Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೇಸುವಿನ ಶ್ರಮೆಗಳು

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೇಸುವಿನ ಶ್ರಮೆಗಳು

ಪಸ್ಕದ ಸಿದ್ಧತೆ

ಮತ್ತಾ 26:17–19 · ಮಾರ್ಕ 14:12–16 · ಲೂಕ 22:7–13

ಮತ್ತಾಯನು

ಮತ್ತಾ 26:17–19

17ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನದಲ್ಲಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಪಸ್ಕದ ಊಟಮಾಡುವುದಕ್ಕೆ ನಾವು ನಿನಗೆ ಎಲ್ಲಿ ಸಿದ್ಧಮಾಡಬೇಕನ್ನುತ್ತೀ” ಎಂದು ಕೇಳಿದರು.

18ಆತನು, “ನೀವು ಪಟ್ಟಣದೊಳಕ್ಕೆ ನಾನು ಸೂಚಿಸಿದವನ ಬಳಿಗೆ ಹೋಗಿ ಅವನಿಗೆ, ‘ನನ್ನ ಕಾಲ ಸಮೀಪವಾಯಿತು, ನಾನು ನಿನ್ನ ಮನೆಯಲ್ಲಿ ನನ್ನ ಶಿಷ್ಯರ ಸಂಗಡ ಪಸ್ಕಹಬ್ಬ ಮಾಡುತ್ತೇನೆ’ ಎಂಬುದಾಗಿ ಗುರುವು ಹೇಳುತ್ತಿದ್ದಾನೆ ಎಂದು ಹೇಳಿರಿ” ಅಂದನು.

19ಶಿಷ್ಯರು ಯೇಸು ತಮಗೆ ಅಪ್ಪಣೆಕೊಟ್ಟಂತೆಯೇ ಮಾಡಿ ಪಸ್ಕದ ಭೋಜನವನ್ನು ತಯಾರಿಸಿದರು.

ಮಾರ್ಕನು

ಮಾರ್ಕ 14:12–16

12ಹುಳಿಯಿಲ್ಲದ ರೊಟ್ಟಿಯ ಹಬ್ಬದ ಮೊದಲನೆಯ ದಿನ ಅಂದರೆ ಪಸ್ಕದ ಕುರಿಮರಿಯನ್ನು ಕೊಯ್ಯುವ ದಿನವಾಗಿತ್ತು. ಶಿಷ್ಯರು ಯೇಸುವಿಗೆ, “ನೀನು ಪಸ್ಕದ ಭೋಜನ ಮಾಡಲು ನಾವು ಎಲ್ಲಿ ಸಿದ್ಧಮಾಡಬೇಕೆಂದು ಹೇಳು” ಎಂದು ಕೇಳಿದರು.

13ಆತನು ತನ್ನ ಶಿಷ್ಯರಲ್ಲಿ ಇಬ್ಬರನ್ನು ಕರೆದು ಅವರಿಗೆ, “ನೀವು ಪಟ್ಟಣದೊಳಗೆ ಹೋಗಿರಿ. ಅಲ್ಲಿ ತುಂಬಿದ ನೀರಿನ ಕೊಡವನ್ನು ಹೊತ್ತುಕೊಂಡು ಹೋಗುವ ಒಬ್ಬ ಮನುಷ್ಯನು ನಿಮ್ಮನ್ನು ಸಂಧಿಸುವನು. ಅವನನ್ನು ಹಿಂಬಾಲಿಸಿರಿ.

14ಅವನು ಯಾವ ಮನೆಯೊಳಗೆ ಹೋಗುವನೋ ಆ ಮನೆಯ ಯಜಮಾನನಿಗೆ, ‘ನಮ್ಮ ಗುರು, ತನ್ನ ಶಿಷ್ಯರ ಸಂಗಡ ಪಸ್ಕದ ಭೋಜನ ಮಾಡಲು ಕೊಠಡಿ ಎಲ್ಲಿದೆ?’ ಎಂಬುದಾಗಿ ಕೇಳುತ್ತಿದ್ದಾನೆ ಎಂದು ಹೇಳಿರಿ.

15“ಅವನು ಸಜ್ಜುಗೊಳಿಸಿ ಸಿದ್ಧಮಾಡಿರುವ ಮೇಲಂತಸ್ತಿನ ವಿಶಾಲವಾದ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನಮಗೆ ಭೋಜನಕ್ಕೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿ ಕೊಟ್ಟನು.

16ಶಿಷ್ಯರು ಹೊರಟು ಪಟ್ಟಣದೊಳಗೆ ಹೋಗಿ ಯೇಸು ತಮಗೆ ಹೇಳಿದಂತೆ ಎಲ್ಲವನ್ನು ಕಂಡು ಪಸ್ಕವನ್ನು ಸಿದ್ಧಮಾಡಿದರು.

ಲೂಕನು

ಲೂಕ 22:7–13

7ಹುಳಿಯಿಲ್ಲದ ರೊಟ್ಟಿಯನ್ನು ತಿನ್ನುವ ದಿನಗಳಲ್ಲಿ ಪಸ್ಕದ ಕುರಿಮರಿಯನ್ನು ಕೊಯ್ಯತಕ್ಕ ದಿನ ಬಂದಾಗ,

8ಯೇಸು ಪೇತ್ರನಿಗೂ ಯೋಹಾನನಿಗೂ, “ನೀವು ಹೋಗಿ ನಾವು ಪಸ್ಕದ ಊಟಮಾಡುವಂತೆ ಸಿದ್ಧಮಾಡಿರಿ” ಎಂದು ಹೇಳಿ ಅವರನ್ನು ಕಳುಹಿಸಿದನು.

9ಅವರು, “ನಾವು ಎಲ್ಲಿ ಸಿದ್ಧಮಾಡಬೇಕನ್ನುತ್ತೀ?” ಎಂದು ಆತನನ್ನು ಕೇಳಲು,

10ಆತನು ಅವರಿಗೆ, “ನೋಡಿರಿ, ನೀವು ಪಟ್ಟಣದೊಳಕ್ಕೆ ಹೋದ ಮೇಲೆ ಒಬ್ಬ ಮನುಷ್ಯನು ತುಂಬಿದ ಕೊಡವನ್ನು ಹೊತ್ತುಕೊಂಡು ನಿಮ್ಮೆದುರಿಗೆ ಬರುವನು. ಅವನು ಹೋಗುವ ಮನೆಗೆ ನೀವು ಅವನ ಹಿಂದೆ ಹೋಗಿ,

11ಆ ಮನೆಯ ಯಜಮಾನನಿಗೆ, ‘ನನ್ನ ಶಿಷ್ಯರ ಸಂಗಡ ಪಸ್ಕದ ಊಟವನ್ನು ಮಾಡುವುದಕ್ಕಾಗಿ ವಿಶೇಷವಾದ ಕೊಠಡಿ ಎಲ್ಲಿ?’ ಎಂದು ನಿನ್ನನ್ನು ವಿಚಾರಿಸಲು ನಮ್ಮ ಗುರು ಹೇಳಿದ್ದಾನೆ, ಎಂದು ಹೇಳಿರಿ.

12ಅವನು ತಕ್ಕ ಪೀಠೋಪಕರಣಗಳಿಂದ ಅಲಂಕೃತವಾದ ಮೇಲ್ಮಾಳಿಗೆಯಲ್ಲಿ ದೊಡ್ಡ ಕೊಠಡಿಯನ್ನು ನಿಮಗೆ ತೋರಿಸುವನು. ಅಲ್ಲಿ ನೀವು ಭೋಜನಕ್ಕೆ ಸಿದ್ಧ ಮಾಡಿರಿ” ಎಂದು ಹೇಳಿ ಕಳುಹಿಸಿದನು.

13ಅವರು ಹೊರಟು ಆತನು ತಮಗೆ ಹೇಳಿದಂತೆ ಕಂಡು ಪಸ್ಕ ಹಬ್ಬಕ್ಕೆ ಸಿದ್ಧಮಾಡಿದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು