ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಕರ್ತನ ಪ್ರಾರ್ಥನೆ
ಮತ್ತಾ 6:9–13 · ಲೂಕ 11:2–4
ಮತ್ತಾ 6:9–139ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,
10“ಪರಲೋಕದಲ್ಲಿರುವ ನಮ್ಮ ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ. ನಿನ್ನ ಚಿತ್ತವು ಪರಲೋಕದಲ್ಲಿ ನೆರವೇರುವ ಪ್ರಕಾರ ಭೂಲೋಕದಲ್ಲಿಯೂ ನೆರವೇರಲಿ.
11ನಮ್ಮ ಅನುದಿನದ ಆಹಾರವನ್ನು ಈ ಹೊತ್ತು ನಮಗೆ ದಯಪಾಲಿಸು.
12ನಮಗೆ ತಪ್ಪು ಮಾಡಿದವರನ್ನು ನಾವು ಕ್ಷಮಿಸಿದಂತೆ ನಮ್ಮ ತಪ್ಪುಗಳನ್ನು ಕ್ಷಮಿಸು.
13ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೆಡುಕನಿಂದ; ನಮ್ಮನ್ನು ತಪ್ಪಿಸು
ಲೂಕ 11:2–42ಅದಕ್ಕಾತನು, “ನೀವು ಪ್ರಾರ್ಥಿಸುವಾಗ ಈ ರೀತಿಯಾಗಿ ಪ್ರಾರ್ಥಿಸಿರಿ, “ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.
3ನಮ್ಮ ಅನುದಿನದ ಆಹಾರವನ್ನು ಪ್ರತಿದಿನವೂ ದಯಪಾಲಿಸು.
4ನಮಗೆ ತಪ್ಪುಮಾಡಿರುವ ಪ್ರತಿಯೊಬ್ಬನನ್ನು ನಾವು ಕ್ಷಮಿಸುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸು. ನಮ್ಮನ್ನು ಶೋಧನೆಯೊಳಗೆ ಸೇರಿಸದಂತೆ ಪಾರುಮಾಡು ಎಂದು ಹೇಳಿರಿ” ಅಂದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.