1ಯೇಸು ದೊಡ್ಡ ಗುಂಪನ್ನು ಕಂಡು ಬೆಟ್ಟದ ಮೇಲೇರಿ ಕುಳಿತ ತರುವಾಯ ಆತನ ಶಿಷ್ಯರು ಆತನ ಬಳಿಗೆ ಬಂದರು.
2ಆತನು ಅವರಿಗೆ ಉಪದೇಶ ಮಾಡಿ ಹೇಳಿದ್ದೇನೆಂದರೆ,
3“ಆತ್ಮದಲ್ಲಿ ಬಡವರಾಗಿರುವವರು ಧನ್ಯರು; ಪರಲೋಕ ರಾಜ್ಯವು ಅವರದು.
4ದುಃಖಪಡುವವರು ಧನ್ಯರು; ಅವರು ದೇವರಿಂದ ಸಮಾಧಾನ ಹೊಂದುವರು.
5ವಿನಯವುಳ್ಳವರು ಧನ್ಯರು; ಅವರು ಭೂಮಿಗೆ ಬಾಧ್ಯರಾಗುವರು.
6ನೀತಿಗೆ ಹಸಿದು ಬಾಯಾರಿದವರು ಧನ್ಯರು; ಅವರು ತೃಪ್ತರಾಗುವರು.
7ಕರುಣೆಯುಳ್ಳವರು ಧನ್ಯರು; ಅವರು ಕರುಣೆ ಹೊಂದುವರು.
8ಶುದ್ಧ ಹೃದಯದವರು ಧನ್ಯರು; ಅವರು ದೇವರನ್ನು ನೋಡುವರು.
9ಶಾಂತಿಗಾಗಿ ಶ್ರಮಿಸುವವರು ಧನ್ಯರು; ಅವರು ದೇವರ ಮಕ್ಕಳು ಎಂದೆನಿಸಿಕೊಳ್ಳುವರು.
10ನೀತಿಯ ನಿಮಿತ್ತವಾಗಿ ಹಿಂಸಿಸಲ್ಪಡುವವರು ಧನ್ಯರು; ಪರಲೋಕ ರಾಜ್ಯವು ಅವರದು.
11“ನನ್ನ ನಿಮಿತ್ತವಾಗಿ ಜನರು ನಿಮ್ಮನ್ನು ನಿಂದಿಸಿ ಹಿಂಸೆಪಡಿಸಿ ನಿಮ್ಮ ಮೇಲೆ ಕೆಟ್ಟ ಮಾತುಗಳನ್ನು ಸುಳ್ಳಾಗಿ ಹೊರಿಸಿದರೆ ನೀವು ಧನ್ಯರು.
12ಸಂತೋಷಪಡಿರಿ, ಉಲ್ಲಾಸಪಡಿರಿ; ಪರಲೋಕದಲ್ಲಿ ನಿಮಗೆ ಬಹಳ ಫಲ ಸಿಕ್ಕುವುದು; ನಿಮಗಿಂತ ಮುಂಚೆ ಇದ್ದ ಪ್ರವಾದಿಗಳನ್ನೂ ಅವರು ಹೀಗೆಯೇ ಹಿಂಸೆಪಡಿಸಿದರಲ್ಲಾ.