Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೇಸುವಿನ ಶ್ರಮೆಗಳು

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೇಸುವಿನ ಶ್ರಮೆಗಳು

ಯೇಸುವನ್ನು ಹಿಡಿದುಕೊಡಲು ಯೂದನು ಒಪ್ಪುತ್ತಾನೆ

ಮತ್ತಾ 26:14–16 · ಮಾರ್ಕ 14:10–11 · ಲೂಕ 22:3–6

ಮತ್ತಾಯನು

ಮತ್ತಾ 26:14–16

14ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,

15“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.

16ಅಂದಿನಿಂದ ಅವನು ಆತನನ್ನು ಹಿಡಿದುಕೊಡುವುದಕ್ಕಾಗಿ ಸಂದರ್ಭ ಹುಡುಕುತ್ತಿದ್ದನು.

ಮಾರ್ಕನು

ಮಾರ್ಕ 14:10–11

10ಆಗ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನು ಯೇಸುವನ್ನು ಮುಖ್ಯಯಾಜಕರಿಗೆ ಹಿಡಿದುಕೊಡಲು ಅವರ ಬಳಿಗೆ ಹೋದನು.

11ಅವರು ಅದನ್ನು ಕೇಳಿ ಸಂತೋಷಪಟ್ಟು, ನಿನಗೆ ಹಣಕೊಡುತ್ತೇವೆ ಎಂದು ಮಾತುಕೊಟ್ಟರು. ಅಂದಿನಿಂದ ಯೂದನು ಯೇಸುವನ್ನು ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ಹುಡುಕುತ್ತಿದ್ದನು.

ಲೂಕನು

ಲೂಕ 22:3–6

3ಆಗ ಸೈತಾನನು ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತನೆಂಬ ಯೂದನಲ್ಲಿ ಪ್ರವೇಶಿಸಲು,

4ಅವನು ಮುಖ್ಯಯಾಜಕರ ಬಳಿಗೂ ಕಾವಲಿನ ದಳವಾಯಿಗಳ ಬಳಿಗೂ ಹೋಗಿ ತಾನು ಯೇಸುವನ್ನು ಹಿಡಿದುಕೊಡುವ ಉಪಾಯವನ್ನು ಕುರಿತು ಅವರ ಸಂಗಡ ಮಾತನಾಡಿದನು.

5ಅವರು ಸಂತೋಷಪಟ್ಟು ನಿನಗೆ ಹಣ ಕೊಡುತ್ತೇವೆಂದು ಒಪ್ಪಂದ ಮಾಡಲು,

6ಅವನು ಒಪ್ಪಿಕೊಂಡು, ಜನಸಮೂಹವಿಲ್ಲದಿರುವಾಗ ಆತನನ್ನು ಅವರಿಗೆ ಹಿಡಿದುಕೊಡುವುದಕ್ಕೆ ಅನುಕೂಲವಾದ ಸಂದರ್ಭವನ್ನು ನೋಡುತ್ತಿದ್ದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು