ಬೈಬಲಿನ ಸಸ್ಯಗಳು
ಲೆಬನೋನಿನ ದೇವದಾರು
ಹೀಬ್ರೂ erez · Cedrus libani · ಇಸ್ರಾಯೇಲಿಗೆ ತಿಳಿದಿದ್ದ ಅತಿ ಎತ್ತರದ ಮರ
ಲೆಬನೋನಿನ ದೇವದಾರು ಇಸ್ರಾಯೇಲ್ಯರಿಗೆ ತಿಳಿದಿದ್ದ ಅತಿ ಎತ್ತರದ ಮತ್ತು ಅತಿ ಬೃಹತ್ತಾದ ಮರ — ಸುಮಾರು 35 ಮೀಟರ್ ಎತ್ತರ, 2.5 ಮೀಟರ್ ವರೆಗಿನ ಅಗಲದ ಕಾಂಡ. ಅದರ ಸುವಾಸನೆಯ ಮರ ಕೊಳೆಯುವುದನ್ನೂ ಕೀಟಗಳನ್ನೂ ತಡೆಯುತ್ತದೆ, ಆದ್ದರಿಂದ ಪ್ರಾಚೀನ ಸಮೀಪಪೂರ್ವದ ಎಲ್ಲೆಡೆಯ ಅರಸರು ಅರಮನೆಗಳಿಗೂ ದೇವಾಲಯಗಳಿಗೂ ಅದನ್ನು ಬಯಸುತ್ತಿದ್ದರು; ಸುಮಾರು ಕ್ರಿ.ಪೂ. 2600ರ ಐಗುಪ್ತದ ದಾಖಲೆಗಳೇ ಲೆಬನೋನಿನ ಕರಾವಳಿಯಿಂದ ದೇವದಾರನ್ನು ತರುವ ಹಡಗುಗಳ ಬಗ್ಗೆ ಹೇಳುತ್ತವೆ.
ಇಸ್ರಾಯೇಲಿಗೆ ತನ್ನದೇ ದೇವದಾರು ಕಾಡುಗಳಿರಲಿಲ್ಲ. ತೂರಿನ ಅರಸನಾದ ಹೀರಾಮನು ದಾವೀದನ ಅರಮನೆಗಾಗಿ ದೇವದಾರು ಮರದ ದಿಮ್ಮಿಗಳನ್ನೂ ಕಟ್ಟುವವರನ್ನೂ ಕಳುಹಿಸಿದನು, ಮತ್ತು ಸೊಲೊಮೋನನಿಗಾಗಿ ದಿಮ್ಮಿಗಳನ್ನು ಸಮುದ್ರಕ್ಕೆ ಎಳೆದು ತೆಪ್ಪಗಳಾಗಿ ಕರಾವಳಿಯುದ್ದಕ್ಕೂ ತೇಲಿಸಿ ತರಲಾಯಿತು (1 ಅರಸುಗಳು 5:9). ದೇವಾಲಯದ ಮಾಳಿಗೆ ದೇವದಾರಿನ ತೊಲೆಗಳಿಂದ ಮಾಡಲ್ಪಟ್ಟಿತು, ಮತ್ತು ದೇವದಾರಿನ ಕಂಬಗಳ ಸಾಲುಗಳ ಮೇಲೆ ನಿಂತಿದ್ದ ಸೊಲೊಮೋನನ ಒಂದು ಸಭಾಂಗಣವನ್ನು ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರ ಎಂದು ಕರೆಯುತ್ತಿದ್ದರು (1 ಅರಸುಗಳು 7:2). ಸೆರೆಯ ನಂತರ ದೇವದಾರು ಮತ್ತೆ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ಬಂತು (ಎಜ್ರನು 3:7). ಶತಮಾನಗಳ ಮರ ಕಡಿತದಿಂದ ಲೆಬನೋನಿನ ಬೆಟ್ಟಗಳಲ್ಲಿ ಚದರಿದ ತೋಪುಗಳು ಮಾತ್ರ ಉಳಿದವು, ಮತ್ತು ಇಂದು ದೇವದಾರು ಆ ದೇಶದ ಧ್ವಜದ ಮೇಲಿದೆ.
ಪ್ರಕೃತಿಯಲ್ಲಿ

ಮುಖ್ಯ ವಚನಗಳು
ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ, ಸಮುದ್ರ ಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ, ಅಲ್ಲಿ ಬಿಚ್ಚಿಸಿಕೊಡುವೆನು. ನೀನು ಅವುಗಳನ್ನು ತೆಗೆದುಕೊಂಡು ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರ ಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆಯಾಗಿದೆ” ಎಂದು ಹೇಳಿ ಕಳುಹಿಸಿದನು.ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.ಈ ಸಸ್ಯ ಇರುವ ಎಲ್ಲಾ ವಚನಗಳು (63)
ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.
ನ್ಯಾಯಸ್ಥಾಪಕರು1
ಅದು, ‘ನೀವು ಯಥಾರ್ಥಮನಸ್ಸಿನಿಂದ ನನಗೆ ರಾಜ್ಯಾಭಿಷೇಕ ಮಾಡಬೇಕೆಂದಿರುವುದಾದರೆ ಬಂದು ನನ್ನ ನೆರಳನ್ನು ಆಶ್ರಯಿಸಿಕೊಳ್ಳಿರಿ; ಇಲ್ಲವಾದರೆ ನನ್ನಿಂದ ಬೆಂಕಿಹೊರಟು ಲೆಬನೋನಿನ ದೇವದಾರು ವೃಕ್ಷಗಳನ್ನು ದಹಿಸಿಬಿಡುವುದು’ ಎಂದಿತು.2 ಸಮುವೇಲನು3
ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.ಅರಸನು ಒಂದು ದಿನ ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮನೆಯಲ್ಲಿ ವಾಸವಾಗಿದ್ದೇನೆ. ದೇವರ ಮಂಜೂಷವಾದರೂ ಬಟ್ಟೆಯ ಗುಡಾರದಲ್ಲಿ ಇರುತ್ತದೆ” ಎಂದು ಹೇಳಿದನು.ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೊಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ಕುಲನಾಯಕನನ್ನಾದರೂ ನೀವು ನನಗೋಸ್ಕರ ದೇವದಾರು ಮರದ ಮನೆಯನ್ನೇಕೆ ಕಟ್ಟಲಿಲ್ಲವೆಂದು ಕೇಳಿದೆನೋ?’ ಎಂಬುದಾಗಿ ಯೆಹೋವನು ಅನ್ನುತ್ತಾನೆ” ಎಂದು ಹೇಳು.1 ಅರಸುಗಳು18
ಅವನು ಲೆಬನೋನಿನ ದೇವದಾರು ವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ, ಎಲ್ಲಾ ಪಶುಪಕ್ಷಿ, ಜಲಚರಗಳು, ಕ್ರಿಮಿಕೀಟಗಳನ್ನೂ ಕುರಿತು ಪ್ರಸ್ತಾಪಿಸ ಬಲ್ಲವನಾಗಿದ್ದನು.ಆದುದರಿಂದ ನೀನು ನನಗೋಸ್ಕರ ಲೆಬನೋನಿನ ದೇವದಾರು ವೃಕ್ಷಗಳನ್ನು ಕೊಯ್ಯಬೇಕೆಂದು ನಿನ್ನ ಆಳುಗಳಿಗೆ ಆಜ್ಞಾಪಿಸು, ಅವರ ಜೊತೆಯಲ್ಲಿ ನನ್ನ ಆಳುಗಳನ್ನೂ ಕಳುಹಿಸುವೆನು. ಮತ್ತು ನಿನ್ನ ಆಳುಗಳಿಗೆ ನೀನು ಹೇಳುವಷ್ಟು ಸಂಬಳವನ್ನು ಕೊಡುತ್ತೇನೆ. ಚೀದೋನ್ಯರಂತೆ ಮರಕೊಯ್ಯುವುದರಲ್ಲಿ ಜಾಣರು ನಮ್ಮಲ್ಲಿರುವುದಿಲ್ಲವೆಂದು ನಿನಗೆ ಗೊತ್ತಿದೆಯಲ್ಲಾ” ಎಂದು ಹೇಳಿದನು.ಇದಲ್ಲದೆ ಅವನು ಸೊಲೊಮೋನನಿಗೆ, “ನೀನು ಹೇಳಿಕಳುಹಿಸಿದ್ದನ್ನು ಕೇಳಿದೆನು. ದೇವದಾರು ವೃಕ್ಷಗಳನ್ನೂ, ತುರಾಯಿ ಮರಗಳನ್ನೂ ಕುರಿತು ನಿನ್ನ ಅಪೇಕ್ಷೆಯನ್ನು ನೆರವೇರಿಸುವೆನು.ಹೀಗೆ ಹೀರಾಮನು ಸೊಲೊಮೋನನಿಗೆ ಬೇಕಾದಷ್ಟು ದೇವದಾರು ಮರಗಳನ್ನೂ ಮತ್ತು ತುರಾಯಿ ಮರಗಳನ್ನೂ ಕೊಡುತ್ತಿದ್ದನು.ಈ ಪ್ರಕಾರ ಅವನು ಮನೆಯನ್ನು ಕಟ್ಟಿಸಿ, ದೇವದಾರಿನ ತೊಲೆ ಮತ್ತು ಹಲಿಗೆಗಳಿಂದ ಮಾಳಿಗೆಯನ್ನು ಮಾಡಿಸಿ ಕೆಲಸ ಮುಗಿಸಿದನು.ಅವನು ದೇವಾಲಯದ ಸುತ್ತಲೂ ಒಂದರ ಮೇಲೊಂದು ಐದೈದು ಮೊಳ ಎತ್ತರವಾದ ಕೊಠಡಿಗಳನ್ನು ಕಟ್ಟಿಸಿದನು. ಇವು ದೇವದಾರಿನ ತೊಲೆಗಳಿಂದ ದೇವಾಲಯಕ್ಕೆ ಸೇರಿಸಲ್ಪಟ್ಟಿದ್ದವು.ಅನಂತರ ಅವನು ಅದರ ಗೋಡೆಗಳ ಒಳಮೈಯನ್ನು ನೆಲದಿಂದ ಮಾಳಿಗೆಯವರೆಗೆ ದೇವದಾರಿನ ಹಲಗೆಗಳಿಂದ ಹೊದಿಸಿದನು. ನೆಲಕ್ಕೆ ತುರಾಯಿ ಮರದ ಹಲಗೆಗಳನ್ನು ಹಾಕಿದನು.ಇದಲ್ಲದೆ ಅವನು ದೇವಾಲಯದೊಳಗೆ ಹಿಂದಿನ ಇಪ್ಪತ್ತು ಮೊಳ ಸ್ಥಳವನ್ನು ಬಿಟ್ಟು ನೆಲದಿಂದ ತೊಲೆಗಳವರೆಗೆ ದೇವದಾರಿನ ಹಲಗೆಗಳಿಂದ ಒಂದು ಗೋಡೆಯನ್ನು ಮಾಡಿಸಿದನು. ಅದರ ಹಿಂದಿನ ಭಾಗವನ್ನು ಗರ್ಭಗೃಹ ಅಥವಾ ಮಹಾಪರಿಶುದ್ಧ ಸ್ಥಳ ಎಂದು ಪ್ರತ್ಯೇಕಿಸಿದನು.ದೇವಾಲಯದೊಳಗೆ ಕಲ್ಲು ಕಾಣಿಸದಂತೆ ಗೋಡೆಗಳನ್ನೆಲ್ಲಾ ಬಳ್ಳಿಗಳು ಮತ್ತು ಹೂವುಗಳು ಕೆತ್ತಿರುವ ದೇವದಾರಿನ ಹಲಿಗೆಗಳಿಂದ ಹೊದಿಸಿದನು.ಆ ಗರ್ಭಗೃಹವು ಇಪ್ಪತ್ತು ಮೊಳ ಉದ್ದವೂ, ಇಪ್ಪತ್ತು ಮೊಳ ಅಗಲವೂ, ಇಪ್ಪತ್ತು ಮೊಳ ಎತ್ತರವೂ ಆಗಿತ್ತು. ಅದನ್ನು ಚೊಕ್ಕ ಬಂಗಾರದ ತಗಡಿನಿಂದಲೂ, ಧೂಪವೇದಿಯನ್ನು ದೇವದಾರು ಮರದಿಂದಲೂ ಹೊದಿಸಿದನು.ದೇವಾಲಯದ ಪ್ರಾಕಾರದಲ್ಲಿ ಮೂರು ಸಾಲು ಕಲ್ಲಿನ ಕಂಬಗಳನ್ನೂ, ಒಂದು ಸಾಲು ದೇವದಾರಿನ ಕಂಬಗಳನ್ನೂ ಇರಿಸಿದನು.ಅವನು ಕಟ್ಟಿಸಿದ ಲೆಬನೋನಿನ ತೋಪು ಎನ್ನಿಸಿಕೊಳ್ಳುವ ಮಂದಿರವು ನೂರು ಮೊಳ ಉದ್ದ, ಐವತ್ತು ಮೊಳ ಅಗಲ ಮತ್ತು ಮೂವತ್ತು ಮೊಳ ಎತ್ತರವಾಗಿತ್ತು. ಅದರ ಮಾಳಿಗೆಗೆ ದೇವದಾರಿನ ಮೂರು ಸಾಲು ಕಂಬಗಳೂ, ಅವುಗಳ ಮೇಲೆ ಇಡಲ್ಪಟ್ಟ ದೇವದಾರಿನ ತೊಲೆಗಳೂ ಅದಕ್ಕೆ ಆಧಾರವಾಗಿದ್ದವು.ಸ್ತಂಭಗಳ ಮೇಲಿರುವ ತೊಲೆಗಳ ಮೇಲೆ ದೇವದಾರಿನ ಹಲಿಗೆಗಳಿಂದ ಮಾಡಿದ ಮಾಳಿಗೆಯಿತ್ತು. ಸ್ತಂಭಗಳು ಪ್ರತಿಯೊಂದು ಸಾಲಿನಲ್ಲಿ ಹದಿನೈದರಂತೆ ಒಟ್ಟು ನಲ್ವತ್ತೈದು ಇದ್ದವು.ಇದಲ್ಲದೆ ಅವನು ಸಿಂಹಾಸನ ಮಂದಿರವನ್ನು ಕಟ್ಟಿಸಿದನು. ಅವನು ಅಲ್ಲಿ ನ್ಯಾಯತೀರ್ಮಾನ ಮಾಡುತ್ತಿದ್ದರಿಂದ ಅದಕ್ಕೆ ನ್ಯಾಯಮಂದಿರವೆಂತಲೂ ಹೆಸರಾಯಿತು. ಇದರ ಎಲ್ಲಾ ಗೋಡೆಗಳೂ ನೆಲದಿಂದ ಮಾಳಿಗೆಯ ವರೆಗೆ ದೇವದಾರು ಮರದ ಹಲಿಗೆಗಳಿಂದ ಹೊದಿಸಲ್ಪಟ್ಟಿದ್ದವು.ಅಸ್ತಿವಾರದ ಮೇಲಣ ಭಾಗಕ್ಕೆ ಅಳತೆಯ ಮೇರೆಗೆ ಕೆತ್ತಿದ ಶ್ರೇಷ್ಠವಾದ ಕಲ್ಲುಗಳನ್ನೂ, ದೇವದಾರಿನ ಮರವನ್ನೂ ಉಪಯೋಗಿಸಿದನು.ಒಳಗಿನ ಪ್ರಾಕಾರವೆನ್ನಿಸಿಕೊಳ್ಳುವ ಯೆಹೋವನ ಆಲಯದ ಪ್ರಾಕಾರಕ್ಕೂ ಅರಮನೆಯ ಪ್ರಾಕಾರಕ್ಕೂ ಹೇಗೋ ಹಾಗೆಯೇ ಎಲ್ಲಾ ಮಂದಿರಗಳ ಸುತ್ತಲಿರುವ ದೊಡ್ಡ ಪ್ರಾಕಾರಕ್ಕೆ ಮೂರು ಸಾಲು ಕಲ್ಲಿನ ಕಂಬಗಳೂ, ಒಂದು ಸಾಲು ದೇವದಾರಿನ ಮರದ ಕಂಬಗಳೂ ಇದ್ದವು.ಆನಂತರ ಅವನು ತನಗೆ ಬೇಕಾದಷ್ಟು ದೇವದಾರುಮರಗಳನ್ನೂ, ತುರಾಯಿಮರಗಳನ್ನೂ ಮತ್ತು ಬಂಗಾರವನ್ನೂ ಕೊಟ್ಟಂಥ ತೂರಿನ ಅರಸನಾದ ಹೀರಾಮನಿಗೆ ಗಲಿಲಾಯ ಪ್ರಾಂತ್ಯದಲ್ಲಿ ಇಪ್ಪತ್ತು ಪಟ್ಟಣಗಳನ್ನು ಕೊಟ್ಟನು.ಅವನ ಮುಖಾಂತರವಾಗಿ ಯೆರೂಸಲೇಮಿನಲ್ಲಿ ಬೆಳ್ಳಿಯು ಸಾಮಾನ್ಯ ಕಲ್ಲಿನ ಹಾಗೂ ದೇವದಾರುಮರಗಳು ಇಳಕಲಿನ ಪ್ರದೇಶದಲ್ಲಿ ಬೆಳೆಯುವ ಅತ್ತಿಮರಗಳ ಹಾಗೂ ಹೇರಳವಾಗಿ ದೊರೆಯುತ್ತಿತ್ತು.2 ಅರಸುಗಳು2
ಆಗ ಇಸ್ರಾಯೇಲರ ಅರಸನಾದ ಯೆಹೋವಾಷನು ಯೆಹೂದದ ಅರಸನಾದ ಅಮಚ್ಯನಿಗೆ, “ಲೆಬನೋನಿನ ಮುಳ್ಳು ಗಿಡವು ಅಲ್ಲಿನ ದೇವದಾರುಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ಸ್ವಲ್ಪ ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡು ಮೃಗವು ಅಲ್ಲಿಂದ ಹಾದುಹೋಗುತ್ತಿರುವಾಗ ಅದನ್ನು ತುಳಿದುಬಿಟ್ಟಿತು.ನೀನು ನಿನ್ನ ದೂತರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ. ಅದರ ಎತ್ತರವಾದ ದೇವದಾರುವೃಕ್ಷಗಳನ್ನೂ ಶ್ರೇಷ್ಠವಾದ ತುರಾಯಿಮರಗಳನ್ನೂ ಕಡಿದುಬಿಟ್ಟಿದ್ದೇನೆ. ಅಲ್ಲಿನ ಬಹು ದೂರ ನಿವಾಸಸ್ಥಳಗಳನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.1 ಪೂರ್ವಕಾಲವೃತ್ತಾಂತ4
ತೂರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನೂ, ದೇವದಾರುಮರಗಳನ್ನೂ, ಶಿಲ್ಪಿಗಳನ್ನೂ ಮತ್ತು ಬಡಗಿಗಳನ್ನು ಅವನ ಬಳಿಗೆ ಕಳುಹಿಸಿದನು.ದಾವೀದನು ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ ಒಂದು ದಿನ ಅವನು ಪ್ರವಾದಿಯಾದ ನಾತಾನನನ್ನು ಬರಲು ಹೇಳಿ, “ನೋಡು, ನಾನು ದೇವದಾರುಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಯೆಹೋವನ ಒಡಂಬಡಿಕೆ ಮಂಜೂಷವಾದರೋ ಬಟ್ಟೆಯ ಮನೆಯಲ್ಲಿ ಇರುತ್ತದೆ” ಎಂದು ಹೇಳಿದನು.ನಾನು ಇಸ್ರಾಯೇಲರ ಮಧ್ಯದಲ್ಲಿ ಸಂಚರಿಸುತ್ತಿದ್ದಾಗೆಲ್ಲಾ ನನ್ನ ಜನರಾದ ಇಸ್ರಾಯೇಲರನ್ನು ಪಾಲಿಸುವುದಕ್ಕೋಸ್ಕರ ನನ್ನಿಂದ ನೇಮಿಸಲ್ಪಟ್ಟ ಯಾವ ನ್ಯಾಯಸ್ಥಾಪಕನ್ನಾದರೂ ನೀವು ನನಗೋಸ್ಕರ ದೇವದಾರುಮರದ ಮನೆಯನ್ನು ಏಕೆ ಕಟ್ಟಲಿಲ್ಲ ಎಂದು ಕೇಳಿದೆನೋ ಎಂಬುದಾಗಿ ಯೆಹೋವನು ಅನ್ನುತ್ತಾನೆ’” ಎಂದು ಹೇಳು ಎಂದನು.ಲೆಕ್ಕವಿಲ್ಲದ್ದಷ್ಟು ತಾಮ್ರವನ್ನೂ, ಎಣಿಸಲಾರದಷ್ಟು ದೇವದಾರುಮರಗಳನ್ನೂ ಸಿದ್ಧಪಡಿಸಿದನು. ಚೀದೋನ್ಯರು ಮತ್ತು ತೂರ್ಯರೂ ಅವನಿಗೆ ದೇವದಾರುಮರಗಳನ್ನು ತಂದುಕೊಟ್ಟರು.2 ಪೂರ್ವಕಾಲವೃತ್ತಾಂತ5
ಅರಸನು ಯೆರೂಸಲೇಮಿನಲ್ಲಿ ಬೆಳ್ಳಿ ಬಂಗಾರವು ಹೇರಳವಾಗಿದ್ದು ಅವು ಕಲ್ಲಿನಂತೆಯೂ, ಹಾಗು ದೇವದಾರು ಮರಗಳು ತಗ್ಗಿನಲ್ಲಿರುವ ಅತ್ತಿಮರಗಳಂತೆ ಹೇರಳವಾಗಿರುವಂತೆ ಮಾಡಿದನು.ಇದಲ್ಲದೆ, ಸೊಲೊಮೋನನು ದೂತರ ಮುಖಾಂತರವಾಗಿ ತೂರಿನ ಅರಸನಾದ ಹೀರಾಮನಿಗೆ, “ನನ್ನ ತಂದೆಯಾದ ದಾವೀದನಿಗೆ ವಾಸಮಾಡುವುದಕ್ಕಾಗಿ ಅರಮನೆಯನ್ನು ಕಟ್ಟಿಸಲು ದೇವದಾರು ಮರಗಳನ್ನು ಕಳುಹಿಸಿ, ಅವನಿಗೋಸ್ಕರ ಹೇಗೆ ಸಹಾಯ ಮಾಡಿದೆಯೋ ಹಾಗೆಯೇ ನನಗೂ ಮಾಡು.ಲೆಬನೋನಿನಿಂದ ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸುಗಂಧದ ಮರಗಳನ್ನೂ ನನ್ನ ಬಳಿಗೆ ಕಳುಹಿಸಬೇಕು. ಲೆಬನೋನಿನ ಮರಗಳನ್ನು ಕಡಿಯುವುದರಲ್ಲಿ ನಿನ್ನ ಆಳುಗಳು ಸಮರ್ಥರೆಂದು ನನಗೆ ಗೊತ್ತಿದೆ. ನಿನ್ನ ಆಳುಗಳ ಜೊತೆಯಲ್ಲಿ ನನ್ನ ಆಳುಗಳೂ ಇರುವರು.ಅರಸನ ಕಾಲದಲ್ಲಿ ಯೆರೂಸಲೇಮಿನಲ್ಲಿ ಬೆಳ್ಳಿಯು ಕಲ್ಲಿನ ಹಾಗೆಯೂ, ದೇವದಾರು ಮರಗಳು ಇಳಿಜಾರು ಪ್ರದೇಶದಲ್ಲಿ ಬೆಳೆಯುವ ಅತ್ತಿ ಮರಗಳಂತೆ ಹೇರಳವಾಗಿದ್ದವು.ಆಗ ಇಸ್ರಾಯೇಲರ ಅರಸನಾದ ಯೋವಾಷನು ಯೆಹೂದ್ಯರ ಅರಸನಾದ ಅಮಚ್ಯನಿಗೆ, “ಲೆಬನೋನಿನ ಒಂದು ಮುಳ್ಳುಗಿಡವು, ಅಲ್ಲಿನ ದೇವದಾರು ಮರಕ್ಕೆ, ‘ನನ್ನ ಮಗನಿಗೆ ನಿನ್ನ ಮಗಳನ್ನು ಕೊಡು’ ಎಂದು ಹೇಳಿ ಕಳುಹಿಸಿತು. ತುಸು ಹೊತ್ತಾದ ಮೇಲೆ ಲೆಬನೋನಿನ ಒಂದು ಕಾಡುಮೃಗವು ಆ ಮಾರ್ಗವಾಗಿ ಹಾದು ಹೋಗುತ್ತಿರುವಾಗ, ಆ ಮುಳ್ಳುಗಿಡವನ್ನು ತುಳಿದು ಬಿಟ್ಟಿತು.ಎಜ್ರನು1
ಆದರೆ ಪರ್ಷಿಯ ರಾಜನಾದ ಕೋರೆಷನಿಂದ ಪಡೆದುಕೊಂಡ ಅಪ್ಪಣೆಯ ಮೇರೆಗೆ ಅವರು ಕಲ್ಲುಕುಟಿಗರಿಗೆ ಮತ್ತು ಬಡಗಿಗಳಿಗೆ ಹಣವನ್ನೂ, ಲೆಬನೋನಿನಿಂದ ಸಮುದ್ರಮಾರ್ಗವಾಗಿ ಯೊಪ್ಪಕ್ಕೆ ದೇವದಾರು ಮರಗಳನ್ನು ತರುತ್ತಿದ್ದ ಚೀದೋನ್ಯರಿಗೆ ಮತ್ತು ತೂರ್ಯರಿಗೆ ಅನ್ನಪಾನಗಳನ್ನೂ ಮತ್ತು ಎಣ್ಣೆಯನ್ನೂ ಕೊಟ್ಟಿದ್ದರು.ಯೋಬನು1
ತನ್ನ ಬಾಲವನ್ನು ದೇವದಾರುವಿನ ಮರದಂತೆ ಬಾಗಿಸುವುದು; ಅದರ ತೊಡೆಯ ನರಗಳು ಹೆಣೆದುಕೊಂಡಿವೆ.ಕೀರ್ತನೆಗಳು6
ಯೆಹೋವನ ಗರ್ಜನೆಗೆ ದೇವದಾರು ವೃಕ್ಷಗಳು ದಡಲ್ ಎಂದು ಮುರಿದು ಬೀಳುತ್ತವೆ; ಯೆಹೋವನು ಲೆಬನೋನ್ ಪರ್ವತದಲ್ಲಿನ ಮಹಾದೇವದಾರುಗಳನ್ನೂ ಮುರಿದುಬಿಡುತ್ತಾನೆ.ದುಷ್ಟನು ಭೀಕರನಾಗಿ ಸ್ವಸ್ಥಳದಲ್ಲಿ ಹಸಿರಾಗಿ ಬೆಳೆದ ಮರದಂತೆ ವಿಸ್ತರಿಸಿಕೊಂಡಿರುವುದನ್ನು ನೋಡಿದ್ದೆನು.ಅದರ ನೆರಳಿನಿಂದ ಗುಡ್ಡಗಳೆಲ್ಲಾ ಕವಿಯಲ್ಪಟ್ಟವು. ಅದರ ಕುಡಿಗಳು ದೇವದಾರುವೃಕ್ಷಗಳ ಮೇಲೆ ಹಬ್ಬಿ ಅವುಗಳನ್ನು ಮುಚ್ಚಿಬಿಟ್ಟವು.ನೀತಿವಂತರು ಖರ್ಜೂರದ ಮರದಂತೆ ಬೆಳೆಯುವರು; ಲೆಬನೋನಿನ ದೇವದಾರು ವೃಕ್ಷದ ಹಾಗೆ ವೃದ್ಧಿಯಾಗುವರು.ಯೆಹೋವನು ನೆಟ್ಟ ಮರಗಳಾದ ಲೆಬನೋನಿನ ದೇವದಾರು ವೃಕ್ಷಗಳಿಗೆ ಬೇಕಾದಷ್ಟು ಜಲವಿರುತ್ತದೆ.ಬೆಟ್ಟಗಳು, ಎಲ್ಲಾ ಗುಡ್ಡಗಳು, ಹಣ್ಣಿನ ಮರಗಳು, ಎಲ್ಲಾ ತುರಾಯಿ ಮರಗಳು,ಪರಮಗೀತೆ3
ನಮ್ಮ ಮನೆಯ ಛಾವಣಿ ತುರಾಯಿ ಮರಗಳೇ; ತೊಲೆಗಳು ದೇವದಾರು ವೃಕ್ಷಗಳೇ.ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲಿಟ್ಟ ಚಂದ್ರಕಾಂತ ಸ್ತಂಭಗಳು; ದೇವದಾರುಗಳಷ್ಟು ರಮಣೀಯವಾದ ಅವನ ಗಾಂಭೀರ್ಯವು ಲೆಬನೋನಿಗೆ ಸಮಾನ.ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.ಯೆಶಾಯನು6
ಎತ್ತರವಾಗಿ ಬೆಳೆದಿರುವ ಲೆಬನೋನಿನ ಎಲ್ಲಾ ದೇವದಾರು ವೃಕ್ಷಗಳ ಮತ್ತು ಬಾಷಾನಿನ ಎಲ್ಲಾ ಅಲ್ಲೋನ ಮರಗಳ ಮೇಲೆಯೂ,“ಇಟ್ಟಿಗೆಗಳು ಬಿದ್ದುಹೋದರೂ ಕೆತ್ತಿದ ಕಲ್ಲುಗಳಿಂದ ಕಟ್ಟುವೆವು. ಅತ್ತಿ ಮರಗಳು ಕಡಿಯಲ್ಪಟ್ಟರೂ ದೇವದಾರುಗಳನ್ನು ಹಾಕುವೆವು” ಎಂಬುದೇ.ಹೌದು, ತುರಾಯಿ ಮರಗಳೂ, ಲೆಬನೋನಿನ ದೇವದಾರು ವೃಕ್ಷಗಳೂ, ‘ನೀನು ಸುಮ್ಮನಿರುವುದರಿಂದ ನಮ್ಮನ್ನು ಕಡಿಯಲು ಯಾರೂ ಬರುವುದಿಲ್ಲ’ ಎಂದು ನಿನ್ನ ವಿಷಯವಾಗಿ ಉಲ್ಲಾಸಗೊಳ್ಳುತ್ತವೆ.ನೀನು ನಿನ್ನ ಸೇವಕರ ಮುಖಾಂತರವಾಗಿ ಕರ್ತನನ್ನು ನಿಂದಿಸಿ, ‘ನನ್ನ ರಥಸಮೂಹದೊಡನೆ ಪರ್ವತಶಿಖರಗಳನ್ನು ಹತ್ತಿದ್ದೇನೆ. ಲೆಬನೋನಿನ ದುರ್ಗಮಸ್ಥಳಗಳಿಗೆ ಹೋಗಿದ್ದೇನೆ; ಅದರ ಎತ್ತರವಾದ ದೇವದಾರು ವೃಕ್ಷಗಳನ್ನೂ, ಶ್ರೇಷ್ಠವಾದ ತುರಾಯಿ ಮರಗಳನ್ನೂ ಕಡಿದು ಬಿಟ್ಟಿದ್ದೇನೆ; ಅಲ್ಲಿನ ಬಹುದೂರದ ಶಿಖರವನ್ನೂ, ಉದ್ಯಾನವನಗಳನ್ನೂ ಪ್ರವೇಶಿಸಿದ್ದೇನೆ.ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು.ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು.ಯೆರೆಮೀಯನು4
ಆಯುಧ ಸನ್ನದ್ಧರಾದ ಸಂಹಾರಕರನ್ನು ನಿನ್ನ ವಿರುದ್ಧವಾಗಿ ಸಿದ್ಧಪಡಿಸುವೆನು; ಅವರು ನಿನ್ನ ಶ್ರೇಷ್ಠ ದೇವದಾರುಗಳನ್ನು ಕಡಿದು ಬೆಂಕಿಯಲ್ಲಿ ಹಾಕುವರು.ಆಹಾ, “ನಾನು ವಿಸ್ತಾರವಾದ ಅರಮನೆಯನ್ನೂ ವಿಶಾಲವಾದ ಮಹಡಿಗಳನ್ನೂ ಕಟ್ಟಿಸಿಕೊಳ್ಳುವೆನು” ಎಂದು ಹೇಳಿ, ಅಗಲಗಲವಾದ ಕಿಟಕಿಗಳನ್ನಿಡಿಸಿ, ಒಳಗೆ ಗೋಡೆಗೆಲ್ಲಾ ದೇವದಾರಿನ ಹಲಗೆಗಳನ್ನು ಹೊದಿಸಿ, ಕಿರಿಮಂಜಿಯ ಬಣ್ಣವನ್ನು ಬಳಿಸಿಕೊಳ್ಳುವವನ ಪಾಡನ್ನು ಏನು ಹೇಳಲಿ!ನೀನು ದೇವದಾರುವಿನ ಕೆಲಸದಲ್ಲಿ ಸ್ಪರ್ಧಿಸುವುದರಿಂದಲೇ ಆಳತಕ್ಕವನಾಗಿದ್ದೀಯೋ? ನಿನ್ನ ತಂದೆಯು ಎಷ್ಟೇ ಉಂಡು ಕುಡಿದರೂ ನೀತಿ ನ್ಯಾಯಗಳನ್ನಂತು ಕೈಕೊಳ್ಳುತ್ತಿದ್ದನು; ಆಗ ಅವನಿಗೆ ನೆಮ್ಮದಿಯಾಗಿತ್ತು.ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡು ಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವುದು!ಯೆಹೆಜ್ಕೇಲನು6
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ‘ಅಗಲವಾದ ಮತ್ತು ಉದ್ದವಾದ ರೆಕ್ಕೆಗಳಿಂದ ತುಂಬಿದ, ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತು ಹಾಕಿತು.ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನೇ ಎತ್ತರವಾದ ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ತೆಗೆದು ಅದನ್ನು ನೆಡುವೆನು; ತುಟ್ಟತುದಿಯ ಚಿಗುರುಗಳಲ್ಲಿ ಅತಿ ಕೋಮಲವಾದದ್ದನ್ನು ಚಿವುಟಿ ತಂದು, ಉನ್ನತೋನ್ನತವಾದ ಪರ್ವತದ ಮೇಲೆ ನೆಡುವೆನು.ನಾನು ಅದನ್ನು ಇಸ್ರಾಯೇಲಿನ ಉನ್ನತ ಪರ್ವತಾಗ್ರದಲ್ಲಿ ನೆಡಲು, ಅದು ಸೊಂಪಾದ ದೇವದಾರು ಮರವಾಗಿ ರೆಂಬೆಗಳನ್ನು ಹರಡಿ ಫಲಕೊಡುವುದು; ಅದರಲ್ಲಿ ಸಕಲವಿಧವಾದ ಪಕ್ಷಿಗಳು ವಾಸಿಸುತ್ತಾ ಅದರ ರೆಂಬೆಗಳ ನೆರಳನ್ನು ಆಶ್ರಯಿಸುವವು.ಸೆನೀರಿನ ತುರಾಯಿ ಮರದಿಂದ ನಿನ್ನ ಹಲಗೆಗಳನ್ನು ಮಾಡುವುದಕ್ಕೆ ಮತ್ತು ನಿನ್ನ ಸ್ತಂಭವನ್ನು ರಚಿಸುವುದಕ್ಕೆ ಲೆಬನೋನಿನಿಂದ ದೇವದಾರು ಮರವನ್ನು ತಂದರು.ಆಹಾ, ಅಸ್ಸೀರಿಯವು ಲೆಬನೋನಿನ ಸುಂದರವಾದ ಕೊಂಬೆಗಳುಳ್ಳ ದೇವದಾರು ಆಗಿದೆ; ಅದರ ನೆರಳು ದಟ್ಟವಾಗಿದೆ, ಅದರ ಎತ್ತರವು ಬಹಳ, ಅದರ ತುದಿಯು ದಟ್ಟವಾದ ಕೊಂಬೆಗಳ ಮಧ್ಯದಲ್ಲಿತ್ತು.ದೇವರ ಉದ್ಯಾನವನದಲ್ಲಿನ ದೇವದಾರುಗಳು ಅದನ್ನು ಮರೆಮಾಡಲಿಲ್ಲ; ತುರಾಯಿ ಮರಗಳು ಅದರ ಕೊಂಬೆಗಳಿಗೆ ಸಮವಾಗಲಿಲ್ಲ; ಆಲದ ಮರಗಳು ಅದರ ಕೊಂಬೆಗಳಷ್ಟು ದಪ್ಪವಾಗಿರಲಿಲ್ಲ; ದೇವರ ವನದಲ್ಲಿನ ಯಾವ ಮರವೂ ಅದರಷ್ಟು ರಮಣೀಯವಾಗಿರಲಿಲ್ಲ.ಆಮೋಸನು1
ಆಹಾ, ಅವರಿಗೆ ಎದುರಾಗಿ ನಿಂತ ಅಮೋರಿಯರನ್ನು ನಾನೇ ಧ್ವಂಸಮಾಡಿದೆನು, ಆ ಶತ್ರುವು ದೇವದಾರು ಮರದಷ್ಟು ಎತ್ತರವಾಗಿ, ಅಲ್ಲೋನ್ ಮರದ ಹಾಗೆ ಬಲಿಷ್ಠವಾಗಿಯೂ ಇದ್ದರು. ಆದರೂ ಮರದ ಮೇಲಿನ ಅದರ ಫಲವನ್ನು, ಕೆಳಗೆ ಅದರ ಬುಡವನ್ನು ನಾಶಪಡಿಸಿದೆನು.ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Plants and Trees in the Bible © United Bible Societies 2025, adapted from R. Koops, Each According to its Kind © 2012 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು