Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ

ಉಪವಾಸದ ಕುರಿತು ಪ್ರಶ್ನೆ

ಮತ್ತಾ 9:14–17 · ಮಾರ್ಕ 2:18–22 · ಲೂಕ 5:33–39

ಮತ್ತಾಯನು

ಮತ್ತಾ 9:14–17

14ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,

15“ಮದುವೆಯ ಅತಿಥಿಗಳು ತಮ್ಮ ಸಂಗಡ ಮದಲಿಂಗನು ಇರುವ ತನಕ ದುಃಖಪಡುವರೇ? ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡುಹೋಗುವ ಕಾಲ ಬರುತ್ತದೆ; ಆಗ ಅವರು ಉಪವಾಸಮಾಡುವರು. ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ; ಹಾಗೆ ಹಚ್ಚಿದರೆ

16ಆ ತ್ಯಾಪೆಯು ಹಳೇ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುವುದು.

17ಇದಲ್ಲದೆ ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಹಾಕಿಡುವುದಿಲ್ಲ; ಇಟ್ಟರೆ ಬುದ್ದಲಿಗಳು ಒಡೆದು ದ್ರಾಕ್ಷಾರಸವು ಚೆಲ್ಲಿಹೋಗುವುದಲ್ಲದೆ, ಬುದ್ದಲಿಗಳು ನಾಶವಾಗುವವು; ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡುತ್ತಾರೆ, ಆಗ ಎರಡೂ ಸಂರಕ್ಷಿಸಲ್ಪಡುವವು” ಎಂದು ಹೇಳಿದನು.

ಮಾರ್ಕನು

ಮಾರ್ಕ 2:18–22

18ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.

19ಅದಕ್ಕೆ ಯೇಸು ಅವರಿಗೆ, “ಮದುವೆಯ ಜನರು ತಮ್ಮ ಸಂಗಡ ಮದಲಿಂಗನು ಇರುವಲ್ಲಿ ಉಪವಾಸಮಾಡುವುದುಂಟೇ? ಮದಲಿಂಗನು ತಮ್ಮ ಸಂಗಡ ಇರುವ ತನಕ ಅವರು ಉಪವಾಸ ಮಾಡಲಾರರು.

20ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಂಡು ಹೋಗುವ ಕಾಲ ಬರುತ್ತದೆ. ಆ ಕಾಲದಲ್ಲಿ ಅವರು ಉಪವಾಸ ಮಾಡುವರು.

21“ಯಾರೂ ಹೊಸ ಬಟ್ಟೆಯ ತುಂಡನ್ನು ಹಳೆಯ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ. ಹಚ್ಚಿದರೆ ಆ ಹೊಸ ತ್ಯಾಪೆಯು ಹಳೆಯ ವಸ್ತ್ರವನ್ನು ಹಿಂಜುವುದರಿಂದ ಹರಕು ಹೆಚ್ಚಾಗುತ್ತದೆ.

22ಮತ್ತು ಹಳೆಯ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ, ಹಾಕಿದರೆ ಆ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ದ್ರಾಕ್ಷಾರಸವು ಮತ್ತು ಬುದ್ದಲಿಗಳು ಎರಡೂ ನಾಶವಾಗುವವು. ಆದುದರಿಂದ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು” ಎಂದು ಹೇಳಿದನು.

ಲೂಕನು

ಲೂಕ 5:33–39

33ಅವರು ಆತನಿಗೆ, “ಯೋಹಾನನ ಶಿಷ್ಯರು ಪದೇಪದೇ ಉಪವಾಸದಿಂದ ವಿಜ್ಞಾಪನೆಗಳನ್ನು ಮಾಡುತ್ತಾ ಇರುತ್ತಾರೆ; ಅದರಂತೆ ಫರಿಸಾಯರ ಶಿಷ್ಯರೂ ಮಾಡುತ್ತಾರೆ; ಆದರೆ ನಿನ್ನ ಶಿಷ್ಯರು ಊಟಮಾಡುತ್ತಾರೆ ಕುಡಿಯುತ್ತಾರೆ” ಎಂದು ಹೇಳಲು,

34ಯೇಸು ಅವರಿಗೆ, “ಮದಲಿಂಗನು ಮದುವೆಯ ಅತಿಥಿಗಳ ಸಂಗಡ ಇರುವಲ್ಲಿ ಅವರಿಗೆ ಉಪವಾಸವಿರಿಸುವುದಕ್ಕೆ ನಿಮ್ಮಿಂದಾದೀತೇ?

35ಆದರೆ ಮದಲಿಂಗನನ್ನು ಅವರ ಬಳಿಯಿಂದ ತೆಗೆದುಕೊಳ್ಳಲ್ಪಡುವ ಕಾಲ ಬರುತ್ತದೆ. ಆ ಕಾಲದಲ್ಲೆ ಅವರು ಉಪವಾಸಮಾಡುವರು” ಎಂದು ಉತ್ತರಕೊಟ್ಟನು.

36ಯೇಸು ಅವರಿಗೆ ಒಂದು ಸಾಮ್ಯವನ್ನು ಸಹ ಹೇಳಿದನು, ಅದೇನೆಂದರೆ, “ಯಾರೂ ಹೊಸ ವಸ್ತ್ರದಿಂದ ಒಂದು ತುಂಡನ್ನು ತೆಗೆದುಕೊಂಡು ಹಳೇ ವಸ್ತ್ರಕ್ಕೆ ತ್ಯಾಪೆ ಹಚ್ಚುವುದಿಲ್ಲ, ಹಚ್ಚಿದರೆ ಆ ಹೊಸದನ್ನು ಹರಿದು ಕೆಡಿಸಿದ ಹಾಗಾಗುವುದಲ್ಲದೆ, ಹೊಸದರಿಂದ ಹರಿದು ಹಚ್ಚಿದ ತ್ಯಾಪೆಯು ಹಳೆಯ ವಸ್ತ್ರಕ್ಕೆ ಒಪ್ಪುವದೂ ಇಲ್ಲ.

37ಮತ್ತು ಹಳೇ ಬುದ್ದಲಿಗಳಲ್ಲಿ ಹೊಸ ದ್ರಾಕ್ಷಾರಸವನ್ನು ಯಾರೂ ಹಾಕಿಡುವುದಿಲ್ಲ; ಹಾಗೆ ಇಟ್ಟರೆ ಆ ಹೊಸ ದ್ರಾಕ್ಷಾರಸವು ಬುದ್ದಲಿಗಳನ್ನು ಒಡೆದು ಚೆಲ್ಲಿಹೋಗುವುದಲ್ಲದೆ ಬುದ್ದಲಿಗಳೂ ಒಡೆದು ಹೋಗುವವು.

38ಆದರೆ ಹೊಸ ದ್ರಾಕ್ಷಾರಸವನ್ನು ಹೊಸ ಬುದ್ದಲಿಗಳಲ್ಲಿ ಹಾಕಿಡತಕ್ಕದ್ದು.

39ಇದಲ್ಲದೆ ಹಳೇ ದ್ರಾಕ್ಷಾರಸವನ್ನು ಕುಡಿದವನು ಹೊಸದು ಬೇಕು ಅನ್ನುವುದಿಲ್ಲ, ‘ಹಳೆಯದೇ ಉತ್ತಮ’ ಅನ್ನುವನು.”

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು