Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ಇತರರನ್ನು ತೀರ್ಪುಮಾಡುವುದು

ಮತ್ತಾ 7:1–5 · ಲೂಕ 6:37–42

ಮತ್ತಾಯನು

ಮತ್ತಾ 7:1–5

1“ತೀರ್ಪುಮಾಡಬೇಡಿರಿ; ಹಾಗೆ ನಿಮಗೂ ತೀರ್ಪಾಗುವುದಿಲ್ಲ.

2ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವುದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.

3“ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಧೂಳನ್ನು ಏಕೆ ಯೋಚಿಸುವೇ?

4ನೀನು ನಿನ್ನ ಸಹೋದರನಿಗೆ, ‘ನಿನ್ನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯುತ್ತೇನೆ ಬಾ’ ಎಂದು ಏಕೆ ಹೇಳುವೇ? ನಿನ್ನ ಕಣ್ಣಿನಲ್ಲೇ ತೊಲೆ ಇದೆಯಲ್ಲಾ.

5ಕಪಟಿಯೇ! ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿದರೆ; ನಿನ್ನ ಸಹೋದರನ ಕಣ್ಣಿನೊಳಗಿನಿಂದ ಧೂಳನ್ನು ತೆಗೆಯವುದಕ್ಕೆ ನಿನಗೆ ಸ್ಪಷ್ಟವಾಗಿ ಕಾಣಿಸುವುದು.

ಲೂಕನು

ಲೂಕ 6:37–42

37“ಇದಲ್ಲದೆ ತೀರ್ಪುಮಾಡಬೇಡಿರಿ, ಆಗ ನಿಮಗೂ ತೀರ್ಪಾಗುವುದಿಲ್ಲ; ಅಪರಾಧಿಯೆಂದು ನಿರ್ಣಯಿಸಬೇಡಿರಿ, ಆಗ ನಿಮ್ಮನ್ನೂ ಅಪರಾಧಿಗಳೆಂದು ನಿರ್ಣಯಿಸುವುದಿಲ್ಲ; ಕ್ಷಮಿಸಿರಿ, ಆಗ ನಿಮಗೂ ಕ್ಷಮಿಸಲ್ಪಡುವುದು.

38ಕೊಡಿರಿ, ಆಗ ನಿಮಗೂ ಕೊಡಲ್ಪಡುವುದು; ಅದುಮಿ, ಅಲ್ಲಾಡಿಸಿ, ತುಂಬಿತುಳುಕುವಂತೆ, ಅಳೆದು ನಿಮ್ಮ ಸೆರಿಗಿಗೆ ಹಾಕುವರು. ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡುವರು” ಅಂದನು.

39ಇದಲ್ಲದೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, “ಕುರುಡನು ಕುರುಡನಿಗೆ ದಾರಿ ತೋರಿಸುವುದಕ್ಕಾದೀತೇ? ಅವರಿಬ್ಬರೂ ಹಳ್ಳದಲ್ಲಿ ಬೀಳುವರಲ್ಲವೆ.

40ಗುರುವಿಗಿಂತ ಶಿಷ್ಯನು ದೊಡ್ಡವನಲ್ಲ; ಆದರೆ ಪೂರ್ಣವಾಗಿ ಕಲಿತವನಾದ ಪ್ರತಿಯೊಬ್ಬನು ತನ್ನ ಗುರುವಿನಂತಾಗಿರುವನು.

41“ಇದಲ್ಲದೆ ನೀನು ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ಯೋಚಿಸದೆ ನಿನ್ನ ಸಹೋದರನ ಕಣ್ಣಿನಲ್ಲಿರುವ ಅಣುವನ್ನು ಗಮನಿಸುವುದೇಕೆ?

42ಇಲ್ಲವೆ ನಿನ್ನ ಕಣ್ಣಿನಲ್ಲಿರುವ ತೊಲೆಯನ್ನು ನೀನು ನೋಡದೆ ನಿನ್ನ ಸಹೋದರನಿಗೆ, ‘ಅಣ್ಣಾ, ನಿನ್ನ ಕಣ್ಣಿನೊಳಗಿನ ಅಣುವನ್ನು ತೆಗೆಯುತ್ತೇನೆ ಬಾ’ ಎಂದು ಹೇಳುವುದಕ್ಕೆ ಹೇಗಾದೀತು? ಕಪಟಿಯೇ, ಮೊದಲು ನಿನ್ನ ಕಣ್ಣಿನೊಳಗಿನಿಂದ ತೊಲೆಯನ್ನು ತೆಗೆದುಹಾಕಿಕೋ, ಆ ಮೇಲೆ ನಿನ್ನ ಸಹೋದರನ ಕಣ್ಣಿನೊಳಗಿನ ಅಣುವನ್ನು ತೆಗೆಯುವುದಕ್ಕೆ ಚೆನ್ನಾಗಿ ಕಾಣಿಸುವುದು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು