ಮನೆ ಮತ್ತು ಕುಟುಂಬ
ಮನೆಗೆ ನೀರು
ಹೀಬ್ರೂ bor (ತೊಟ್ಟಿ), be’er (ಬಾವಿ) · ಚಳಿಗಾಲದ ಮಳೆನೀರನ್ನು ಒಣ ಬೇಸಿಗೆಗೆ ಕಾಯ್ದಿಡುವುದು
ಇಸ್ರಾಯೇಲಿನ ಬೆಟ್ಟದ ನಾಡಿನಲ್ಲಿ ಮಳೆ ಚಳಿಗಾಲದಲ್ಲಿ ಮಾತ್ರ ಬೀಳುತ್ತದೆ, ಆದ್ದರಿಂದ ಪ್ರತಿಯೊಂದು ಮನೆತನವೂ ದೀರ್ಘವಾದ ಒಣ ಬೇಸಿಗೆಗಾಗಿ ನೀರನ್ನು ಕಾಯ್ದಿಡಬೇಕಾಗಿತ್ತು. ಸುಮಾರು ಕ್ರಿ.ಪೂ. 13ನೇ ಶತಮಾನದಿಂದ ಜನರು ಬಂಡೆಯಲ್ಲಿ ಕೊರೆದ ತೊಟ್ಟಿಗಳಿಗೆ ನೀರು ಹಿಡಿದಿಡುವ ಸುಣ್ಣದ ಗಾರೆ ಬಳಿಯುತ್ತಿದ್ದರು, ಮತ್ತು ಒಂದು ಮನೆ ತನ್ನ ಮಾಳಿಗೆಯಿಂದಲೂ ಅಂಗಳದಿಂದಲೂ ಚಳಿಗಾಲದ ಮಳೆಯನ್ನು ಹಿಡಿಯಬಹುದಿತ್ತು. “ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು” (2 ಅರಸುಗಳು 18:31) ಎಂದರೆ ಮನೆಯಲ್ಲಿ ಸಮಾಧಾನದಿಂದ ಬದುಕುವುದು, ಮತ್ತು ಜ್ಞಾನೋಕ್ತಿಗಳು ಇದೇ ಚಿತ್ರವನ್ನು ವಿವಾಹದ ನಿಷ್ಠೆಗೆ ಬಳಸುತ್ತದೆ (ಜ್ಞಾನೋಕ್ತಿಗಳು 5:15). ಖಾಲಿ ತೊಟ್ಟಿ ಸೆರೆಮನೆಯಾಗಬಹುದಿತ್ತು: ಯೆರೆಮೀಯನನ್ನು ಒಂದರೊಳಗೆ ಇಳಿಸಲಾಯಿತು — “ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು” (ಯೆರೆಮೀಯನು 38:6).
ಒರತೆಯ ಅಥವಾ ಬಾವಿಯ ನೀರು ಉತ್ತಮವಾಗಿತ್ತು, ಮತ್ತು ಅದನ್ನು ಹೊತ್ತು ತರಬೇಕಾಗಿತ್ತು. ಅದನ್ನು ತರುವುದು ಸಾಮಾನ್ಯವಾಗಿ ಸ್ತ್ರೀಯರ ಕೆಲಸ, ಸಂಜೆಯ ತಂಪಿನಲ್ಲಿ, “ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ” (ಆದಿಕಾಂಡ 24:11), ಮಣ್ಣಿನ ಕೊಡದಲ್ಲಿ; ಆದ್ದರಿಂದ ಯೆರೂಸಲೇಮಿನಲ್ಲಿ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ಸುಲಭವಾಗಿ ಗುರುತಿಸಬಹುದಾದ ಸೂಚನೆಯಾಗಿದ್ದನು (ಮಾರ್ಕನು 14:13). ಬಾವಿಗಳು ಭೇಟಿಯ ಸ್ಥಳಗಳೂ ಆಗಿದ್ದವು: ಅಲ್ಲಿ ರೆಬೆಕ್ಕಳು ಅಬ್ರಹಾಮನ ಸೇವಕನನ್ನು ಭೇಟಿಯಾದಳು ಮತ್ತು ಯಾಕೋಬನು ರಾಹೇಲಳನ್ನು ಭೇಟಿಯಾದನು (ಆದಿಕಾಂಡ 29). ಯಾಕೋಬನ ಬಾವಿಯ ಬಳಿ ಯೇಸು ಒಬ್ಬ ಸ್ತ್ರೀಯನ್ನು, “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು” ಎಂದು ಕೇಳಿದನು (ಯೋಹಾನನು 4:7).
ಮುಖ್ಯ ವಚನಗಳು
ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.ಅವನು ಹೀಗೆ ಅಂದುಕೊಳ್ಳುತ್ತಿರುವಾಗಲೇ ಅಬ್ರಹಾಮನ ತಮ್ಮನಾದ ನಾಹೋರನ ಹೆಂಡತಿಯಾಗಿರುವ ಮಿಲ್ಕಳ ಮಗನಾದ ಬೆತೂವೇಲನಿಗೆ ಹುಟ್ಟಿದ ರೆಬೆಕ್ಕಳು ಹೆಗಲಿನ ಮೇಲೆ ಕೊಡವನ್ನಿಟ್ಟುಕೊಂಡು ಊರ ಹೊರಗೆ ಬರುವುದನ್ನು ಕಂಡನು. ಆ ಹುಡುಗಿ ಬಹು ಸುಂದರಿಯೂ ಇನ್ನೂ ಮದುವೆಯಾಗದ ಕನ್ಯೆಯಾಗಿದ್ದಳು.ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.ಸಮಾರ್ಯದವಳಾದ ಒಬ್ಬ ಸ್ತ್ರೀ ನೀರು ಸೇದುವುದಕ್ಕೆ ಬಂದಳು. ಯೇಸು ಆಕೆಯನ್ನು “ನನಗೆ ಕುಡಿಯುವುದಕ್ಕೆ ನೀರನ್ನು ಕೊಡು,” ಎಂದು ಕೇಳಿದನು.ಇದನ್ನು ಹೆಸರಿಸುವ ಎಲ್ಲಾ ವಚನಗಳು (104)
ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.
ಆದಿಕಾಂಡ26
ಆದರೆ ಸಿದ್ದೀಮ್ ತಗ್ಗು ಪ್ರದೇಶ ಕಲ್ಲರಗಿನ ಕೆಸರುಗುಣಿಗಳಿಂದ ತುಂಬಿತ್ತು. ಸೊದೋಮ್ ಗೊಮೋರಗಳ ರಾಜರ ಕಡೆಯವರು ಓಡಿಹೋಗುವಾಗ ಆ ಗುಣಿಗಳಲ್ಲಿ ಬಿದ್ದು ಸತ್ತರು; ಉಳಿದವರು ಬೆಟ್ಟಗಳಿಗೆ ಓಡಿಹೋದರು.ಈ ಸಂಗತಿಯಿಂದ ಅಲ್ಲಿರುವ ಬಾವಿಗೆ “ಬೆರ್ ಲಹೈರೋಯಿ” ಎಂದು ಹೆಸರಾಯಿತು. ಅದು ಕಾದೇಶಿಗೂ ಬೆರೆದಿಗೂ ಮಧ್ಯದಲ್ಲಿ ಇದೆ.ಇದಲ್ಲದೆ ದೇವರು ಅವಳ ಕಣ್ಣನ್ನು ತೆರೆದಿದ್ದರಿಂದ, ಅವಳು ಅಲ್ಲಿ ನೀರಿನ ಬಾವಿಯನ್ನು ಕಂಡು ತಿತ್ತಿಯಲ್ಲಿ ನೀರನ್ನು ತುಂಬಿಕೊಂಡು ಮಗನಿಗೆ ಕುಡಿಸಿದಳು.ಅಬೀಮೆಲೆಕನ ಆಳುಗಳು ಒಂದು ಬಾವಿಯನ್ನು ಬಲವಂತವಾಗಿ ಸ್ವಾಧೀನಪಡಿಸಿಕೊಂಡದ್ದರಿಂದ ಅಬ್ರಹಾಮನು ಅಬೀಮೆಲೆಕನ ಮೇಲೆ ತಪ್ಪು ಹೊರಿಸಲು,ಅದಕ್ಕೆ ಅಬ್ರಹಾಮನು, “ಈ ಬಾವಿಯನ್ನು ತೋಡಿಸಿದವನು ನಾನೇ ಎಂಬುದಕ್ಕೆ ಸಾಕ್ಷಿಯಾಗಿ ನೀನು ಈ ಏಳು ಹೆಣ್ಣು ಕುರಿಮರಿಗಳನ್ನು ನನ್ನ ಕೈಯಿಂದ ತೆಗೆದುಕೊಳ್ಳಬೇಕು” ಎಂದು ಹೇಳಿ, ಅವರಿಬ್ಬರೂ ಒಡಂಬಡಿಕೆ ಮಾಡಿಕೊಂಡರು.ಸಾಯಂಕಾಲದಲ್ಲಿ ಸ್ತ್ರೀಯರು ನೀರು ತರುವುದಕ್ಕೆ ಹೋಗುವಾಗ ಅವನು ಊರಿನ ಹೊರಗಡೆ ಬಾವಿಯ ಹತ್ತಿರ ಒಂಟೆಗಳನ್ನು ಮಲಗಿಸಿ.ಕೊಡದಲ್ಲಿದ್ದ ನೀರನ್ನು ನೀರಿನ ತೊಟ್ಟಿಯೊಳಗೆ ಹೊಯ್ಯಿದು ತಿರುಗಿ ತರುವುದಕ್ಕೆ ಬಾವಿಗೆ ತ್ವರೆಯಾಗಿ ಹೋದಳು. ಹೀಗೆ ಅವನ ಎಲ್ಲಾ ಒಂಟೆಗಳಿಗೂ ನೀರನ್ನು ತಂದು ಕೊಟ್ಟಳು.ಅವನ ತಂದೆಯಾದ ಅಬ್ರಹಾಮನ ಸೇವಕರು ಅಬ್ರಹಾಮನ ಕಾಲದಲ್ಲೇ ತೋಡಿದ್ದ ಬಾವಿಗಳನ್ನು ಫಿಲಿಷ್ಟಿಯರು ಮಣ್ಣುಹಾಕಿ ಮುಚ್ಚಿದ್ದರು.ಅಬ್ರಹಾಮನು ತೋಡಿಸಿದ್ದ ಬಾವಿಗಳನ್ನು ಅವನು ಸತ್ತ ನಂತರ ಫಿಲಿಷ್ಟಿಯರು ಮುಚ್ಚಿ ಹಾಕಿದ್ದರಿಂದ ಇಸಾಕನು ಅವುಗಳನ್ನು ತಿರುಗಿ ಅಗೆಸಿ, ತಂದೆ ಇಟ್ಟಿದ್ದ ಹೆಸರುಗಳನ್ನೇ ಇಟ್ಟನು.ಇಸಾಕನ ಸೇವಕರು ತಗ್ಗಿನಲ್ಲಿ ಅಗೆಯುವಾಗ ಅವರಿಗೆ ಉಕ್ಕುವ ಒರತೆಯ ನೀರಿನ ಬಾವಿಯು ಸಿಕ್ಕಿತು.ಗೆರಾರಿನ ದನ ಕಾಯುವವರು ಬಂದು ಆ ನೀರು ತಮ್ಮದು ಎಂದು ಹೇಳಿ ಇಸಾಕನ ದನ ಕಾಯುವವರ ಸಂಗಡ ಜಗಳವಾಡಿದ್ದರಿಂದ ಇಸಾಕನು ಆ ಬಾವಿಗೆ “ಏಸೆಕ್” ಎಂದು ಹೆಸರಿಟ್ಟನು.ತರುವಾಯ ಅವನ ಜನರು ಬೇರೊಂದು ಬಾವಿಯನ್ನು ತೋಡಿದಾಗ ಆ ದೇಶದವರು ಅದಕ್ಕಾಗಿಯೂ ಜಗಳವಾಡಿದ್ದರಿಂದ ಅವನು ಅದಕ್ಕೆ “ಸಿಟ್ನಾ” ಎಂದು ಹೆಸರಿಟ್ಟನು.ಅವನು ಅಲ್ಲಿಂದ ಹೊರಟು ಮತ್ತೊಂದು ಬಾವಿಯನ್ನೂ ತೋಡಿಸಿದಾಗ ಅದರ ವಿಷಯದಲ್ಲಿ ಯಾರೂ ಜಗಳವಾಡದೆ ಹೋದುದರಿಂದ ಅವನು, “ಈಗ ಯೆಹೋವನು ನಮಗೋಸ್ಕರ ಸ್ಥಳ ಮಾಡಿದ್ದರಿಂದ ಅಭಿವೃದ್ಧಿಯಾಗುವೆವು” ಎಂದು ಹೇಳಿ ಅದಕ್ಕೆ “ರೆಹೋಬೋತ್” ಎಂದು ಹೆಸರಿಟ್ಟನು.ಇಸಾಕನು ಯಜ್ಞವೇದಿಯನ್ನು ಕಟ್ಟಿಸಿ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿ ಅಲ್ಲಿ ತನ್ನ ಗುಡಾರವನ್ನು ಹಾಕಿಸಿಕೊಂಡನು.ಅದೇ ದಿನದಲ್ಲಿ ಇಸಾಕನ ಸೇವಕರು ಬಂದು, “ನಮಗೆ ನೀರು ಸಿಕ್ಕಿತು” ಎಂದು ಹೇಳಿ ತಾವು ತೋಡಿದ ಬಾವಿಯ ಸಂಗತಿಯನ್ನು ತಿಳಿಸಿದರು.ಅವನು ಕಣ್ಣೆತ್ತಿ ನೋಡಲಾಗಿ ಹೊಲದಲ್ಲಿ ಬಾವಿಯನ್ನು ಕಂಡನು. ಬಾವಿಯ ಹತ್ತಿರ ಮೂರು ಕುರಿಹಿಂಡುಗಳು ಮಲಗಿದ್ದವು. ಆ ಬಾವಿಯ ನೀರನ್ನು ಮಂದೆಗಳಿಗೆ ಕುಡಿಸುತ್ತಿದ್ದರು. ಆ ಬಾವಿಯ ಮೇಲೆ ಒಂದು ದೊಡ್ಡ ಕಲ್ಲನ್ನು ಇಡಲಾಗಿತ್ತು.ಹಿಂಡುಗಳೆಲ್ಲಾ ಅಲ್ಲಿ ಕೂಡಿದಾಗ ಕುರಿಕಾಯುವವರು ಬಾವಿಯ ಮೇಲೆ ಮುಚ್ಚಿದ್ದ ಕಲ್ಲನ್ನು ಉರುಳಿಸಿ ಕುರಿಗಳಿಗೆ ನೀರು ಕುಡಿಸಿ ತಿರುಗಿ ಕಲ್ಲನ್ನು ಬಾವಿಯ ಮೇಲೆ ಮುಚ್ಚುತ್ತಿದ್ದರು.ಮಂದೆಗಳೆಲ್ಲವು ಬಂದ ನಂತರ ಅವರು ಬಾವಿಯ ಮೇಲೆ ಮುಚ್ಚಿರುವ ಕಲ್ಲನ್ನು ತೆಗೆದು; ಅನಂತರ ಕುರಿಗಳಿಗೆ ನೀರು ಕುಡಿಸುತ್ತೇವೆ” ಎಂದರು.ಯಾಕೋಬನು ತನ್ನ ತಾಯಿಯ ಅಣ್ಣನಾದ ಲಾಬಾನನ ಮಗಳಾದ ರಾಹೇಲಳನ್ನೂ ಲಾಬಾನನ ಕುರಿಗಳನ್ನೂ ಕಂಡಾಗ ಬಾವಿಯ ಹತ್ತಿರಕ್ಕೆ ಹೋಗಿ ಅದರ ಮೇಲೆ ಮುಚ್ಚಿದ್ದ ಕಲ್ಲನ್ನು ಸರಿಸಿ ಲಾಬನನ ಕುರಿಗಳಿಗೆ ನೀರು ಕುಡಿಸಿದನು.ಬನ್ನಿರಿ, ಈಗ ನಾವು ಅವನನ್ನು ಕೊಂದು ಈ ಗುಂಡಿಗಳಲ್ಲಿ ಒಂದರೊಳಗೆ ಹಾಕಿ, ಕಾಡುಮೃಗವು ಅವನನ್ನು ತಿಂದು ಬಿಟ್ಟಿತೆಂದು ಹೇಳೋಣ. ಆಗ ಅವನ ಕನಸುಗಳು ಏನಾಗುವವೋ? ನೋಡೋಣ” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.ರೂಬೇನನು ಅವನನ್ನು ಅವರ ಕೈಯಿಂದ ತಪ್ಪಿಸಿ ತಂದೆಗೆ ತಿರುಗಿ ಒಪ್ಪಿಸಬೇಕೆಂದು ನೆನಸಿ ಅವರಿಗೆ, “ಇವನ ರಕ್ತ ಸುರಿಸಬೇಡಿರಿ, ಅವನನ್ನು ಈ ಕಾಡಿನಲ್ಲಿರುವ ಈ ಗುಂಡಿಯೊಳಗೆ ಹಾಕಿರಿ, ಅವನ ಮೇಲೆ ಕೈಹಾಕಬೇಡಿರಿ” ಎಂದು ಹೇಳಿದನು.ಅವನನ್ನು ಹಿಡಿದು ಆ ಗುಂಡಿಯೊಳಗೆ ಹಾಕಿದರು. ಆ ಗುಂಡಿ ನೀರಿಲ್ಲದೆ ಬರಿದಾಗಿತ್ತು.ಅಷ್ಟರಲ್ಲಿ ಮಿದ್ಯಾನ್ಯರಾದ ವರ್ತಕರು ಹಾದುಹೋಗುತ್ತಿದ್ದರು. ಅವರು ಯೋಸೇಫನನ್ನು ಗುಂಡಿಯೊಳಗಿಂದ ಮೇಲೆ ಎತ್ತಿ ಆ ಇಷ್ಮಾಯೇಲ್ಯರಿಗೆ ಇಪ್ಪತ್ತು ಬೆಳ್ಳಿಯ ನಾಣ್ಯಗಳಿಗೆ ಅವನನ್ನು ಮಾರಿದರು. ಅವರು ಅವನನ್ನು ಐಗುಪ್ತ ದೇಶಕ್ಕೆ ಕರೆದುಕೊಂಡು ಹೋದರು.ರೂಬೇನನು ತಿರುಗಿ ಆ ಗುಂಡಿಯ ಹತ್ತಿರಕ್ಕೆ ಬಂದು ಅದರಲ್ಲಿ ಯೋಸೇಫನು ಇಲ್ಲದೆ ಇರುವುದನ್ನು ಕಂಡು ತನ್ನ ಬಟ್ಟೆಗಳನ್ನು ಹರಿದುಕೊಂಡನು.ಏಕೆಂದರೆ ನಾನು ಇಬ್ರಿಯ ದೇಶದವನು. ಕೆಲವರು ನನ್ನನ್ನು ಕದ್ದು ಈ ದೇಶಕ್ಕೆ ತಂದರು. ಇಲ್ಲಿಯೂ ನಾನು ಯಾವ ತಪ್ಪು ಮಾಡದೆ ಸೆರೆಯಲ್ಲಿ ಬಿದ್ದಿರುವೆನು” ಅಂದನು.ಫರೋಹನು ಇದನ್ನು ಕೇಳಿದಾಗ ಯೋಸೇಫನನ್ನು ಕರೆದುಕೊಂಡು ಬರಲು ಹೇಳಿಕಳುಹಿಸಿದನು. ಯೋಸೇಫನನು ಬೇಗನೆ ಸೆರೆಮನೆಯಿಂದ ಬಿಡುಗಡೆ ಮಾಡಿದರು. ಆತನು ಕ್ಷೌರಮಾಡಿಸಿಕೊಂಡು ಬಟ್ಟೆ ಬದಲಾಯಿಸಿಕೊಂಡು ಫರೋಹನ ಸನ್ನಿಧಿಗೆ ಬಂದನು.ವಿಮೋಚನಕಾಂಡ4
ನಡೆದ ಸಂಗತಿಯು ಫರೋಹನಿಗೆ ತಿಳಿದುಬಂದಾಗ, ಅವನು ಮೋಶೆಯನ್ನು ಕೊಲ್ಲಬೇಕೆಂದು ಆಲೋಚಿಸುತ್ತಿದ್ದನು. ಆದುದರಿಂದ ಮೋಶೆಯು ಫರೋಹನ ಬಳಿಯಿಂದ ಓಡಿಹೋಗಿ ಮಿದ್ಯಾನ್ ದೇಶದಲ್ಲಿದ್ದ ಒಂದು ಬಾವಿಯ ಬಳಿಯಲ್ಲಿ ಕುಳಿತುಕೊಂಡನು.ಮಧ್ಯರಾತ್ರಿಯಲ್ಲಿ ಯೆಹೋವನು ಸಿಂಹಾಸನದಲ್ಲಿರುವ ಫರೋಹನ ಚೊಚ್ಚಲು ಮಗನು ಮೊದಲುಗೊಂಡು ಸೆರೆಯಲ್ಲಿದ್ದ ಸೆರೆಯವನ ಚೊಚ್ಚಲು ಮಗನವರೆಗೂ, ಐಗುಪ್ತ ದೇಶದಲ್ಲಿದ್ದ ಎಲ್ಲಾ ಚೊಚ್ಚಲು ಮಕ್ಕಳನ್ನೂ ಸಂಹಾರ ಮಾಡಿದನು. ಪಶುಗಳ ಚೊಚ್ಚಲು ಮರಿಗಳನ್ನೂ ಸಂಹಾರಮಾಡಿದನು.ಒಬ್ಬನು ಗುಂಡಿಯನ್ನು ಅಗೆದರೆ ಇಲ್ಲವೆ ಅಗೆದು ಅದನ್ನು ಮುಚ್ಚದೇ ಇದ್ದು ಅದರಲ್ಲಿ ಎತ್ತಾಗಲಿ, ಕತ್ತೆಯಾಗಲಿ ಆ ಗುಂಡಿಯಲ್ಲಿ ಬಿದ್ದು ಸತ್ತರೆ,ಆ ಗುಂಡಿಯನ್ನು ಅಗೆಸಿದವನು ಉಂಟಾದ ನಷ್ಟಕ್ಕೆ ಪ್ರತಿಯಾಗಿ ಈಡು ಕೊಡಬೇಕು. ಎತ್ತಿನ ಯಜಮಾನನಿಗೆ ತೃಪ್ತಿಯಾಗುವಷ್ಟು ಕ್ರಯವನ್ನು ಕೊಡಬೇಕು. ಸತ್ತ ಎತ್ತನ್ನು ತಾನೇ ತೆಗೆದುಕೊಳ್ಳಬಹುದು.ಯಾಜಕಕಾಂಡ1
ಒರತೆ ಮೊದಲಾದ ಜಲಾಶಯಗಳನ್ನು ಮಾತ್ರ ನೀವು ಶುದ್ಧವೆಂದೆಣಿಸಬೇಕು. ಆದರೆ ಇವುಗಳೊಳಗಿಂದ ಆ ಹೆಣವನ್ನು ಎತ್ತಿದವನು ಅಶುದ್ಧನಾಗುವನು.ಅರಣ್ಯಕಾಂಡ5
ತಮ್ಮ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕೆಂದು ಬೇಡಿಕೊಳ್ಳುತ್ತೇವೆ. ನಾವು ಹೊಲವನ್ನಾದರೂ, ದ್ರಾಕ್ಷಿತೋಟವನ್ನಾದರೂ ದಾಟಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ರಾಜಮಾರ್ಗದಲ್ಲಿಯೇ ನಡೆದು ನಮ್ಮ ದೇಶದ ಗಡಿಯನ್ನು ದಾಟುವ ತನಕ ಬಲಕ್ಕಾಗಲಿ, ಎಡಕ್ಕಾಗಲಿ ತಿರುಗುವುದಿಲ್ಲ” ಎಂದು ಹೇಳಿಸಿದನು.ಅಲ್ಲಿಂದ ಅವರು ಬೇರ್ ಸ್ಥಳಕ್ಕೆ ಬಂದರು. ಯೆಹೋವನು ಮೋಶೆಗೆ ಹೇಳಿದ ಮಾತು ಇಲ್ಲಿನ ಬಾವಿಯ ವಿಷಯವೇ. ಯೆಹೋವನು ಮೋಶೆಗೆ, “ಜನರನ್ನು ಸೇರಿಸು. ನಾನು ಅವರಿಗೆ ನೀರನ್ನು ಕೊಡುವೆನು” ಅಂದನು.ಆಗ ಇಸ್ರಾಯೇಲರು ಈ ಹಾಡನ್ನು ಗಾನಮಾಡಿದರು; “ಬಾವಿಯೇ, ಉಕ್ಕುತ್ತಾ ಬಾ! ಜನರೇ, ಉಲ್ಲಾಸದಿಂದ ಗಾನಮಾಡಿರಿಇದು ಪ್ರಧಾನರು ಕೋಲುಗಳಿಂದ ತೋಡಿದ ಬಾವಿ, ಇದು ಜನಾಧಿಪತಿಗಳು ಕೋಲುಗಳಿಂದ ಅಗೆದ ಬಾವಿ” ಎಂಬುವುದೇ. ಅವರು ಅರಣ್ಯವನ್ನು ಬಿಟ್ಟು ಮತ್ತಾನಕ್ಕೂ,“ನಿನ್ನ ದೇಶವನ್ನು ದಾಟಿಹೋಗುವುದಕ್ಕೆ ನಮಗೆ ಅಪ್ಪಣೆಯಾಗಬೇಕು. ನಾವು ಹೊಲಗಳಲ್ಲಿಯಾಗಲಿ, ದ್ರಾಕ್ಷಿತೋಟಗಳಲ್ಲಿಯಾಗಲಿ ಹೋಗುವುದಿಲ್ಲ. ಬಾವಿಗಳ ನೀರನ್ನು ಕುಡಿಯುವುದಿಲ್ಲ. ನಿನ್ನ ದೇಶವನ್ನು ದಾಟುವವರೆಗೂ ರಾಜಮಾರ್ಗದಲ್ಲಿಯೇ ನಡೆದು ಹೋಗುವೆವು” ಎಂದು ಹೇಳಿದರು.ಧರ್ಮೋಪದೇಶಕಾಂಡ1
ತುಂಬಿದ ಮನೆಗಳನ್ನೂ, ನೀವು ತೋಡದ ನೀರುಗುಂಡಿಗಳನ್ನೂ, ನೀವು ಬೆಳಸದ ದ್ರಾಕ್ಷಿತೋಟಗಳನ್ನೂ ಮತ್ತು ಎಣ್ಣೆಮರಗಳನ್ನೂ ಅನುಭವಿಸುತ್ತಾ ತೃಪ್ತರಾಗಿರುವಾಗ,ನ್ಯಾಯಸ್ಥಾಪಕರು1
ಯೋತಾಮನು ಇಷ್ಟು ಹೇಳಿ ತನ್ನ ಸಹೋದರನಾದ ಅಬೀಮೆಲೆಕನಿಂದ ತಪ್ಪಿಸಿಕೊಂಡು ಬೇರಕ್ಕೆ ಓಡಿಹೋಗಿ ಅಲ್ಲೇ ವಾಸಮಾಡಿದನು.1 ಸಮುವೇಲನು2
ಇಸ್ರಾಯೇಲರಿಗೆ ಕೇಡು ಬಂದಿತು. ತಾವು ಇಕ್ಕಟ್ಟಿನಲ್ಲಿದ್ದೇವೆಂದು ಅವರು ತಿಳಿದು ಗವಿ, ಕಾಡು, ಬಂಡೆ, ನೆಲಮನೆ, ಗುಂಡಿ ಇವುಗಳಲ್ಲಿ ಅಡಗಿಕೊಂಡರು.ಆಗ ಸೌಲನು ತಾನೇ ರಾಮಕ್ಕೆ ಹೋಗಬೇಕೆಂದು ಹೊರಟು, ಸೇಕೂವಿನಲ್ಲಿರುವ ದೊಡ್ಡ ಬಾವಿಯ ಬಳಿಗೆ ಬಂದು, “ಸಮುವೇಲ ದಾವೀದರು ಎಲ್ಲಿರುತ್ತಾರೆ?” ಎಂದು ವಿಚಾರಿಸಿದನು. ಆಗ ಜನರು, “ರಾಮದ ನಯೋತಿನಲ್ಲಿ ಇರುತ್ತಾರೆ” ಎಂದು ಉತ್ತರಕೊಟ್ಟರು.2 ಸಮುವೇಲನು7
ಯೋವಾಬನು ದಾವೀದನನ್ನು ಬಿಟ್ಟು, ಹೊರಗೆ ಹೋಗಿ, ಅಬ್ನೇರನನ್ನು ಕರೆತರುವಂತೆ ದೂತರನ್ನು ಕಳುಹಿಸಿದನು. ಇವರು ಹೋಗಿ ಸಿರಾ ಬಾವಿಯ ಬಳಿಯಿಂದ ಅವನನ್ನು ಕರೆದುಕೊಂಡು ಬಂದರು. ಇದು ದಾವೀದನಿಗೆ ಗೊತ್ತಿರಲಿಲ್ಲ.ಆದರೂ ಒಬ್ಬ ಯೌವನಸ್ಥನು ಅವರನ್ನು ನೋಡಿ ಅಬ್ಷಾಲೋಮನಿಗೆ ತಿಳಿಸಿದನು. ಅಷ್ಟರಲ್ಲಿ ಅವರಿಬ್ಬರೂ ಓಡಿಹೋಗಿ ಬಹುರೀಮಿನಲ್ಲಿ ಇದ್ದ ಒಬ್ಬನ ಮನೆಯನ್ನು ಹೊಕ್ಕರು. ಆ ಮನೆಯ ಅಂಗಳದಲ್ಲಿ ಒಂದು ಬಾವಿಯಿತ್ತು. ಅವರು ಅದರಲ್ಲಿ ಇಳಿದುಕೊಂಡರು.ಕೂಡಲೆ ಆ ಮನೆಯ ಹೆಂಗಸು ಅದರ ಮೇಲೆ ಒಂದು ಬಟ್ಟೆಯನ್ನು ಹಾಸಿ, ಅದರ ಮೇಲೆ ಗೋದಿಯ ನುಚ್ಚನ್ನು ಹರಡಿದಳು. ಇದರಿಂದ ಅವರು ಅಲ್ಲಿ ಅಡಗಿರುವ ವಿಷಯ ಯಾರಿಗೂ ಗೊತ್ತಾಗಲಿಲ್ಲ.ಅವರು ಹೋದ ಕೂಡಲೆ ಇವರಿಬ್ಬರೂ ಬಾವಿಯಿಂದ ಮೇಲಕ್ಕೆ ಬಂದು ಅರಸನಾದ ದಾವೀದನ ಬಳಿಗೆ ಹೋದರು. ಅವರು ದಾವೀದನಿಗೆ, “ಅಹೀತೋಫೆಲನು ನಿನಗೆ ವಿರೋಧವಾಗಿ ಇಂಥಿಂಥ ಆಲೋಚನೆಯನ್ನು ಹೇಳಿದ್ದಾನೆ. ಆದುದರಿಂದ ಬೇಗನೆ ಎದ್ದು ನದಿದಾಟಿ ಹೋಗು” ಎಂದು ಹೇಳಿದನು.ಅದೇ ಸಮಯದಲ್ಲಿ ದಾವೀದನು ಲವಲವಿಕೆಯಿಂದ “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದುಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದೂ ಕೇಳಿದನು.ಕೂಡಲೇ ಆ ಮೂರು ಮಂದಿ ಪರಾಕ್ರಮಶಾಲಿಗಳು ಫಿಲಿಷ್ಟಿಯರ ದಂಡಿನಲ್ಲಿ ನುಗ್ಗಿ ಹೋಗಿ, ಬೇತ್ಲೆಹೇಮಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.ಯೆಹೋಯಾದಾವನ ಮಗನೂ ಕಬ್ಜಯೇಲಿನ ಪರಾಕ್ರಮಶಾಲಿಯೂ ಆದ ಬೆನಾಯನು ಇನ್ನೊಬ್ಬನು. ಇವನು ಅನೇಕ ಶೂರಕೃತ್ಯಗಳನ್ನು ಮಾಡಿದನು. ಅದಕ್ಕೆ ದೃಷ್ಟಾಂತವೆಂದರೆ ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇಬ್ಬರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.2 ಅರಸುಗಳು2
ಆಗ ಯೇಹುವು ತನ್ನ ಸೇವಕರಿಗೆ, “ಅವರನ್ನು ಜೀವಸಹಿತ ಹಿಡಿಯಿರಿ” ಎಂದು ಆಜ್ಞಾಪಿಸಿದನು. ಅವರು ಅವರನ್ನು ಹಿಡಿದು ಕೊಂದು, ಉಣ್ಣೆ ಕತ್ತರಿಸುವ ಮನೆಯ ಬಾವಿಯಲ್ಲಿ ಹಾಕಿಬಿಟ್ಟರು. ಅವರು ನಲ್ವತ್ತೆರಡು ಮಂದಿ ಇದ್ದರು. ಅವರಲ್ಲಿ ಒಬ್ಬನನ್ನೂ ತಪ್ಪಿಸಿಕೊಳ್ಳಲು ಬಿಡಲಿಲ್ಲ.ಹಿಜ್ಕೀಯನ ಮಾತನ್ನು ಕೇಳಬೇಡಿರಿ. ಅಶ್ಶೂರದ ಅರಸನಾದ ನನ್ನ ಮಾತನ್ನು ಕೇಳಿರಿ, “ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಬಳಿಗೆ ಬಂದು ನನ್ನೊಡನೆ ಒಪ್ಪಂದ ಮಾಡಿಕೊಂಡು ನನ್ನ ಆಶ್ರಯಕ್ಕೆ ಬನ್ನಿ ಆಗ ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ಅಂಜೂರ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು.1 ಪೂರ್ವಕಾಲವೃತ್ತಾಂತ3
ದಾವೀದನು ಲವಲವಿಕೆಯಿಂದ, “ಬೇತ್ಲೆಹೇಮ್ ಊರಿನ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಯಾರಾದರೂ ನನಗೆ ತಂದು ಕೊಡುವುದಾದರೆ ಎಷ್ಟೋ ಒಳ್ಳೆಯದು” ಎಂದು ಹೇಳಿದನು.ಕೂಡಲೆ ಆ ಮೂವರು ವೀರರು ಫಿಲಿಷ್ಟಿಯರ ದಂಡಿನೊಳಗೆ ನುಗ್ಗಿ ಹೋಗಿ, ಬೇತ್ಲೆಹೇಮ್ ಬಾಗಿಲ ಬಳಿಯಲ್ಲಿರುವ ಬಾವಿಯ ನೀರನ್ನು ಸೇದಿ, ದಾವೀದನಿಗೆ ತಂದು ಕೊಟ್ಟರು.ಅನೇಕ ಶೂರಕೃತ್ಯಗಳನ್ನು ನಡಿಸಿದ ಕಬ್ಜಯೇಲನವನಾದ ಪರಾಕ್ರಮಶಾಲಿಯ ಮೊಮ್ಮಗನೂ, ಯೆಹೋಯಾದನ ಮಗನೂ ಆದ ಬೆನಾಯನು ಇನ್ನೊಬ್ಬನು. ಇವನು ಒಂದು ಸಾರಿ ಮೋವಾಬ್ಯನಾದ ಅರೀಯೇಲನ ಇನ್ನೂರು ಮಕ್ಕಳನ್ನು ಕೊಂದನು. ಇನ್ನೊಮ್ಮೆ ಹಿಮಕಾಲದಲ್ಲಿ ಒಂದು ಸಿಂಹವು ಗುಂಡಿಯಲ್ಲಿ ಬಿದ್ದಿರಲು, ಇವನು ಆ ಗುಂಡಿಗೆ ಇಳಿದು ಹೋಗಿ ಅದನ್ನು ಕೊಂದನು.2 ಪೂರ್ವಕಾಲವೃತ್ತಾಂತ1
ಅವನಿಗೆ ಇಳಿಜಾರಿನ ಪ್ರದೇಶದಲ್ಲಿಯೂ, ತಪ್ಪಲ ಸೀಮೆಯಲ್ಲಿಯೂ ಅಲ್ಲದೆ ಅಡವಿಯಲ್ಲಿಯೂ ಪಶುಗಳ ದೊಡ್ಡ ಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಗೋಪುರಗಳನ್ನು ಕಟ್ಟಿಸಿ ಅನೇಕ ಬಾವಿಗಳನ್ನು ತೋಡಿಸಿದನು. ಅವನಿಗೆ ವ್ಯವಸಾಯದಲ್ಲಿ ಬಹಳ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿ ತೋಟಗಳಲ್ಲಿ ಕೆಲಸಗಾರರನ್ನು ನೇಮಿಸಿದನು.ನೆಹೆಮೀಯನು1
ಅವರು ಕೋಟೆಕೊತ್ತಲುಗಳುಳ್ಳ ಪಟ್ಟಣಗಳನ್ನೂ, ಸಾರವುಳ್ಳ ಭೂಮಿಯನ್ನೂ, ಸಮಸ್ತ ವಿಧವಾದ ಉತ್ತಮ ವಸ್ತುಗಳಿಂದ ತುಂಬಿದ ಮನೆಗಳನ್ನೂ, ತೋಡಿದ ಬಾವಿಗಳನ್ನೂ, ದ್ರಾಕ್ಷಿತೋಟಗಳನ್ನೂ, ಎಣ್ಣೇಮರಗಳ ತೋಪುಗಳನ್ನೂ, ಹೆಚ್ಚಾದ ಹಣ್ಣಿನ ಮರ ಇವುಗಳನ್ನೂ ವಶಮಾಡಿಕೊಂಡು ಚೆನ್ನಾಗಿ ತಿಂದು, ಕುಡಿದು ತೃಪ್ತರಾಗಿ ಕೊಬ್ಬಿ, ನೀನು ಕೊಟ್ಟ ಸಮೃದ್ಧಿಯಲ್ಲಿ ಆನಂದಿಸುತ್ತಿದ್ದರು.ಕೀರ್ತನೆಗಳು9
ಅವನು ಅಗೆದು ಅಗೆದು ಗುಂಡಿಯನ್ನು ತೋಡಿ, ಅದರೊಳಗೆ ತಾನೇ ಬಿದ್ದುಹೋದನಲ್ಲಾ.ದಾವೀದನ ಕೀರ್ತನೆ. ಯೆಹೋವನೇ, ನನ್ನ ಶರಣನೇ, ನಿನಗೆ ಮೊರೆಯಿಡುತ್ತೇನೆ; ಕೇಳದೆ ಇರಬೇಡ. ನೀನು ಕಿವಿಗೊಡದೆ ಹೋದರೆ ನಾನು ಸತ್ತವರಿಗೆ ಸಮಾನನಾಗುವೆನಲ್ಲವೇ.ಯೆಹೋವನೇ, ನನ್ನ ಪ್ರಾಣವನ್ನು ಪಾತಾಳದಿಂದಲೂ ಎತ್ತಿದಿಯಲ್ಲಾ; ನನ್ನನ್ನು ಸಮಾಧಿಯಲ್ಲಿ ಸೇರಿಸದೆ ಬದುಕಿಸಿದಿಯಲ್ಲಾ.ನನ್ನನ್ನು ನಾಶನದ ಗುಂಡಿಯೊಳಗಿಂದ ಎತ್ತಿದನು; ಕೆಸರಿನೊಳಗಿಂದ ನನ್ನನ್ನು ತೆಗೆದು ಬಂಡೆಯ ಮೇಲೆ ನಿಲ್ಲಿಸಿ, ನಾನು ದೃಢವಾಗಿ ಹೆಜ್ಜೆಯಿಡುವಂತೆ ಮಾಡಿದನು.ದೇವರೇ, ನೀನು ದುಷ್ಟರನ್ನು ಪಾತಾಳದ ಕೆಳಕ್ಕೆ ದೊಬ್ಬಿಬಿಡುವಿ. ಕೊಲೆಪಾತಕರೂ ವಂಚಕರೂ ನರಾಯುಷ್ಯದ ಅರ್ಧಾಂಶವಾದರೂ ಬದುಕುವುದಿಲ್ಲ. ನಾನಂತೂ ನಿನ್ನನ್ನೆ ನಂಬಿಕೊಂಡಿರುವೆನು.ಪ್ರವಾಹವು ನನ್ನನ್ನು ಬಡಕೊಂಡು ಹೋಗದಿರಲಿ; ಅಗಾಧವು ನನ್ನನ್ನು ಒಳಗೆ ಎಳೆದುಕೊಳ್ಳದಿರಲಿ; ಪಾತಾಳವು ನನ್ನನ್ನು ನುಂಗದಿರಲಿ.ಸಮಾಧಿಯಲ್ಲಿ ಸೇರುವವರೊಳಗೆ ಎಣಿಸಲ್ಪಟ್ಟಿದ್ದೇನೆ; ನಿತ್ರಾಣ ಮನುಷ್ಯನಂತಿದ್ದೇನೆ.ಅಧೋಲೋಕದಲ್ಲಿಯೂ, ಗಾಢಾಂಧಕಾರದಲ್ಲಿಯೂ, ಅಗಾಧ ಸ್ಥಳದಲ್ಲಿಯೂ ನನ್ನನ್ನು ತಳ್ಳಿಬಿಟ್ಟಿದ್ದಿ.ಯೆಹೋವನೇ, ಬೇಗನೆ ಸದುತ್ತರವನ್ನು ದಯಪಾಲಿಸು; ನನ್ನ ಆತ್ಮವು ಕುಂದಿಹೋಗಿದೆ. ನೀನು ವಿಮುಖನಾದರೆ ಸಮಾಧಿಯಲ್ಲಿ ಸೇರಿದವರಿಗೆ ನಾನು ಸಮಾನನಾಗಿರುವೆನು.ಜ್ಞಾನೋಕ್ತಿಗಳು4
ಪಾತಾಳವು ತನ್ನೊಳಗೆ ಇಳಿಯುವವರನ್ನು ಸಂಪೂರ್ಣವಾಗಿ ನುಂಗುವಂತೆ, ನಾವೂ ಇವರನ್ನು ಜೀವದೊಡನೆ ನುಂಗಿಬಿಡೋಣ.ಸ್ವಂತ ಕೊಳದ ನೀರನ್ನು, ಸ್ವಂತ ಬಾವಿಯಲ್ಲಿ ಉಕ್ಕುವ ಜಲವನ್ನು ಮಾತ್ರ ಕುಡಿ.ಸೂಳೆಯು ಆಳವಾದ ಹಳ್ಳ, ಜಾರಸ್ತ್ರೀಯು ಇಕ್ಕಟ್ಟಾದ ಗುಂಡಿ.ನರಪ್ರಾಣ ತೆಗೆದ ದೋಷವನ್ನು ಕಟ್ಟಿಕೊಂಡವನು ಸಮಾಧಿಯ ಕಡೆಗೆ ಓಡುವನು, ಅವನನ್ನು ಯಾರೂ ತಡೆಯಬಾರದು.ಪ್ರಸಂಗಿ1
ಇನ್ನು ಮುಂದೆ ಬೆಳ್ಳಿಯ ತಂತಿಯು ಕಿತ್ತುಹೋಗುವುದು, ಚಿನ್ನದ ಬಟ್ಟಲು ಜಜ್ಜಿಹೋಗುವುದು, ಮಡಿಕೆಯು ಬುಗ್ಗೆಯ ಹತ್ತಿರ ಒಡೆಯುವುದು, ಬಾವಿಯ ರಾಟೆ ಮುರಿಯುವುದು,ಪರಮಗೀತೆ1
ಉದ್ಯಾನಗಳಿಗೆ ಹಾದು ಹೋಗುವ ಬುಗ್ಗೆ, ಉಕ್ಕುತ್ತಿರುವ ಬಾವಿ, ಲೆಬನೋನಿನಿಂದ ಹರಿಯುವ ಕಾಲುವೆ ನಿನ್ನಲ್ಲಿವೆ.ಯೆಶಾಯನು6
ಆದರೆ ನೀನು ಪಾತಾಳಕ್ಕೆ, ಅಧೋಲೋಕದ ಅಗಾಧ ಸ್ಥಳಗಳಿಗೆ ತಳ್ಳಲ್ಪಡುವೆ.ಆದರೆ ನೀನಾದರೋ ನಿನ್ನ ಸಮಾಧಿಗೆ ದೂರವಾಗಿ ಕೆಟ್ಟ ಕೊಂಬೆಯಂತೆ ಬಿಸಾಡಲ್ಪಟ್ಟಿದ್ದೀ; ಕತ್ತಿಯಿಂದ ತಿವಿದು ಗುಂಡಿಯ ಕಲ್ಲುಗಳ ಪಾಲಾಗಿ ಹತರಾದವರ ಹೊದಿಕೆಯಂತೆಯೂ,ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು.ಹಿಜ್ಕೀಯನ ಮಾತಿಗೆ ಕಿವಿಗೊಡಬೇಡಿರಿ, ಏಕೆಂದರೆ ಅಶ್ಶೂರದ ಅರಸನು ಹೇಳುವುದೇನೆಂದರೆ, “ನನ್ನ ಮಾತನ್ನು ಕೇಳಿರಿ; ನನ್ನೊಡನೆ ಒಡಂಬಡಿಕೆ ಮಾಡಿಕೊಂಡು ನನ್ನ ಆಶ್ರಯದಲ್ಲಿ ಸೇರಿರಿ. ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಅಂಜೂರದ ಮರ, ದ್ರಾಕ್ಷಾಲತೆ ಇವುಗಳ ಹಣ್ಣುಗಳನ್ನು ತಿಂದು ತನ್ನ ಬಾವಿಯ ನೀರನ್ನು ಕುಡಿಯುವನು.ಪಾತಾಳದವರು ನಿನ್ನನ್ನು ಸ್ತುತಿಸುವುದಿಲ್ಲ, ಸತ್ತವರು ನಿನ್ನನ್ನು ಕೀರ್ತಿಸುವುದಿಲ್ಲ, ಅಧೋಲೋಕಕ್ಕೆ ಇಳಿದುಹೋದವರು ನಿನ್ನ ಸತ್ಯ ಸಂಧತೆಯನ್ನು ಆಶ್ರಯಿಸುವುದಿಲ್ಲ.ನೀತಿಯನ್ನು ಹಿಂಬಾಲಿಸುವ ಯೆಹೋವನ ಭಕ್ತರೇ, ನನ್ನ ಮಾತನ್ನು ಕೇಳಿರಿ, ನೀವು ಯಾವ ಬಂಡೆಯೊಳಗಿಂದ ಒಡೆದು ತೆಗೆಯಲ್ಪಟ್ಟಿರೋ, ಯಾವ ಗುಂಡಿಯಿಂದ ಅಗೆಯಲ್ಪಟ್ಟಿರೋ ಆ ಕಡೆಗೆ ನೋಡಿರಿ.ಯೆರೆಮೀಯನು12
“ನನ್ನ ಜನರು ಎರಡು ಅಪರಾಧಗಳನ್ನು ಮಾಡಿದ್ದಾರೆ; ಅವರು ಜೀವಜಲದ ಬುಗ್ಗೆಯಾದ ನನ್ನನ್ನು ಬಿಟ್ಟುಬಿಟ್ಟು ತಮಗೋಸ್ಕರ ತೊಟ್ಟಿಗಳನ್ನು ತೋಡಿಕೊಂಡಿದ್ದಾರೆ. ಅವರು ಬಿರುಕು ಬಿಟ್ಟ, ನೀರು ನಿಲ್ಲದ ತೊಟ್ಟಿಗಳನ್ನು ಕೊರೆದುಕೊಂಡಿದ್ದಾರೆ.ತೊಟ್ಟಿಯು ತನ್ನಲ್ಲಿನ ನೀರನ್ನು ತಿಳಿಯಾಗಿ ಇಟ್ಟುಕೊಳ್ಳುವಂತೆ ಈ ಪಟ್ಟಣವು ತನ್ನಲ್ಲಿನ ದುಷ್ಟತನವನ್ನು ನಿಚ್ಚಳವಾಗಿ ಇಟ್ಟುಕೊಂಡಿದೆ. ಅಲ್ಲಿ ಬಲಾತ್ಕಾರದ ಮತ್ತು ಕೊಳ್ಳೆಯ ಸುದ್ದಿಯೇ ಕೇಳಿಬರುತ್ತದೆ; ರೋಗಗಳೂ, ಗಾಯಗಳೂ ಸದಾ ನನ್ನ ಕಣ್ಣಿಗೆ ಬೀಳುತ್ತವೆ.ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ. ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ.ಯೆರೆಮೀಯನು ಆ ಬಂದಿಖಾನೆಯ ನೆಲಮನೆಗಳಲ್ಲಿ ಕೆಲವು ದಿನಗಳು ಇದ್ದನು.ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.ಅರಮನೆಯ ಕಂಚುಕಿಯಾದ ಎಬೆದ್ಮೆಲೆಕನೆಂಬ ಕೂಷ್ಯನು ಯೆರೆಮೀಯನನ್ನು ಬಾವಿಯಲ್ಲಿ ಹಾಕಿದ್ದಾರೆಂದು ತಿಳಿದನು.“ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.ಅವರು ಊರೊಳಕ್ಕೆ ಬಂದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಮತ್ತು ಅವನ ಸಂಗಡಿಗರೂ ಅವರನ್ನು ಕೊಲ್ಲಿಸಿ ಬಾವಿಯಲ್ಲಿ ಹಾಕಿದರು.ಇಷ್ಮಾಯೇಲನು ತಾನು ಗೆದಲ್ಯನ ಸಂಗಡ ಕೊಂದ ಇತರರ ಶವಗಳನ್ನು ಹಾಕಿದ ಬಾವಿಯು, ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಅರಸನಾದ ಆಸನು ತೋಡಿಸಿದ್ದ ಬಾವಿಯೇ. ಆ ಬಾವಿಯನ್ನು ನೆತನ್ಯನ ಮಗನಾದ ಇಷ್ಮಾಯೇಲನು ಹತರಾದವರ ಶವಗಳಿಂದ ತುಂಬಿಸಿಬಿಟ್ಟನು.ಪ್ರಲಾಪಗಳು2
ನನ್ನನ್ನು ನೆಲಮಾಳಿಗೆಯಲ್ಲಿ ಇಳಿಸಿ ಕಲ್ಲುಮುಚ್ಚಿ ನನ್ನ ಪ್ರಾಣವನ್ನು ತೆಗೆದುಬಿಟ್ಟರುಯೆಹೋವನೇ, ಅಗಾಧವಾದ ನೆಲಮಾಳಿಗೆಯಲ್ಲಿ ನಿನ್ನ ಹೆಸರೆತ್ತಿ ಪ್ರಾರ್ಥಿಸಿದೆನು.ಯೆಹೆಜ್ಕೇಲನು9
“ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸುವಂತೆ ಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ಜನವಾಗುವಂತೆ ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲಿ ಸೇರಿಸುವೆನು.“ನೀರಾವರಿಯ ಯಾವ ಮರಗಳೂ ತಮ್ಮ ಎತ್ತರವನ್ನು ಹೆಚ್ಚಿಸಿಕೊಂಡು, ತಮ್ಮ ತುದಿಯನ್ನು ಮೋಡಗಳಿಗೆ ತಗುಲಿಸದೆ, ನೀರನ್ನು ಹೀರುತ್ತಲೇ ಇರುವ ದೊಡ್ಡದೊಡ್ಡ ಮರಗಳು ಎತ್ತರವಾಗಿ ಚಾಚಿಕೊಳ್ಳದೆ ಇರಲೆಂದು ಹೀಗಾಯಿತು. ಅವೆಲ್ಲಾ ಮರಣದ ಪಾಲಾಗುವುವು, ಅಧೋಲೋಕವೇ ಅವುಗಳಿಗೆ ಗತಿಯಾಗುವುದು; ಪಾತಾಳಕ್ಕೆ ಇಳಿದು ಹೋದ ನರಜನ್ಮದವರೊಂದಿಗೆ ಒಂದೇ ಗುಂಪಾಗಿ ಸೇರುವವು.”ನಾನು ಅದನ್ನು ಪ್ರೇತಗಳ ಜೊತೆಗೆ ಸೇರಿಸಬೇಕೆಂದು ಪಾತಾಳಕ್ಕೆ ತಳ್ಳಿಬಿಟ್ಟಾಗ, ಅದು ಬಿದ್ದ ಶಬ್ದಕ್ಕೆ ಸಕಲ ಜನಾಂಗಗಳು ನಡುಗಿದವು ಮತ್ತು ಅಧೋಲೋಕದ ಪಾಲಾದ ಏದೆನಿನ ಎಲ್ಲಾ ಮರಗಳು, ಲೆಬನೋನಿನ ಉತ್ತಮೋತ್ತಮವಾದ ವೃಕ್ಷಗಳು, ಅಂತು ನೀರಾವರಿಯ ಸಕಲ ವನಸ್ಪತಿಗಳೂ ಅಲ್ಲಿ ಸಂತೈಸಿಕೊಂಡವು.“ನರಪುತ್ರನೇ, ನೀನು ಐಗುಪ್ತದ ಅಸಂಖ್ಯಾತ ಪ್ರಜೆಗಾಗಿ ಗೋಳಾಡಿ, ಅವರನ್ನೂ ಮತ್ತು ಘನವಾದ ಜನಾಂಗಗಳವರನ್ನೂ ಅಧೋಲೋಕಕ್ಕೆ, ಪ್ರೇತಗಳ ಜೊತೆಗೆ ತಳ್ಳಿಬಿಡು.ಅವರ ಗೋರಿಗಳು ಅಧೋಲೋಕದ ಅಗಾಧ ಸ್ಥಳಗಳಲ್ಲಿ ಹರಡಿಕೊಂಡಿವೆ; ಸಂಹೃತರಾದವರು, ಖಡ್ಗದಿಂದ ಹತರಾದವರು ಗೋರಿಯ ಸುತ್ತಲಿದ್ದಾರೆ; ಜೀವಲೋಕದಲ್ಲಿ ಹತರಾದವರು ಜೀವಿತರ ದೇಶದಲ್ಲಿ ಭಯವನ್ನು ಉಂಟುಮಾಡಿದ್ದಾರೆ.ಅಲ್ಲಿ ಏಲಾಮು ಮತ್ತು ಅದರ ಸಮೂಹವು ಗೋರಿಯನ್ನು ಸುತ್ತಿಕೊಂಡಿದೆ; ಅವರೆಲ್ಲರೂ ಸಂಹೃತರು, ಖಡ್ಗದಿಂದ ಹತರಾದವರು; ಜೀವಲೋಕದಲ್ಲಿ ಭೀಕರರಾಗಿದ್ದ ಆ ಸುನ್ನತಿಹೀನರು ಅಧೋಲೋಕಕ್ಕೆ ಇಳಿದು ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.ಏಲಾಮು ಮಲಗುವುದಕ್ಕೆ ಹತರಾದ ಅದರ ಸಮೂಹಕ್ಕೆ ಸ್ಥಳವನ್ನು ಏರ್ಪಡಿಸಿದ್ದಾರೆ, ಅವರ ಗೋರಿಗಳು ಅದರ ಸುತ್ತುಮುತ್ತಲಿವೆ; ಅವರೆಲ್ಲರೂ ಸುನ್ನತಿಹೀನರು, ಖಡ್ಗದಿಂದ ಹತರಾದವರು; ಅವರು ಜೀವಲೋಕದಲ್ಲಿ ಭೀಕರರಾಗಿದ್ದು, ಪ್ರೇತಗಳ ಜೊತೆಗೆ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಸಂಹೃತರ ಮಧ್ಯದಲ್ಲೇ ಏಲಾಮಿಗೆ ಸ್ಥಳವು ಏರ್ಪಾಡಾಗಿದೆ.ಅಲ್ಲಿ ಎದೋಮು, ಅದರ ಅರಸರೂ ಮತ್ತು ಎಲ್ಲಾ ಸರದಾರರೂ ಅಲ್ಲಿದ್ದಾರೆ; ಅವರು ಬಲಾತ್ಕಾರಿಗಳಾಗಿದ್ದು ಖಡ್ಗದಿಂದ ಹತರಾದವರ ಸಂಗಡ ಬಿದ್ದಿರುತ್ತಾರೆ; ಸುನ್ನತಿಹೀನರೊಡನೆ ಪ್ರೇತಗಳ ಸಂಗಡ ಮಲಗಿದ್ದಾರೆ.“ಉತ್ತರ ದೇಶದ ಸಕಲ ಪ್ರಭುಗಳೂ ಸಮಸ್ತ ಮತ್ತು ಚೀದೋನ್ಯರೂ ಸಂಹೃತರೊಂದಿಗೆ ಇಳಿದು ಅಲ್ಲಿದ್ದಾರೆ; ಭಯಂಕರವಾಗಿದ್ದ ತಮ್ಮ ಶೌರ್ಯಕ್ಕೆ ನಾಚಿಕೊಂಡು ಖಡ್ಗದಿಂದ ಹತರಾದವರ ಮಧ್ಯೆ ಸುನ್ನತಿಹೀನರಾಗಿ ಬಿದ್ದು, ಪ್ರೇತಗಳ ಸಂಗಡ ಸೇರಿ ನಿಂದೆಯನ್ನು ಹೊತ್ತುಕೊಂಡಿದ್ದಾರೆ.ಜೆಕರ್ಯನು1
ನನ್ನ ಜನರೇ, ನೀವು ಒಡಂಬಡಿಕೆ ಮಾಡಿಕೊಂಡಾಗ ಸುರಿಸಿದ ರಕ್ತವನ್ನು ನಾನು ಸ್ಮರಿಸಿ ಸೆರೆಯಾಗಿರುವ ನಿನ್ನವರನ್ನು ನೀರಿಲ್ಲದ ಆ ಬಾವಿಯೊಳಗಿಂದ ಬರಮಾಡುವೆನು.ಲೂಕನು1
“ನಿಮ್ಮಲ್ಲಿ ಯಾವನೊಬ್ಬನ ಮಗನಾಗಲಿ ಎತ್ತಾಗಲಿ ಬಾವಿಯಲ್ಲಿ ಬಿದ್ದರೆ ಅವನು ತಡಮಾಡದೆ ಸಬ್ಬತ್ ದಿನದಲ್ಲಾದರೂ ಮೇಲಕ್ಕೆ ತೆಗೆಯುವುದಿಲ್ಲವೇ?” ಎಂದು ಅವರನ್ನು ಕೇಳಿದನು.ಯೋಹಾನನು4
ಅಲ್ಲಿ ಯಾಕೋಬನು ತೆಗೆಸಿದ ಬಾವಿಯಿತ್ತು. ಯೇಸು ಪ್ರಯಾಣಮಾಡಿದ್ದರಿಂದ ಆಯಾಸಗೊಂಡು ಆ ಬಾವಿಯ ಬಳಿಯಲ್ಲಿ ಹಾಗೆ ಕುಳಿತುಕೊಂಡನು. ಆಗ ಹೆಚ್ಚು ಕಡಿಮೆ ಮಧ್ಯಾಹ್ನವಾಗಿತ್ತು.ಆ ಸ್ತ್ರೀ ಆತನಿಗೆ, “ಅಯ್ಯಾ, ಸೇದುವುದಕ್ಕೆ ನಿನ್ನಲ್ಲಿ ಏನೂ ಇಲ್ಲ ಮತ್ತು ಬಾವಿ ಆಳವಾಗಿದೆ, ಹೀಗಿರುವಾಗ, ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂದಿತು?ನಮ್ಮ ಹಿರಿಯವನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು. ಅವನೂ ಅವನ ಮಕ್ಕಳೂ ಅವನ ಜಾನುವಾರುಗಳೂ ಸಹಿತವಾಗಿ ಇದೇ ಬಾವಿಯ ನೀರು ಕುಡಿದಿದ್ದರು” ಅನ್ನಲು,ಆದರೆ, ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವುದಿಲ್ಲ. ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ನೀರಿನ ಬುಗ್ಗೆಗಳಾಗಿದ್ದು ನಿತ್ಯ ಜೀವವನ್ನು ಉಂಟುಮಾಡುವುದು” ಎಂದು ಹೇಳಿದನು.ಈ ವಿಷಯದ ಎಲ್ಲಾ ವಚನಗಳು
ಇದನ್ನೂ ನೋಡಿ
ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Human-made Things in the Bible © United Bible Societies 2025, adapted from R. Pritz, The Works of Their Hands: Man-made Things in the Bible © 2009 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು