Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ

ಮೊದಲ ಶಿಷ್ಯರ ಕರೆ

ಮತ್ತಾ 4:18–22 · ಮಾರ್ಕ 1:16–20 · ಲೂಕ 5:1–11

ಮತ್ತಾಯನು

ಮತ್ತಾ 4:18–22

18ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.

19ಅವರಿಗೆ ಆತನು, “ನನ್ನನ್ನು ಹಿಂಬಾಲಿಸಿರಿ, ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳುತ್ತಲೇ,

20ತಕ್ಷಣ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

21ಯೇಸು ಅಲ್ಲಿಂದ ಮುಂದೆ ಹೋಗುತ್ತಿರುವಾಗ ಇನ್ನಿಬ್ಬರು ಅಣ್ಣ ತಮ್ಮಂದಿರನ್ನು ಅಂದರೆ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನ್ನೂ ಕಂಡನು; ಇವರು ತಮ್ಮ ತಂದೆಯಾದ ಜೆಬೆದಾಯನ ಸಂಗಡ ದೋಣಿಯಲ್ಲಿ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು. ಆತನು ಅವರನ್ನು ಕರೆದನು.

22ಕೂಡಲೆ ಅವರು ದೋಣಿಯನ್ನು ಮತ್ತು ತಮ್ಮ ತಂದೆಯನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

ಮಾರ್ಕನು

ಮಾರ್ಕ 1:16–20

16ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.

17ಯೇಸು ಅವರಿಗೆ, “ನನ್ನನ್ನು ಹಿಂಬಾಲಿಸಿರಿ; ಮನುಷ್ಯರನ್ನು ಹಿಡಿಯುವ ಬೆಸ್ತರನ್ನಾಗಿ ನಿಮ್ಮನ್ನು ಮಾಡುವೆನು” ಎಂದು ಹೇಳಿದನು.

18ಕೂಡಲೆ ಅವರು ತಮ್ಮ ಬಲೆಗಳನ್ನು ಬಿಟ್ಟು ಆತನನ್ನು ಹಿಂಬಾಲಿಸಿದರು.

19ಯೇಸು ಇನ್ನು ಸ್ವಲ್ಪ ಮುಂದೆ ಹೋಗಿ ಜೆಬೆದಾಯನ ಮಗನಾದ ಯಾಕೋಬನನ್ನೂ ಅವನ ತಮ್ಮನಾದ ಯೋಹಾನನನ್ನೂ ಕಂಡನು; ಅವರು ದೋಣಿಯೊಳಗೆ ತಮ್ಮ ಬಲೆಗಳನ್ನು ಸರಿಮಾಡುತ್ತಿದ್ದರು.

20ಅವನು ಕೂಡಲೇ ಅವರನ್ನೂ ಕರೆದನು. ಅವರು ತಮ್ಮ ತಂದೆಯಾದ ಜೆಬೆದಾಯನನ್ನು ಕೂಲಿಯಾಳುಗಳ ಸಂಗಡ ದೋಣಿಯಲ್ಲಿ ಬಿಟ್ಟು ಆತನನ್ನು ಹಿಂಬಾಲಿಸಿದರು.

ಲೂಕನು

ಲೂಕ 5:1–11

1ಒಮ್ಮೆ ಯೇಸು ಗೆನೆಜರೇತ್ ಸರೋವರದ ದಡದಲ್ಲಿ ನಿಂತಿದ್ದಾಗ ಜನರು ಗುಂಪಾಗಿ ಬಂದು ದೇವರ ವಾಕ್ಯವನ್ನು ಕೇಳುವುದಕ್ಕಾಗಿ ಆತನನ್ನು ಸುತ್ತುವರೆದು ನೂಕಾಡುತ್ತಿದ್ದರು.

2ಯೇಸು ಆ ಸರೋವರದ ದಡದಲ್ಲಿದ್ದ ಎರಡು ದೋಣಿಗಳನ್ನು ಕಂಡನು. ಬೆಸ್ತರು ಅವುಗಳೊಳಗಿಂದ ಹೊರಗೆ ಬಂದು ತಮ್ಮ ಬಲೆಗಳನ್ನು ತೊಳೆಯುತ್ತಿದ್ದರು.

3ಆ ದೋಣಿಗಳಲ್ಲಿ, ಸೀಮೋನನ ದೋಣಿಯನ್ನು ಯೇಸು ಹತ್ತಿ ದಡದಿಂದ ಸ್ವಲ್ಪ ದೂರಕ್ಕೆ ನೂಕಬೇಕೆಂದು ಅವನನ್ನು ಕೇಳಿಕೊಂಡನು. ತರುವಾಯ ಯೇಸು ಕುಳಿತುಕೊಂಡು ದೋಣಿಯೊಳಗಿಂದಲೇ ಆ ಜನರ ಗುಂಪಿಗೆ ಉಪದೇಶಮಾಡಿದನು.

4ಮಾತನಾಡುವುದನ್ನು ಮುಗಿಸಿದ ಮೇಲೆ ಸೀಮೋನನಿಗೆ, “ಆಳವಾದ ಸ್ಥಳಕ್ಕೆ ದೋಣಿಯನ್ನು ನಡೆಸಿ ಮೀನುಹಿಡಿಯಲು ನಿಮ್ಮ ಬಲೆಗಳನ್ನು ಬೀಸಿರಿ” ಎಂದು ಹೇಳಿದನು.

5ಅದಕ್ಕೆ ಸೀಮೋನನು, “ಗುರುವೇ, ನಾವು ರಾತ್ರಿಯೆಲ್ಲಾ ಪ್ರಯತ್ನಪಟ್ಟರೂ ಏನೂ ಸಿಕ್ಕಲಿಲ್ಲ; ಆದರೆ ನಿನ್ನ ಮಾತಿನ ಮೇಲೆ ಬಲೆಗಳನ್ನು ಬೀಸುತ್ತೇವೆ” ಅಂದನು.

6ಅವರು ಬಲೆಗಳನ್ನು ಬೀಸಿದ ಮೇಲೆ ಮೀನುಗಳು ರಾಶಿರಾಶಿಯಾಗಿ ಬಲೆಗೆ ಸಿಕ್ಕಿಕೊಂಡಿದ್ದರ ಪರಿಣಾಮ ಬಲೆಗಳು ಹರಿದುಹೋಗುವಂತ್ತಿದವು.

7ಆಗ ಅವರು ಮತ್ತೊಂದು ದೋಣಿಯಲ್ಲಿದ್ದ ತಮ್ಮ ಸಂಗಡಿಗರನ್ನೂ ಕರೆದು, ನೀವು ಬಂದು ನಮಗೆ ನೆರವಾಗಬೇಕೆಂದು ಸನ್ನೆಮಾಡಿದರು. ಅವರು ಬಂದು ಆ ಎರಡು ದೋಣಿಗಳಲ್ಲಿ ಮೀನುಗಳನ್ನು ತುಂಬಿಸಲು, ಅವು ಮುಳುಗುವ ಹಾಗಾದವು.

8ಸೀಮೋನ್ ಪೇತ್ರನು ಇದನ್ನು ಕಂಡು ಯೇಸುವಿನ ಮೊಣಕಾಲಿಗೆ ಬಿದ್ದು, “ಕರ್ತನೇ, ನಾನು ಪಾಪಾತ್ಮನು; ನನ್ನನ್ನು ಬಿಟ್ಟುಹೋಗು” ಅಂದನು.

9ಏಕೆಂದರೆ ಅವನಿಗೂ ಅವನ ಸಂಗಡ ಇದ್ದವರೆಲ್ಲರಿಗೂ ತಾವು ಹಿಡಿದ ಮೀನುಗಳ ನಿಮಿತ್ತ ಆಶ್ಚರ್ಯಪಟ್ಟಿದ್ದರು.

10ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, “ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ” ಎಂದು ಹೇಳಿದನು.

11ಅವರು ತಮ್ಮ ದೋಣಿಗಳನ್ನು ದಡಕ್ಕೆ ತಂದು ಮತ್ತು ಎಲ್ಲವನ್ನು ಬಿಟ್ಟು ಅಂದಿನಿಂದ ಯೇಸುವನ್ನು ಹಿಂಬಾಲಿಸಿದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು