ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನ ದಾರಿಯಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನ ದಾರಿಯಲ್ಲಿ
ಯೇಸು ಮಕ್ಕಳನ್ನು ಆಶೀರ್ವದಿಸುತ್ತಾನೆ
ಮತ್ತಾ 19:13–15 · ಮಾರ್ಕ 10:13–16 · ಲೂಕ 18:15–17
ಮತ್ತಾ 19:13–1513ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನ ಬಳಿಗೆ ಕರೆತಂದು, ಅವರ ಮೇಲೆ ಆತನು ಕೈಗಳನ್ನಿಟ್ಟು ಪ್ರಾರ್ಥಿಸುವಂತೆ ಕೇಳಿದರು. ಆದರೆ ಶಿಷ್ಯರು ಅವರನ್ನು ಗದರಿಸಿದರು.
14ಆದರೆ ಯೇಸು, “ಮಕ್ಕಳನ್ನು ಬಿಡಿರಿ. ನನ್ನ ಹತ್ತಿರ ಬರುವುದಕ್ಕೆ ಅವರಿಗೆ ಅಡ್ಡಿಮಾಡಬೇಡಿರಿ. ಏಕೆಂದರೆ ಪರಲೋಕ ರಾಜ್ಯವು ಇಂಥವರದೇ” ಎಂದು ಹೇಳಿದನು.
15ಮತ್ತು ಅವರ ಮೇಲೆ ಕೈಯಿಟ್ಟು ಅನಂತರ ಅಲ್ಲಿಂದ ಹೊರಟು ಹೋದನು.
ಮಾರ್ಕ 10:13–1613ಬಳಿಕ ಕೆಲವರು ತಮ್ಮ ಚಿಕ್ಕ ಮಕ್ಕಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ಕರತರಲು ಶಿಷ್ಯರು ಅವರನ್ನು ಗದರಿಸಿದರು.
14ಆದರೆ ಯೇಸು ಅದನ್ನು ಕಂಡು ಕೋಪಗೊಂಡು ಅವರಿಗೆ, “ಚಿಕ್ಕ ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ; ಅವುಗಳಿಗೆ ಅಡ್ಡಿಮಾಡಬೇಡಿರಿ; ಏಕೆಂದರೆ ದೇವರ ರಾಜ್ಯವು ಇಂಥವರದೇ.
15ನಿಮಗೆ ಸತ್ಯವಾಗಿ ಹೇಳುತ್ತೇನೆ ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಎಂದು ಹೇಳಿದನು.
16ಆಗ ಆತನು ಆ ಮಕ್ಕಳನ್ನು ಅಪ್ಪಿಕೊಂಡು ಅವುಗಳ ಮೇಲೆ ಕೈಯಿಟ್ಟು ಆಶೀರ್ವದಿಸಿದನು.
ಲೂಕ 18:15–1715ಕೆಲವರು ತಮ್ಮ ಕೂಸುಗಳನ್ನು ಯೇಸುವಿನಿಂದ ಮುಟ್ಟಿಸಬೇಕೆಂದು ಆತನ ಬಳಿಗೆ ತರಲು, ಶಿಷ್ಯರು ಕಂಡು ಅವರನ್ನು ಗದರಿಸಿದರು.
16ಆದರೆ ಯೇಸು ಆ ಕೂಸುಗಳನ್ನು ತನ್ನ ಬಳಿಗೆ ಕರೆತರಿಸಿ, “ಮಕ್ಕಳನ್ನು ನನ್ನ ಹತ್ತಿರಕ್ಕೆ ಬರಗೊಡಿಸಿರಿ, ಅವುಗಳಿಗೆ ಅಡ್ಡಿಮಾಡಬೇಡಿರಿ, ದೇವರ ರಾಜ್ಯವು ಇಂಥವರದೇ.
17ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ಶಿಶುಭಾವದಿಂದ ದೇವರ ರಾಜ್ಯವನ್ನು ಅಂಗೀಕರಿಸುವುದಿಲ್ಲವೋ ಅವನು ಅದರಲ್ಲಿ ಸೇರುವುದೇ ಇಲ್ಲ” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.