Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಆರಂಭ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಆರಂಭ

ಯೇಸುವಿನ ವಂಶಾವಳಿ

ಮತ್ತಾ 1:1–17 · ಲೂಕ 3:23–38

ಮತ್ತಾಯನು

ಮತ್ತಾ 1:1–17

1ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.

2ಅಬ್ರಹಾಮನ ಮಗನು ಇಸಾಕನು. ಇಸಾಕನ ಮಗನು ಯಾಕೋಬನು. ಯಾಕೋಬನ ಮಗನು ಯೆಹೂದನು, ಅವನ ಅಣ್ಣತಮ್ಮಂದಿರು ಯೆಹೂದನ ಮಕ್ಕಳು.

3ಯೆಹೂದನಿಗೆ ತಾಮಾರಳಲ್ಲಿ ಪೆರೆಚನು, ಜೆರಹನು ಹುಟ್ಟಿದರು. ಪೆರೆಚನ ಮಗನು ಹೆಚ್ರೋನನು.

4ಹೆಚ್ರೋನನ ಮಗನು ಅರಾಮನು. ಅರಾಮನ ಮಗನು ಅಮ್ಮಿನಾದಾಬನು. ಅಮ್ಮಿನಾದಾಬನ ಮಗನು ನಹಶೋನನು. ನಹಶೋನನ ಮಗನು ಸಲ್ಮೋನನು.

5ಸಲ್ಮೋನನ ಮಗನಾದ ಬೋವಜನು ರಾಹಾಬಳಲ್ಲಿ ಹುಟ್ಟಿದವನು. ಬೋವಜನ ಮಗನು ಓಬೇದನು ರೂತಳಲ್ಲಿ ಹುಟ್ಟಿದವನು. ಓಬೇದನ ಮಗನು ಇಷಯನು.

6ಇಷಯನ ಮಗನು ಅರಸನಾದ ದಾವೀದನು. ದಾವೀದನ ಮಗನಾದ ಸೊಲೊಮೋನನು ಊರೀಯನ ಹೆಂಡತಿಯಲ್ಲಿ ಹುಟ್ಟಿದವನು.

7ಸೊಲೊಮೋನನ ಮಗನು ರೆಹಬ್ಬಾಮನು. ರೆಹಬ್ಬಾಮನ ಮಗನು ಅಬೀಯನು. ಅಬೀಯನ ಮಗನು ಆಸನು.

8ಆಸನ ಮಗನು ಯೆಹೋಷಾಫಾಟನು. ಯೆಹೋಷಾಫಾಟನ ಮಗನು ಯೆಹೋರಾಮನು. ಯೆಹೋರಾಮನ ಮಗನು ಉಜ್ಜೀಯನು.

9ಉಜ್ಜೀಯನ ಮಗನು ಯೋತಾಮನು. ಯೋತಾಮನ ಮಗನು ಆಹಾಜನನು. ಆಹಾಜನ ಮಗನು ಹಿಜ್ಕೀಯನು.

10ಹಿಜ್ಕೀಯನ ಮಗನು ಮನಸ್ಸೆಯನು. ಮನಸ್ಸೆಯ ಮಗನು ಆಮೋನನು.

11ಆಮೋನ ಮಗನು ಯೋಷೀಯನು. ಬಾಬಿಲೋನಿಗೆ ಸೆರೆಹೋದ ಸಮಯದಲ್ಲಿ ಯೋಷೀಯನಿಗೆ ಯೆಕೊನ್ಯನು, ಅವನ ಅಣ್ಣತಮ್ಮಂದಿರು ಹುಟ್ಟಿದರು.

12ಬಾಬಿಲೋನಿಗೆ ಸೆರೆಹೋದ ಮೇಲೆ ಯೆಕೊನ್ಯನು ಶೆಯಲ್ತಿಯೇಲನನ್ನು ಪಡೆದನು. ಶೆಯಲ್ತಿಯೇಲನ ಮಗನು ಜೆರುಬ್ಬಾಬೆಲನು

13ಜೆರುಬ್ಬಾಬೆಲನ ಮಗನು ಅಬಿಹೂದನು. ಅಬಿಹೂದನ ಮಗನು ಎಲ್ಯಕೀಮನು. ಎಲ್ಯಕೀಮನ ಮಗನು ಅಜೋರನು.

14ಅಜೋರನ ಮಗನು ಸದೋಕನು. ಸದೋಕನ ಮಗನು ಅಖೀಮನು. ಅಖೀಮನ ಮಗನು ಎಲಿಹೂದನು.

15ಎಲಿಹೂದನ ಮಗನು ಎಲಿಯಾಜರನು. ಎಲಿಯಾಜರನ ಮಗನು ಮತ್ತಾನನು. ಮತ್ತಾನನ ಮಗನು ಯಾಕೋಬನು.

16ಯಾಕೋಬನ ಮಗನು ಯೋಸೇಫನು. ಯೋಸೇಫನು ಮರಿಯಳ ಗಂಡನು. ಈ ಮರಿಯಳಿಂದಲೇ ಕ್ರಿಸ್ತನೆಂಬ ಯೇಸು ಹುಟ್ಟಿದನು.

17ಅಬ್ರಹಾಮನಿಂದ ದಾವೀದನ ವರೆಗೂ ಒಟ್ಟು ಹದಿನಾಲ್ಕು ತಲೆಮಾರುಗಳು, ದಾವೀದನಿಂದ ಬಾಬಿಲೋನಿನ ದಾಸತ್ವಕ್ಕೆ ಹೋಗುವವರೆಗೂ ಹದಿನಾಲ್ಕು ತಲೆಮಾರುಗಳು, ಬಾಬಿಲೋನಿನ ದಾಸತ್ವದ ದಿನದಿಂದ ಕ್ರಿಸ್ತನವರೆಗೆ ಹದಿನಾಲ್ಕು ತಲೆಮಾರುಗಳು.

ಲೂಕನು

ಲೂಕ 3:23–38

23ಯೇಸು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದಾಗ ಸುಮಾರು ಮೂವತ್ತು ವರ್ಷದವನಾಗಿದ್ದನು. ಆತನು ಜನರ ಎಣಿಕೆಯಲ್ಲಿ ಯೋಸೇಫನ ಮಗನು. ಯೋಸೇಫನು ಹೇಲಿಯನ ಮಗನು;

24ಹೇಲಿಯನು ಮತ್ಥಾತನ ಮಗನು; ಮತ್ಥಾತನನು ಲೇವಿಯ ಮಗನು; ಲೇವಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಯನ್ನಾಯನ ಮಗನು;

25ಯನ್ನಾಯನು ಯೋಸೇಫನ ಮಗನು; ಯೋಸೇಫನು ಮತ್ತಥೀಯನ ಮಗನು; ಮತ್ತಥೀಯನು ಆಮೋಸನ ಮಗನು; ಆಮೋಸನು ನಹೂಮನ ಮಗನು; ನಹೂಮನು ಎಸ್ಲಿಯ ಮಗನು; ಎಸ್ಲಿಯನು ನಗ್ಗಾಯನ ಮಗನು; ನಗ್ಗಾಯನು ಮಹಾಥನ ಮಗನು;

26ಮಹಾಥನು ಮತ್ತಥೀಯನ ಮಗನು; ಮತ್ತಥೀಯನು ಶಿಮೀಯನ ಮಗನು; ಶಿಮೀಯನು ಯೋಸೇಖನ ಮಗನು; ಯೋಸೇಖನು ಯೂದನ ಮಗನು; ಯೂದನು ಯೋಹಾನನ ಮಗನು;

27ಯೋಹಾನನು ರೇಸನ ಮಗನು; ರೇಸನು ಜೆರುಬ್ಬಾಬೆಲನ ಮಗನು, ಜೆರುಬ್ಬಾಬೆಲನು ಸಲಥಿಯೇಲನ ಮಗನು; ಸಲಥಿಯೇಲನು ನೇರಿಯನ ಮಗನು;

28ನೇರಿಯನು ಮೆಲ್ಖಿಯನ ಮಗನು; ಮೆಲ್ಖಿಯನು ಅದ್ದಿಯನ ಮಗನು; ಅದ್ದಿಯನು ಕೋಸಾಮನ ಮಗನು; ಕೋಸಾಮನು ಎಲ್ಮದಾಮನ ಮಗನು; ಎಲ್ಮದಾಮನು ಏರನ ಮಗನು;

29ಏರನು ಯೆಹೋಷುವನ ಮಗನು; ಯೆಹೋಷುವನು ಎಲಿಯೇಜರನ ಮಗನು; ಎಲಿಯೇಜರನು ಯೋರೈಮನ ಮಗನು; ಯೋರೈಮನು ಮತ್ಥಾತನ ಮಗನು; ಮತ್ಥಾತನು ಲೇವಿಯನ ಮಗನು;

30ಲೇವಿಯನು ಸಿಮಿಯೋನನ ಮಗನು; ಸಿಮಿಯೋನನು ಯೂದನ ಮಗನು; ಯೂದನು ಯೋಸೇಫನ ಮಗನು; ಯೋಸೇಫನು ಯೋನಾಮನ ಮಗನು; ಯೋನಾಮನು ಎಲಿಯಕೀಮನ ಮಗನು;

31ಎಲಿಯಕೀಮನು ಮೆಲೆಯಾನ ಮಗನು; ಮೆಲೆಯಾನು ಮೆನ್ನನ ಮಗನು; ಮೆನ್ನನು ಮತ್ತಾಥನ ಮಗನು; ಮತ್ತಾಥನು ನಾಥಾನನ ಮಗನು; ನಾಥಾನನು ದಾವೀದನ ಮಗನು;

32ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;

33ನಹಶೋನನು ಅಮ್ಮಿನಾದಾಬನ ಮಗನು; ಅಮ್ಮಿನಾದಾಬನು ಅದ್ಮಿನನ ಮಗನು; ಅದ್ಮಿನನು ಆರ್ನೈಯನ ಮಗನು; ಆರ್ನೈಯನು ಎಸ್ರೋನನ ಮಗನು; ಎಸ್ರೋನನು ಪೆರೆಚನ ಮಗನು;

34ಪೆರೆಚನು ಯೂದನ ಮಗನು; ಯೂದನು ಯಾಕೋಬನ ಮಗನು; ಯಾಕೋಬನು ಇಸಾಕನ ಮಗನು; ಇಸಾಕನು ಅಬ್ರಹಾಮನ ಮಗನು; ಅಬ್ರಹಾಮನು ತೇರನ ಮಗನು; ತೇರನು ನಾಹೋರನ ಮಗನು;

35ನಾಹೋರನು ಸೆರೂಗನ ಮಗನು; ಸೆರೂಗನು ರೆಗೂವನ ಮಗನು; ರೆಗೂವನು ಪೆಲೆಗನ ಮಗನು; ಪೆಲೆಗನು ಹೇಬೆರನ ಮಗನು; ಹೇಬೆರನು ಸಾಲನ ಮಗನು;

36ಸಾಲನು ಕಯಿನಾನನ ಮಗನು; ಕಯಿನಾನನು ಅರ್ಫಕ್ಷಾದನ ಮಗನು; ಅರ್ಫಕ್ಷಾದನು ಶೇಮನ ಮಗನು; ಶೇಮನು ನೋಹನ ಮಗನು; ನೋಹನು ಲಾಮೆಕನ ಮಗನು;

37ಲಾಮೆಕನು ಮೆತೂಷಲನ ಮಗನು; ಮೆತೂಷಲನು ಹನೋಕನ ಮಗನು; ಹನೋಕನು ಯೆರೆದನ ಮಗನು; ಯೆರೆದನು ಮಹಲಲೇಲನ ಮಗನು; ಮಹಲಲೇಲನು ಕಯಿನಾನನ ಮಗನು;

38ಕಯಿನಾನನು ಎನೋಷನ ಮಗನು; ಎನೋಷನು ಸೇಥನ ಮಗನು; ಸೇಥನು ಆದಾಮನ ಮಗನು ಆದಾಮನು ದೇವರ ಮಗನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು