ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಬೋಧನೆ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಬೋಧನೆ
ಕಳೆದುಹೋದ ಕುರಿ
ಮತ್ತಾ 18:12–14 · ಲೂಕ 15:3–7
ಮತ್ತಾ 18:12–1412“ನಿಮ್ಮಲ್ಲಿ ಒಬ್ಬ ಮನುಷ್ಯನಿಗೆ ನೂರು ಕುರಿಗಳು ಇರಲಾಗಿ ಅವುಗಳಲ್ಲಿ ಒಂದು ಕುರಿಯು ತಪ್ಪಿಸಿಕೊಂಡು ಹೋಯಿತೆಂದು ಇಟ್ಟುಕೊಳ್ಳಿ. ಆಗ ನಿಮಗೇನು ಅನ್ನಿಸುತ್ತದೆ? ಅವನು ಉಳಿದ ತೊಂಬತ್ತೊಂಬತ್ತು ಕುರಿಗಳನ್ನು ಬೆಟ್ಟದಲ್ಲಿ ಬಿಟ್ಟು ತಪ್ಪಿಸಿಕೊಂಡು ಹೋದ ಆ ಒಂದು ಕುರಿಯನ್ನು ಹುಡುಕಿಕೊಂಡು ಹೋಗುವುದಿಲ್ಲವೇ?
13ಅದು ಅವನಿಗೆ ಸಿಕ್ಕಿದರೆ, ತಪ್ಪಿಸಿಕೊಳ್ಳದೆ ಇರುವ ತೊಂಬತ್ತೊಂಬತ್ತು ಕುರಿಗಳಿಗಿಂತ ಆ ಒಂದು ಕುರಿಗೋಸ್ಕರ ತುಂಬಾ ಸಂತೋಷಪಡುವನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.
14ಹಾಗೆಯೇ ಈ ಚಿಕ್ಕವರಲ್ಲಿ ಒಬ್ಬನಾದರೂ ನಾಶವಾಗಿಹೋಗುವುದು ಪರಲೋಕದಲ್ಲಿರುವ ನಿಮ್ಮ ತಂದೆಯ ಚಿತ್ತವಲ್ಲ.
ಲೂಕ 15:3–73ಆಗ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು.
4ಅದೇನೆಂದರೆ, “ನಿಮ್ಮೊಳಗೆ ಯಾವ ಮನುಷ್ಯನಾದರೂ ತನಗೆ ನೂರು ಕುರಿಗಳಿರಲಾಗಿ ಅವುಗಳಲ್ಲಿ ಒಂದು ಕಳೆದುಹೋದರೆ ಅವನು ತೊಂಬತ್ತೊಂಬತ್ತನ್ನೂ ಅಡವಿಯಲ್ಲಿ ಬಿಟ್ಟು ಕಳೆದುಹೋದದ್ದು ಸಿಕ್ಕುವ ತನಕ ಅದನ್ನು ಹುಡುಕಿಕೊಂಡು ಹೋಗದೆ ಇದ್ದಾನೆಯೇ?
5ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,
6ಮನೆಗೆ ಬಂದು ಸ್ನೇಹಿತರನ್ನೂ ನೆರೆಹೊರೆಯವರನ್ನೂ ಕೂಡಿಸಿ, ‘ಕಳೆದುಹೋಗಿದ್ದ ಕುರಿ ಸಿಕ್ಕಿತು, ನನ್ನ ಸಂಗಡ ಸಂತೋಷಿಸಿರಿ’ ಎಂದು ಅವರಿಗೆ ಹೇಳುವನಲ್ಲವೇ.
7ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.