Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಪವಿತ್ರಾತ್ಮನ ವಿರುದ್ಧ ದೂಷಣೆ

ಮತ್ತಾ 12:31–32 · ಮಾರ್ಕ 3:28–30 · ಲೂಕ 12:10

ಮತ್ತಾಯನು

ಮತ್ತಾ 12:31–32

31ಆದಕಾರಣ ನಿಮಗೆ ಹೇಳುತ್ತೇನೆ ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವುದು. ಆದರೆ ಪವಿತ್ರಾತ್ಮನಿಗೆ ವಿರುದ್ಧವಾಗಿ ನುಡಿಯುವ ದೂಷಣೆಗೆ ಕ್ಷಮಾಪಣೆಯಿರುವುದಿಲ್ಲ.

32ಯಾವನಾದರೂ ಮನುಷ್ಯಕುಮಾರನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸಲ್ಪಡುವುದು, ಪವಿತ್ರಾತ್ಮನಿಗೆ ವಿರುದ್ಧವಾಗಿ ಮಾತನಾಡಿದರೆ ಅದು ಅವನಿಗೆ ಈ ಲೋಕದಲ್ಲಾಗಲಿ ಮುಂಬರುವ ಲೋಕದಲ್ಲಾಗಲಿ ಕ್ಷಮಿಸಲ್ಪಡುವುದಿಲ್ಲ.

ಮಾರ್ಕನು

ಮಾರ್ಕ 3:28–30

28ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಮನುಷ್ಯರು ಮಾಡುವ ಎಲ್ಲಾ ಪಾಪಗಳಿಗೂ ದೂಷಣೆಗಳಿಗೂ ಕ್ಷಮಾಪಣೆ ಸಿಕ್ಕುವುದು.

29ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.

30ಅವರು “ಈತನಲ್ಲಿ ಅಶುದ್ಧಾತ್ಮವಿದೆ” ಎಂದು ಹೇಳುತ್ತಿದ್ದರಿಂದ ಯೇಸು ಇದನ್ನು ಹೇಳಿದನು.

ಲೂಕನು

ಲೂಕ 12:10

10ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು