ವಿಶ್ವಕೋಶ › ಆಯುಧಗಳು ಮತ್ತು ಯುದ್ಧ
ಆಯುಧಗಳು ಮತ್ತು ಯುದ್ಧ
ಪಟ್ಟಣದ ಗೋಡೆಗಳು ಮತ್ತು ಮುತ್ತಿಗೆಗಳು
ಗೋಡೆಗಳು, ಬಾಗಿಲುಗಳು, ದಿಬ್ಬಗಳು, ಗೋಡೆಯೊಡೆಯುವ ಯಂತ್ರಗಳು ಮತ್ತು ಸುರಂಗಗಳು · ಲಾಕೀಷಿನ ಅಶ್ಶೂರ್ಯ ಮುತ್ತಿಗೆ, ಕ್ರಿ.ಪೂ. 701
ಹೆಚ್ಚಿನ ಊರುಗಳು ಬೆಟ್ಟಗಳ ಮೇಲೆ ನಿಂತಿದ್ದವು — ಗೋಪುರಗಳುಳ್ಳ ಗೋಡೆಗಳ ಹಿಂದೆ, ಮುಂದೆ ಕಂದಕ ಅಥವಾ ಕಡಿದಾದ ಇಳಿಜಾರು, ಮತ್ತು ಲೋಹದ ತಗಡು ಹೊದಿಸಿದ ಭಾರವಾದ ಕದಗಳಿರುವ ಹಲವು ಕೋಣೆಗಳ ಬಾಗಿಲು. ಸೊಲೊಮೋನನು ಮರುನಿರ್ಮಿಸಿದ ಹಾಚೋರ್, ಮೆಗಿದ್ದೋ ಮತ್ತು ಗೆಜೆರ್ ಪಟ್ಟಣಗಳಿಗೆ ಒಳಗೆ ಕೋಣೆಗಳಿರುವ ಎರಡು ಪದರದ “ಕೇಸ್ಮೇಟ್” ಗೋಡೆಗಳಿದ್ದವು — ಸಾಂಪ್ರದಾಯಿಕ ದಿನಾಂಕದ ಪ್ರಕಾರ, ಅದನ್ನು ಕೆಲವು ಪುರಾತತ್ವಜ್ಞರು ಒಪ್ಪುವುದಿಲ್ಲ. ದಾಳಿಕಾರರು ಏಣಿಗಳಿಂದ ಹತ್ತಬಹುದಿತ್ತು, ಸುರಂಗಗಳನ್ನು ತೋಡಬಹುದಿತ್ತು, ಅಥವಾ ಮಣ್ಣಿನ ದಿಬ್ಬವನ್ನು ಎಬ್ಬಿಸಿ ಗೋಡೆಯೊಡೆಯುವ ಯಂತ್ರವನ್ನು ಗೋಡೆಯವರೆಗೆ ಉರುಳಿಸಬಹುದಿತ್ತು, ಯೋವಾಬನು ಆಬೇಲ್ ಬೇತ್ಮಾಕಾದಲ್ಲಿ ಮಾಡಿದಂತೆ (2 ಸಮುವೇಲನು 20:15). ಅಥವಾ ಪಟ್ಟಣವನ್ನು ಸುತ್ತುವರಿದು ಹಸಿವಿನಿಂದ ಸೋಲಿಸುತ್ತಿದ್ದರು: ಸಮಾರ್ಯವು ಮೂರು ವರ್ಷ ತಡೆದುಕೊಂಡಿತು. ಆದ್ದರಿಂದ ಪಟ್ಟಣಗಳು ತಮ್ಮ ನೀರನ್ನು ಕಾಪಾಡಿಕೊಳ್ಳುತ್ತಿದ್ದವು — ಗೀಹೋನ್ ಬುಗ್ಗೆಯನ್ನು ಯೆರೂಸಲೇಮಿನೊಳಗೆ ತರಲು ಹಿಜ್ಕೀಯನು ಬಂಡೆಯಲ್ಲಿ ಸುಮಾರು 533 ಮೀಟರ್ ಸುರಂಗವನ್ನು ಕೊರೆಸಿದನು.
ಆ ಕಾಲದ ಅತ್ಯಂತ ಪ್ರಸಿದ್ಧ ಮುತ್ತಿಗೆ ಲಾಕೀಷಿನದು, ಕ್ರಿ.ಪೂ. 701ರಲ್ಲಿ ಅಶ್ಶೂರದ ಸನ್ಹೇರೀಬನು ಅದನ್ನು ವಶಪಡಿಸಿಕೊಂಡನು. ನಿನೆವೆಯಲ್ಲಿನ ಅವನ ಅರಮನೆಯ ಉಬ್ಬುಶಿಲ್ಪಗಳು, ಇಂದು ಬ್ರಿಟಿಷ್ ಮ್ಯೂಸಿಯಂನಲ್ಲಿರುವವು, ದಾಳಿ ಮಾಡುವ ಬಿಲ್ಲುಗಾರರನ್ನೂ ಗೋಡೆಯೊಡೆಯುವ ಯಂತ್ರಗಳನ್ನೂ, ಉರಿಯುವ ಕೊಳ್ಳಿಗಳನ್ನು ಎಸೆಯುವ ರಕ್ಷಕರನ್ನೂ, ಗಂಟುಮೂಟೆಗಳೊಂದಿಗೆ ಬಾಗಿಲಿನಿಂದ ಹೊರಡುವ ಜನರನ್ನೂ ತೋರಿಸುತ್ತವೆ. ಆ ಸ್ಥಳದಲ್ಲಿ ಉತ್ಖನನಕಾರರು ಕಲ್ಲುಗಳನ್ನು ರಾಶಿ ಹಾಕಿದ ಅಶ್ಶೂರ್ಯ ಮುತ್ತಿಗೆಯ ದಿಬ್ಬವನ್ನೂ, ಒಳಗೆ ಪ್ರತಿದಿಬ್ಬವನ್ನೂ, ನೂರಾರು ಬಾಣದ ತುದಿಗಳನ್ನೂ ಕವಣೆಯಕಲ್ಲುಗಳನ್ನೂ ಕಂಡುಕೊಂಡರು.
ಮುಖ್ಯ ವಚನಗಳು
ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.ಆಗ ಸಮಾರ್ಯ ಪಟ್ಟಣದಲ್ಲಿ ಘೋರವಾದ ಬರವಿದ್ದಿತು. ಮುತ್ತಿಗೆಯ ದೆಸೆಯಿಂದ ಅದು ಮತ್ತಷ್ಟು ಘೋರವಾಗಿದ್ದುದರಿಂದ ಒಂದು ಕತ್ತೆಯ ತಲೆಗೆ ಎಂಭತ್ತು ರೂಪಾಯಿಗಳೂ, ಅರ್ಧ ಸೇರು ಪಾರಿವಾಳದ ಮಲವು ಐದು ರೂಪಾಯಿಗಳಿಗೂ ಮಾರಲ್ಪಟ್ಟವು.ಅರಸನಾದ ಹಿಜ್ಕೀಯನ ಆಳ್ವಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಶ್ಶೂರದ ಅರಸನಾದ ಸನ್ಹೇರೀಬನು ಬಂದು ಯೆಹೂದ ಪ್ರಾಂತ್ಯದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. ಆಗ ಯೆಹೂದ್ಯರ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಶ್ಶೂರದ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನಾನು ಅಪರಾಧಿ; ನೀನು ನನ್ನನ್ನು ಬಿಟ್ಟು ಹೋಗು. ನೀನು ನನಗೆ ವಿಧಿಸುವಷ್ಟು ದಂಡವನ್ನು ಕೊಡುತ್ತೇನೆ” ಎಂದು ಹೇಳಿ ಕಳುಹಿಸಿದನು. ಅಶ್ಶೂರದ ಅರಸನು ಮುನ್ನೂರು ತಲಾಂತು ಬೆಳ್ಳಿಯನ್ನೂ, ಮೂವತ್ತು ತಲಾಂತು ಬಂಗಾರವನ್ನೂ ಕೊಡಬೇಕೆಂದು ಆಜ್ಞಾಪಿಸಿದನು.ಇದಾದ ಮೇಲೆ, ಸರ್ವಸೇನೆಯೊಡನೆ ಲಾಕೀಷಿನ ಎದುರಿನಲ್ಲಿ ಪಾಳೆಯಮಾಡಿಕೊಂಡಿದ್ದ ಅಶ್ಶೂರದ ಅರಸನಾದ ಸನ್ಹೇರೀಬನು ತನ್ನ ಸೇವಕರನ್ನು ಯೆರೂಸಲೇಮಿಗೆ ಕಳುಹಿಸಿದನು. ಅವರ ಮುಖಾಂತರ ಯೆಹೂದದ ಅರಸನಾದ ಹಿಜ್ಕೀಯನಿಗೂ ಯೆರೂಸಲೇಮಿನಲ್ಲಿದ್ದ ಎಲ್ಲಾ ಯೆಹೂದ್ಯರಿಗೂ ಹೀಗೆ ಹೇಳಿ ಕಳುಹಿಸಿದನು,ಮೇಲಣ ಗೀಹೋನ್ ಎಂಬ ಬುಗ್ಗೆಗೆ ಅಣೆಕಟ್ಟು ಕಟ್ಟಿಸಿ ಅದರ ನೀರು ನೆಟ್ಟಗೆ ದಾವೀದನಗರದ ಪಡುವಣ ತಗ್ಗಿಗೆ ಹರಿಯುವಂತೆ ಮಾಡಿದವನು ಹಿಜ್ಕೀಯನೇ. ಅವನು ತನ್ನ ಎಲ್ಲಾ ಕಾರ್ಯಗಳಲ್ಲಿಯೂ ಕೃತಾರ್ಥನಾದನು.ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು.ಇದನ್ನು ಹೆಸರಿಸುವ ಎಲ್ಲಾ ವಚನಗಳು (119)
ಪಠ್ಯದಲ್ಲಿ ಇದರ ಹೀಬ್ರೂ, ಅರಾಮಿಕ್ ಅಥವಾ ಗ್ರೀಕ್ ಪದ ಬರುವ ಸ್ಥಳಗಳು.
ವಿಮೋಚನಕಾಂಡ2
ಇಸ್ರಾಯೇಲರು ಸಮುದ್ರದ ಮಧ್ಯದಲ್ಲಿ ಒಣನೆಲದಲ್ಲಿ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತುಕೊಂಡಿತು.ಇಸ್ರಾಯೇಲರಾದರೋ, ಸಮುದ್ರದೊಳಗೆ ಒಣನೆಲದಲ್ಲೇ ನಡೆದುಹೋದರು. ನೀರು ಅವರ ಎಡಗಡೆ ಮತ್ತು ಬಲಗಡೆಗಳಲ್ಲಿ ಗೋಡೆಯಂತೆ ನಿಂತಿತ್ತು.ಯಾಜಕಕಾಂಡ3
“‘ಯಾವನಾದರೂ ಪೌಳಿ ಗೋಡೆಯುಳ್ಳ ಪಟ್ಟಣದಲ್ಲಿರುವ ಮನೆಯನ್ನು ಮಾರಿದರೆ ಅದನ್ನು ಮಾರಿದ ದಿನ ಮೊದಲುಗೊಂಡು ಒಂದು ವರ್ಷ ಪೂರ್ತಿಯಾಗುವುದರೊಳಗೆ ಈಡುಕೊಟ್ಟು ಬಿಡಿಸಬಹುದು; ಪೂರಾ ಒಂದು ವರ್ಷದ ತನಕ ಅದನ್ನು ಬಿಡಿಸುವ ಅಧಿಕಾರವು ಅವನಿಗಿರುವುದು.ಪೌಳಿಗೋಡೆಯುಳ್ಳ ಪಟ್ಟಣದಲ್ಲಿರುವ ಆ ಮನೆ ಒಂದು ವರ್ಷದೊಳಗಾಗಿ ಬಿಡಿಸಿಕೊಳ್ಳಲು ಸಾಧ್ಯವಾಗದೆ ಹೋದರೆ, ಅದು ಜೂಬಿಲಿ ಸಂವತ್ಸರದಲ್ಲಿ ಬಿಡುಗಡೆಯಾಗಿ ಮಾರಿದವನಿಗೆ ಮತ್ತು ಅವನ ಸಂತತಿಯವರಿಗೂ ಶಾಶ್ವತವಾಗಿ ನಿಲ್ಲುವುದು.ಪೌಳಿಗೋಡೆಯಿಲ್ಲದ ಊರುಗಳಲ್ಲಿರುವ ಮನೆಗಳು ಬಯಲಿನ ಹೊಲಗಳಂತೆ ಎಣಿಸಲ್ಪಡಬೇಕು; ಅವುಗಳನ್ನು ಬಿಡಿಸುವ ಅಧಿಕಾರವಿದ್ದು, ಜೂಬಿಲಿ ಸಂವತ್ಸರದಲ್ಲಿ ಅವು ಬಿಡುಗಡೆಯಾಗುವವು.ಅರಣ್ಯಕಾಂಡ2
ಕತ್ತೆ ಯೆಹೋವನ ದೂತನನ್ನು ಪುನಃ ನೋಡಿ ಗೋಡೆಗೆ ಒತ್ತಿಕೊಂಡು ಬಿಳಾಮನ ಕಾಲನ್ನು ಆ ಗೋಡೆಗೆ ಇರುಕಿಸಲು ಅವನು ಅದನ್ನು ತಿರುಗಿ ಹೊಡೆದನು.ನೀವು ಲೇವಿಯರಿಗೆ ಕೊಡುವ ಪಟ್ಟಣಗಳು ಸುತ್ತಲಿನ ಭೂಮಿಯ ಪ್ರತಿಯೊಂದು ಪಟ್ಟಣಗಳ ಗೋಡೆಯಿಂದ ನಾಲ್ಕು ಕಡೆಯಲ್ಲಿಯೂ ಸಾವಿರ ಮೊಳದಷ್ಟು ವಿಸ್ತರಿಸಿಕೊಂಡಿರಬೇಕು.ಧರ್ಮೋಪದೇಶಕಾಂಡ3
ಅವುಗಳೆಲ್ಲಾ ಎತ್ತರವಾದ ಪೌಳಿಗೋಡೆಗಳಿಂದಲೂ, ಕದಗಳಿಂದಲೂ, ಅಗುಳಿಗಳಿಂದಲೂ ಭದ್ರಮಾಡಲ್ಪಟ್ಟ ಪಟ್ಟಣಗಳೇ. ಅವುಗಳಲ್ಲದೆ ಹಳ್ಳಿಪಳ್ಳಿಗಳು ಬಹಳ ಇದ್ದವು.ಮರಗಳು ತಿನ್ನತಕ್ಕ ಹಣ್ಣು ಕೊಡುವುದಿಲ್ಲವೆಂದು ನೀವು ತಿಳಿದಾಗ ಮಾತ್ರ ಅದನ್ನು ಕಡಿದು ನಾಶಮಾಡಬಹುದು. ಅವುಗಳಿಂದ ಯುದ್ಧಸಲಕರಣೆಗಳನ್ನು ಮಾಡಿಕೊಂಡು ನಿಮಗೆ ವಿರುದ್ಧವಾಗಿರುವ ಆ ಪಟ್ಟಣವು ನಾಶವಾಗುವ ತನಕ ಅದಕ್ಕೆ ಮುತ್ತಿಗೆ ಹಾಕಬೇಕು.ನಿಮ್ಮ ದೇವರಾದ ಯೆಹೋವನು ನಿಮಗೆ ಕೊಟ್ಟಿರುವ ದೇಶದ ಎಲ್ಲಾ ಪಟ್ಟಣಗಳಿಗೂ ಅವರು ಮುತ್ತಿಗೆಹಾಕಿ, ನೀವು ನಂಬಿಕೊಂಡಿದ್ದ ಎತ್ತರವಾದ ಕೊತ್ತಲುಗಳುಳ್ಳ ಗೋಡೆಗಳನ್ನು ಕೆಡವಿಬಿಡುವರು.ಯೆಹೋಶುವನು3
ಅವಳ ಮನೆಯು ಊರಗೋಡೆಯ ಮೇಲಿದ್ದುದರಿಂದ ಅವರನ್ನು ಹಗ್ಗದ ಮೂಲಕ ಕಿಟಿಕಿಯಿಂದ ಕೆಳಕ್ಕೆ ಇಳಿಸಿ ಅವರಿಗೆಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಗಟ್ಟಿಯಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವುದು; ಪ್ರತಿಯೊಬ್ಬನೂ ನೆಟ್ಟಗೆ ಒಳಗೆ ನುಗ್ಗಬಹುದು” ಎಂದು ಹೇಳಿದನು.ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಗಟ್ಟಿಯಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ವಶವಾಯಿತು.1 ಸಮುವೇಲನು2
ಅವನ ಆಯುಧಗಳನ್ನು ಅಷ್ಟೋರೆತ್ ದೇವತೆಯ ಗುಡಿಯಲ್ಲಿಟ್ಟರು. ಅವನ ಶವವನ್ನು ಬೇತ್ಷೆಯಾನಿನ ಕೋಟೆ ಗೋಡೆಗೆ ನೇತುಹಾಕಿದರು.ಅವರಲ್ಲಿದ್ದ ಶೂರರೆಲ್ಲರೂ ಹೊರಟು, ರಾತ್ರಿಯೆಲ್ಲಾ ನಡೆದುಹೋಗಿ, ಸೌಲನ ಮತ್ತು ಅವನ ಮಕ್ಕಳ ಶವಗಳನ್ನು ಬೇತ್ಷೆಯಾನಿನ ಗೋಡೆಯಿಂದ ಇಳಿಸಿ, ಯಾಬೇಷಿಗೆ ತೆಗೆದುಕೊಂಡು ಬಂದು ಅಲ್ಲಿ ಅವುಗಳನ್ನು ಸುಟ್ಟುಬಿಟ್ಟರು.2 ಸಮುವೇಲನು7
‘ನೀವು ಯುದ್ಧ ಮಾಡುವುದಕ್ಕಾಗಿ ಪಟ್ಟಣದ ಸಮೀಪಕ್ಕೆ ಹೋದದ್ದೇಕೆ? ಶತ್ರುಗಳು ಊರಗೋಡೆಯ ಮೇಲಣಿಂದ ಬಾಣಗಳನ್ನು ಎಸೆಯುವರೆಂದು ನಿಮಗೆ ತಿಳಿದಿರಲಿಲ್ಲವೋ?ಯೆರುಬ್ಬೇಷೆತನ ಮಗನಾದ ಅಬೀಮೆಲೇಕನನ್ನು ಕೊಂದವರು ಯಾರು ಎಂದು ನಿಮಗೆ ಗೊತ್ತಿಲ್ಲವೋ? ತೇಬೇಚಿನಲ್ಲಿ ಒಬ್ಬ ಹೆಂಗಸು ಗೋಡೆಯ ಮೇಲಿನಿಂದ ಒಂದು ಬೀಸುವ ಕಲ್ಲನ್ನು ಅವನ ಮೇಲೆ ಎತ್ತಿ ಹಾಕಿ ಅವನನ್ನು ಕೊಂದಳಲ್ಲವೇ. ಹೀಗಿರುವುದರಿಂದ ನೀವು ಗೋಡೆಯ ಸಮೀಪಕ್ಕೆ ಹೋದದ್ದೇಕೆ?’ ಎಂದು ಕೇಳಿದರೆ ನೀನು, ಹಿತ್ತಿಯನಾದ ನಿನ್ನ ಸೇವಕ ಊರೀಯನು ಮೃತನಾದನೆಂದು ಹೇಳು” ಎಂಬುದಾಗಿ ಆಜ್ಞಾಪಿಸಿ ಅವನನ್ನು ಕಳುಹಿಸಿದನು.ಆಗ ಬಿಲ್ಲುಗಾರರು ಗೋಡೆಯ ಮೇಲಿನಿಂದ ನಿನ್ನ ಸೇವಕರ ಮೇಲೆ ಬಾಣಗಳನ್ನು ಎಸೆದದ್ದರಿಂದ ಅವರಲ್ಲಿ ಕೆಲವರು ಸತ್ತರು. ಹಿತ್ತಿಯನಾದ ನಿನ್ನ ಸೇವಕ ಊರೀಯನೂ ಸತ್ತನು” ಎಂದನು.ದಾವೀದನು ಒಳಗಣ ಮತ್ತು ಹೊರಗಣ ಬಾಗಿಲುಗಳ ಮಧ್ಯದಲ್ಲಿ ಕುಳಿತುಕೊಂಡಿದ್ದನು. ಅಷ್ಟರಲ್ಲಿ ಕಾವಲುಗಾರರು ಗೋಪುರದ ಮಾಳಿಗೆಯನ್ನು ಹತ್ತಿ ಪ್ರಾಕಾರದ ಗೋಡೆಯ ಬಳಿಯಲ್ಲಿ ನಿಂತು ನೋಡಲು ಒಬ್ಬಂಟಿಗನಾಗಿ ಬರುವ ಒಬ್ಬ ಮನುಷ್ಯನನ್ನು ಕಂಡರು.ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,ನಿನ್ನ ಬಲದಿಂದ ನಾನು ದಂಡಿನ ಮೇಲೆ ಬೀಳುವೆನು. ನನ್ನ ದೇವರ ಸಹಾಯದಿಂದ ಪ್ರಾಕಾರಗಳನ್ನು ಹಾರುವೆನು.1 ಅರಸುಗಳು1
ಇದಲ್ಲದೆ ಆತನು ಈಜೆಬೆಲಳನ್ನು ಕುರಿತು, ‘ನಾಯಿಗಳು ಇಜ್ರೇಲ್ ಪಟ್ಟಣದ ಗೋಡೆಯ ಬಳಿಯಲ್ಲಿ ಆಕೆಯ ಶವವನ್ನು ತಿನ್ನುವವು.2 ಅರಸುಗಳು9
ಆಗ ಅವನು ತನಗೆ ಬದಲಾಗಿ ಅರಸನಾಗತಕ್ಕ ತನ್ನ ಚೊಚ್ಚಲಮಗನನ್ನು ಹಿಡಿದು ವಧಿಸಿ ಗೋಡೆಯ ಮೇಲೆ ಸರ್ವಾಂಗಹೋಮ ಮಾಡಿದನು. ಇದರಿಂದ ಮೋವಾಬ್ಯರಿಗೆ ಇಸ್ರಾಯೇಲರ ಮೇಲೆ ಕೋಪೋದ್ರೇಕ ಉಂಟಾಗಲು ಅವರು ಅವನನ್ನು ಬಿಟ್ಟು ತಮ್ಮ ದೇಶಕ್ಕೆ ಹೊರಟುಹೋದರು.ಒಂದು ದಿನ ಇಸ್ರಾಯೇಲರ ಅರಸನು ಪೌಳಿಗೋಡೆಯ ಮೇಲೆ ಹಾದುಹೋಗುತ್ತಿರುವಾಗ, ಒಬ್ಬ ಸ್ತ್ರೀಯು, “ಅರಸನೇ, ನನ್ನ ಒಡೆಯನೇ, ನನ್ನನ್ನು ರಕ್ಷಿಸು” ಎಂದು ಮೊರೆಯಿಟ್ಟಳು.ಗೋಡೆಯ ಮೇಲೆ ಹೋಗುತ್ತಿದ್ದ ಅರಸನು ಆ ಸ್ತ್ರೀಯ ಮಾತನ್ನು ಕೇಳಿದೊಡನೆ ತನ್ನ ಬಟ್ಟೆಗಳನ್ನು ಹರಿದುಕೊಂಡನು. ಆಗ ಅವನ ಮೈ ಮೇಲೆ ಗೋಣಿತಟ್ಟು ಇರುವುದು ಜನರಿಗೆ ಕಂಡಿತು.ಇಸ್ರಾಯೇಲರ ಅರಸನಾದ ಯೋವಾಷನೂ, ಅಹಜ್ಯನ ಮೊಮ್ಮಗನೂ, ಯೆಹೋವಾಷನ ಮಗನೂ ಯೆಹೂದದ ಅರಸನೂ ಆದ ಅಮಚ್ಯನನ್ನು ಇಸ್ರಾಯೇಲರ ಅರಸನಾದ ಯೆಹೋವಾಷನು ಬೇತ್ಷೆಮೆಷಿನಲ್ಲಿ ಹಿಡಿದು ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮ್ ಬಾಗಿಲಿನಿಂದ ಮೂಲೆಯ ಬಾಗಿಲಿನವರೆಗೂ ಇದ್ದ ಯೆರೂಸಲೇಮಿನ ನಾನೂರು ಮೊಳ ಗೋಡೆಯನ್ನು ಕೆಡವಿ ಬಿಟ್ಟನು.ಆಗ ಹಿಲ್ಕೀಯನ ಮಗನಾದ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವ ಯೆಹೂದ್ಯರಿಗೂ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು, ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಪೌಳಿಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನಿಮ್ಮೊಡನೆ ಇದ್ದರೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.ಯೆಹೋವನು ಅಶ್ಶೂರದ ಅರಸನ ವಿಷಯವಾಗಿ, “ನನ್ನ ಮಾತನ್ನು ಕೇಳು ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ. ಅದಕ್ಕೆ ಬಾಣವನ್ನೆಸೆಯುವುದಿಲ್ಲ. ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ. ಅದನ್ನು ಕೆಡವಿಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಸೃಷ್ಟಿಸುವುದಿಲ್ಲ.ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.ಪಟ್ಟಣಕ್ಕೆ ಮುತ್ತಿಗೆ ಹಾಕಿದ್ದ ಕಸ್ದೀಯರು ಅದೇ ವರ್ಷದ ನಾಲ್ಕನೆಯ ತಿಂಗಳಿನ ಒಂಭತ್ತನೆಯ ದಿನ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಅರಸನೂ ಅವನ ಎಲ್ಲಾ ಸೈನಿಕರೂ ಅದೇ ರಾತ್ರಿಯಲ್ಲಿ ಅರಸನ ತೋಟದ ಗೋಡೆಯ ಬಳಿಯಲ್ಲಿರುವ ಬಾಗಿಲಿನಿಂದ ಓಡಿಹೋದರು. ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು. ಅರಸನು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಓಡಿಹೋದನು.2 ಪೂರ್ವಕಾಲವೃತ್ತಾಂತ10
ಇದಲ್ಲದೆ ಮೇಲಿನ ಮತ್ತು ಕೆಳಗಿನ ಬೇತ್ಹೋರೋನ್ ಎಂಬ ಪಟ್ಟಣಗಳಿಗೆ ಪೌಳಿಗೋಡೆ, ಬಾಗಿಲು, ಅಗುಳಿ ಇವುಗಳನ್ನು ಸಿದ್ಧಪಡಿಸಿ ಕೋಟೆಗಳನ್ನಾಗಿ ಮಾಡಿಕೊಂಡನು.ಇವನು ಯೆಹೂದ್ಯರಿಗೆ, “ನಾವು ನಮ್ಮ ದೇವರಾದ ಯೆಹೋವನನ್ನು ಆಶ್ರಯಿಸಿಕೊಂಡ ಕಾರಣ ಆತನ ಅನುಗ್ರಹದಿಂದ ಸುತ್ತಣ ವೈರಿಗಳ ಭಯ ತಪ್ಪಿ ದೇಶವು ಇನ್ನೂ ನಿರಾತಂಕವಾಗಿರುತ್ತದೆ. ಆದುದರಿಂದ ನಾವು ಪಟ್ಟಣಗಳನ್ನು ಕಟ್ಟಿ, ಅವುಗಳನ್ನು ಸುತ್ತಣ ಗೋಡೆ, ಗೋಪುರ, ಬುರುಜು ಬಾಗಿಲು, ಅಗುಳಿ ಇವುಗಳಿಂದ ಭದ್ರಪಡಿಸೋಣ” ಎನ್ನಲಾಗಿ ಅವರು ಅವುಗಳನ್ನು ಚೆನ್ನಾಗಿ ಕಟ್ಟಿ ಮುಗಿಸಿದರು.ಇಸ್ರಾಯೇಲರ ಅರಸನಾದ ಯೋವಾಷನು, ಯೆಹೋವಾಹಾಜನ ಮೊಮ್ಮಗನೂ, ಯೆಹೋವಾಷನ ಮಗನೂ, ಯೆಹೂದದ ಅರಸನೂ, ಆದ ಅಮಚ್ಯನನ್ನು ಬೇತ್ಷೆಮೆಷಿನಲ್ಲಿ ಸೆರೆ ಹಿಡಿದನು. ಅವನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದು, ಎಫ್ರಾಯೀಮಿನ ಮುಂಬಾಗಿಲಿಗೂ, ಮೂಲೆಯ ಬಾಗಿಲಿಗೂ ಮಧ್ಯದಲ್ಲಿದ್ದ ಯೆರೂಸಲೇಮಿನ ಗೋಡೆಯನ್ನು ನಾನೂರು ಮೊಳದಷ್ಟು ಕೆಡವಿಹಾಕಿದ್ದಲ್ಲದೆ,ಅವನು ಫಿಲಿಷ್ಟಿಯರ ಮೇಲೆ ಯುದ್ಧಕ್ಕಾಗಿ ಹೊರಟು ಗತ್ ಊರು, ಯಬ್ನೆ, ಅಷ್ಡೋದ್ ಎಂಬ ಪಟ್ಟಣಗಳ ಗೋಡೆಗಳನ್ನು ಕೆಡವಿಬಿಟ್ಟು ಅಷ್ಡೋದಿನ ಮತ್ತು ಫಿಲಿಷ್ಟಿಯರ ಪ್ರಾಂತ್ಯಗಳಲ್ಲಿ ಪಟ್ಟಣಗಳನ್ನು ಕಟ್ಟಿಸಿದನು.ಇದಲ್ಲದೆ, ಅವನು ಬಾಣಗಳನ್ನೂ, ದೊಡ್ಡ ಕಲ್ಲುಗಳನ್ನು ಬಳಸುವುದಕ್ಕಾಗಿ, ತಜ್ಞರ ಆಜ್ಞೆಯ ಮೇರೆಗೆ ಯಂತ್ರಗಳನ್ನೂ ಮಾಡಿಸಿ, ಅವುಗಳನ್ನು ಯೆರೂಸಲೇಮಿನ ಗೋಪುರಗಳ ಮೇಲೆಯೂ, ಕೋಟೆಕೊತ್ತಲಗಳನ್ನು ಮೇಲೆಯೂ ಇಡಿಸಿದ್ದನು. ಅವನು ಬಲಿಷ್ಠನಾಗುವ ಹಾಗೆ ದೇವರ ಅತಿಶಯವಾದ ಸಹಾಯವು ಆಶ್ಚರ್ಯವಾದ ರೀತಿಯಲ್ಲಿ ಅವನಿಗೆ ದೊರೆಯುತ್ತಿದ್ದುದರಿಂದ; ಅವನ ಕೀರ್ತಿಯೂ ಬಹು ದೂರದ ಮೇರೆಯವರೆಗೂ ಹಬ್ಬಿತು.ಯೆಹೋವನ ಆಲಯಕ್ಕೆ ಮೇಲಣ ಹೆಬ್ಬಾಗಿಲನ್ನು ಇಡಿಸಿ, ಓಫೇಲ್ ಗೋಡೆಯ ಹೆಚ್ಚಿನ ಭಾಗವನ್ನು ಕಟ್ಟಿಸಿದವನು ಇವನೇ.ಇದರಿಂದ ಅರಸನು ಧ್ಯೆರ್ಯಗೊಂಡು, ಅಲ್ಲಲ್ಲಿ ಬಿದ್ದುಹೋಗಿದ್ದ ಪೌಳಿಗೋಡೆಯನ್ನು ಜೀರ್ಣೋದ್ಧಾರ ಮಾಡಿಸಿ, ಅದರ ಮೇಲೆ ಗೋಪುರಗಳನ್ನೂ, ಹೊರಗೆ ಇನ್ನೊಂದು ಗೋಡೆಯನ್ನೂ ಕಟ್ಟಿಸಿದನು. ದಾವೀದನಗರದ ಮಿಲ್ಲೋ ಕೋಟೆಯನ್ನು ಭದ್ರಪಡಿಸಿದಲ್ಲದೆ. ಅನೇಕ ಆಯುಧಗಳನ್ನೂ, ಗುರಾಣಿಗಳನ್ನೂ ಮಾಡಿಸಿದನು.ಯೆರೂಸಲೇಮಿಗೆ ಬಂದ ಆ ಅಶ್ಶೂರ್ಯರು ಗೋಡೆಯ ಮೇಲಿದ್ದ ಜನರನ್ನು ಬೆದರಿಸಿ, ದಿಗ್ಭ್ರಮೆಗೊಳಿಸಿ ಪಟ್ಟಣವನ್ನು ಸ್ವಾಧೀನಮಾಡಿಕೊಳ್ಳುವುದಕ್ಕಾಗಿ ಗಟ್ಟಿಯಾಗಿ ಕೂಗುತ್ತಾ ಅವರೊಡನೆ ಯೆಹೂದ್ಯರ ಭಾಷೆಯಲ್ಲಿ ಅವರಿಗೆಇದಾದ ಮೇಲೆ ಅವನು ಗೀಹೋನ್ ಬುಗ್ಗೆಯ ಪಡುವಣ ಕಡೆಯಿಂದ ಮೀನುಬಾಗಿಲಿನ ಮಾರ್ಗದವರೆಗಿರುವ ತಗ್ಗಿನಲ್ಲಿ ಓಫೆಲ್ ಗುಡ್ಡದ ಸುತ್ತಲೂ ದಾವೀದನಗರದ ಹೊರಗಿನ ಗೋಡೆಯನ್ನು ಇನ್ನೂ ಎತ್ತರವಾಗಿ ಕಟ್ಟಿಸಿ, ಯೆಹೂದ ದೇಶದ ಕೋಟೆಕೊತ್ತಲುಗಳುಳ್ಳ ಎಲ್ಲಾ ಪಟ್ಟಣಗಳಲ್ಲಿ ಸೇನಾಧಿಪತಿಗಳನ್ನಿರಿಸಿದನು.ಅವನ ಜನರು ಯೆರೂಸಲೇಮಿನ ಪೌಳಿಗೋಡೆಗಳನ್ನು ಕೆಡವಿದರು. ಅದರ ಎಲ್ಲಾ ರಾಜಮಂದಿರಗಳನ್ನೂ, ದೇವಾಲಯವನ್ನೂ ಸುಟ್ಟು ನೆಲಸಮ ಮಾಡಿ; ಅಮೂಲ್ಯವಾದ ವಸ್ತುಗಳನ್ನು ನಾಶಮಾಡಿದರು.ಎಜ್ರನು3
ನಿನ್ನ ಸನ್ನಿಧಿಯಿಂದ ನಮ್ಮ ಬಳಿಗೆ ಬಂದ ಯೆಹೂದ್ಯರು ಯೆರೂಸಲೇಮನ್ನು ಸೇರಿ ರಾಜಕಂಟಕವಾದ ಆ ಕೆಟ್ಟ ಪಟ್ಟಣವನ್ನೂ, ಅದರ ಪೌಳಿಗೋಡೆಯನ್ನೂ ಪುನಃ ಕಟ್ಟುವುದಕ್ಕೆ ಪ್ರಾರಂಭಿಸಿ ಪೌಳಿಗೋಡೆಯ ಅಸ್ತಿವಾರವನ್ನು ಜೀರ್ಣೋದ್ಧಾರಮಾಡಿದ್ದಾರೆ ಎಂಬುದಾಗಿ ನಾವು ತಮಗೆ ಅರಿಕೆಮಾಡಿಕೊಳ್ಳುತ್ತೇವೆ.ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಕಟ್ಟುವುದು ಮುಕ್ತಾಯಗೊಂಡರೆ ಅವರು ಕಪ್ಪ, ತೆರಿಗೆ ಮತ್ತು ಸುಂಕಗಳನ್ನು ಪಾವತಿಸಲಿಕ್ಕಿಲ್ಲ ಮತ್ತು ಕಡೆಯಲ್ಲಿ ಇದರಿಂದ ಅರಸರಿಗೆ ನಷ್ಟವುಂಟಾಗುವುದೆಂದು ತಮಗೆ ತಿಳಿದಿರಲಿ.ಆ ಪಟ್ಟಣವನ್ನೂ ಅದರ ಗೋಡೆಗಳನ್ನೂ ಪುನಃ ಕಟ್ಟುವುದಾದರೆ ತಮಗೆ ಹೊಳೆಯ ಈಚೆಯಲ್ಲಿ ಒಂದು ಅಂಗುಲವೂ ಉಳಿಯದು ಎಂಬುದಾಗಿ ಅರಸರಿಗೆ ಅರಿಕೆಮಾಡಿಕೊಳ್ಳುತ್ತೇವೆ ಎಂಬುದೇ.”ಯೋಬನು1
ಆತನ ದಂಡುಗಳು ಒಟ್ಟಿಗೆ ಮುಂದುವರೆದು ನನ್ನ ವಿರುದ್ಧವಾಗಿ ದಿಬ್ಬಹಾಕಿ, ನನ್ನ ಗುಡಾರದ ಸುತ್ತಲೂ ಇಳಿದಿವೆ.ಕೀರ್ತನೆಗಳು5
ನಿನ್ನ ಬಲದಿಂದ ದಂಡಿನ ಮೇಲೆ ಬೀಳುವೆನು; ನನ್ನ ದೇವರ ಸಹಾಯದಿಂದ ಗೋಡೆಯನ್ನು ಹಾರುವೆನು.ಅದರ ಪ್ರಾಕಾರಗಳನ್ನು ಚೆನ್ನಾಗಿ ನೋಡಿರಿ; ಅದರ ಕೊತ್ತಲುಗಳನ್ನು ಸೂಕ್ಷ್ಮವಾಗಿ ಗಮನಿಸಿರಿ.ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇಮಿನ ಪೌಳಿಗೋಡೆಯನ್ನು ಕಟ್ಟಿಸು.ಅವೇ ಅದರ ಪೌಳಿಗೋಡೆಗಳ ಮೇಲೆ ಹಗಲಿರುಳು ಸುತ್ತುತ್ತಿರುವ ಕಾವಲುಗಾರರು; ಊರೊಳಗೆ ಕೇಡು, ತೊಂದರೆಗಳು ಪ್ರಬಲವಾಗಿವೆ.ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.”ಜ್ಞಾನೋಕ್ತಿಗಳು1
ಆತ್ಮವನ್ನು ಸ್ವಾಧೀನಮಾಡಿಕೊಳ್ಳದವನು ಗೋಡೆ ಬಿದ್ದ ಹಾಳೂರಿಗೆ ಸಮಾನ.ಪ್ರಸಂಗಿ1
ಇಗೋ, ಒಂದು ಚಿಕ್ಕ ಪಟ್ಟಣ. ಅದರಲ್ಲಿ ಸ್ವಲ್ಪ ಜನರು ಇದ್ದರು. ಒಬ್ಬ ದೊಡ್ಡ ಅರಸನು ಅದಕ್ಕೆ ವಿರುದ್ಧವಾಗಿ ಬಂದು ಮುತ್ತಿಗೆ ಹಾಕಿ ಅಲ್ಲಿ ದೊಡ್ಡ ದಿಬ್ಬಗಳನ್ನು ಹಾಕಿದನು.ಪರಮಗೀತೆ3
ಊರಲ್ಲಿ ಸುತ್ತುತ್ತಿರುವ ಕಾವಲುಗಾರರು ನನ್ನನ್ನು ಕಂಡುಹಿಡಿದು, ಹೊಡೆದು ಗಾಯಪಡಿಸಿದರು, ಪೌಳಿಯ ಕಾವಲುಗಾರರು ಮೇಲೊದಿಕೆಯನ್ನು ನನ್ನಿಂದ ಕಿತ್ತುಕೊಂಡರು.ಅವಳು ಕೋಟೆಯಾದರೆ ಅದರ ಮೇಲೆ ಬೆಳ್ಳಿಯ ಬುರುಜನ್ನು ಕಟ್ಟುವೆವು, ಬಾಗಿಲಾದರೆ ದೇವದಾರು ಹಲಗೆಗಳಿಂದ ಭದ್ರಪಡಿಸುವೆವು.ನಾನು ಕೋಟೆ; ನನ್ನ ಸ್ತನಗಳು ಅದರ ಬುರುಜುಗಳು, ಹೀಗಿದ್ದು ಅವನ ದೃಷ್ಟಿಯಲ್ಲಿ ನನಗೆ ದಯೆ ದೊರಕಿತ್ತು.ಯೆಶಾಯನು17
ಎತ್ತರವಾದ ಸಕಲ ಗೋಪುರಗಳ ಮೇಲೆಯೂ, ಭದ್ರವಾದ ಸಮಸ್ತ ಕೋಟೆಗಳ ಮೇಲೆಯೂ,ಯೆರೂಸಲೇಮಿನ ಮನೆಗಳನ್ನು ಲೆಕ್ಕಿಸಿ, ಪೌಳಿಗೋಡೆಯನ್ನು ಭದ್ರಪಡಿಸುವುದಕ್ಕೆ ಮನೆಗಳನ್ನು ಒಡೆದು ಹಾಕಿಬಿಟ್ಟಿರಿ.ಎರಡು ಗೋಡೆಗಳ ನಡುವೆ ಹಳೆಯ ಕೊಳದ ನೀರಿಗಾಗಿ ತೊಟ್ಟಿಯನ್ನು ಮಾಡಿದ್ದೀರಿ; ಆದರೆ ಇದನ್ನೆಲ್ಲಾ ನಡೆಸಿದಾತನ ಕಡೆಗೆ ನೀವು ದೃಷ್ಟಿಯಿಡಲಿಲ್ಲ, ಪುರಾತನ ಕಾಲದಲ್ಲಿ ಸಂಕಲ್ಪಿಸಿದಾತನನ್ನು ನೀವು ಲಕ್ಷಿಸಲಿಲ್ಲ.ಇಗೋ, ಕಸ್ದೀಯರ ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು.ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ.ಆ ದಿನದಲ್ಲಿ ಯೆಹೂದ ದೇಶದೊಳಗೆ ಈ ಗೀತೆಯನ್ನು ಹಾಡುವರು, “ನಮಗೆ ಬಲವಾದ ಪಟ್ಟಣವಿದೆ. ಯೆಹೋವನು ತನ್ನ ರಕ್ಷಣೆಯನ್ನು ಕೋಟೆಯನ್ನಾಗಿಯೂ, ಹೊರಪೌಳಿಯನ್ನಾಗಿಯೂ ಮಾಡಿದ್ದಾನೆ.ನಾನು ನಿನ್ನ ಸುತ್ತಲೂ ದಂಡಿಳಿಸಿ, ನಿನಗೆ ವಿರುದ್ಧವಾಗಿ ಕೋಟೆಗಳನ್ನು ಕಟ್ಟಿ, ದಿಬ್ಬಹಾಕಿ ನಿನ್ನನ್ನು ಮುತ್ತುವೆನು.ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.”ಆಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವವರು ರಬ್ಷಾಕೆಗೆ, “ನೀನು ಮಾತನಾಡುವುದು ಪೌಳಿಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ. ಆದುದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು; ಅದು ನಮಗೆ ತಿಳಿಯುತ್ತದೆ. ಆದರೆ ಯೂದಾಯ ಭಾಷೆಯಲ್ಲಿ ಮಾತನಾಡಬೇಡ” ಎಂದು ಹೇಳಿದರು.ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಒಡೆಯನ ಸಂಗಡವಾಗಲಿ ಈ ಮಾತುಗಳನ್ನು ಹೇಳುವುದಕ್ಕೆ ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕೋಸ್ಕರ ಕಳುಹಿಸಿದ್ದಾನೆ. ಅವರು ನನ್ನ ವಿರುದ್ಧವಾಗಿ ನಿಂತರೆ ನಿಮ್ಮೊಡನೆ ಸ್ವಂತ ಮಲವನ್ನು ತಿಂದು ಸ್ವಂತ ಮೂತ್ರವನ್ನು ಕುಡಿಯಬೇಕಾಗುವುದು” ಎಂದು ಉತ್ತರಕೊಟ್ಟನು.ಆತನು ಅಶ್ಶೂರದ ಅರಸನನ್ನು ಕುರಿತು, “ಅವನು ಪಟ್ಟಣವನ್ನು ಸಮೀಪಿಸುವುದಿಲ್ಲ, ಅದಕ್ಕೆ ಬಾಣವನ್ನೆಸೆಯುವುದಿಲ್ಲ, ಗುರಾಣಿ ಹಿಡಿದಿರುವವರನ್ನು ಕಳುಹಿಸುವುದಿಲ್ಲ, ಅದನ್ನು ಕೆಡವಿ ಬಿಡುವುದಕ್ಕೋಸ್ಕರ ಅದರ ಎದುರಾಗಿ ಮಣ್ಣಿನ ದಿಬ್ಬವನ್ನು ಮಾಡುವುದಿಲ್ಲ.ಇಗೋ, ನನ್ನ ಅಂಗೈಗಳಲ್ಲಿ ನಿನ್ನನ್ನು ಚಿತ್ರಿಸಿಕೊಂಡಿದ್ದೇನೆ. ನಿನ್ನ ಪೌಳಿಗೋಡೆಗಳು ಸದಾ ನನ್ನ ಕಣ್ಣೆದುರಿನಲ್ಲಿವೆ.ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು.ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು.ವಿದೇಶೀಯರು ನಿನ್ನ ಪೌಳಿಗೋಡೆಗಳನ್ನು ಪುನಃ ಕಟ್ಟುವರು, ಅವರ ಅರಸರು ನಿನ್ನನ್ನು ಆರಾಧಿಸುವರು; ನನ್ನ ಕೋಪದಿಂದ ನಿನ್ನನ್ನು ಹೊಡೆದು, ನನ್ನ ಕೃಪೆಯಿಂದ ನಿನ್ನನ್ನು ಕರುಣಿಸಿದ್ದೇನಷ್ಟೆ.ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತ್ಯಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಿಬರುವುದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ; ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ,ಯೆರೆಮೀಯನು10
ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.ಸೇನಾಧೀಶ್ವರನಾದ ಯೆಹೋವನು, ಮರಗಳನ್ನು ಕಡಿದುಬಿಡಿರಿ, ಯೆರೂಸಲೇಮಿನ ಎದುರಿಗೆ ದಿಬ್ಬಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದಬ್ಬಾಳಿಕೆಯೇ ತುಂಬಿದೆ.ನಾನು ನಿನ್ನನ್ನು ಈ ಜನರಿಗೆ ದುರ್ಗಮವಾದ ತಾಮ್ರದ ಪೌಳಿಗೋಡೆಯನ್ನಾಗಿ ಮಾಡುವೆನು. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು. ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನು ಉದ್ಧರಿಸಿ ರಕ್ಷಿಸಲು ನಾನೇ ನಿನ್ನೊಂದಿಗಿರುವೆನು. ಇದು ಯೆಹೋವನಾದ ನನ್ನ ಮಾತು.ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಿಮ್ಮನ್ನು ಮುತ್ತುವ ಕಸ್ದೀಯರಿಗೂ ಬಾಬೆಲಿನ ಅರಸನಿಗೂ ವಿರುದ್ಧವಾಗಿ ಪೌಳಿಗೋಡೆಯ ಹೊರಗೆ ಯುದ್ಧಮಾಡುವುದಕ್ಕೆ ನೀವು ಹಿಡಿದಿರುವ ಆಯುಧಗಳನ್ನು ನಾನು ಹಿಂದಕ್ಕೆ ತಳ್ಳಿ, ಈ ಪಟ್ಟಣದೊಳಗೆ ಕೂಡಿಹಾಕುವೆನು.ಇಗೋ, ಮುತ್ತಿಗೆಯ ದಿಬ್ಬಗಳು ಪಟ್ಟಣವನ್ನು ಆಕ್ರಮಿಸುವುದಕ್ಕೆ ಬಂದಿದ್ದಾರೆ; ಪಟ್ಟಣವು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಕ್ಷೀಣವಾಗಿ ವಿರೋಧಿಗಳಾದ ಕಸ್ದೀಯರ ಕೈಗೆ ಸಿಕ್ಕಿದೆ; ನೀನು ನುಡಿದದ್ದು ನೆರವೇರಿದೆ, ಇಗೋ, ನೋಡುತ್ತಿದ್ದಿ.ದಿಬ್ಬಗಳಿಗೂ ಮತ್ತು ಕತ್ತಿಗಳಿಗೂ ಅಡ್ಡವಾಗಿ ಗೋಡೆಯನ್ನು ಕಟ್ಟಲು ಕೆಡವಿರುವ ಈ ಊರಿನವರ ಮನೆಗಳ ವಿಷಯವಾಗಿಯೂ, ಯೆಹೂದದ ಅರಸರ ಉಪ್ಪರಿಗೆಗಳ ವಿಷಯವಾಗಿಯೂ ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ,ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷ ಹತ್ತನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯ ಮಾಡಿಕೊಂಡು ಅದರ ಸುತ್ತಲು ಮಣ್ಣಿನ ದಿಬ್ಬವನ್ನು ಮಾಡಿ,ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದ್ದರಿಂದ ಒಳಗಿದ್ದ ಎಲ್ಲಾ ಸೈನಿಕರು ಅದೇ ರಾತ್ರಿ ಅರಸನ ತೋಟದ ಬಳಿಯಲ್ಲಿರುವ ಬಾಗಿಲಿನ ಮೂಲಕ ಪಟ್ಟಣದೊಳಗಿಂದ ಹೊರಟು ಓಡಿ ಹೋದರು; ಆ ಬಾಗಿಲು ಎರಡು ಗೋಡೆಗಳ ಮಧ್ಯದಲ್ಲಿತ್ತು; ಅವರು ಅರಾಬಾ ಎಂಬ ತಗ್ಗಾದ ಪ್ರದೇಶದ ಮಾರ್ಗವಾಗಿ ಪಲಾಯನ ಮಾಡಿದರು.ಅವನ ಜೊತೆಯಲ್ಲಿ ಬಂದಿದ್ದ ಕಸ್ದೀಯ ಸೈನ್ಯದವರು ಯೆರೂಸಲೇಮಿನ ಸುತ್ತು ಗೋಡೆಗಳನ್ನೆಲ್ಲಾ ಕೆಡವಿದರು.ಪ್ರಲಾಪಗಳು2
ಯೆಹೋವನು ಚೀಯೋನ್ ನಗರಿಯ ಕೋಟೆಯನ್ನು ನಾಶಪಡಿಸಬೇಕೆಂದು ನೂಲನ್ನು ಎಳೆದಿದ್ದಾನೆ; ಹಾಳು ಮಾಡುತ್ತಿರುವ ತನ್ನ ಕೈಯನ್ನು ಹಿಂದೆಗೆಯದೆ ಪೌಳಿಗೋಡೆಯೂ ಮತ್ತು ಕೋಟೆಯೂ ಮೊರೆಯುವಂತೆ ಮಾಡಿದ್ದಾನೆ; ಅವೆರಡೂ ಕುಸಿದುಹೋಗಿವೆ.ನಿನ್ನ ಜನರು ಕರ್ತನಿಗೆ ಮನಃಪೂರ್ವಕವಾಗಿ ಮೊರೆಯಿಟ್ಟಿದ್ದಾರೆ; “ಚೀಯೋನ್ ನಗರಿಯ ಕೋಟೆಯವರೇ, ನಿಮ್ಮ ಕಣ್ಣೀರು ಹಗಲಿರುಳೂ ತೊರೆಯಂತೆ ಹರಿಯಲಿ, ನಿಮಗೆ ವಿರಾಮವೇ ಬೇಡ, ಅದು ನಿಮ್ಮ ನೇತ್ರದಿಂದ ನಿಲ್ಲದೆ ಸುರಿಯಲಿ;ಯೆಹೆಜ್ಕೇಲನು11
ಆ ನಕ್ಷೆಯ ಸುತ್ತಲು ದಿಬ್ಬಹಾಕಿ, ಅಡ್ಡಕಟ್ಟಿ, ಪಾಳೆಯಗಳನ್ನು ಮಾಡಿ, ಕತ್ತರಿಸುವ ಯಂತ್ರಗಳನ್ನು ನಿಲ್ಲಿಸಿ, ಅದಕ್ಕೆ ಮುತ್ತಿಗೆ ಹಾಕು.ಫರೋಹನೂ, ಅವನ ಮಹಾಸೈನ್ಯವೂ, ದೊಡ್ಡ ಪರಿವಾರವೂ ಬಂದು ಬಹಳ ಜನರನ್ನು ಕೊಲ್ಲುವುದಕ್ಕೆ ದಿಬ್ಬಗಳನ್ನು ಹಾಕಿ, ಕೋಟೆಗಳನ್ನು ಕಟ್ಟಿದರೂ ಯುದ್ಧದಲ್ಲಿ ಇವನಿಗೆ ಏನೂ ಸಹಾಯವಾಗುವುದಿಲ್ಲ.ಯೆರೂಸಲೇಮಿನ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಅಲ್ಲಿ ಅವನು ಚಿತ್ತವನ್ನು ಭೇದಿಸುವ ಆಯುಧಗಳನ್ನು ನಿಲ್ಲಿಸಿ, ಬಾಯಿದೆರೆದು ಸಂಹಾರ ಧ್ವನಿಗೈದು ಕೂಗಿ! ಬಾಗಿಲುಗಳ ಎದುರಾಗಿ ಚಿತ್ತ ಭೇದಕ ಯಂತ್ರಗಳನ್ನು ನಿಲ್ಲಿಸಿ, ಒಡ್ಡು ಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ, ಅದರ ಕೋಟೆ ಕೊತ್ತಲುಗಳನ್ನು ಕೆಡವಿ ಹಾಕುವವು; ನಾನು ಅದರ ಧೂಳನ್ನು ಒರೆಸಿ, ಅದನ್ನು ಬೋಳು ಬಂಡೆಯಂತೆ ಮಾಡುವೆನು.ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಹತಿಸಿ, ನಿನಗೆ ವಿರುದ್ಧವಾಗಿ ಒಡ್ಡುಕಟ್ಟಿ, ದಿಬ್ಬವನ್ನು ಹಾಕುವನು.ಗುರಾಣಿ ಹಿಡಿದಿರುವವರನ್ನು ಕಳುಹಿಸಿ, ತನ್ನ ಯುದ್ಧ ಯಂತ್ರಗಳಿಂದ ನಿನ್ನ ಪೌಳಿಗೋಡೆಯನ್ನು ಹೊಡೆಯಿಸಿ, ತನ್ನ ಆಯುಧಗಳಿಂದ ನಿನ್ನ ಕೋಟೆ ಕೊತ್ತಲಗಳನ್ನು ಒಡೆದು ಬಿಡುವನು.ಅವನ ಲೆಕ್ಕವಿಲ್ಲದ ಕುದುರೆಗಳಿಂದ ಏಳುವ ಧೂಳಿನಿಂದ ನಿನ್ನನ್ನು ಮುಸುಕುವನು; ಒಡಕು ಬಿದ್ದ ಕೋಟೆಯೊಳಗೆ ಶತ್ರುವು ನುಗ್ಗುವ ಪ್ರಕಾರ ಅವನು ನಿನ್ನ ಬಾಗಿಲುಗಳೊಳಗೆ ನುಗ್ಗುವಾಗ ರಾಹುತ, ಗಾಡಿ, ರಥ ಇವುಗಳ ಶಬ್ದಕ್ಕೆ ನಿನ್ನ ಗೋಡೆಗಳು ಕದಲುವವು.ಅವನ ಸೈನಿಕರು ನಿನ್ನ ಆಸ್ತಿಯನ್ನು ಸುಲಿದುಕೊಂಡು, ನಿನ್ನ ಸರಕುಗಳನ್ನು ಕೊಳ್ಳೆಹೊಡೆದು, ನಿನ್ನ ಗೋಡೆಗಳನ್ನು ಉರುಳಿಸಿ, ನಿನ್ನ ರಮ್ಯವಾದ ಮನೆಗಳನ್ನು ಕೆಡವಿ, ನಿನ್ನ ಕಲ್ಲುಗಳನ್ನೂ, ಮರಗಳನ್ನೂ, ಮಣ್ಣುಗಳನ್ನೂ ಸಮುದ್ರದಲ್ಲಿ ಹಾಕುವರು.ಅರ್ವಾದಿನವರೂ ಮತ್ತು ಹೆಲೆಕರು ನಿನ್ನ ಸೈನಿಕರ ಸಂಗಡ ನಿನ್ನ ಗೋಡೆಗಳ ಸುತ್ತಲೂ ನಿಂತಿದ್ದರು. ಗಮ್ಮಾದ್ಯರು ನಿನ್ನ ಕೊತ್ತಲುಗಳಲ್ಲಿ ಕಾವಲಾಗಿದ್ದರು. ಎಲ್ಲರೂ ತಮ್ಮ ಗುರಾಣಿಗಳನ್ನು ಸುತ್ತಮುತ್ತಲು ನಿನ್ನ ಗೋಡೆಗಳ ಮೇಲೆ ನೇತುಹಾಕಿ, ನಿನ್ನ ಸೌಂದರ್ಯವನ್ನು ಪರಿಪೂರ್ಣಗೊಳಿಸಿದರು!ಆಗ ನೀನು, ‘ಆಹಾ, ನಾನು ಪೌಳಿಗೋಡೆಯಿಲ್ಲದ ಹಳ್ಳಿಗಳಿಂದ ತುಂಬಿದ ದೇಶವನ್ನು ನುಗ್ಗಿ, ಅಗುಳಿ, ಬಾಗಿಲು, ಗೋಡೆಗಳಿಲ್ಲದೆ ನೆಮ್ಮದಿಯಿಂದ ನಿರ್ಭಯವಾಗಿರುವವರ ಮೇಲೆ ಬೀಳುವೆನು’ ಅಂದುಕೊಂಡೆ.ಆಗ ಸಮುದ್ರದ ಮೀನುಗಳು, ಆಕಾಶದ ಪಕ್ಷಿಗಳು, ಕಾಡುಮೃಗಳು ನೆಲದಲ್ಲಿ ಹರಿದಾಡುವ ಕ್ರಿಮಿಕೀಟಗಳು, ಭೂಮಂಡಲದ ಸಕಲ ಮನುಷ್ಯರೂ ನನ್ನೆದುರಿಗೆ ನಡುಗುವವು; ಪರ್ವತಗಳು ಉರುಳಿಹೋಗುವವು, ಝರಿಗಳು ಕವಚಿಗೊಳ್ಳುವವು, ಎಲ್ಲಾ ಗೋಡೆಗಳು ನೆಲಸಮವಾಗುವವು.’”ದಾನಿಯೇಲನು1
ಉತ್ತರ ದಿಕ್ಕಿನ ರಾಜನು ಬಂದು ದಿಬ್ಬ ಹಾಕಿ, ಕೋಟೆ ಕೊತ್ತಲದ ಪಟ್ಟಣವನ್ನು ಹಿಡಿಯುವನು; ದಕ್ಷಿಣದ ಭುಜಬಲವು ನಿಲ್ಲದು, ಅಲ್ಲಿನ ಮಹಾವೀರರು ತಡೆಯಲಾರರು, ಎದುರಿಸುವ ಯಾವ ಶಕ್ತಿಯೂ ಇರದು.ಯೋವೇಲನು2
ಅವು ಶೂರರಂತೆ ಓಡಾಡುತ್ತವೆ; ಯೋಧರ ಹಾಗೆ ಗೋಡೆ ಏರುತ್ತವೆ;ಪಟ್ಟಣದಲ್ಲೆಲ್ಲಾ ತ್ವರೆಪಡುತ್ತವೆ, ಗೋಡೆಯ ಮೇಲೆ ಓಡಾಡುತ್ತವೆ, ಮನೆಗಳನ್ನು ಹತ್ತುತ್ತವೆ, ಕಿಟಕಿಗಳಿಂದ ಕಳ್ಳರಂತೆ ಪ್ರವೇಶಿಸುತ್ತವೆ.ಆಮೋಸನು4
ನಾನು ಗಾಜದ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು.ನಾನು ತೂರಿನ ಕೋಟೆಯ ಮೇಲೆ ಬೆಂಕಿಯನ್ನು ಸುರಿಸುವೆನು, ಮತ್ತು ಅದು ಅದರ ಅರಮನೆಗಳನ್ನು ನುಂಗಿಬಿಡುವುದು.”ನಾನು ರಬ್ಬದ ಕೋಟೆಯನ್ನು ಬೆಂಕಿಯಿಂದ ಉರಿಸುವೆನು, ಅದು ಅದರ ಅರಮನೆಗಳನ್ನು ನುಂಗಿಬಿಡುವುದು; ಆ ಯುದ್ಧದ ದಿನದಲ್ಲಿ ಆರ್ಭಟವಾಗುವುದು, ಆ ಸುಂಟರಗಾಳಿಯಂತ ದಿನದಲ್ಲಿ ಪ್ರಚಂಡ ಕಾದಾಟವೂ ಉಂಟಾಗುವುದು.ಕರ್ತನು ಮತ್ತೊಂದು ದರ್ಶನವನ್ನು ನನಗೆ ತೋರಿಸಿದನು. ಇಗೋ, ಯೆಹೋವನು ನೂಲುಮಟ್ಟದ ನೆಟ್ಟಗಿರುವ ಗೋಡೆಯ ಮೇಲೆ ನಿಂತಿದ್ದನು. ಆತನ ಕೈಯಲ್ಲಿ ನೂಲುಗುಂಡಿತ್ತು.ಮೀಕನು2
