22ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
23ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
ಅನ್ವೇಷಿಸಿ › ಪಕ್ಕಪಕ್ಕದಲ್ಲಿ ಸುವಾರ್ತೆಗಳು › ಯೆರೂಸಲೇಮಿನ ದಾರಿಯಲ್ಲಿ
ಪಕ್ಕಪಕ್ಕದಲ್ಲಿ ಸುವಾರ್ತೆಗಳು · ಯೆರೂಸಲೇಮಿನ ದಾರಿಯಲ್ಲಿ
ಮತ್ತಾ 17:22–23 · ಮಾರ್ಕ 9:30–32 · ಲೂಕ 9:43–45
22ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, “ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.
23ಅವರು ಆತನನ್ನು ಕೊಲ್ಲುವರು, ಆದರೆ ಸತ್ತು ಮೂರನೆಯ ದಿನದಲ್ಲಿ ಆತನು ಜೀವಿತನಾಗಿ ಎಬ್ಬಿಸಲ್ಪಡುವನು” ಎಂದು ಹೇಳಿದನು. ಅದನ್ನು ಕೇಳಿ ಅವರು ಬಹಳ ದುಃಖಪಟ್ಟರು.
30ಅಲ್ಲಿಂದ ಅವರು ಹೊರಟು ಗಲಿಲಾಯವನ್ನು ಹಾದು ಹೋಗುತ್ತಿದ್ದರು. ಆದರೆ ತಾವು ಎಲ್ಲಿಗೆ ಹೋಗುತ್ತಿರುವುದೆಂದು ಯಾರಿಗೂ ಗೊತ್ತಾಗಬಾರದೆಂದು ಆತನು ಬಯಸಿದನು.
31ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, “ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು” ಹೇಳಿದನು.
32ಆದರೆ ಅವರು ಆ ಮಾತನ್ನು ಗ್ರಹಿಸಲಿಲ್ಲ ಮತ್ತು ಆತನನ್ನು ಕೇಳುವುದಕ್ಕೆ ಭಯಪಟ್ಟರು.
43ಅದನ್ನು ನೋಡಿ ಎಲ್ಲರು ದೇವರ ಮಹತ್ಕಾರ್ಯಕ್ಕೆ ಬೆರಗಾದರು. ಯೇಸುಮಾಡಿದ ಎಲ್ಲಾ ಮಹತ್ಕಾರ್ಯಗಳಿಗೆ ಎಲ್ಲರೂ ಆಶ್ಚರ್ಯಪಡುತ್ತಿರಲಾಗಿ, ಆತನು ತನ್ನ ಶಿಷ್ಯರಿಗೆ,
44“ನೀವಂತೂ ಈ ಮಾತುಗಳನ್ನು ನಿಮ್ಮ ಮನಸ್ಸಿನಲ್ಲಿ ಇಟ್ಟುಕೊಳ್ಳಿರಿ, ಏಕೆಂದರೆ ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು” ಎಂದು ಹೇಳಿದನು.
45ಅವರು ಈ ಮಾತನ್ನು ಗ್ರಹಿಸಲಿಲ್ಲ. ಅದು ಅವರಿಗೆ ಮರೆಯಾಗಿದ್ದುದರಿಂದ ಅದರ ಅರ್ಥವನ್ನು ಅವರು ತಿಳಿಯದೆ ಹೋದರು. ಆ ಮಾತಿನ ವಿಷಯದಲ್ಲಿ ಅವರು ಆತನನ್ನು ಕೇಳುವುದಕ್ಕೆ ಅಂಜಿದರು.
ಗುರುತಿಸಿರುವುದು: ನೀವು ಓದುವ ಅನುವಾದದಲ್ಲಿ ಪ್ರತಿಯೊಂದು ವೃತ್ತಾಂತದಲ್ಲೂ ಇರುವ ಪದಗಳು. ಅತಿ ಸಾಮಾನ್ಯ ಪದಗಳನ್ನು (“ಮತ್ತು”, “ಅವನು”) ಗುರುತಿಸಿಲ್ಲ; ಬೇರೆ ರೂಪದಲ್ಲಿರುವ ಪದವನ್ನು ಗುರುತಿಸದಿರಬಹುದು.
ಮೂಲಗಳು: OpenBible.info, CC BY 4.0 · ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ · © 2017, 2019 Bridge Connectivity Solutions, CC BY-SA 4.0; changed: footnotes, headings and the letters over Psalm 119 left out, verses in the app's numbering. · ಮೂಲಗಳು ಮತ್ತು ಹಕ್ಕುಗಳು