ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಗಲಿಲಾಯದಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಗಲಿಲಾಯದಲ್ಲಿ
ಯೇಸು ಬೇರೆ ಊರುಗಳಲ್ಲಿ ಬೋಧಿಸಲು ಹೊರಡುತ್ತಾನೆ
ಮಾರ್ಕ 1:35–39 · ಲೂಕ 4:42–44
ಮಾರ್ಕ 1:35–3935ಮುಂಜಾನೆ ಇನ್ನೂ ಮೊಬ್ಬಿರುವಾಗ ಆತನು ಎದ್ದು ನಿರ್ಜನ ಸ್ಥಳಕ್ಕೆ ಹೋಗಿ ಪ್ರಾರ್ಥನೆಮಾಡುತ್ತಿದ್ದನು.
36ಸೀಮೋನನೂ ಅವನ ಸಂಗಡ ಇದ್ದವರೂ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು,
37ಆತನನ್ನು ಕಂಡಾಗ “ಎಲ್ಲರೂ ನಿನ್ನನ್ನು ಎದುರುನೋಡುತ್ತಿದ್ದಾರೆ” ಎಂದರು.
38ಆತನು ಅವರಿಗೆ, “ನಾವು ಸಮೀಪದಲ್ಲಿರುವ ಬೇರೆ ಊರುಗಳಿಗೆ ಹೋಗೋಣ; ಅಲ್ಲಿಯೂ ನಾನು ಸುವಾರ್ತೆಯನ್ನು ಸಾರಬೇಕು; ಇದಕ್ಕಾಗಿಯೇ ನಾನು ಇಲ್ಲಿಗೆ ಹೊರಟು ಬಂದಿದ್ದೇನೆ” ಎಂದು ಹೇಳಿದನು.
39ಬಳಿಕ ಆತನು ಗಲಿಲಾಯದಲ್ಲೆಲ್ಲಾ ಹೋಗಿ ಅವರ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ದೆವ್ವಗಳನ್ನು ಬಿಡಿಸುತ್ತಾ ಇದ್ದನು.
ಲೂಕ 4:42–4442ಬೆಳಗಾದ ಮೇಲೆ ಆತನು ಹೊರಟು ನಿರ್ಜನವಾದ ಸ್ಥಳಕ್ಕೆ ಹೋದನು; ಜನರು ಗುಂಪುಗುಂಪಾಗಿ ಆತನನ್ನು ಹುಡುಕಿಕೊಂಡು ಆತನಿದ್ದಲ್ಲಿಗೆ ಬಂದು, ಆತನು ಅವರನ್ನು ಬಿಟ್ಟುಹೋಗಬಾರದೆಂದು ಅವರು ಆತನನ್ನು ತಡೆದರು.
43ಆದರೆ ಆತನು ಅವರಿಗೆ, “ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ” ಎಂದು ಹೇಳಿದನು.
44ಬಳಿಕ ಆತನು ಯೂದಾಯ ದೇಶದ ಸಭಾಮಂದಿರಗಳಲ್ಲಿ ಸುವಾರ್ತೆಯನ್ನು ಸಾರುತ್ತಾ ಇದ್ದನು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.