ಚಿಯೋನ್ ನಗರವೇ ನಿನ್ನ ಸೇನಾವ್ಯೂಹಗಳನ್ನು ಈಗ ಒಟ್ಟುಗೂಡಿಸು. ಆಹಾ ಶತ್ರುಗಳು ನಮಗೆ ಮುತ್ತಿಗೆ ಹಾಕಿದ್ದಾರೆ. ಇಸ್ರಾಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು.ಆಹಾ, ನಿನ್ನ ಪೌಳಿಗೋಡೆಗಳನ್ನು ಕಟ್ಟುವ ದಿನವು ಬರುವುದು. ಆ ದಿನದಲ್ಲಿ ನಿನ್ನ ಮೇರೆಯು ದೂರದ ತನಕ ವಿಸ್ತರಿಸಿಕೊಂಡಿರುವುದು.ನಹೂಮನು3
ನಿನವೆಯೇ, ನಿನ್ನನ್ನು ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ರಕ್ಷಿಸಲು ಸಿದ್ಧನಾಗು. ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.ಪಟ್ಟಣದ ಅರಸನು ತನ್ನ ಸರದಾರರನ್ನು ಕರೆಕಳುಹಿಸಿದ್ದಾನೆ; ಅವರು ಓಡಿ ಹೋಗುತ್ತಾ ಮುಗ್ಗರಿಸುತ್ತಾರೆ; ಪೌಳಿಗೋಡೆ ಕಡೆಗೆ ತ್ವರೆಯಾಗಿ ಓಡುತ್ತಾರೆ; ಮರೆಯು ನಿಲ್ಲಿಸಲ್ಪಟ್ಟಿದೆ.ನೀನು ನೋ ಆಮೋನ್ ಪಟ್ಟಣಗಿಂತ ಭದ್ರವಾಗಿದ್ದೀಯೋ? ಅದು ನೈಲಿನ ಪ್ರವಾಹಗಳಲ್ಲಿ ನೆಲೆಯಾಗಿತ್ತು. ನೀರು ಅದನ್ನು ಸುತ್ತಿಕೊಂಡಿತ್ತು, ಮಹಾ ನದಿಯು ಅದಕ್ಕೆ ಪೌಳಿಗೋಡೆ, ಜಲಾಶಯವು ಅದರ ದುರ್ಗ.ಜೆಕರ್ಯನು1
ನಾನೇ, ಅದರ ಸುತ್ತಮುತ್ತಲೂ ಅಗ್ನಿಪ್ರಾಕಾರವಾಗಿ, ಅದರೊಳಗೆ ವೈಭವವೂ ಆಗಿರುವೆನು’” ಎಂಬುದು ಯೆಹೋವನ ನುಡಿ.ಲೂಕನು1
ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು” ಅಂದನು.ಅಪೊಸ್ತಲರ ಕೃತ್ಯಗಳು1
ಆದರೆ ಸೌಲನ ಶಿಷ್ಯರು ರಾತ್ರಿಕಾಲದಲ್ಲಿ ಅವನನ್ನು ಕರೆದುಕೊಂಡುಹೋಗಿ, ಒಂದು ಪುಟ್ಟಿಯಲ್ಲಿ ಕುಳ್ಳಿರಿಸಿ, ಗೋಡೆಯ ಮಗ್ಗುಲಲ್ಲಿ ಇಳಿಸಿದರು.2 ಕೊರಿಂಥದವರಿಗೆ1
ಅವರು ನನ್ನನ್ನು ಒಂದು ಬುಟ್ಟಿಯಲ್ಲಿ ಕುಳ್ಳಿರಿಸಿ ಗೋಡೆಯಲ್ಲಿದ್ದ ಒಂದು ಕಿಟಕಿಯಿಂದ ಇಳಿಸಿಬಿಟ್ಟರು. ಹೀಗೆ ಅವನ ಕೈಯಿಂದ ತಪ್ಪಿಸಿಕೊಂಡು ಓಡಿಹೋದೆನು.ಇಬ್ರಿಯರಿಗೆ1
ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.ಪ್ರಕಟಣೆ6
ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.ಪಟ್ಟಣದ ಪ್ರಾಕಾರಕ್ಕೆ ಹನ್ನೆರಡು ಅಸ್ತಿವಾರಗಳಿದ್ದವು. ಅವುಗಳ ಮೇಲೆ ಯಜ್ಞದ ಕುರಿಮರಿಯಾದಾತನ ಹನ್ನೆರಡು ಮಂದಿ ಅಪೊಸ್ತಲರ ಹೆಸರುಗಳಿದ್ದವು.ನನ್ನ ಸಂಗಡ ಮಾತನಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಗೋಡೆಯನ್ನೂ ಅಳತೆ ಮಾಡುವುದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೆ ಕೋಲನ್ನು ಹಿಡಿದಿದ್ದನು.ಅವನು ಅದರ ಗೋಡೆಯನ್ನು ಅಳತೆ ಮಾಡಿದನು. ಅದು ನೂರನಲ್ವತ್ತು ನಾಲ್ಕು ಮೊಳವಾಗಿತ್ತು. ಈ ಲೆಕ್ಕದಲ್ಲಿ ಮನುಷ್ಯನ ಮೊಳ ಎಂದರೆ ದೇವದೂತನ ಮೊಳ.ಆ ಗೋಡೆಯು ಸೂರ್ಯಕಾಂತ ಶಿಲೆಯಿಂದ ಕಟ್ಟಲ್ಪಟ್ಟಿತ್ತು ಪಟ್ಟಣವು ಶುದ್ಧ ಗಾಜಿನಂತಿರುವ ಅಪ್ಪಟ ಬಂಗಾರವಾಗಿತ್ತು.ಪಟ್ಟಣದ ಗೋಡೆಯ ಅಸ್ತಿವಾರಗಳು ಸಕಲ ವಿಧವಾದ ರತ್ನಗಳಿಂದ ಅಲಂಕೃತವಾಗಿದ್ದವು. ಮೊದಲನೆಯ ಅಸ್ತಿವಾರವು ಸೂರ್ಯಕಾಂತಶಿಲೆ ಎರಡನೆಯದು ನೀಲಮಣಿ ಮೂರನೆಯದು ಪಚ್ಚೆ. ನಾಲ್ಕನೆಯದು ಪದ್ಮರಾಗ,ಮೂಲಗಳು: Tyndale Open Bible Dictionary © 2023 Tyndale House Publishers, CC BY-SA 4.0 — ಅಳವಡಿಸಿ ಸಂಕ್ಷಿಪ್ತಗೊಳಿಸಲಾಗಿದೆ; ಮೂಲ ಕೃತಿ tyndaleopenresources.com ನಲ್ಲಿ ಉಚಿತವಾಗಿ ಲಭ್ಯವಿದೆ · Human-made Things in the Bible © United Bible Societies 2025, adapted from R. Pritz, The Works of Their Hands: Man-made Things in the Bible © 2009 UBS, CC BY-SA 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು