Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ

ದೀಪಸ್ತಂಭದ ಮೇಲಿನ ದೀಪ

ಮಾರ್ಕ 4:21–25 · ಲೂಕ 8:16–18

ಮಾರ್ಕನು

ಮಾರ್ಕ 4:21–25

21ಇದಲ್ಲದೆ ಯೇಸು ಅವರಿಗೆ, “ದೀಪವನ್ನು ತಂದು ಕೊಳಗದೊಳಗಾಗಲಿ, ಮಂಚದ ಕೆಳಗಾಗಲಿ ಇಡುವುದುಂಟೇ? ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಲ್ಲವೇ?

22ಮರೆಯಾಗಿರುವಂಥ ಎಲ್ಲವೂ ಬೆಳಕಿಗೆ ಬಾರದೇ ಇರುವುದಿಲ್ಲ; ಬಹಿರಂಗವಾಗದಿರುವ ಯಾವ ರಹಸ್ಯಗಳು ಇರುವುದಿಲ್ಲ.

23ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಎಂದು ಹೇಳಿದನು.

24ಮತ್ತು ಆತನು ಅವರಿಗೆ; “ನೀವು ಕಿವಿಗೊಡುವ ವಿಷಯದಲ್ಲಿ ಎಚ್ಚರಿಕೆಯಾಗಿರಿ. ನೀವು ಅಳೆಯುವ ಅಳತೆಯಿಂದಲೇ ನಿಮ್ಮನ್ನೂ ಅಳೆಯುವರು; ನಿಮಗೆ ಇನ್ನೂ ಅಧಿಕವಾಗಿ ಸೇರಿಸಿಕೊಡುವರು.

25ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಇದ್ದುದನ್ನೂ ತೆಗೆಯಲ್ಪಡುವುದು” ಎಂದು ಹೇಳಿದನು.

ಲೂಕನು

ಲೂಕ 8:16–18

16“ಇದಲ್ಲದೆ ಯಾರೂ ದೀಪವನ್ನು ಹಚ್ಚಿ ಪಾತ್ರೆಯಿಂದ ಮುಚ್ಚುವುದಿಲ್ಲ, ಮಂಚದ ಕೆಳಗೂ ಇಡುವುದಿಲ್ಲ. ಮನೆಯೊಳಗೆ ಬರುವವರಿಗೆ ಬೆಳಕು ಕಾಣಿಸುವಂತೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರಷ್ಟೆ.

17ಬೆಳಕಿಗೆ ಬಾರದ ಯಾವ ರಹಸ್ಯವೂ ಇಲ್ಲ ಮತ್ತು ಪ್ರಕಟವಾಗದೆ ಇರುವಂಥ ಒಂದು ಗುಟ್ಟೂ ಇರುವುದಿಲ್ಲ, ಅದು ಬಟ್ಟಬಯಲಾಗುವುದು.

18ಆದುದರಿಂದ ನೀವು ಹೇಗೆ ಕಿವಿಗೊಡಬೇಕೋ ನೋಡಿಕೊಳ್ಳಿರಿ, ಏಕೆಂದರೆ ಇದ್ದವನಿಗೆ ಕೊಡಲ್ಪಡುವುದು; ಇಲ್ಲದವನ ಕಡೆಯಿಂದ ಅವನು ತನ್ನದೆಂದು ಎಣಿಸುವಂಥದೂ ತೆಗೆಯಲ್ಪಡುವುದು” ಅಂದನು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು