Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಆರಂಭ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಆರಂಭ

ಯೇಸು ಗಲಿಲಾಯದಲ್ಲಿ ಬೋಧಿಸಲು ಆರಂಭಿಸುತ್ತಾನೆ

ಮತ್ತಾ 4:12–17 · ಮಾರ್ಕ 1:14–15 · ಲೂಕ 4:14–15

ಮತ್ತಾಯನು

ಮತ್ತಾ 4:12–17

12ಯೋಹಾನನು ಸೆರೆಯಾದನು ಎಂದು ಯೇಸು ಕೇಳಿ ಆ ಸ್ಥಳವನ್ನು ಬಿಟ್ಟು ಗಲಿಲಾಯ ಸೀಮೆಗೆ ಹೊರಟು ಹೋದನು.

13ಬಳಿಕ ನಜರೇತೆಂಬ ಊರನ್ನು ಬಿಟ್ಟು ಜೆಬುಲೋನ್‌ ಮತ್ತು ನಫ್ತಾಲಿಯರ ಗಡಿ ನಾಡುಗಳಿಗೆ ಬಂದು ಸಮುದ್ರದ ಹತ್ತಿರದಲ್ಲಿರುವ ಕಪೆರ್ನೌಮೆಂಬ ಊರಿನಲ್ಲಿ ವಾಸಿಸತೊಡಗಿದನು.

14ಇದರಿಂದ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿರುವ ಮಾತು ನೆರವೇರಿತು; ಆ ಮಾತು ಏನೆಂದರೆ,

15“ಜೆಬುಲೋನ್ ಸೀಮೆ ಮತ್ತು ನಫ್ತಾಲಿ ಸೀಮೆ, ಯೊರ್ದನಿನ ಆಚೆ, ಸಮುದ್ರದ ಕಡೆಗಿರುವ ಸೀಮೆ, ಅನ್ಯಜನಗಳಿರುವ ಗಲಿಲಾಯ ಸೀಮೆ,

16ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.

17ಅಂದಿನಿಂದ ಯೇಸು, “ಪಶ್ಚಾತ್ತಾಪಪಡಿರಿ ಪರಲೋಕ ರಾಜ್ಯವು ಸಮೀಪಿಸಿತು” ಎಂದು ಸಾರುವುದಕ್ಕೆ ಪ್ರಾರಂಭಿಸಿದನು.

ಮಾರ್ಕನು

ಮಾರ್ಕ 1:14–15

14ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,

15“ಕಾಲವು ಪರಿಪೂರ್ಣವಾಯಿತು, ದೇವರ ರಾಜ್ಯವು ಸಮೀಪಿಸಿತು; ಪಶ್ಚಾತ್ತಾಪಪಟ್ಟು ಸುವಾರ್ತೆಯನ್ನು ನಂಬಿರಿ.”

ಲೂಕನು

ಲೂಕ 4:14–15

14ತರುವಾಯ ಯೇಸು ಪವಿತ್ರಾತ್ಮನ ಶಕ್ತಿಯಿಂದ ಕೂಡಿದವನಾಗಿ ಗಲಿಲಾಯಕ್ಕೆ ಹಿಂತಿರುಗಿದನು; ಆತನ ಸುದ್ದಿಯು ಸುತ್ತಲಿರುವ ಪ್ರಾಂತ್ಯದಲ್ಲೆಲ್ಲಾ ಹರಡಿತು.

15ಆತನು ಅವರ ಸಭಾಮಂದಿರಗಳಲ್ಲಿ ಬೋಧಿಸುತ್ತಿದ್ದನು; ಎಲ್ಲರೂ ಆತನನ್ನು ಹೊಗಳಿದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು