14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
15ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ
ಮತ್ತಾ 8:14–15 · ಮಾರ್ಕ 1:29–31 · ಲೂಕ 4:38–39
14ತರುವಾಯ ಯೇಸು ಪೇತ್ರನ ಮನೆಗೆ ಬಂದಾಗ, ಪೇತ್ರನ ಅತ್ತೆ ಜ್ವರದಲ್ಲಿ ಮಲಗಿರುವುದನ್ನು ಕಂಡು, ಆತನು ಆಕೆಯ ಕೈಯನ್ನು ಮುಟ್ಟಿದನು ತಕ್ಷಣವೇ
15ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆ ಎದ್ದು ಆತನಿಗೆ ಉಪಚಾರಮಾಡಿದಳು.
29ಆ ಮೇಲೆ ಅವರು ಸಭಾಮಂದಿರದಿಂದ ಹೊರಟು ಯಾಕೋಬ ಯೋಹಾನರ ಸಂಗಡ ಸೀಮೋನ ಅಂದ್ರೆಯರ ಮನೆಗೆ ಹೋದರು.
30ಅಲ್ಲಿ ಸೀಮೋನನ ಅತ್ತೆ ಜ್ವರದಿಂದ ಮಲಗಿರಲಾಗಿ ಅವರು ಆಕೆಯ ಸಂಗತಿಯನ್ನು ಆತನಿಗೆ ತಿಳಿಸಿದರು.
31ಆತನು ಹತ್ತಿರಕ್ಕೆ ಬಂದು ಆಕೆಯ ಕೈಯನ್ನು ಹಿಡಿದು ಎಬ್ಬಿಸಲು ಜ್ವರವು ಆಕೆಯನ್ನು ಬಿಟ್ಟುಹೋಯಿತು; ಆಕೆಯು ಅವರಿಗೆ ಉಪಚಾರಮಾಡಿದಳು.
38ಆತನು ಸಭಾಮಂದಿರದಿಂದೆದ್ದು ಸೀಮೋನನ ಮನೆಗೆ ಬಂದನು. ಅಲ್ಲಿ ಸೀಮೋನನ ಅತ್ತೆಯು ವಿಪರೀತ ಜ್ವರದಿಂದ ಕಷ್ಟಪಡುತ್ತಿರಲಾಗಿ; ಆಕೆಯ ವಿಷಯದಲ್ಲಿ ಅಲಿದ್ದವರು ಆತನನ್ನು ಬೇಡಿಕೊಂಡರು.
39ಆತನು ಆಕೆಯ ಬಳಿ ನಿಂತು ಬಾಗಿ, ಜ್ವರವನ್ನು ಬಿಟ್ಟುಹೋಗೆಂದು ಗದರಿಸಲು; ಅದು ಆಕೆಯನ್ನು ಬಿಟ್ಟುಹೋಯಿತು. ಕೂಡಲೆ ಆಕೆಯು ಎದ್ದು ಅವರೆಲ್ಲರಿಗೆ ಉಪಚಾರಮಾಡಿದಳು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು