Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ

ಕಪೆರ್ನೌಮಿನ ಸಭಾಮಂದಿರದಲ್ಲಿ ಅಶುದ್ಧಾತ್ಮ

ಮಾರ್ಕ 1:21–28 · ಲೂಕ 4:31–33, 35–37

ಮಾರ್ಕನು

ಮಾರ್ಕ 1:21–28

21ಬಳಿಕ ಅವರು ಕಪೆರ್ನೌಮೆಂಬ ಊರಿಗೆ ಹೋದರು. ಸಬ್ಬತ್ ದಿನವಾದಾಗ ಯೇಸು ಸಭಾಮಂದಿರಕ್ಕೆ ಹೋಗಿ ಉಪದೇಶ ಮಾಡತೊಡಗಿದನು.

22ಜನರು ಆತನ ಬೋಧನೆಯನ್ನು ಕೇಳಿ ಆತ್ಯಾಶ್ಚರ್ಯಪಟ್ಟರು; ಏಕೆಂದರೆ ಆತನು ಶಾಸ್ತ್ರಿಗಳಂತೆ ಬೋಧಿಸದೆ ಅಧಿಕಾರವಿದ್ದವನಂತೆ ಅವರಿಗೆ ಬೋಧಿಸುತ್ತಿದ್ದನು.

23ಆಗ ಅವರ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು.

24ಆ ದೆವ್ವವು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನೀನು ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನೀನು ಯಾರೆಂದು ನಾನು ಬಲ್ಲೆನು. ನೀನು ದೇವರಿಂದ ಬಂದ ಪರಿಶುದ್ಧನು” ಎಂದು ಕೂಗಿ ಹೇಳಿತು.

25ಯೇಸು ಅದನ್ನು ಗದರಿಸಿ, “ಸುಮ್ಮನಿರು, ಅವನನ್ನು ಬಿಟ್ಟು ಹೊರಗೆ ಬಾ” ಎಂದನು.

26ಆ ದೆವ್ವವು ಅವನನ್ನು ಒದ್ದಾಡಿಸಿ ಗಟ್ಟಿಯಾಗಿ ಕೂಗುತ್ತಾ, ಅವನೊಳಗಿಂದ ಹೊರಗೆ ಬಂದಿತು.

27ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.

28ಕೂಡಲೆ ಆತನ ಸುದ್ದಿಯು ಗಲಿಲಾಯ ಸೀಮೆಯಲ್ಲೆಲ್ಲಾ ಹಬ್ಬಿತು.

ಲೂಕನು

ಲೂಕ 4:31–33, 35–37

31ಬಳಿಕ ಆತನು ಘಟ್ಟಾ ಇಳಿದು ಗಲಿಲಾಯಕ್ಕೆ ಸೇರಿದ ಕಪೆರ್ನೌಮೆಂಬ ಊರಿಗೆ ಬಂದನು. ಅಲ್ಲಿ ಸಬ್ಬತ್ ದಿನದಲ್ಲಿ ಅವರಿಗೆ ಉಪದೇಶಮಾಡುತ್ತಿರಲು,

32ಆತನ ಮಾತು ಅಧಿಕಾರವುಳ್ಳದ್ದಾಗಿದ್ದದರಿಂದ ಅವರು ಆತನ ಉಪದೇಶಕ್ಕೆ ಅತ್ಯಾಶ್ಚರ್ಯಪಟ್ಟರು.

33ಆ ಸಭಾಮಂದಿರದಲ್ಲಿ ದೆವ್ವಹಿಡಿದ ಒಬ್ಬ ಮನುಷ್ಯನಿದ್ದನು. ಆತನು, “ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವುದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆವು. ನೀನು ದೇವರಿಂದ ಬಂದ ಪರಿಶುದ್ಧನೇ” ಎಂದು ಜೋರಾಗಿ ಕೂಗಿ ಹೇಳಿದನು.

35ಯೇಸು ದೆವ್ವವನ್ನು ಗದರಿಸಿ, “ಸುಮ್ಮನಿರು, ಇವನನ್ನು ಬಿಟ್ಟು ಹೋಗು” ಎನ್ನಲಾಗಿ ಆ ದೆವ್ವವು ಅವನನ್ನು ಎಲ್ಲರ ನಡುವೆ ಬೀಳಿಸಿ ಅವನಿಗೆ ಯಾವ ಕೇಡನ್ನೂ ಮಾಡದೆ ಬಿಟ್ಟುಹೋಯಿತು.

36ಅದಕ್ಕೆ ಎಲ್ಲರು ಬೆರಗಾಗಿ, “ಇದೆಂಥ ಮಾತಾಗಿರಬಹುದು? ಈತನು ಅಧಿಕಾರದಿಂದಲೂ, ಬಲದಿಂದಲೂ ದೆವ್ವಗಳಿಗೆ ಅಪ್ಪಣೆಕೊಡುತ್ತಾನೆ, ಅವು ಬಿಟ್ಟು ಹೋಗುತ್ತವೆ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.

37ಮತ್ತು ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದ ಊರುಗಳಲ್ಲೆಲ್ಲಾ ಹರಡಿತು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು