34ಯೇಸು ಸದ್ದುಕಾಯರನ್ನು ಸದ್ದಿಲ್ಲದವರನ್ನಾಗಿ ಮಾಡಿದ್ದಾನೆಂದು ಫರಿಸಾಯರು ಕೇಳಿ ಅಲ್ಲಿಗೆ ಸೇರಿ ಬಂದರು.
35ಅವರಲ್ಲಿದ್ದ ಒಬ್ಬ ಧರ್ಮೋಪದೇಶಕನು ಆತನನ್ನು ಪರೀಕ್ಷೆ ಮಾಡಬೇಕೆಂದು,
36“ಗುರುವೇ, ಧರ್ಮಶಾಸ್ತ್ರದಲ್ಲಿ ಯಾವ ಆಜ್ಞೆ ಮುಖ್ಯವಾದದ್ದು” ಎಂದು ಆತನನ್ನು ಕೇಳಿದ್ದಕ್ಕೆ
37ಯೇಸು ಅವನಿಗೆ, “‘ನಿನ್ನ ದೇವರಾಗಿರುವ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ನಿನ್ನ ಪೂರ್ಣಮನಸ್ಸಿನಿಂದಲೂ ಪ್ರೀತಿಸಬೇಕು’
38ಎಂಬ ಆಜ್ಞೆಯೇ ಮುಖ್ಯವಾದದ್ದು ಮತ್ತು ಮೊದಲನೆಯದು.
39ಇದಕ್ಕೆ ಸಮಾನವಾದ ಎರಡನೆಯ ಆಜ್ಞೆ ಯಾವುದೆಂದರೆ, ‘ನಿನ್ನ ನೆರೆಯವನನ್ನು ನಿನ್ನಂತೆಯೇ ಪ್ರೀತಿಸಬೇಕು’ ಎಂಬುದೇ.
40ಈ ಎರಡು ಆಜ್ಞೆಗಳಲ್ಲಿ ಎಲ್ಲಾ ಧರ್ಮನಿಯಮವೂ ಪ್ರವಾದನಾಗ್ರಂಥಗಳೂ ಆಧಾರವಾಗಿವೆ” ಎಂದು ಹೇಳಿದನು.