Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೇಸುವಿನ ಶ್ರಮೆಗಳು

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೇಸುವಿನ ಶ್ರಮೆಗಳು

ಮಹಾಯಾಜಕನ ಮತ್ತು ಹಿರೀಸಭೆಯ ಮುಂದೆ

ಮತ್ತಾ 26:57–68 · ಮಾರ್ಕ 14:53–57, 59–65 · ಲೂಕ 22:63, 65–71

ಮತ್ತಾಯನು

ಮತ್ತಾ 26:57–68

57ಯೇಸುವನ್ನು ಹಿಡಿದವರು ಆತನನ್ನು ಮಹಾಯಾಜಕನಾದ ಕಾಯಫನ ಬಳಿಗೆ ಕರೆದುಕೊಂಡು ಹೋದರು, ಅಲ್ಲಿ ಶಾಸ್ತ್ರಿಗಳೂ ಹಿರಿಯರೂ ಒಟ್ಟಾಗಿ ಸೇರಿಬಂದಿದ್ದರು.

58ಆದರೆ ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ, ಮಹಾಯಾಜಕನ ಭವನದ ಅಂಗಳದ ಒಳಗೆ ನುಗ್ಗಿ ಬಂದು ಆತನಿಗೆ ಏನಾಗುವುದೋ ಎಂದು ನೋಡಬೇಕೆಂದು ಸೈನಿಕರ ಸಂಗಡ ಕುಳಿತುಕೊಂಡನು.

59ಆಗ ಮುಖ್ಯಯಾಜಕರೂ ಹಿರೀಸಭೆಯವರೆಲ್ಲರೂ ಯೇಸುವನ್ನು ಕೊಲ್ಲಿಸಬೇಕೆಂದು ಆತನ ಮೇಲೆ ಸುಳ್ಳುಸಾಕ್ಷಿಯನ್ನು ಹುಡುಕಿದರು; ಆದರೆ ಬಹು ಮಂದಿ ಸುಳ್ಳುಸಾಕ್ಷಿಗಳು ಮುಂದೆ ಬಂದರೂ ಏನೂ ಸಿಕ್ಕಲಿಲ್ಲ.

60ಅನಂತರ ಇಬ್ಬರು ಮುಂದೆ ಬಂದು,

61“ನಾನು ದೇವರ ಆಲಯವನ್ನು ಕೆಡವಿಬಿಟ್ಟು ಮೂರು ದಿನಗಳಲ್ಲಿ ತಿರುಗಿ ಕಟ್ಟಬಲ್ಲೆನೆಂದು ‘ಈ ಮನುಷ್ಯನು ಹೇಳಿದನು’” ಅಂದರು;

62ಆಗ ಮಹಾಯಾಜಕನು ಎದ್ದು ನಿಂತು, “ನೀನೇನೂ ಉತ್ತರಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಆರೋಪಗಳು ನಿಜವೇನು?” ಎಂದು ಆತನನ್ನು ಕೇಳಿದನು. ಆದರೆ ಯೇಸು ಸುಮ್ಮನಿದ್ದನು.

63ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.

64ಯೇಸು ಪ್ರತ್ಯುತ್ತರವಾಗಿ, “ನೀನೇ ಹೇಳಿದ್ದೀ; ಆದರೆ ನಾನು ನಿಮಗೆ ಹೇಳುವುದೇನೆಂದರೆ, ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳ ಮೇಲೆ ಕುಳಿತು ಬರುವುದನ್ನೂ ಕಾಣುವಿರಿ” ಅಂದನು.

65ಆಗ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇವನು ದೇವದೂಷಣೆಯ ಮಾತನಾಡಿದ್ದಾನೆ; ನಮಗೆ ಸಾಕ್ಷಿಗಳು ಇನ್ನು ಯಾತಕ್ಕೆ ಬೇಕು? ನೋಡಿ ಇವನು ಈಗಲೇ ಆಡಿದ ದೂಷಣೆಯ ಮಾತನ್ನು ಕೇಳಿದಿರಲ್ಲಾ;

66ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.

67ಆಗ ಅವರು ಆತನ ಮುಖದ ಮೇಲೆ ಉಗುಳಿ ಆತನನ್ನು ಗುದ್ದಿದರು; ಕೆಲವರು ಆತನ ಕೆನ್ನೆಗೆ ಹೊಡೆದು,

68“ಕ್ರಿಸ್ತನೇ, ನಿನ್ನನ್ನು ಹೊಡೆದವರಾರು? ನಮಗೆ ಪ್ರವಾದನೆ ಹೇಳು” ಅಂದರು.

ಮಾರ್ಕನು

ಮಾರ್ಕ 14:53–57, 59–65

53ಅವರು ಯೇಸುವನ್ನು ಮಹಾಯಾಜಕನ ಬಳಿಗೆ ಕರೆದುಕೊಂಡು ಹೋದರು. ಆತನ ಸಂಗಡ ಮುಖ್ಯಯಾಜಕರೆಲ್ಲರೂ, ಹಿರಿಯರು, ಶಾಸ್ತ್ರಿಗಳು ಕೂಡಿಬಂದರು.

54ಮತ್ತು ಪೇತ್ರನು ದೂರದಿಂದ ಆತನನ್ನು ಹಿಂಬಾಲಿಸುತ್ತಾ ಮಹಾಯಾಜಕನ ಅಂಗಳದೊಳಗೆ ಬಂದು ಕಾವಲುಗಾರರ ಸಂಗಡ ಸೇರಿ ಬೆಂಕಿಯ ಮುಂದೆ ಕುಳಿತು ಚಳಿ ಕಾಯಿಸಿಕೊಳ್ಳುತ್ತಿದ್ದನು.

55ಆಗ ಮುಖ್ಯಯಾಜಕರು ಮತ್ತು ಹಿರೀಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಆತನ ವಿರುದ್ಧವಾಗಿ ಸಾಕ್ಷಿ ಹುಡುಕುತ್ತಾ ಇದ್ದರು. ಆದರೆ ಅವರಿಗೆ ಸರಿಯಾದ ಒಂದು ಸಾಕ್ಷ್ಯವೂ ದೊರಕಲಿಲ್ಲ.

56ಅನೇಕರು ಬಂದು ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.

57ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.

59ಹೀಗೆ ಹೇಳಿದರೂ ಅವರ ಸಾಕ್ಷಿ ಒಂದಕ್ಕೊಂದು ಸರಿಹೊಂದಲಿಲ್ಲ.

60ಆಗ ಮಹಾಯಾಜಕನು ಅವರ ಮಧ್ಯದಲ್ಲಿ ಎದ್ದು ನಿಂತು, “ನೀನೇನೂ ಉತ್ತರ ಹೇಳುವುದಿಲ್ಲವೋ? ಇವರು ನಿನ್ನ ಮೇಲೆ ಹೇಳುವ ಈ ಸಾಕ್ಷಿ ಏನು?” ಎಂದು ಯೇಸುವನ್ನು ಕೇಳಿದನು.

61ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.

62ಯೇಸುವು “ಹೌದು ನಾನೇ! “ಇದಲ್ಲದೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವುದನ್ನೂ, ಆಕಾಶದ ಮೇಘಗಳಲ್ಲಿ ಬರುವುದನ್ನೂ ನೀವು ನೋಡುವಿರಿ” ಎಂದನು.

63ಇದನ್ನು ಕೇಳಿ ಮಹಾಯಾಜಕನು ತನ್ನ ಬಟ್ಟೆಗಳನ್ನು ಹರಿದುಕೊಂಡು, “ಇನ್ನೂ ನಮಗೆ ಸಾಕ್ಷಿಗಳ ಅಗತ್ಯವೇನಿದೆ?

64ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.

65ಅನಂತರ ಕೆಲವರು ಆತನ ಮೇಲೆ ಉಗುಳಿ, ಆತನ ಮುಖಕ್ಕೆ ಮುಸುಕನ್ನು ಹಾಕಿ, ಗುದ್ದಿ, ಈಗ “ಪ್ರವಾದಿಸು” ಎಂದರು. ಕಾವಲುಗಾರರು ಆತನನ್ನು ತಮ್ಮ ವಶಕ್ಕೆ ತೆಗೆದುಕೊಂಡು ಆತನಿಗೆ ಹೊಡೆದರು.

ಲೂಕನು

ಲೂಕ 22:63, 65–71

63ಆ ಮೇಲೆ ಯೇಸುವನ್ನು ಹಿಡಿದವರು ಆತನನ್ನು ಪರಿಹಾಸ್ಯಮಾಡುತ್ತಾ, ಆತನಿಗೆ ಮುಸುಕುಹಾಕಿ ಹೊಡೆದು, “ನಿನ್ನನ್ನು ಹೊಡೆದವನಾರು? ಪ್ರವಾದನೆ ಹೇಳು” ಎಂದು ಆತನನ್ನು ಕೇಳಿದರು.

65ಆತನ ಕುರಿತು ಇನ್ನೂ ಅನೇಕ ದೂಷಣೆಯ ಮಾತುಗಳನ್ನಾಡಿದರು.

66ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,

67“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, “ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.

68ನಾನು ನಿಮ್ಮನ್ನು ಏನಾದರೂ ಕೇಳಿದರೆ ನೀವು ಉತ್ತರಕೊಡುವುದಿಲ್ಲ.

69ಆದರೆ ಇಂದಿನಿಂದ ಮನುಷ್ಯಕುಮಾರನು ಸರ್ವಶಕ್ತನಾದ ದೇವರ ಬಲಗಡೆಯಲ್ಲಿ ಆಸೀನನಾಗಿರುವನು” ಎಂದು ಹೇಳಿದನು.

70ಆಗ ಎಲ್ಲರು, “ಹಾಗಾದರೆ ನೀನು ದೇವರ ಕುಮಾರನೋ?” ಎಂದು ಕೇಳಲು ಆತನು ಅವರಿಗೆ, “ನನ್ನನ್ನು ಕುರಿತು ದೇವಕುಮಾರನೆಂದು ನೀವೇ ಹೇಳಿದ್ದೀರಿ” ಎಂದು ಹೇಳಿದನು.

71ಅದಕ್ಕೆ ಅವರು, “ನಮಗೆ ಸಾಕ್ಷಿ ಇನ್ನು ಯಾತಕ್ಕೆ ಬೇಕು? ನಾವೇ ಇವನ ಬಾಯಿಂದ ಕೇಳಿದೆವಲ್ಲಾ” ಅಂದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು