29ಅವರು ಯೆರಿಕೋವಿನಿಂದ, ಹೊರಟುಹೋಗುತ್ತಿರುವಾಗ ಜನರ ದೊಡ್ಡ ಗುಂಪು ಆತನನ್ನು ಹಿಂಬಾಲಿಸಿತು.
30ಆಗ ದಾರಿಯ ಮಗ್ಗುಲಲ್ಲಿ ಕುಳಿತಿದ್ದ ಕುರುಡರಿಬ್ಬರು ಯೇಸು ಈ ಮಾರ್ಗವಾಗಿ ಹೋಗುತ್ತಿದ್ದಾನೆಂದು ಕೇಳಿ, “ಕರ್ತನೇ, ದಾವೀದ ಕುಮಾರನೇ ನಮ್ಮನ್ನು ಕರುಣಿಸು” ಎಂದು ಕೂಗಿಕೊಂಡರು.
31ಆದರೆ ಆ ಗುಂಪಿನವರು, ಸುಮ್ಮನಿರಿ ಎಂದು ಅವರನ್ನು ಗದರಿಸಿದರು. ಅವರಾದರೋ, “ಕರ್ತನೇ, ದಾವೀದ ಕುಮಾರನೇ, ನಮ್ಮನ್ನು ಕರುಣಿಸು” ಎಂದು ಗಟ್ಟಿಯಾಗಿ ಕೂಗಿಕೊಂಡರು.
32ಆಗ ಯೇಸು ನಿಂತು ಅವರನ್ನು ಕರೆದು, “ನಾನು ನಿಮಗೆ ಏನು ಮಾಡಬೇಕೆಂದು ಕೋರುತ್ತೀರಿ?” ಎಂದು ಕೇಳಿದನು.
33ಅವರು, “ಕರ್ತನೇ, ನಮ್ಮ ಕಣ್ಣುಗಳು ಕಾಣುವಂತೆ ಮಾಡು” ಅಂದರು.
34ಆಗ ಯೇಸು ಕನಿಕರಪಟ್ಟು, ಅವರ ಕಣ್ಣುಗಳನ್ನು ಮುಟ್ಟಿದನು. ಕೂಡಲೇ ಅವರು ದೃಷ್ಟಿಯನ್ನು ಹೊಂದಿಕೊಂಡು ಆತನನ್ನು ಹಿಂಬಾಲಿಸಿದರು.