Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೇಸುವಿನ ಶ್ರಮೆಗಳು

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೇಸುವಿನ ಶ್ರಮೆಗಳು

ಸೈನಿಕರು ಯೇಸುವನ್ನು ಅಪಹಾಸ್ಯ ಮಾಡುತ್ತಾರೆ

ಮತ್ತಾ 27:27–31 · ಮಾರ್ಕ 15:16–20 · ಯೋಹಾ 19:2–3

ಮತ್ತಾಯನು

ಮತ್ತಾ 27:27–31

27ಆ ಮೇಲೆ ದೇಶಾಧಿಪತಿಯ ಸಿಪಾಯಿಗಳು ಯೇಸುವನ್ನು ಅರಮನೆಯೊಳಗೆ ಕರೆದುಕೊಂಡು ಹೋಗಿ ಪಟಾಲವನ್ನೆಲ್ಲಾ ಆತನ ಸುತ್ತಲೂ ಸೇರಿಸಿಕೊಂಡು,

28ಆತನ ಬಟ್ಟೆಗಳನ್ನು ತೆಗೆದುಹಾಕಿ ಕೆಂಪು ನಿಲುವಂಗಿಯನ್ನು ಹೊದಿಸಿ,

29ಮುಳ್ಳುಬಳ್ಳಿಯಿಂದ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು ಬಲಗೈಯಲ್ಲಿ ಬೆತ್ತವನ್ನು ಕೊಟ್ಟು, ಆತನ ಮುಂದೆ ಮೊಣಕಾಲೂರಿ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನನ್ನು ಪರಿಹಾಸ್ಯಮಾಡಿ

30ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.

31ಹೀಗೆ ಆತನನ್ನು ಪರಿಹಾಸ್ಯಮಾಡಿದ ಮೇಲೆ ಆ ನಿಲುವಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಹೊದಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಮಾರ್ಕನು

ಮಾರ್ಕ 15:16–20

16ಸಿಪಾಯಿಗಳು ಆತನನ್ನು ಅಧಿಪತಿಯ ಅರಮನೆಯ ಅಂಗಳದೊಳಗೆ ಕರೆದುಕೊಂಡು ಹೋಗಿ, ತಮ್ಮ ಪಡೆಯನ್ನೆಲ್ಲವನ್ನೂ ಒಟ್ಟಿಗೆ ಸೇರಿಸಿಕೊಂಡರು.

17ಯೇಸುವಿಗೆ ನಸುಗೆಂಪು ಮೇಲಂಗಿಯನ್ನು ಹೊದಿಸಿ ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟರು.

18ಅನಂತರ, “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಆತನಿಗೆ ಅಪಹಾಸ್ಯಮಾಡಿ ವಂದಿಸಿದರು.

19ಬೆತ್ತದಿಂದ ಆತನ ತಲೆಯ ಮೇಲೆ ಹೊಡೆದು, ಆತನ ಮೇಲೆ ಉಗುಳಿ, ಆತನ ಮುಂದೆ ಮೊಣಕಾಲೂರಿ ನಮಸ್ಕರಿಸಿದರು.

20ಹೀಗೆ ಆತನನ್ನು ಪರಿಹಾಸ್ಯ ಮಾಡಿದ ಮೇಲೆ ಆ ನಸುಗೆಂಪು ಮೇಲಂಗಿಯನ್ನು ತೆಗೆದು ಆತನ ಬಟ್ಟೆಗಳನ್ನು ಆತನಿಗೆ ತೊಡಿಸಿ ಆತನನ್ನು ಶಿಲುಬೆಗೆ ಹಾಕುವುದಕ್ಕೆ ತೆಗೆದುಕೊಂಡು ಹೋದರು.

ಯೋಹಾನನು

ಯೋಹಾ 19:2–3

2ಸಿಪಾಯಿಗಳು ಮುಳ್ಳಿನ ಕಿರೀಟವನ್ನು ಹೆಣೆದು ಆತನ ತಲೆಯ ಮೇಲೆ ಇಟ್ಟು, ಕೆನ್ನೇರಳೆ ಬಣ್ಣದ ನಿಲುವಂಗಿಯನ್ನು ಆತನಿಗೆ ತೊಡಿಸಿ,

3ಆತನ ಬಳಿಗೆ ಬಂದು “ಯೆಹೂದ್ಯರ ಅರಸನೇ, ನಿನಗೆ ನಮಸ್ಕಾರ” ಎಂದು ಹೇಳಿ ತಮ್ಮ ಕೈಗಳಿಂದ ಆತನ ಕೆನ್ನೆಗೆ ಹೊಡೆದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು