ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ
ಸಂಜೆ ಅನೇಕರು ಗುಣಹೊಂದುತ್ತಾರೆ
ಮತ್ತಾ 8:16–17 · ಮಾರ್ಕ 1:32–34 · ಲೂಕ 4:40–41
ಮತ್ತಾ 8:16–1716ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
17ಇದರಿಂದ “ನಮ್ಮ ಬೇನೆಗಳನ್ನು ತಾನೇ ತೆಗೆದುಕೊಂಡು ನಮ್ಮ ರೋಗಗಳನ್ನು ಹೊತ್ತುಕೊಂಡನು” ಎಂದು ಯೆಶಾಯನೆಂಬ ಪ್ರವಾದಿ ನುಡಿದಂತಹ ಮಾತು ಹೀಗೆ ನೆರವೇರಿತು.
ಮಾರ್ಕ 1:32–3432ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
33ಊರಿನವರೆಲ್ಲಾ ಬಾಗಿಲಿನ ಮುಂದೆ ಒಟ್ಟುಗೂಡಿದ್ದರು.
34ಆಗ ಆತನು ನಾನಾ ರೀತಿಯ ರೋಗಗಳಿಂದ ಅಸ್ವಸ್ಥರಾಗಿದ್ದ ಬಹು ಜನರನ್ನು ಸ್ವಸ್ಥಮಾಡಿ ಅನೇಕ ದೆವ್ವಗಳನ್ನು ಬಿಡಿಸಿದನು. ಆದರೆ ಅವುಗಳಿಗೆ ತಾನು ಇಂಥವನೆಂದು ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡಗೊಡಿಸಲಿಲ್ಲ.
ಲೂಕ 4:40–4140ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
41ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.