Bible Explorer ಆ್ಯಪ್ ಪಡೆಯಿರಿ

ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೇಸುವಿನ ಶ್ರಮೆಗಳು

ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೇಸುವಿನ ಶ್ರಮೆಗಳು

ಯೇಸುವನ್ನು ಕೊಲ್ಲುವ ಒಳಸಂಚು

ಮತ್ತಾ 26:1–5 · ಮಾರ್ಕ 14:1–2 · ಲೂಕ 22:1–2

ಮತ್ತಾಯನು

ಮತ್ತಾ 26:1–5

1ಯೇಸು ಈ ಮಾತುಗಳನ್ನೆಲ್ಲಾ ಹೇಳಿ ಮುಗಿಸಿದ ನಂತರ ತನ್ನ ಶಿಷ್ಯರಿಗೆ, “ಎರಡು ದಿನಗಳಾದ ಮೇಲೆ ಪಸ್ಕಹಬ್ಬ ಬರುತ್ತದೆಂದು ನೀವು ಬಲ್ಲಿರಿ;

2ಆಗ ಮನುಷ್ಯಕುಮಾರನನ್ನು ಶಿಲುಬೆಗೆ ಹಾಕುವುದಕ್ಕೆ ಒಪ್ಪಿಸಿ ಕೊಡಲಾಗುವುದು” ಎಂದು ಹೇಳಿದನು.

3ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

4ಯೇಸುವನ್ನು ಗುಟ್ಟಾಗಿ ಹಿಡಿದು ಕೊಲ್ಲಬೇಕೆಂಬುದಾಗಿ ಒಳಸಂಚು ಮಾಡಿದರು.

5“ಆದರೂ ಹಬ್ಬದಲ್ಲಿ ಹಿಡಿಯಬಾರದು, ನಮ್ಮ ಜನರಲ್ಲಿ ಗದ್ದಲವಾದೀತು” ಎಂದು ಮಾತನಾಡಿಕೊಂಡರು.

ಮಾರ್ಕನು

ಮಾರ್ಕ 14:1–2

1ಪಸ್ಕಹಬ್ಬ ಎಂದರೆ ಹುಳಿಯಿಲ್ಲದ ರೊಟ್ಟಿಯ ಹಬ್ಬ ಬರುವುದಕ್ಕೆ ಇನ್ನೂ ಎರಡು ದಿನಗಳಿದ್ದಾಗ ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಉಪಾಯದಿಂದ ಹಿಡಿದು ಕೊಲ್ಲುವುದಕ್ಕೆ ಮಾರ್ಗವನ್ನು ಹುಡುಕುತ್ತಿದ್ದರು.

2“ಆದರೆ ಹಬ್ಬದ ಸಂದರ್ಭದಲ್ಲಿ ಈ ಕಾರ್ಯವನ್ನು ಮಾಡಬಾರದು. ಏಕೆಂದರೆ ನಮ್ಮ ಮೇಲೆ ಜನರು ದಂಗೆ ಎದ್ದಾರು” ಎಂದು ಮಾತನಾಡಿಕೊಂಡರು.

ಲೂಕನು

ಲೂಕ 22:1–2

1ಪಸ್ಕವೆಂದು ಕರೆಯಲ್ಪಡುವ ಹುಳಿಯಿಲ್ಲದ ರೊಟ್ಟಿಯ ಹಬ್ಬವು ಹತ್ತಿರವಾದಾಗ,

2ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.

ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.

ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು