ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನಲ್ಲಿ
ಅಂಜೂರದ ಮರದ ಪಾಠ
ಮತ್ತಾ 24:32–35 · ಮಾರ್ಕ 13:28–31 · ಲೂಕ 21:29–33
ಮತ್ತಾ 24:32–3532“ಅಂಜೂರ ಮರದ ದೃಷ್ಟಾಂತದಿಂದ ಬುದ್ಧಿಕಲಿಯಿರಿ. ಅದರ ಕೊಂಬೆ ಇನ್ನು ಎಳೆಯದಾಗಿದ್ದು ಎಲೆ ಬಿಡುವಾಗ ಬೇಸಿಗೆಯು ಹತ್ತಿರವಾಯಿತೆಂದು ತಿಳಿದುಕೊಳ್ಳುತ್ತೀರಲ್ಲಾ.
33ಹಾಗೆಯೇ ನೀವು ಸಹ ಇದನ್ನೆಲ್ಲಾ ನೋಡುವಾಗ ಆ ದಿನವು ಹತ್ತಿರವಿದೆ, ಹೊಸ್ತಿಲಲ್ಲೇ ಇದೆ ಎಂದು ತಿಳಿದುಕೊಳ್ಳಿರಿ.
34ಇದೆಲ್ಲಾ ಆಗುವ ತನಕ ಈ ಸಂತತಿಯು ಅಳಿದುಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
35ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ವಾಕ್ಯಗಳೋ ಅಳಿದುಹೋಗುವುದೇ ಇಲ್ಲ.
ಮಾರ್ಕ 13:28–3128“ಅಂಜೂರ ಮರವನ್ನು ನೋಡಿ ಒಂದು ಪಾಠವನ್ನು ಕಲಿತುಕೊಳ್ಳಿ. ಅದರ ಕೊಂಬೆಗಳಲ್ಲಿ ಇನ್ನೂ ಎಳೆದಾಗಿ ಎಲೆಗಳು ಚಿಗುರುವಾಗ ಬೇಸಿಗೆಯು ಸಮೀಪಿಸಿತು ಎಂದು ಅರಿತುಕೊಳ್ಳುತ್ತಿರಲ್ಲಾ.
29ಹಾಗೆಯೇ ಇವೆಲ್ಲವೂ ಆಗುವುದನ್ನು ನೀವು ನೋಡುವಾಗ ಬಾಗಿಲ ಹತ್ತಿರದಲ್ಲಿಯೇ ಇದ್ದೆ ಎಂದು ತಿಳಿದುಕೊಳ್ಳಿರಿ.
30ಇದೆಲ್ಲವೂ ನೆರವೇರುವವರೆಗೂ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.
31ಆಕಾಶವೂ, ಭೂಮಿಯೂ ಅಳಿದು ಹೋಗುವವು; ಆದರೆ ನನ್ನ ವಾಕ್ಯವು ಅಳಿದು ಹೋಗುವುದೇ ಇಲ್ಲ.”
ಲೂಕ 21:29–3329ಯೇಸು ಅವರಿಗೆ ಒಂದು ಸಾಮ್ಯವಾಗಿ ಹೇಳಿದ್ದೇನಂದರೆ, “ಅಂಜೂರ ಮುಂತಾದ ಮರಗಳನ್ನೂ ನೋಡಿರಿ.
30ಅವು ಚಿಗುರಿದ ಕೂಡಲೆ ನೀವು ಅವನ್ನು ಕಂಡು ಈಗ ಬೇಸಿಗೆಯು ಹತ್ತಿರವಾಯಿತೆಂದು ನೀವಾಗಿ ತಿಳಿದುಕೊಳ್ಳುತ್ತೀರಲ್ಲಾ.
31ಹಾಗೆಯೇ ಇವುಗಳಾಗುವುದನ್ನು ನೋಡುವಾಗ ದೇವರ ರಾಜ್ಯವು ಹತ್ತಿರವಾಯಿತೆಂದು ನೀವು ತಿಳಿದುಕೊಳ್ಳಿರಿ.
32“ಇವೆಲ್ಲಾ ಆಗುವ ತನಕ ಈ ಸಂತತಿಯು ಅಳಿದು ಹೋಗುವುದೇ ಇಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
33ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದುಹೋಗುವುದೇ ಇಲ್ಲ.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.