿ, ಎಣ್ಣೆ ಇವುಗಳಲ್ಲಿ ದಶಮಭಾಗವನ್ನೂ ದನಕುರಿಗಳ ಚೊಚ್ಚಲು ಮರಿಗಳನ್ನೂ ಮತ್ತು ನಿಮ್ಮ ಹಿಂಡುಗಳನ್ನು ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ತನ್ನ ಹೆಸರನ್ನು ಸ್ಥಾಪಿಸಿಕೊಳ್ಳುವುದಕ್ಕೆ ಆರಿಸಿಕೊಳ್ಳುವ ಸ್ಥಳದಲ್ಲೇ ನೀವು ತಿನ್ನಬೇಕು. ಹೀಗೆ ನಿಮ್ಮ ದೇವರಾದ ಯೆಹೋವನಲ್ಲೇ ಯಾವಾಗಲೂ ಭಯಭಕ್ತಿಯುಳ್ಳವರಾಗಿ ಇರುವುದನ್ನು ಅಭ್ಯಾಸ ಮಾಡಿಕೊಳ್ಳುವವರಾಗಿರಬೇಕು.
ಧರ್ಮೋ 18:4ಧಾನ್ಯ, ದ್ರಾಕ್ಷಾರಸ ಮತ್ತು ಎಣ್ಣೆ ಇವುಗಳ ಪ್ರಥಮಫಲಗಳನ್ನು ಹಾಗೂ ಮೊದಲನೆಯ ಸಾರಿ ಕತ್ತರಿಸುವ ಕುರಿಗಳ ಉಣ್ಣೆಯನ್ನೂ ಅವರಿಗೆ ಕೊಡಬೇಕು.
ಧರ್ಮೋ 28:40ನಿಮ್ಮ ಎಲ್ಲಾ ಪ್ರದೇಶಗಳಲ್ಲಿ ಎಣ್ಣೇಮರಗಳು ಎಷ್ಟಿದ್ದರೂ ಅವುಗಳ ಕಾಯಿಗಳು ಉದುರಿಹೋಗುವುದರಿಂದ ನೀವು ಎಣ್ಣೆಯನ್ನು ಮೈಗೆ ಹಚ್ಚಿಕೊಳ್ಳುವುದಿಲ್ಲ.
ಧರ್ಮೋ 28:51ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
ಧರ್ಮೋ 32:13ಆತನು ಅವರನ್ನು ಭೂಮಿಯ ಎತ್ತರವಾದ ಪ್ರದೇಶಗಳ ಮೇಲೆ ಹತ್ತಿಸಿ ಅವರಿಗೆ ವ್ಯವಸಾಯ ವೃದ್ಧಿಯನ್ನು ಉಂಟುಮಾಡಿ, ಬಂಡೆಯಿಂದ ಜೇನೂ ಮತ್ತು ಗಿರಿಯಿಂದ ಎಣ್ಣೆಯೂ ದೊರೆಯುವಂತೆ ಮಾಡಿದನು.
ಧರ್ಮೋ 33:24ಆಶೇರ್ ಕುಲದ ವಿಷಯದಲ್ಲಿ, “ಪುತ್ರಶ್ರೇಷ್ಠರಾದ ಆಶೇರ್ಯರು ಭಾಗ್ಯವನ್ನು ಹೊಂದಲಿ; ಅವರು ಸಹೋದರರ ದಯೆಯನ್ನು ಪಡೆಯಲಿ; ಅವರು ಎಣ್ಣೆಯಲ್ಲೇ ಕಾಲನ್ನು ಅದ್ದಲಿ.
1 ಸಮುವೇಲನು3
1 ಸಮು 10:1ಆ ಆಳು ಮುಂದೆ ಹೋದಾಗ ಸಮುವೇಲನು ತೈಲದ ಕೊಂಬಿನಿಂದ ಅವನ ತಲೆಯ ಮೇಲೆ ತೈಲವನ್ನು ಹೊಯ್ದು ಅವನನ್ನು ಮುದ್ದಿಟ್ಟು ಅವನಿಗೆ, “ಯೆಹೋವನು ತನ್ನ ಸ್ವತ್ತನ್ನು ಅಳುವುದಕ್ಕೋಸ್ಕರ ನಿಜವಾಗಿ ನಿನ್ನನ್ನು ಅಭಿಷೇಕಿಸಿದ್ದಾನೆ.
1 ಸಮು 16:1ಯೆಹೋವನು ಸಮುವೇಲನಿಗೆ, “ನಾನು ಸೌಲನನ್ನು ಇಸ್ರಾಯೇಲರ ಅರಸನಾಗಿರುವುದಕ್ಕೆ ಯೋಗ್ಯನಲ್ಲವೆಂದು ತಳ್ಳಿಬಿಟ್ಟಿದ್ದೇನಲ್ಲಾ; ನೀನು ಅವನಿಗೋಸ್ಕರ ಎಷ್ಟರವರೆಗೆ ದುಃಖಿಸುತ್ತಿರುವಿ? ಕೊಂಬಿನಲ್ಲಿ ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೇತ್ಲೆಹೇಮಿನವನಾದ ಇಷಯನ ಬಳಿಗೆ ಕಳುಹಿಸುತ್ತೇನೆ; ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ” ಎಂದು ಹೇಳಿದನು.
1 ಸಮು 16:13ಸಮುವೇಲನು ಎಣ್ಣೆಯ ಕೊಂಬನ್ನು ತೆಗೆದುಕೊಂಡು ಅವನನ್ನು, ಅವನ ಸಹೋದರರ ಮಧ್ಯದಲ್ಲೇ ಅಭಿಷೇಕಿಸಿದನು. ಕೂಡಲೆ ಯೆಹೋವನ ಆತ್ಮವು ದಾವೀದನ ಮೇಲೆ ಬಂದು ನೆಲೆಗೊಂಡಿತು. ಅನಂತರ ಸಮುವೇಲನು ರಾಮಕ್ಕೆ ಹೊರಟುಹೋದನು.
2 ಸಮುವೇಲನು2
2 ಸಮು 1:21ಗಿಲ್ಬೋವ ಗುಡ್ಡಗಳೇ, ನಿಮ್ಮ ಮೇಲೆ ಮಂಜು, ಮಳೆಯು, ನೈವೇದ್ಯಕ್ಕಾಗಿ ಫಲಿಸುವ ಹೊಲಗಳೂ ಇಲ್ಲದೆ ಹೋಗಲಿ. ಅಲ್ಲಿ ಪರಾಕ್ರಮಶಾಲಿಗಳ ಗುರಾಣಿಗಳು ಬಿದ್ದಿರುತ್ತವೆ. ಸೌಲನ ಗುರಾಣಿಯೂ ಅಭಿಷಿಕ್ತನಲ್ಲದವನ ಗುರಾಣಿಯಂತೆ ಬಿದ್ದಿದೆ.
2 ಸಮು 14:2ತೆಕೋವ ಪಟ್ಟಣದಿಂದ ಒಬ್ಬ ಬುದ್ಧಿವಂತೆಯಾದ ಸ್ತ್ರೀಯನ್ನು ಕರೆದುಕೊಂಡು ಬರಲು ತಿಳಿಸಿದನು. ಅವನು ಆಕೆಗೆ, “ನೀನು ಪ್ರಿಯರನ್ನು ಕಳೆದುಕೊಂಡು ಬಹು ದಿನಗಳಿಂದ ಶೋಕಪಡುತ್ತಿರುವ ಸ್ತ್ರೀಯೋ ಎಂಬಂತೆ ಶೋಕವಸ್ತ್ರಗಳನ್ನು ಧರಿಸಿಕೊಂಡು ಎಣ್ಣೆಹಚ್ಚಿಕೊಳ್ಳದೆ,
1 ಅರಸುಗಳು5
1 ಅರಸು 1:39ಯಾಜಕನಾದ ಚಾದೋಕನು ದೇವದರ್ಶನದ ಗುಡಾರದಲ್ಲಿ ಎಣ್ಣೆಯ ಕೊಂಬನ್ನು ತೆಗೆದುಕೊಂಡು ಸೊಲೊಮೋನನನ್ನು ಅಭಿಷೇಕಿಸಿದನು. ಕೂಡಲೇ ಕೊಂಬನ್ನೂದಿ ಎಲ್ಲಾ ಜನರು “ಅರಸನಾದ ಸೊಲೊಮೋನನು ಚಿರಂಜೀವಿಯಾಗಿರಲಿ” ಎಂದು ಆರ್ಭಟಿಸಿದರು.
1 ಅರಸು 5:11ಸೊಲೊಮೋನನಾದರೋ ಪ್ರತಿ ವರ್ಷ ಅವನ ಮನೆಯವರ ಆಹಾರಕ್ಕಾಗಿ ಇಪ್ಪತ್ತು ಸಾವಿರ ಕೋರ್ ಗೋದಿಯನ್ನೂ, ಇಪ್ಪತ್ತು ಕೋರ್ ನಿರ್ಮಲವಾದ ಎಣ್ಣೆಯನ್ನೂ ಕೊಡುತ್ತಿದ್ದನು.
1 ಅರಸು 17:12ಆಕೆಯು ಅವನಿಗೆ, “ನಿನ್ನ ದೇವರಾದ ಯೆಹೋವನಾಣೆ, ನನ್ನ ಹತ್ತಿರ ರೊಟ್ಟಿ ಇರುವುದಿಲ್ಲ, ಮಡಿಕೆಯಲ್ಲಿ ಒಂದು ಹಿಡಿ ಹಿಟ್ಟು, ಮೊಗೆಯಲ್ಲಿ ಸ್ವಲ್ಪ ಎಣ್ಣೆ ಇವುಗಳ ಹೊರತಾಗಿ ಬೇರೇನೂ ಇರುವುದಿಲ್ಲ. ಈಗ ಎರಡು ಕಟ್ಟಿಗೆಗಳನ್ನು ಆರಿಸಿಕೊಂಡು ನನಗೋಸ್ಕರವೂ ನನ್ನ ಮಗನಿಗೋಸ್ಕರವೂ ರೊಟ್ಟಿ ಮಾಡುತ್ತೇನೆ, ಬೇರೆ ಹಿಟ್ಟು, ಎಣ್ಣೆ ಇಲ್ಲ ಇದನ್ನು ತಿಂದ ಮೇಲೆ ಆಹಾರವಿಲ್ಲದ ಕಾರಣ ನಾವು ಸಾಯಬೇಕೇ ಹೊರತು ಬೇರೆ ಗತಿಯಿಲ್ಲ” ಎಂದು ಉತ್ತರಕೊಟ್ಟಳು.
1 ಅರಸು 17:14ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ, ‘ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಿಕೆಯಲ್ಲಿರುವ ಹಿಟ್ಟು ತೀರುವುದಿಲ್ಲ ಮತ್ತು ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವುದಿಲ್ಲ’” ಎಂದು ಹೇಳುತ್ತಾನೆ.
1 ಅರಸು 17:16ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಿಕೆಯಲ್ಲಿದ್ದ ಹಿಟ್ಟು ತೀರಲಿಲ್ಲ ಮತ್ತು ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ.
2 ಅರಸುಗಳು8
2 ಅರಸು 4:2ಎಲೀಷನು ಆಕೆಗೆ, “ನಾನು ನಿನಗೇನು ಮಾಡಬೇಕೆನ್ನುತ್ತೀ? ನಿನ್ನ ಮನೆಯಲ್ಲಿ ಏನಿರುತ್ತದೆ? ಹೇಳು ಎಂದನು.” ಅದಕ್ಕೆ ಆಕೆಯು, “ನಿನ್ನ ದಾಸಿಯ ಮನೆಯಲ್ಲಿ ಒಂದು ಮೊಗೆ ಎಣ್ಣೆ ಹೊರತಾಗಿ ಏನೂ ಇಲ್ಲ” ಎಂದು ಉತ್ತರ ಕೊಟ್ಟಳು.
2 ಅರಸು 4:6ಪಾತ್ರೆಗಳೆಲ್ಲಾ ತುಂಬಿದಾಗ ಆಕೆಯು ಮಗನಿಗೆ, “ಇನ್ನೊಂದು ಪಾತ್ರೆಯನ್ನು ತಂದಿಡು” ಎನ್ನಲು ಅವನು, “ಪಾತ್ರೆಗಳೆಲ್ಲ ಮುಗಿದು ಹೋದವು” ಎಂದು ಉತ್ತರಕೊಟ್ಟನು. ಕೂಡಲೇ ಎಣ್ಣೆ ಉಕ್ಕುವುದು ನಿಂತುಹೋಯಿತು.
2 ಅರಸು 4:7ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ, “ಹೋಗಿ, ಎಣ್ಣೆಯನ್ನು ಮಾರಿ ಸಾಲತೀರಿಸು. ಉಳಿದ ಹಣದಿಂದ ನೀನೂ, ನಿನ್ನ ಮಕ್ಕಳು ಜೀವನಮಾಡಿರಿ” ಎಂದನು.
2 ಅರಸು 9:1ಪ್ರವಾದಿಯಾದ ಎಲೀಷನು ಪ್ರವಾದಿಮಂಡಳಿಯವರಲ್ಲಿ ಒಬ್ಬನನ್ನು ಕರೆದು ಅವನಿಗೆ, “ಈ ಎಣ್ಣೆಯ ಕುಪ್ಪಿಯನ್ನು ತೆಗೆದುಕೊಂಡು ರಾಮೋತ್ ಗಿಲ್ಯಾದಿಗೆ ಹೋಗಲು ಸಿದ್ಧನಾಗು.”
2 ಅರಸು 9:3ತರುವಾಯ ಕುಪ್ಪಿಯಲ್ಲಿರುವ ಎಣ್ಣೆಯನ್ನು ಅವನ ತಲೆಯ ಮೇಲೆ ಹೊಯ್ದು, “ಯೆಹೋವನು ಹೀಗೆ ಅನ್ನುತ್ತಾನೆ, ‘ನಾನು ನಿನ್ನನ್ನು ಇಸ್ರಾಯೇಲರ ಅರಸನಾಗುವುದಕ್ಕೆ ಅಭಿಷೇಕಿಸಿದ್ದೇನೆ’ ಎಂಬುದಾಗಿ ಹೇಳಿದ ಕೂಡಲೆ ಬಾಗಿಲು ತೆರೆದು ಓಡಿಹೋಗು” ಎಂದು ಆಜ್ಞಾಪಿಸಿದನು.
2 ಅರಸು 9:6ಯೇಹುವು ಎದ್ದು ಒಳಗಿನ ಕೋಣೆಗೆ ಹೋಗಲು ಆ ಯೌವನಸ್ಥನು ಅವನ ತಲೆಯ ಮೇಲೆ ಎಣ್ಣೆಯನ್ನು ಹೊಯ್ದು, “ಇಸ್ರಾಯೇಲರ ದೇವರಾದ ಯೆಹೋವನ ಮಾತನ್ನು ಕೇಳು, ಆತನು ನಿನಗೆ, ‘ನಾನು ನಿನ್ನನ್ನು ನನ್ನ ಪ್ರಜೆಯಾದ ಇಸ್ರಾಯೇಲರ ಅರಸನನ್ನಾಗಿ ಅಭಿಷೇಕಿಸಿದ್ದೇನೆ.
2 ಅರಸು 18:32ಸ್ವಲ್ಪ ಕಾಲವಾದ ನಂತರ ನಾನು ಬಂದು ನಿಮ್ಮನ್ನು ಧಾನ್ಯ, ದ್ರಾಕ್ಷಾರಸ ಆಹಾರ, ದ್ರಾಕ್ಷಿತೋಟ, ಎಣ್ಣೆಮರ, ಜೇನುತುಪ್ಪವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾದ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ನೀವು ಸಾಯುವುದಿಲ್ಲ, ಬದುಕುವಿರಿ. ಯೆಹೋವನು ನಿಮ್ಮನ್ನು ರಕ್ಷಿಸುವನು ಎಂಬ ನಂಬಿಕೆಯನ್ನು ನಿಮ್ಮಲ್ಲಿ ಹುಟ್ಟಿಸುವುದಕ್ಕೆ ಪ್ರಯತ್ನಿಸುವ ಹಿಜ್ಕೀಯನಿಗೆ ಕಿವಿಗೊಡಬೇಡಿರಿ.
2 ಅರಸು 20:13ಹಿಜ್ಕೀಯನು ಬಂದಂಥ ದೂತರ ಮಾತನ್ನು ಕೇಳಿ, ಅವರಿಗೆ ಬೆಳ್ಳಿಬಂಗಾರ, ಸುಗಂಧದ್ರವ್ಯ, ಪರಿಮಳತೈಲ, ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದ್ದದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ, ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
1 ಪೂರ್ವಕಾಲವೃತ್ತಾಂತ3
1 ಪೂರ್ವ 9:29ಇನ್ನು ಕೆಲವರು ದೇವಾಲಯದ ಎಲ್ಲಾ ವಸ್ತುಗಳ ಮೇಲ್ವಿಚಾರಕರೂ, ಗೋದಿಹಿಟ್ಟು, ದ್ರಾಕ್ಷಾರಸ, ಎಣ್ಣೆ, ಧೂಪ, ಪರಿಮಳದ್ರವ್ಯ ಇವುಗಳ ಪಾರುಪತ್ಯಗಾರರು ಆಗಿದ್ದರು.
1 ಪೂರ್ವ 12:40ಇದಲ್ಲದೆ ಇಸ್ಸಾಕಾರ್, ಜೆಬುಲೂನ್, ನಫ್ತಾಲಿ ಮೊದಲುಗೊಂಡು ಎಲ್ಲಾ ಸಮೀಪ ಪ್ರಾಂತ್ಯಗಳವರು ಎತ್ತು, ಕತ್ತೆ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಆಹಾರ ಪದಾರ್ಥಗಳನ್ನು ಹೊತ್ತುಕೊಂಡು ಬಂದರು. ಅವರು ತರತರದ ರೊಟ್ಟಿ, ಅಂಜೂರಹಣ್ಣಿನ ಉಂಡೆ, ಒಣಗಿದ ದ್ರಾಕ್ಷಿಗೊಂಚಲು, ದ್ರಾಕ್ಷಾರಸ, ಎಣ್ಣೆ, ಅನೇಕ ದನಕುರಿಗಳು ಇವುಗಳನ್ನು ತಂದರು. ಇಸ್ರಾಯೇಲರೊಳಗೆ ಮಹಾ ಸಂಭ್ರಮ ಸಂತೋಷವಿತ್ತು.
1 ಪೂರ್ವ 27:28ಎಣ್ಣೇ ಮರದ ತೋಪುಗಳ ಮೇಲೆಯೂ ಇಳುಕಲಿನ ಪ್ರದೇಶದಲ್ಲಿರುವ ಅತ್ತಿಮರಗಳ ತೋಪುಗಳ ಮೇಲೆಯೂ ಗೆದೇರಾ ಊರಿನವನಾದ ಬಾಳ್ಹಾನಾನ್ ಮತ್ತು ಎಣ್ಣೆಯ ಉಗ್ರಾಣಗಳ ಮೇಲೆ ಯೋವಾಷ್,
2 ಪೂರ್ವಕಾಲವೃತ್ತಾಂತ5
2 ಪೂರ್ವ 2:10ಮರ ಕಡಿಯುವ ನಿನ್ನ ಆಳುಗಳಿಗಾಗಿ ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಗೋದಿಯನ್ನೂ, ಇಪ್ಪತ್ತು ಸಾವಿರ ಕೋರ್ (ಎರಡು ಸಾವಿರ ಟನ್) ಜವೆಗೋದಿಯನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ದ್ರಾಕ್ಷಾರಸವನ್ನೂ, ಇಪ್ಪತ್ತು ಸಾವಿರ ಬತ್ (ನಾಲ್ಕು ಲಕ್ಷ ಲೀಟರ್) ಎಣ್ಣೆಯನ್ನೂ ಕೊಡುವೆನು” ಎಂದನು.
2 ಪೂರ್ವ 2:15ಈಗ ನನ್ನ ಒಡೆಯನು ಹೇಳಿದ ಮೇರೆಗೆ ಆ ಗೋದಿಯನ್ನು, ಜವೆಗೋದಿಯನ್ನು, ಎಣ್ಣೆಯನ್ನು, ದ್ರಾಕ್ಷಾರಸವನ್ನು ತನ್ನ ಸೇವಕರಿಗೆ ಕಳುಹಿಸಿಕೊಡಲಿ.
2 ಪೂರ್ವ 11:11ಅವನು ಈ ಕೋಟೆಗಳನ್ನು ಬಲಪಡಿಸಿ, ನಾಯಕರ ವಶಕ್ಕೆ ಕೊಟ್ಟು, ಪ್ರತಿ ಒಂದರಲ್ಲಿ ಆಹಾರಪದಾರ್ಥ, ಎಣ್ಣೆ, ದ್ರಾಕ್ಷಾರಸವನ್ನು ಸಂಗ್ರಹಿಸಿಟ್ಟನು. ಗುರಾಣಿ ಬರ್ಜಿಗಳನ್ನೂ ಸಂಗ್ರಹಿಸಿಟ್ಟನು.
2 ಪೂರ್ವ 31:5ಈ ರಾಜಾಜ್ಞೆಯು ಪ್ರಕಟವಾದ ಕೂಡಲೆ ಇಸ್ರಾಯೇಲರು ಧಾನ್ಯ, ದ್ರಾಕ್ಷಾರಸ, ಎಣ್ಣೆ, ಜೇನು ಮುಂತಾದ ಎಲ್ಲಾ ಹುಟ್ಟುವಳಿಗಳಲ್ಲಿಯೂ ಪ್ರಥಮಫಲವನ್ನು ರಾಶಿರಾಶಿಯಾಗಿ ತಂದುಕೊಟ್ಟರು ಮತ್ತು ತಮ್ಮ ಎಲ್ಲಾ ಆದಾಯದ ದಶಮಾಂಶವನ್ನೂ ಉದಾರವಾಗಿ ಸಲ್ಲಿಸಿದರು.
2 ಪೂರ್ವ 32:28ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು ಸಂಗ್ರಹಿಸುವುದಕ್ಕಾಗಿ ಉಗ್ರಾಣಗಳನ್ನು ಕಟ್ಟಿಸಿದನು.ಆಯಾ ಜಾತಿಯ ಪಶುಗಳಿಗೋಸ್ಕರ ಕೊಟ್ಟಿಗೆಗಳನ್ನೂ, ಆಡುಕುರಿಗಳ ಹಿಂಡುಗಳಿಗೋಸ್ಕರ ಹಟ್ಟಿಗಳನ್ನೂ ಸಿದ್ಧಮಾಡಿಸಿಕೊಂಡನು.
ಎಜ್ರನು1
ಎಜ್ರ 3:7ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.
ನೆಹೆಮೀಯನು5
ನೆಹೆ 5:11ಅವರ ಹೊಲ, ದ್ರಾಕ್ಷಿತೋಟ, ಎಣ್ಣೆಮರಗಳ ತೋಪು, ಮನೆ ಇವುಗಳನ್ನೂ ನೀವು ಕೊಟ್ಟ ಹಣ, ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಿಗೋಸ್ಕರ ನೂರಕ್ಕೆ ಒಂದರಂತೆ ನೀವು ತೆಗೆದುಕೊಂಡಿರುವ ಬಡ್ಡಿಯನ್ನೂ ದಯವಿಟ್ಟು ಈ ಹೊತ್ತೇ ಹಿಂದಕ್ಕೆ ಕೊಡಿರಿ” ಎಂದು ಹೇಳಿದೆನು.
ನೆಹೆ 10:37ನಾವು ದೇವರಿಗಾಗಿ ಪ್ರತ್ಯೇಕಿಸಿ ಇಡತಕ್ಕ ಪ್ರಥಮಫಲದ ಹಿಟ್ಟು, ಹಣ್ಣುಹಂಪಲು, ದ್ರಾಕ್ಷಾರಸ, ಎಣ್ಣೆ ಮೊದಲಾದವುಗಳನ್ನು ಯಾಜಕ ಸೇವೆಗೋಸ್ಕರ ನಮ್ಮ ದೇವರ ಆಲಯದ ಕೊಠಡಿಗಳಲ್ಲಿ ತಂದು ಇಡುವೆವು. ನಮ್ಮ ಭೂಮಿಯ ಹುಟ್ಟುವಳಿಯ ದಶಮಾಂಶವು ಲೇವಿಯರದಾಗಿರುತ್ತದೆ. ಲೇವಿಯರು ತಾವೇ ಬಂದು, ನಮ್ಮ ಸಾಗುವಳಿಯ ಊರುಗಳಲ್ಲಿ ಅದನ್ನು ಶೇಖರಿಸಿಕೊಳ್ಳಬೇಕು.
ನೆಹೆ 10:39ಇಸ್ರಾಯೇಲರೂ ಮತ್ತು ಲೇವಿಯರೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನು, ದೇವರಿಗಾಗಿ ಪ್ರತ್ಯೇಕಿಸತಕ್ಕ ಕಾಣಿಕೆಗಳನ್ನು ತಂದು ದೇವಾಲಯದಲ್ಲಿ ಸೇವೆ ನಡೆಸುತ್ತಿರುವ ಯಾಜಕರೂ, ದ್ವಾರಪಾಲಕರು, ಗಾಯಕರು ಇರುವ ಕೊಠಡಿಗಳಲ್ಲಿಯೂ ಹಾಗು ಪವಿತ್ರಾಲಯದ ಪಾತ್ರೆಗಳನ್ನು ಇಡುವ ಕೊಠಡಿಗಳಲ್ಲಿಯೂ ಇರಿಸಬೇಕು. ಅಲ್ಲದೆ ನಮ್ಮ ದೇವರ ಆಲಯವನ್ನು ಎಂದೂ ಅಲಕ್ಷ್ಯ ಮಾಡುವುದಿಲ್ಲ ಎಂದು ಬರೆದುಕೊಟ್ಟರು.
ನೆಹೆ 13:5ನೈವೇದ್ಯದ್ರವ್ಯ, ಧೂಪ, ಪಾತ್ರೆ ಇವುಗಳನ್ನೂ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳನ್ನೂ, ದಶಮಾಂಶವನ್ನೂ, ಲೇವಿಯರಿಗೆ, ಗಾಯಕರಿಗೆ, ದ್ವಾರಪಾಲಕರಿಗೆ ಸಲ್ಲತಕ್ಕ ಪದಾರ್ಥಗಳನ್ನೂ, ಯಾಜಕರಿಗೋಸ್ಕರ ಪ್ರತ್ಯೇಕಿಸತಕ್ಕ ಪದಾರ್ಥಗಳನ್ನೂ, ಇಡುವುದಕ್ಕಾಗಿ ಉಪಯೋಗಿಸುತ್ತಿದ್ದ ಕೊಠಡಿಯನ್ನು ಟೋಬೀಯನಿಗೋಸ್ಕರ ಸಿದ್ಧಮಾಡಿಸಿ ಕೊಟ್ಟಿದ್ದನು.
ನೆಹೆ 13:12ಆಗ ಎಲ್ಲಾ ಯೆಹೂದ್ಯರು ತಮ್ಮ ತಮ್ಮ ಧಾನ್ಯ, ದ್ರಾಕ್ಷಾರಸ, ಎಣ್ಣೆ ಇವುಗಳಲ್ಲಿ ದಶಮಾಂಶವನ್ನು ತಂದು ಭಂಡಾರಗಳಲ್ಲಿ ಹಾಕಿದರು.
ಎಸ್ತೇರಳು1
ಎಸ್ತೇ 2:12ಕನ್ಯೆಯರ ಲೇಪನಕಾಲವು ಪೂರೈಸುವುದಕ್ಕೆ ಗಂಧರಸಪ್ರಯೋಗದಲ್ಲಿ ಆರು ತಿಂಗಳೂ, ಪರಿಮಳದ್ರವ್ಯ ಕಾಂತಿವರ್ಧಕದ್ರವ್ಯಗಳ ಪ್ರಯೋಗದಲ್ಲಿ ಆರು ತಿಂಳಗಳೂ ಅಂತು ಹನ್ನೆರಡು ತಿಂಗಳು ಕಳೆದವು. ಈ ಕಾಲ ಮುಗಿದನಂತರ ರಾಜನ ಅರಮನೆಯ ನಿಯಮದ ಮೇರೆಗೆ ತನ್ನನ್ನು ಸಿದ್ಧಪಡಿಸಿಕೊಂಡ ಪ್ರತಿಯೊಬ್ಬ ಕನ್ಯೆಯು ಅರಸನಾದ ಅಹಷ್ವೇರೋಷನ ಬಳಿಗೆ ಹೋಗಬೇಕಾಗಿತ್ತು.
ಯೋಬನು1
ಯೋಬ 29:6ಹಾಲು ತುಪ್ಪದಲ್ಲಿ ನನ್ನ ಪಾದಗಳನ್ನು ತೊಳೆಯುತ್ತಿದ್ದೆ, ಬಂಡೆಯು ನನಗೋಸ್ಕರ ಎಣ್ಣೆಯನ್ನು ಪ್ರವಾಹವಾಗಿ ಸುರಿಸುತ್ತಿತ್ತು.
ಕೀರ್ತನೆಗಳು9
ಕೀರ್ತ 23:5ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.
ಕೀರ್ತ 45:7ನೀನು ಧರ್ಮವನ್ನು ಪ್ರೀತಿಸುತ್ತಿ, ಅಧರ್ಮವನ್ನು ದ್ವೇಷಿಸುತ್ತಿ; ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ, ಉನ್ನತಸ್ಥಾನಕ್ಕೆ ಏರಿಸಿ, ಪರಮಾನಂದತೈಲದಿಂದ ಅಭಿಷೇಕಿಸಿದ್ದಾನೆ.
ಕೀರ್ತ 55:21ಅವನ ಮಾತು ಬೆಣ್ಣೆಯಂತೆ ನುಣುಪು; ಹೃದಯವೋ ಕಲಹಮಯ. ಅವನ ನುಡಿಗಳು ಎಣ್ಣೆಗಿಂತ ನಯವಾಗಿದ್ದರೂ ಬಿಚ್ಚು ಕತ್ತಿಗಳೇ ಸರಿ.
ಕೀರ್ತ 89:20ನನ್ನ ಸೇವಕನಾದ ದಾವೀದನನ್ನು ಕಂಡು, ಪರಿಶುದ್ಧ ತೈಲದಿಂದ ಅವನನ್ನು ಅಭಿಷೇಕಿಸಿದ್ದೇನೆ.
ಕೀರ್ತ 92:10ಆದರೆ ನನ್ನ ಕೊಂಬನ್ನು ಕಾಡುಕೋಣದ ಕೊಂಬಿನಂತೆ ಎತ್ತಿದ್ದಿ; ಚೈತನ್ಯತೈಲದಿಂದ ನನ್ನನ್ನು ಅಭಿಷೇಕಿಸಿದ್ದಿ.
ಕೀರ್ತ 104:15ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.
ಕೀರ್ತ 109:18ಅವನು ಶಾಪವನ್ನೇ ವಸ್ತ್ರವನ್ನಾಗಿ ಹೊದ್ದುಕೊಳ್ಳಲಿ, ಅದು ನೀರಿನಂತೆ ಅವನ ಅಂತರಂಗದಲ್ಲಿಯೂ, ಎಣ್ಣೆಯಂತೆ ಎಲುಬುಗಳಲ್ಲಿಯೂ ಸೇರಲಿ.
ಕೀರ್ತ 133:2ಅದು ಆರೋನನ ತಲೆಯ ಮೇಲೆ ಹಾಕಲ್ಪಟ್ಟು, ಅವನ ಗಡ್ಡದ ಮೇಲೆಯೂ, ಅವನ ಅಂಗಿಗಳ ಕೊರಳ ಪಟ್ಟಿಯವರೆಗೂ ಹರಿದು ಬರುವ ಶ್ರೇಷ್ಠ ತೈಲದಂತೆಯೂ,
ಕೀರ್ತ 141:5ನೀತಿವಂತರು ನನ್ನನ್ನು ಹೊಡೆಯಲಿ, ಅದು ನನಗೆ ಉಪಕಾರ, ಅವರು ನನ್ನನ್ನು ಶಿಕ್ಷಿಸಲಿ, ಅದು ನನ್ನ ತಲೆಗೆ ಎಣ್ಣೆಯಂತಿದೆ, ನನ್ನ ತಲೆಯು ಅದನ್ನು ಬೇಡವೆನ್ನದಿರಲಿ. ಆದರೆ ದುಷ್ಟರ ಕೆಟ್ಟತನಕ್ಕೆ ವಿರುದ್ಧವಾಗಿ ದೇವರನ್ನು ಪ್ರಾರ್ಥಿಸುತ್ತಿರುವೆನು.
ಜ್ಞಾನೋಕ್ತಿಗಳು5
ಜ್ಞಾನೋ 5:3ವೇಶ್ಯಸ್ತ್ರೀಯ ತುಟಿಗಳಲ್ಲಾದರೋ ಜೇನುಗರೆಯುವುದು, ಅವಳ ಮಾತು ಎಣ್ಣೆಗಿಂತಲೂ ನಯವಾಗಿದೆ.
ಜ್ಞಾನೋ 21:17ಭೋಗಾಸಕ್ತನು ಕೊರತೆಪಡುವನು, ದ್ರಾಕ್ಷಾರಸವನ್ನು ಮತ್ತು ಸುಗಂಧ ತೈಲವನ್ನು ಆಶಿಸುವವನು ನಿರ್ಭಾಗ್ಯನಾಗುವನು.
ಜ್ಞಾನೋ 21:20ಜ್ಞಾನಿಯ ನಿವಾಸದಲ್ಲಿ ಎಣ್ಣೆಯು ಮತ್ತು ಶ್ರೇಷ್ಠ ಸಂಪತ್ತು ಇರುವವು, ಜ್ಞಾನಹೀನನು ಇದ್ದದ್ದನ್ನೆಲ್ಲಾ ನುಂಗಿಬಿಡುವನು.
ಜ್ಞಾನೋ 27:9ತೈಲವೂ, ಸುಗಂಧದ್ರವ್ಯಗಳೂ ಹೇಗೋ, ಮಿತ್ರನ ಸಂಭಾಷಣೆಯಿಂದ ಅನುಭವಕ್ಕೆ ಬರುವ ಸ್ನೇಹರಸವು ಹಾಗೆ ಮನೋಹರ.
ಜ್ಞಾನೋ 27:16ಅವಳನ್ನು ಅಡಗಿಸುವವನು ಗಾಳಿಯನ್ನು ಅಡಗಿಸುವನು, ಅವಳನ್ನು ಹಿಡಿಯುವ ಬಲಗೈ ಜಿಡ್ಡಿನ ವಸ್ತುವನ್ನು ಹಿಡಿಯುವುದು.
ಪ್ರಸಂಗಿ3
ಪ್ರಸ 7:1ಸುಗಂಧತೈಲಕ್ಕಿಂತ ಒಳ್ಳೆಯ ಹೆಸರು ಉತ್ತಮ, ಮತ್ತು ಜನನ ದಿನಕ್ಕಿಂತ ಮರಣ ದಿನವೇ ಮೇಲು.
ಪ್ರಸ 9:8ನಿನ್ನ ಬಟ್ಟೆಗಳು ಯಾವಾಗಲೂ ಬಿಳುಪಾಗಿರಲಿ. ನಿನ್ನ ತಲೆಗೆ ಎಣ್ಣೆಯ ಕೊರತೆ ಇಲ್ಲದಿರಲಿ.
ಪ್ರಸ 10:1ಸತ್ತ ನೊಣಗಳಿಂದ ಗಂಧದತೈಲವು ಕೊಳೆತು ನಾರುವುದು. ಹಾಗೆಯೇ ಸ್ವಲ್ಪ ಹುಚ್ಚುತನವು ಜ್ಞಾನ ಮತ್ತು ಘನತೆಗಳನ್ನು ಕೆಡಿಸುತ್ತದೆ.
ಪರಮಗೀತೆ2
ಪ.ಗೀ 1:3ನಿನ್ನ ತೈಲವು ಸುಗಂಧ; ನಿನ್ನ ಹೆಸರು ಸುರಿದ ತೈಲದ ಸುಗಂಧದಂತೆ ವ್ಯಾಪಿಸಿರುವುದರಿಂದ, ತರುಣಿಯರು ನಿನ್ನನ್ನು ಪ್ರೀತಿಸುವರು.
ಪ.ಗೀ 4:10ಪ್ರಿಯಳೇ, ವಧುವೇ, ನಿನ್ನ ಪ್ರೀತಿ ಅದೆಷ್ಟೋ ರಮ್ಯ! ನಿನ್ನ ಪ್ರೇಮ ದ್ರಾಕ್ಷಾರಸಕ್ಕಿಂತ ಎಷ್ಟೋ ಉತ್ತಮ! ನಿನ್ನ ತೈಲದ ಪರಿಮಳ ಸಕಲಸುಗಂಧ ದ್ರವ್ಯಗಳಿಗಿಂತ ಎಷ್ಟೋ ಮನೋಹರ!
ಯೆಶಾಯನು4
ಯೆಶಾ 1:6ಅಂಗಾಲಿನಿಂದ ನಡುನೆತ್ತಿಯ ತನಕ ಪೆಟ್ಟು, ಬಾಸುಂಡೆ, ವಾಸಿಯಾಗದ ಗಾಯಗಳೇ ಹೊರತು ಏನೂ ಸೌಖ್ಯವಿಲ್ಲ. ಅವುಗಳನ್ನು ತೊಳೆಯಲಿಲ್ಲ, ಕಟ್ಟಲಿಲ್ಲ, ಇಲ್ಲವೆ ಎಣ್ಣೆ ಸವರಿ ಮೃದು ಮಾಡಲಿಲ್ಲ.
ಯೆಶಾ 39:2ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ.
ಯೆಶಾ 57:9ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ ಬಳಿಗೆ ಪ್ರಯಾಣಮಾಡಿದ್ದಿ; ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ.
ಯೆಶಾ 61:3ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ಯೆರೆಮೀಯನು3
ಯೆರೆ 31:12ಅವರು ಬಂದು ಚೀಯೋನ್ ಶಿಖರದಲ್ಲಿ ಹಾಡುವರು. ಧಾನ್ಯ, ದ್ರಾಕ್ಷಾರಸ, ಎಣ್ಣೆ, ಕರು, ಕುರಿಮರಿ ಅಂತು ಯೆಹೋವನು ಅನುಗ್ರಹಿಸುವ ಎಲ್ಲಾ ಮೇಲುಗಳನ್ನು ಅನುಭವಿಸಲು ಪ್ರವಾಹದೋಪಾದಿಯಲ್ಲಿ ಬರುವರು. ಅವರ ಆತ್ಮವು ಹದವಾಗಿ ನೀರು ಹಾಯಿಸಿದ ತೋಟದಂತಿರುವುದು; ಅವರು ಇನ್ನು ಕಳೆಗುಂದರು.
ಯೆರೆ 40:10ನಾನಂತು ಮಿಚ್ಪದಲ್ಲಿ ವಾಸವಾಗಿದ್ದು ನಮ್ಮ ಬಳಿಗೆ ಬರುವ ಕಸ್ದೀಯರ ಮುಂದೆ ನಿಮ್ಮ ಪಕ್ಷವನ್ನು ವಹಿಸುವೆನು; ನೀವು ದ್ರಾಕ್ಷಾರಸ, ಹಣ್ಣು, ಎಣ್ಣೆ, ಇವುಗಳನ್ನು ಸಂಗ್ರಹಿಸಿ ನಿಮ್ಮ ಪಾತ್ರೆಗಳಲ್ಲಿ ತುಂಬಿಸಿಟ್ಟು ನೀವು ಹಿಡಿದ ಪಟ್ಟಣಗಳಲ್ಲಿ ವಾಸಿಸಿರಿ” ಎಂದು ಖಂಡಿತವಾಗಿ ಹೇಳಿದನು.
ಯೆರೆ 41:8ಆದರೆ ಆ ಎಂಭತ್ತು ಮಂದಿಯಲ್ಲಿ ಹತ್ತು ಜನರು ಇಷ್ಮಾಯೇಲನಿಗೆ, “ನಮ್ಮನ್ನು ಕೊಲ್ಲಬೇಡ; ಗೋದಿ, ಜವೆಗೋದಿ, ಎಣ್ಣೆ, ಜೇನುತುಪ್ಪ, ಇವುಗಳನ್ನು ಕಾಡಿನಲ್ಲಿ ಬಹಳವಾಗಿ ಬಚ್ಚಿಟ್ಟಿದ್ದೇವೆ” ಎಂದು ಬಿನ್ನೈಸಲು ಅವನು ಅವರನ್ನು ಅವರ ಜೊತೆಯವರಂತೆ ಕೊಲ್ಲದೆ ಬಿಟ್ಟನು.
ಯೆಹೆಜ್ಕೇಲನು15
ಯೆಹೆ 16:9“ಆಗ ನಾನು ನೀರಿನಲ್ಲಿ ನಿನ್ನನ್ನು ಸ್ನಾನಮಾಡಿಸಿ ನಿನ್ನ ಮೇಲಣ ರಕ್ತವನ್ನು ತೊಳೆದುಬಿಟ್ಟು ನಿನಗೆ ತೈಲವನ್ನು ಹಚ್ಚಿದೆನು.
ಯೆಹೆ 16:13ನಿನ್ನ ಒಡವೆಗಳು ಬೆಳ್ಳಿಬಂಗಾರದವು; ನಿನ್ನ ಉಡುಪು ನಯವಾದ ನಾರುಮಡಿ, ರೇಷ್ಮೆಯ ಹೊದಿಕೆ, ಕಸೂತಿಯ ಬಟ್ಟೆ; ನಿನ್ನ ಆಹಾರವು ಗೋದಿಹಿಟ್ಟು, ಜೇನು, ಎಣ್ಣೆ; ನಿನ್ನ ಲಾವಣ್ಯವು, ಅತಿಮನೋಹರ; ನೀನು ವೃದ್ಧಿಗೊಂಡು ರಾಣಿಯಾದೆ.
ಯೆಹೆ 16:18ನಿನ್ನ ಕಸೂತಿಯ ಬಟ್ಟೆಗಳನ್ನು ತೆಗೆದು ಮೂರ್ತಿಗಳಿಗೆ ಹೊದಿಸಿ, ಅವುಗಳ ಮುಂದೆ ನನ್ನ ತೈಲವನ್ನೂ ನನ್ನ ಧೂಪವನ್ನೂ ಅರ್ಪಿಸಿದೆ.
ಯೆಹೆ 16:19ನಾನು ನಿನಗೆ ಕೊಟ್ಟ ರೊಟ್ಟಿಯನ್ನೂ, ನಿನ್ನ ಆಹಾರಕ್ಕೆ ನಾನು ಒದಗಿಸಿದ ಗೋದಿಹಿಟ್ಟು, ಎಣ್ಣೆ, ಜೇನು ಇವುಗಳನ್ನೂ ನೀನು ಆ ಮೂರ್ತಿಗಳ ಮುಂದೆ ಸುಗಂಧಹೋಮ ಮಾಡಿದೆ; ಅಯ್ಯೋ, ಹೀಗಾಯಿತಲ್ಲ!” ಇದು ಕರ್ತನಾದ ಯೆಹೋವನ ನುಡಿ.
ಯೆಹೆ 23:41ವೈಭವದ ಮಂಚದ ಮೇಲೆ ಕುಳಿತುಕೊಂಡೆ. ಅವರ ಮುಂದೆ ಔತಣಕ್ಕೆ ಸಿದ್ಧವಾಗಿದ್ದ ಮೇಜಿನ ಮೇಲೆ ನನ್ನ ಧೂಪತೈಲಗಳನ್ನು ಇಟ್ಟಿರುವೆ.
ಯೆಹೆ 27:17“ಯೆಹೂದ್ಯರೂ, ಇಸ್ರಾಯೇಲ್ ದೇಶದವರೂ ನಿನ್ನ ಕಡೆಯ ವರ್ತಕರಾಗಿ ಮಿನ್ನೀಥಿನ ಗೋದಿಯಿಂದಲೂ, ಖಂಡಸಕ್ಕರೆ, ಜೇನು, ಎಣ್ಣೆ ಮತ್ತು ಸುಗಂಧತೈಲದಿಂದಲೂ ನಿನ್ನೊಂದಿಗೆ ವ್ಯಾಪಾರ ನಡೆಸಿದರು.
ಯೆಹೆ 32:14ಆಗ ಆ ನೀರು ತಿಳಿಯಾಗುವಂತೆಯೂ, ಆ ಪ್ರವಾಹಗಳು ಎಣ್ಣೆಯ ಹಾಗೆ ಹರಿಯುವಂತೆಯೂ ಮಾಡುವೆನು” ಇದು ಕರ್ತನಾದ ಯೆಹೋವನ ನುಡಿ.
ಯೆಹೆ 45:14ಒಂದು ಬತ್ ಎಣ್ಣೆಯಲ್ಲಿ ಸಮರ್ಪಿಸಬೇಕಾದ ಭಾಗವೆಷ್ಟೆಂದರೆ ಒಂದು ಕೋರ್ ಅಂದರೆ ಹತ್ತು ಬತ್ ಅಥವಾ ಒಂದು ಹೋಮೆರ್ ಅಳತೆಯ ಎಣ್ಣೆಯಲ್ಲಿ ಒಂದು ಬತ್ ಅಳತೆಯ ಹತ್ತನೆಯ ಒಂದು ಪಾಲು. (ಹತ್ತು ಬತ್ ಅಂದರೆ ಒಂದು ಹೋಮೆರ್)
ಯೆಹೆ 45:24ಇದಲ್ಲದೆ ಒಂದೊಂದು ಹೋರಿಯ ಮತ್ತು ಟಗರಿನ ಸಂಗಡ ಮೂವತ್ತು ಸೇರು ಗೋದಿಹಿಟ್ಟನ್ನೂ, ಆರಾರು ಸೇರು ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒಪ್ಪಿಸಬೇಕು.
ಯೆಹೆ 45:25“ಏಳನೆಯ ತಿಂಗಳಿನ ಹದಿನೈದನೆಯ ದಿನದಲ್ಲಿ ಪ್ರಾರಂಭವಾಗುವ ಹಬ್ಬದ ಏಳು ದಿನಗಳಲ್ಲಿಯೂ ಅವನು ದೋಷಪರಿಹಾರಕ ಯಜ್ಞಪಶು, ಸರ್ವಾಂಗಹೋಮ ಪಶು, ಧಾನ್ಯನೈವೇದ್ಯ ಎಣ್ಣೆ, ಇವುಗಳನ್ನು ಅದೇ ಕ್ರಮದಂತೆ ಕೊಡಬೇಕು.”
ಯೆಹೆ 46:5ಟಗರಿನೊಡನೆ ಮೂವತ್ತು ಸೇರು ಗೋದಿಹಿಟ್ಟನ್ನೂ, ಕುರಿಗಳೊಡನೆ ಕೈಯಲಾದಷ್ಟು ಗೋದಿಹಿಟ್ಟನ್ನೂ, ಮೂವತ್ತು ಸೇರು ಗೋದಿಹಿಟ್ಟಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಕೊಡಲಿ.
ಯೆಹೆ 46:7ಮತ್ತು ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
ಯೆಹೆ 46:11ಅರಸನು ಉತ್ಸವಗಳಲ್ಲಿಯೂ, ಹಬ್ಬಗಳಲ್ಲಿಯೂ ಹೋರಿಯೊಡನೆ ಮೂವತ್ತು ಸೇರು, ಟಗರಿನೊಡನೆ ಮೂವತ್ತು ಸೇರು, ಕುರಿಗಳೊಡನೆ ಕೈಲಾದ್ದಷ್ಟು ಸೇರು ಗೋದಿಹಿಟ್ಟನ್ನೂ, ಮೂವತ್ತು ಸೇರಿಗೆ ಆರಾರು ಸೇರಿನಂತೆ ಎಣ್ಣೆಯನ್ನೂ, ಧಾನ್ಯನೈವೇದ್ಯಕ್ಕಾಗಿ ಒದಗಿಸಬೇಕು.
ಯೆಹೆ 46:14ಅದರೊಂದಿಗೆ ಪ್ರತಿ ದಿನ ಬೆಳಗ್ಗೆ ಧಾನ್ಯ ನೈವೇದ್ಯವಾಗಿ ಐದು ಸೇರು ಗೋದಿಹಿಟ್ಟನ್ನೂ, ಅದನ್ನು ಕಲಸುವುದಕ್ಕೆ ಎರಡು ಸೇರು ಎಣ್ಣೆಯನ್ನೂ ನೀನು ಸಮರ್ಪಿಸಬೇಕು. ಇವುಗಳನ್ನು ಪ್ರತಿನಿತ್ಯವೂ ಯೆಹೋವನಿಗೆ ಧಾನ್ಯನೈವೇದ್ಯವಾಗಿ ಅರ್ಪಿಸತಕ್ಕದ್ದು. ಇದು ಶಾಶ್ವತ ನಿಯಮವಾಗಿದೆ.
ಯೆಹೆ 46:15ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.”
ಹೋಶೇಯನು4
ಹೋಶೇ 2:5ಅವರ ತಾಯಿ ವ್ಯಭಿಚಾರ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ. ‘ತನಗೆ ಬೇಕಾದ ಅನ್ನ ಪಾನಗಳನ್ನೂ, ಉಣ್ಣೆ ನಾರುಗಳನ್ನೂ, ತೈಲವನ್ನೂ ಪಾನಕಗಳನ್ನೂ ತನಗೆ ಕೊಡುವ ಹಾಗೂ ತನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿಸಿಕೊಂಡವರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.’”
ಹೋಶೇ 2:8ಅವಳಿಗೆ ಧಾನ್ಯ, ದ್ರಾಕ್ಷಾರಸ, ತೈಲಗಳು ನನ್ನಿಂದ ದೊರೆತವುಗಳೆಂದೂ, ಬಾಳನ ಪೂಜೆಗೆ ಉಪಯೋಗಿಸಿದ ಬೆಳ್ಳಿಬಂಗಾರಗಳು ನನ್ನ ಧಾರಾಳವಾದ ವರವೆಂದೂ ಅವಳಿಗೆ ತಿಳಿಯದು.
ಹೋಶೇ 2:22ಬೇಡುವ ಧಾನ್ಯ, ದ್ರಾಕ್ಷಾರಸ, ತೈಲಗಳಿಗೆ ಭೂಮಿಯು ಒಲಿಯುವುದು, ಬೇಡುವ ಇಜ್ರೇಲಿಗೆ ಅವು ಒಲಿಯುವವು.
ಹೋಶೇ 12:1ಎಫ್ರಾಯೀಮು ಮೇಯಿಸುವ ಮಂದೆಯು ಗಾಳಿಯೇ, ಹಿಂದಟ್ಟುವ ಬೇಟೆಯು ಮೂಡಣಗಾಳಿಯೇ. ಅದು ಮೋಸವನ್ನೂ, ಹಿಂಸೆಯನ್ನೂ ನಿರಂತರ ಹೆಚ್ಚೆಚ್ಚಾಗಿ ನಡೆಸುತ್ತದೆ; ಅಶ್ಶೂರದೊಂದಿಗೆ ಒಪ್ಪಂದವನ್ನು ಮಾಡಿಕೊಳ್ಳುತ್ತದೆ; ಐಗುಪ್ತಕ್ಕೆ ಎಣ್ಣೆಯನ್ನು ಕಾಣಿಕೆಯಾಗಿ ಕಳುಹಿಸುತ್ತದೆ.
ಯೋವೇಲನು3
ಯೋವೇ 1:10ಬೆಳೆ ಬೆಳೆಯುವ ಹೊಲವು ಹಾಳಾಗಿದೆ, ನೆಲವು ದುಃಖದಲ್ಲಿ ಮುಳುಗಿದೆ. ಏಕೆಂದರೆ ಧಾನ್ಯವು ನಾಶವಾಗಿದೆ, ಹೊಸ ದ್ರಾಕ್ಷಾರಸವು ಒಣಗಿದೆ, ಎಣ್ಣೆಯು ಕೆಟ್ಟುಹೋಗಿದೆ.
ಯೋವೇ 2:19ಅವರ ಬಿನ್ನಹವನ್ನು ಯೆಹೋವನು ಲಾಲಿಸಿ ಅವರಿಗೆ ಹೀಗೆ ಹೇಳಿದನು: “ಇಗೋ, ನಾನು ಧಾನ್ಯ, ದ್ರಾಕ್ಷಾರಸ, ತೈಲಗಳನ್ನು ನಿಮಗೆ ಕಳುಹಿಸುತ್ತಿದ್ದೇನೆ. ಅವುಗಳಿಂದ ನಿಮಗೆ ತೃಪ್ತಿಯಾಗುವುದು. ನಿಮ್ಮನ್ನು ಅನ್ಯಜನಾಂಗಗಳ ನಿಂದೆಗೆ ಇನ್ನು ಗುರಿಮಾಡುವುದಿಲ್ಲ.
ಯೋವೇ 2:24ಕಣಜಗಳಲ್ಲಿ ಗೋದಿಯು ರಾಶಿರಾಶಿಯಾಗಿರುವುದು, ತೊಟ್ಟಿಗಳಲ್ಲಿ ದ್ರಾಕ್ಷಾರಸವೂ ಎಣ್ಣೆಯೂ ತುಂಬಿತುಳುಕುವವು.
ಆಮೋಸನು1
ಆಮೋ 6:6ದ್ರಾಕ್ಷಾರಸವನ್ನು ಬೋಗುಣಿಯಲ್ಲಿ ಕುಡಿಯುತ್ತಾರೆ ಮತ್ತು ಉತ್ತಮ ಅಭಿಷೇಕ ತೈಲಗಳನ್ನು ಹಚ್ಚಿಕೊಳ್ಳುತ್ತಾರೆ, ಆದರೆ ಯೋಸೇಫನ ನಷ್ಟಕ್ಕೆ ವ್ಯಸನಪಡುವುದಿಲ್ಲ.
ಮೀಕನು2
ಮೀಕ 6:7ಸಾವಿರಾರು ಟಗರುಗಳನ್ನೂ, ಲಕ್ಷೋಪಲಕ್ಷ ತೈಲ ಪ್ರವಾಹಗಳನ್ನೂ ನೋಡಿ ಯೆಹೋವನು ಮೆಚ್ಚುತ್ತಾನೆಯೇ? ನನ್ನ ದ್ರೋಹದ ನಿಮಿತ್ತ ನನ್ನ ಚೊಚ್ಚಲ ಮಗನನ್ನು ಅರ್ಪಿಸಲೋ? ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲವನ್ನು ಸಲ್ಲಿಸಲೋ?
ಮೀಕ 6:15ನೀನು ಬಿತ್ತಿದರೂ ಕೊಯ್ಯುವುದಿಲ್ಲ. ಎಣ್ಣೆಯ ಕಾಯಿಯನ್ನು ಜಜ್ಜಿದರೂ ಮೈಗೆ ಎಣ್ಣೆ ಹತ್ತಿಕೊಳ್ಳುವುದಿಲ್ಲ. ದ್ರಾಕ್ಷಿಯ ಹಣ್ಣನ್ನು ತುಳಿದರೂ ದ್ರಾಕ್ಷಾರಸವನ್ನು ಕುಡಿಯುವುದಿಲ್ಲ.
ಹಗ್ಗಾಯನು2
ಹಗ್ಗಾ 1:11ಇದಲ್ಲದೆ ನಾನು ದೇಶ, ಬೆಟ್ಟ, ಧಾನ್ಯ, ದ್ರಾಕ್ಷಾರಸ, ಎಣ್ಣೆ, ಭೂಮಿಯ ಉತ್ಪತ್ತಿ, ಮನುಷ್ಯ, ಪಶು, ನಾನಾ ಕೈದುಡಿತ ಇವುಗಳಿಗೆಲ್ಲಾ ಕ್ಷಾಮವನ್ನು ತಂದಿದ್ದೇನೆ.
ಹಗ್ಗಾ 2:12ಒಬ್ಬನು ತನ್ನ ವಸ್ತ್ರದ ಸೆರಗಿನಲ್ಲಿ ಮೀಸಲಿನ ಮಾಂಸವನ್ನು ಇಟ್ಟುಕೊಂಡು ಬರುತ್ತಿರುವಾಗ ಆ ಸೆರಗು ರೊಟ್ಟಿಯನ್ನಾಗಲಿ ಇಲ್ಲವೆ ಗುಗ್ಗರಿಯನ್ನಾಗಲಿ ಅಥವಾ ದ್ರಾಕ್ಷಾರಸವನ್ನಾಗಲಿ ಇಲ್ಲವೆ ಎಣ್ಣೆಯನ್ನು ಅಥವಾ ಯಾವ ಆಹಾರ ಪದಾರ್ಥವನ್ನಾಗಲಿ ಸೋಕಿದರೆ ಅವು ಪರಿಶುದ್ಧವಾಗುವುದೋ? ಎಂದು ಧರ್ಮವಿಧಿಯನ್ನು ವಿಚಾರಿಸು” ಪ್ರವಾದಿಯು ಹಾಗೆ ವಿಚಾರಿಸಲು ಯಾಜಕರು “ಇಲ್ಲ” ಎಂದು ಉತ್ತರಕೊಟ್ಟರು.
ಮತ್ತಾಯನು2
ಮತ್ತಾ 25:4ಆದರೆ ಬುದ್ಧಿವಂತರಾದ ಕನ್ನಿಕೆಯರು ತಮ್ಮ ದೀಪಾರತಿಗಳೊಂದಿಗೆ ಪಾತ್ರೆಗಳಲ್ಲಿ ಎಣ್ಣೆಯನ್ನೂ ತೆಗೆದುಕೊಂಡರು.
ಮತ್ತಾ 25:8ಆಗ ಬುದ್ಧಿಹೀನರಾದ ಕನ್ನಿಕೆಯರು ಬುದ್ಧಿವಂತರಾಗಿದ್ದ ಕನ್ನಿಕೆಯರಿಗೆ, ‘ನಿಮ್ಮ ಎಣ್ಣೆಯಲ್ಲಿ ನಮಗೆ ಸ್ವಲ್ಪ ಕೊಡಿರಿ.
ಮಾರ್ಕನು1
ಮಾರ್ಕ 6:13ಅನೇಕ ದೆವ್ವಗಳನ್ನು ಬಿಡಿಸಿ ಅನೇಕ ರೋಗಿಗಳಿಗೆ ಎಣ್ಣೆ ಹಚ್ಚಿ ಗುಣಪಡಿಸಿದರು.
ಲೂಕನು3
ಲೂಕ 7:46ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ; ಇವಳಾದರೋ ಸುಗಂಧ ತೈಲವನ್ನು ಕಾಲಿಗೆ ಹಚ್ಚಿದಳು.
ಲೂಕ 10:34ಅವನ ಹತ್ತಿರಕ್ಕೆ ಹೋಗಿ ಅವನ ಗಾಯಗಳಿಗೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಹೊಯ್ದು ಗಾಯವನು ಕಟ್ಟಿ ತನ್ನ ಸ್ವಂತ ವಾಹನ ಪಶುವಿನ ಮೇಲೆ ಹತ್ತಿಸಿಕೊಂಡು ಛತ್ರಕ್ಕೆ ಕರೆದುಕೊಂಡು ಹೋಗಿ ಅವನನ್ನು ಆರೈಕೆಮಾಡಿದನು.
ಲೂಕ 16:6ಅವನು ‘ನೂರು ಬುದ್ದಲಿ ಎಣ್ಣೆ’ ಎಂದಾಗ ಅವನಿಗೆ, ‘ಈ ನಿನ್ನ ಪತ್ರವನ್ನು ತೆಗೆದುಕೊಂಡು ಬೇಗ ಐವತ್ತು ಬುದ್ದಲಿ ಎಂದು ಬರೆ’ ಎಂದು ಹೇಳಿದನು.
ಇಬ್ರಿಯರಿಗೆ1
ಇಬ್ರಿ 1:9ನೀನು ನೀತಿಯನ್ನು ಪ್ರೀತಿಸಿದ್ದೀ ಮತ್ತು ಅನ್ಯಾಯವನ್ನು ದ್ವೇಷಿಸಿದ್ದೀ. ಆದುದರಿಂದ ದೇವರು, ನಿನ್ನ ದೇವರೇ, ನಿನ್ನನ್ನು ನಿನ್ನ ಜೊತೆಗಾರರಿಗಿಂತ ಅಧಿಕವಾಗಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾನೆ” ಎಂದು ಹೇಳಿದ್ದಾನೆ.
ಯಾಕೋಬನು1
ಯಾಕೋ 5:14ನಿಮ್ಮಲ್ಲಿ ಯಾವನಾದರೂ ಅಸ್ವಸ್ಥನಾಗಿರುವವನು ಇದ್ದರೆ, ಅವನು ಸಭೆಯ ಹಿರಿಯರನ್ನು ಕರೆದು ಪ್ರಾರ್ಥಿಸುವಂತೆ ವಿನಂತಿಸಲಿ. ಅವರು ಕರ್ತನ ಹೆಸರಿನಲ್ಲಿ ಅವನಿಗೆ ಎಣ್ಣೆ ಹಚ್ಚಿ ಅವನಿಗೋಸ್ಕರ ದೇವರನ್ನು ಪ್ರಾರ್ಥಿಸಲಿ.
ಪ್ರಕಟಣೆ2
ಪ್ರಕ 6:6ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.
ಪ್ರಕ 18:13ಲವಂಗ, ಚಕ್ಕೆ, ಧೂಪ, ರಕ್ತಬೋಳ, ಸುಗಂಧತೈಲ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮರು, ಮನುಷ್ಯಪ್ರಾಣಗಳು ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಗೋಳಾಡುವರು.

ಇದನ್ನೂ ನೋಡಿ

ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Human-made Things in the Bible © United Bible Societies 2025, adapted from R. Pritz, The Works of Their Hands: Man-made Things in the Bible © 2009 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು

ಆಹಾರ ಮತ್ತು ಪಾನೀಯ

ಈ ವಿಷಯದಲ್ಲಿ ಇನ್ನಷ್ಟು

ಆಹಾರ ಮತ್ತು ಪಾನೀಯ