45ಮಧ್ಯಾಹ್ನ ಹನ್ನೆರಡು ಘಂಟೆಯಿಂದ ಮೂರು ಘಂಟೆಯ ವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.
46ಸುಮಾರು ಮೂರು ಘಂಟೆಗೆ ಯೇಸು, “ಏಲೀ, ಏಲೀ, ಲಮಾ ಸಬಕ್ತಾನೀ” ಅಂದರೆ, “ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ” ಎಂದು ಮಹಾ ಧ್ವನಿಯಿಂದ ಕೂಗಿದನು.
47ಅಲ್ಲಿ ನಿಂತಿದ್ದವರಲ್ಲಿ ಕೆಲವರು ಅದನ್ನು ಕೇಳಿ, “ಇವನು ಎಲೀಯನನ್ನು ಕರೆಯುತ್ತಿದ್ದಾನೆ” ಅಂದನು.
48ಕೂಡಲೆ ಅವರಲ್ಲಿ ಒಬ್ಬನು ಓಡಿಹೋಗಿ ಸ್ಪಂಜನ್ನು ತಂದು ಹುಳಿರಸದಿಂದ ತುಂಬಿಸಿ ಕೋಲಿಗೆ ಸಿಕ್ಕಿಸಿ ಆತನಿಗೆ ಕುಡಿಯುವುದಕ್ಕೆ ಕೊಟ್ಟನು.
49ಮಿಕ್ಕಾದವರು, “ಬಿಡು, ಎಲೀಯನು ಬಂದು ಅವನನ್ನು ರಕ್ಷಿಸುವನೇನೋ ನೋಡೋಣ” ಅಂದರು.
50ಅನಂತರ ಯೇಸು ತಿರುಗಿ ಮಹಾ ಧ್ವನಿಯಿಂದ ಕೂಗಿ ಪ್ರಾಣಬಿಟ್ಟನು.
51ಆಗ ಇಗೋ, ದೇವಾಲಯದ ಪರದೆಯು ಮೇಲಿಂದ ಕೆಳಗಿನವರೆಗೂ ಹರಿದು ಎರಡು ಭಾಗವಾಯಿತು; ಭೂಮಿಯು ನಡುಗಿತು;
52ಬಂಡೆಗಳು ಸೀಳಿಹೋದವು; ಸಮಾಧಿಗಳು ತೆರೆದವು; ನಿದ್ರೆಹೋಗಿದ್ದ ಅನೇಕ ಭಕ್ತರ ದೇಹಗಳು ಜೀವದಿಂದ ಎದ್ದವು;
53ಮತ್ತು ಆತನ ಪುನರುತ್ಥಾನವಾದ ಮೇಲೆ ಸಮಾಧಿಗಳೊಳಗಿಂದ ಹೊರಗೆ ಬಂದು ಪರಿಶುದ್ಧ ಪಟ್ಟಣದೊಳಗೆ ಹೋಗಿ ಅನೇಕರಿಗೆ ಕಾಣಿಸಿಕೊಂಡರು.
54ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ, ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು, “ನಿಜವಾಗಿ ಈತನು ದೇವಕುಮಾರನಾಗಿದ್ದನು” ಅಂದರು.
55ಇದಲ್ಲದೆ ಅನೇಕ ಸ್ತ್ರೀಯರು ಅಲ್ಲಿ ಇದ್ದು ದೂರದಿಂದ ಇದನ್ನು ನೋಡುತ್ತಿದ್ದರು. ಇವರು ಯೇಸುವಿನ ಸೇವೆಮಾಡುತ್ತಾ ಗಲಿಲಾಯದಿಂದ ಆತನ ಹಿಂದೆ ಬಂದವರಾಗಿದ್ದರು.
56ಇವರಲ್ಲಿ ಮಗ್ದಲದ ಮರಿಯಳೂ ಯಾಕೋಬ ಯೋಸೆಯರ ತಾಯಿಯಾದ ಮರಿಯಳೂ ಜೆಬೆದಾಯನ ಮಕ್ಕಳ ತಾಯಿಯೂ ಇದ್ದರು.