Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಆರಂಭ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಆರಂಭ

ಯೇಸುವಿನ ದೀಕ್ಷಾಸ್ನಾನ

ಮತ್ತಾ 3:13–17 · ಮಾರ್ಕ 1:9–11 · ಲೂಕ 3:21–22 · ಯೋಹಾ 1:29–34

ಮತ್ತಾಯನು

ಮತ್ತಾ 3:13–17

13ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.

14ಆತನಿಗೆ ಯೋಹಾನನು ತಡೆಯುತ್ತಾ, “ನಾನೇ ನಿನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕಾಗಿತ್ತು, ಆದರೆ ನೀನು ನನ್ನ ಬಳಿಗೆ ಬರುವುದೇಕೆ?” ಎಂದು ಹೇಳಿದಕ್ಕೆ,

15ಯೇಸು ಪ್ರತ್ಯುತ್ತರವಾಗಿ ಅವನಿಗೆ, “ಸದ್ಯಕ್ಕೆ ಒಪ್ಪಿಕೋ; ಹೀಗೆ ನಾವು ಎಲ್ಲಾ ನೀತಿಯನ್ನು ನೆರವೇರಿಸತಕ್ಕದ್ದಾಗಿದೆ” ಎಂದು ಹೇಳಿದಾಗ ಯೋಹಾನನು ಒಪ್ಪಿಕೊಂಡನು.

16ಯೇಸು ದೀಕ್ಷಾಸ್ನಾನ ಮಾಡಿಸಿಕೊಂಡ ನೀರಿನಿಂದ ಮೇಲಕ್ಕೆ ಬಂದ ಕೂಡಲೇ ಇಗೋ, ಆತನಿಗಾಗಿ ಪರಲೋಕವು ತೆರೆಯಿತು; ಮತ್ತು ದೇವರ ಆತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿದು ಬರುವುದನ್ನು ಕಂಡನು.

17ಆಗ “ಈತನು ನನ್ನ ಪ್ರಿಯ ಮಗನು, ಈತನನ್ನು ನಾನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ವಾಣಿ ಪರಲೋಕದಿಂದ ಕೇಳಿಬಂದಿತು.

ಮಾರ್ಕನು

ಮಾರ್ಕ 1:9–11

9ಆ ದಿನಗಳಲ್ಲಿ ಯೇಸು ಗಲಿಲಾಯ ಸೀಮೆಗೆ ಸೇರಿದ ನಜರೇತೆಂಬ ಊರಿನಿಂದ ಬಂದು ಯೊರ್ದನ್ ಹೊಳೆಯಲ್ಲಿ ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡನು.

10ಯೇಸುವು ನೀರಿನೊಳಗಿನಿಂದ ಮೇಲಕ್ಕೆ ಬಂದ ಕೂಡಲೇ ಪರಲೋಕವು ತೆರೆಯಲ್ಪಟ್ಟು ದೇವರಾತ್ಮನು ಪಾರಿವಾಳದ ಹಾಗೆ ಆತನ ಮೇಲೆ ಇಳಿಯುವುದನ್ನು ಕಂಡನು.

11ಆಗ “ನೀನು ಪ್ರಿಯನಾಗಿರುವ ನನ್ನ ಮಗನು, ನಾನು ನಿನ್ನನ್ನು ಬಹಳವಾಗಿ ಮೆಚ್ಚಿದ್ದೇನೆ” ಎಂಬ ದೈವ ವಾಣಿ ಪರಲೋಕದಿಂದ ಕೇಳಿಸಿತು.

ಲೂಕನು

ಲೂಕ 3:21–22

21ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಾಗ ಆಕಾಶವು ತೆರೆಯಲ್ಪಟ್ಟಿತು

22ಮತ್ತು ಪವಿತ್ರಾತ್ಮನು ದೇಹಾಕಾರನಾಗಿ ಪಾರಿವಾಳದ ಹಾಗೆ ಆತನ ಮೇಲೆ ಇಳಿದನು. ಆಗ, “ನೀನು ಪ್ರಿಯನಾಗಿರುವ ನನ್ನ ಮಗನು, ನಿನ್ನನ್ನು ನಾನು ಮೆಚ್ಚಿದ್ದೇನೆ” ಎಂಬ ವಾಣಿಯು ಪರಲೋಕದಿಂದ ಬಂದಿತು.

ಯೋಹಾನನು

ಯೋಹಾ 1:29–34

29ಮರುದಿನ ಯೋಹಾನನು ತನ್ನ ಕಡೆಗೆ ಬರುತ್ತಿದ್ದ ಯೇಸುವನ್ನು ನೋಡಿ, “ಅಗೋ, ಲೋಕದ ಪಾಪವನ್ನು ನಿವಾರಣೆ ಮಾಡಲು ದೇವರು ನೇಮಿಸಿದ ಯಜ್ಞದಕುರಿಮರಿ.

30‘ನನ್ನ ನಂತರ ಬರುವಾತನು ನನಗಿಂತ ಮೊದಲೇ ಇದ್ದುದರಿಂದ ಆತನು ನನಗಿಂತಲೂ ಉನ್ನತನು’ ಎಂದು ನಾನು ಹೇಳಿದ ಮಾತು ಈತನ ವಿಷಯವಾಗಿಯೇ.

31ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”

32ಇದಲ್ಲದೆ ಯೋಹಾನನು ಸಾಕ್ಷಿ ಕೊಟ್ಟು ಹೇಳಿದ್ದೇನೆಂದರೆ, “ದೇವರಾತ್ಮನು ಪರಲೋಕದಿಂದ ಪಾರಿವಾಳದಂತೆ ಇಳಿಯುವುದನ್ನು ಮತ್ತು ಆತನ ಮೇಲೆ ನೆಲೆಗೊಂಡಿರುವುದನ್ನು ನಾನು ಕಂಡೆನು.

33ನನಗೂ ಆತನು ಯಾರೆಂಬುದು ತಿಳಿದಿರಲಿಲ್ಲ. ಆದರೆ ನೀರಿನಲ್ಲಿ ದೀಕ್ಷಾಸ್ನಾನ ಮಾಡಿಸುವುದಕ್ಕೆ ನನ್ನನ್ನು ಕಳುಹಿಸಿದಾತನು ‘ಯಾರ ಮೇಲೆ ಆತ್ಮನು ಇಳಿದುಬಂದು ನೆಲೆಯಾಗಿರುವುದನ್ನು ನೀನು ನೋಡುವಿಯೋ ಆತನೇ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುವಾತನು’ ಎಂದು ತಾನೇ ನನಗೆ ಹೇಳಿದನು.

34ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು