ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನಲ್ಲಿ
ಒಣಗಿಹೋದ ಅಂಜೂರದ ಮರ
ಮತ್ತಾ 21:18–22 · ಮಾರ್ಕ 11:20–25
ಮತ್ತಾ 21:18–2218ಬೆಳಗ್ಗೆ ಯೇಸು ಪಟ್ಟಣಕ್ಕೆ ಹಿಂತಿರುಗಿ ಬರುತ್ತಿರುವಾಗ ಹಸಿದಿದ್ದನು.
19ದಾರಿಯಲ್ಲಿ ಒಂದು ಅಂಜೂರದ ಮರವನ್ನು ಕಂಡು ಅದರ ಹತ್ತಿರಕ್ಕೆ ಹೋಗಿ ಅದರಲ್ಲಿ ಬರೀ ಎಲೆಗಳು ಮಾತ್ರ ಇರುವುದನ್ನು ಕಂಡು ಅದಕ್ಕೆ, “ಇನ್ನು ಮೇಲೆ ನಿನ್ನಲ್ಲಿ ಎಂದೆಂದಿಗೂ ಫಲವು ಫಲಿಸದೆ ಹೋಗಲಿ” ಎಂದು ಹೇಳಿದನು. ಆ ಕ್ಷಣವೇ ಆ ಅಂಜೂರದ ಮರವು ಒಣಗಿಹೋಯಿತು.
20ಶಿಷ್ಯರು ಅದನ್ನು ನೋಡಿ ಬೆರಗಾಗಿ, “ಈ ಅಂಜೂರದ ಮರವು ಒಂದು ಕ್ಷಣದಲ್ಲೇ ಒಣಗಿಹೋಯಿತಲ್ಲಾ” ಎಂದು ಆಶ್ಚರ್ಯಗೊಂಡರು.
21ಅದಕ್ಕೆ ಯೇಸು, “ನಿಮಗೆ ಸತ್ಯವಾಗಿ ಹೇಳುತ್ತೇನೆ ನೀವು ಸಂಶಯಪಡದೆ ನಂಬಿದರೆ ಈ ಅಂಜೂರದ ಮರಕ್ಕೆ ಮಾಡಿದಂಥದನ್ನು ನೀವು ಮಾಡುವಿರಿ ಮಾತ್ರವಲ್ಲದೆ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು’ ಎಂದು ಹೇಳಿದರೆ ಅದೂ ಆಗುವುದು.
22ನೀವು ನಂಬಿಕೊಂಡು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಅದನ್ನೆಲ್ಲಾ ಹೊಂದುವಿರಿ” ಅಂದನು.
ಮಾರ್ಕ 11:20–2520ಬೆಳಗ್ಗೆ ಅವರು ಬರುತ್ತಿರುವಾಗ ಆ ಅಂಜೂರದ ಮರವು ಬೇರುಸಹಿತ ಒಣಗಿಹೋಗಿರುವುದನ್ನು ಕಂಡರು.
21ಆಗ ಪೇತ್ರನು ಹಿಂದಿನ ದಿನದ ಸಂಗತಿಯನ್ನು ನೆನಪಿಸಿಕೊಂಡು ಆತನಿಗೆ, “ಗುರುವೇ, ಇಗೋ, ನೀನು ಶಾಪ ಕೊಟ್ಟ ಅಂಜೂರದ ಮರವು ಒಣಗಿಹೋಗಿದೆ” ಎಂದು ಹೇಳಿದ್ದಕ್ಕೆ
22ಯೇಸು ಹೇಳಿದ್ದೇನಂದರೆ, “ನಿಮಗೆ ದೇವರಲ್ಲಿ ನಂಬಿಕೆಯಿರಲಿ.
23ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು!’ ಎಂದು ಹೇಳಿ ತನ್ನ ಮನಸ್ಸಿನಲ್ಲಿ ಸಂಶಯಪಡದೆ ತಾನು ಹೇಳಿದ್ದು ಆಗುವುದೆಂದು ನಂಬಿದರೆ ಅವನು ಹೇಳಿದಂತೆಯೇ ಆಗುವುದು.
24ಆದಕಾರಣ ನೀವು ಪ್ರಾರ್ಥನೆಮಾಡಿ ಏನೇನು ಬೇಡಿಕೊಳ್ಳುತ್ತೀರೋ ಅದನ್ನೆಲ್ಲಾ ಹೊಂದಿದ್ದೇವೆಂದು ನಂಬಿರಿ; ಅದು ನಿಮಗೆ ಸಿಕ್ಕುವುದೆಂದು ನಿಮಗೆ ಹೇಳುತ್ತೇನೆ.
25ಇದಲ್ಲದೆ ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರ ಮೇಲೆ ಏನಾದರೂ ವಿರೋಧವಿದ್ದರೆ ಅದನ್ನು ಕ್ಷಮಿಸಿರಿ; ಆಗ ಪರಲೋಕದಲ್ಲಿರುವ ನಿಮ್ಮ ತಂದೆಯು ಸಹ ನಿಮ್ಮ ತಪ್ಪುಗಳನ್ನು ಕ್ಷಮಿಸುವನು” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.