ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಬೇಡಿರಿ, ಹುಡುಕಿರಿ, ತಟ್ಟಿರಿ
ಮತ್ತಾ 7:7–11 · ಲೂಕ 11:9–13
ಮತ್ತಾ 7:7–117“ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು;
8ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನೂ ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯಲ್ಪಡುವುದು.
9“ನಿಮ್ಮಲ್ಲಿ ಯಾವನು ರೊಟ್ಟಿ ಕೇಳುವ ಮಗನಿಗೆ ಕಲ್ಲನ್ನು ಕೊಡುವನೋ?
10ಮೀನು ಕೇಳಿದರೆ ಹಾವನ್ನು ಕೊಡುವನೋ?
11ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಉಡುಗೊರೆಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಒಳ್ಳೆಯ ವರಗಳನ್ನು ಕೊಡುವನಲ್ಲವೇ?
ಲೂಕ 11:9–139ಹಾಗೆಯೇ ನಾನು ನಿಮಗೆ ಹೇಳುವುದೇನಂದರೆ, ಬೇಡಿಕೊಳ್ಳಿರಿ, ನಿಮಗೆ ದೊರೆಯುವುದು; ಹುಡುಕಿರಿ, ನಿಮಗೆ ಸಿಕ್ಕುವುದು; ತಟ್ಟಿರಿ, ನಿಮಗೆ ತೆರೆಯುವುದು.
10ಏಕೆಂದರೆ ಬೇಡಿಕೊಳ್ಳುವ ಪ್ರತಿಯೊಬ್ಬನು ಹೊಂದುವನು, ಹುಡುಕುವವನಿಗೆ ಸಿಕ್ಕುವುದು, ತಟ್ಟುವವನಿಗೆ ತೆರೆಯುವುದು.
11ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ?
12ಅಥವಾ ಮೊಟ್ಟೆಯನ್ನು ಕೇಳಿದರೆ ಚೇಳನ್ನು ಕೊಡುವನೇ?
13ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವನ್ನೇ ಕೊಡುವನಲ್ಲವೇ?” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.