Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನ ದಾರಿಯಲ್ಲಿ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನ ದಾರಿಯಲ್ಲಿ

ಯೇಸು ತನ್ನ ಮರಣವನ್ನು ಮುಂತಿಳಿಸುತ್ತಾನೆ

ಮತ್ತಾ 16:21–23 · ಮಾರ್ಕ 8:31–33 · ಲೂಕ 9:22

ಮತ್ತಾಯನು

ಮತ್ತಾ 16:21–23

21ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

22ಆಗ ಪೇತ್ರನು ಆತನನ್ನು ಪಕ್ಕಕ್ಕೆ ಕರೆದುಕೊಂಡು ಹೋಗಿ, “ಕರ್ತನೇ, ದೇವರು ಅದನ್ನು ನಿನಗೆ ಬರಗೊಡಿಸದಿರಲಿ; ನಿನಗೆ ಹೀಗೆ ಎಂದಿಗೂ ಆಗಬಾರದು” ಎಂದು ಆತನನ್ನು ಗದರಿಸುವುದಕ್ಕೆ ಪ್ರಾರಂಭಿಸಿದನು.

23ಆತನು ತಿರುಗಿಕೊಂಡು ಪೇತ್ರನಿಗೆ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು. ನನಗೆ ನೀನು ಅಡ್ಡಿಯಾಗಿದ್ದಿ, ಏಕೆಂದರೆ ನೀನು ದೇವರ ವಿಷಯಗಳ ಬಗ್ಗೆ ಯೋಚಿಸದೇ ಮನುಷ್ಯರ ವಿಷಯಗಳ ಬಗ್ಗೆ ಯೋಚಿಸುತ್ತೀ” ಎಂದು ಹೇಳಿದನು.

ಮಾರ್ಕನು

ಮಾರ್ಕ 8:31–33

31ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

32ಆತನು ಈ ಮಾತನ್ನು ಸ್ಪಷ್ಟವಾಗಿ ಹೇಳಿದನು. ಆಗ ಪೇತ್ರನು ಆತನನ್ನು ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ “ನೀನು ಹೀಗೆ ಹೇಳುವುದು ಸರಿಯಲ್ಲ” ಎಂದು ಗದರಿಸಿದನು.

33ಆದರೆ ಯೇಸು ಹಿಂತಿರುಗಿ ತನ್ನ ಶಿಷ್ಯರನ್ನು ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನನ್ನು ಬಿಟ್ಟು ತೊಲಗಿ ಹೋಗು! ನಿನ್ನ ಯೋಚನೆ ಮನುಷ್ಯರದಾಗಿದೆಯೇ ಹೊರತು ದೇವರದಲ್ಲ” ಎಂದು ಹೇಳಿದನು.

ಲೂಕನು

ಲೂಕ 9:22

22ಯೇಸು ಅವರಿಗೆ, “ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ” ಎಂದು ಹೇಳಿದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು