ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನಲ್ಲಿ
ಯೇಸು ಯೆರೂಸಲೇಮಿನ ವಿಷಯವಾಗಿ ಗೋಳಾಡುತ್ತಾನೆ
ಮತ್ತಾ 23:37–39 · ಲೂಕ 13:34–35
ಮತ್ತಾ 23:37–3937“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ! ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.
38ನೋಡಿರಿ, ನಿಮ್ಮ ಮನೆಯು ನಿಮಗೆ ಬರಿದಾಗಿ ಬಿಡುತ್ತದೆ.
39ಈಗಿಂದ, ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು ಎಂದು ನೀವಾಗಿ ನೀವು ಹೇಳುವ ತನಕ ನೀವು ನನ್ನನ್ನು ನೋಡುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ’” ಅಂದನು.
ಲೂಕ 13:34–3534ಯೆರೂಸಲೇಮೇ, ಯೆರೂಸಲೇಮೇ ಪ್ರವಾದಿಗಳ ಪ್ರಾಣ ತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿ ಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ, ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಸೇರಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳುವುದಕ್ಕೆ ನನಗೆ ಎಷ್ಟೋ ಸಾರಿ ಮನಸ್ಸಿತ್ತು ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು!
35ನೋಡಿರಿ, ನಿಮ್ಮ ಮನೆಯು ಪಾಳುಬೀಳುವುದು. ‘ಕರ್ತನ ಹೆಸರಿನಲ್ಲಿ ಬರುವವನು ಧನ್ಯನು’ ಎಂದು ನೀವು ಹೇಳುವ ವರೆಗೂ ನೀವು ನನ್ನನ್ನು ನೋಡುವುದೇ ಇಲ್ಲ” ಎಂದು ನಿಮಗೆ ಹೇಳುತ್ತೇನೆ.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.